Connect with us

Hassan

ಪ್ರಜ್ವಲ್ ರೇವಣ್ಣ ಹಾಗೂ ಅವರ ತಾಯಿ ಭವಾನಿ ರೇವಣ್ಣ ಅವರಿಂದ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು

Published

on

ಹಾಸನ: ಹಾಸನ ಎಂಪಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಾಯಿ ಭವಾನಿ ರೇವಣ್ಣ ಅವರಿಂದ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮನವಿ ಮಾಡಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ಭವಾನಿ ರೇವಣ್ಣ ಅವರ ಸಮ್ಮುಖದಲ್ಲಿ ನನ್ನ ಹೆಸರಿನಲ್ಲಿ 13 ವರೆ ಎಕರೆ ಜಮೀನನ್ನು ಅಕ್ರಮವಾಗಿ ಬರೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಕಾರು ಚಾಲಕ ನಾಗಿದ್ದ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಭವಾನಿ ರೇವಣ್ಣ ಅವರನ್ನು ಮನೆಯ ಕಾರ್ಯಕ್ರಮಕ್ಕೆ ಆಹ್ವಾನ ಮಾಡಿದಾಗ ನನ್ನ ಅಸ್ಥಿ ಬಗ್ಗೆ ಮಾಹಿತಿ ಕಲೆ ಹಾಕಿ ಅದನ್ನು ಬರೆದು ಕೊಡುವಂತೆ ಅವತ್ತೇ ಕೇಳಿದ್ದು ಅದಾದ 6 ತಿಂಗಳ ಬಳಿಕ ಮತ್ತೆ ಆಸ್ತಿ ಬರೆದು ಕೊಡುವಂತೆ ಒತ್ತಾಯ ಮಾಡಲು ಆರಂಬಿಸಿದರು.

 

ಅದಾದ ಬಳಿಕ ನನ್ನನ್ನು ಮನೆಗೆ ಕರೆದುಕೊಂಡು ಅಸ್ಥಿ ಬರೆದು ಕೊಡುವಂತೆ ಪ್ರಜ್ವಲ್ ಹಾಗೂ ಭವಾನಿ ರೇವಣ್ಣ ಒತ್ತಡ ಹಾಕಿದ್ದಲ್ಲದೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಜೊತೆಗೆ ಪೊಲೀಸ್ ಮೂಲಕ ತನ್ನ ಪತ್ನಿಯನ್ನು ಕರೆಸಿಕೊಂಡು ಅವರ ಮೂಲಕವೂ ಒತ್ತಡ ಹಾಕಿಸಿದ್ದಾರೆ ಎಂದು ದೂರಿದರು…

ಜೊತೆಗೆ ನನ್ನ ಪತ್ನಿ ಮೇಲೆ ಭವಾನಿ ರೇವಣ್ಣ ಕಾಲಿನಿಂದ ಹೊದ್ದು ದೈಹಿಕವಾಗಿ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಗರ್ಭಿಣಿ ಆಗಿದ್ದ ನನ್ನ ಪತ್ನಿ ಅಬಾರ್ಷನ್ ಆಗಿದೆ, ಈ ಎಲ್ಲಾ ವಿಚಾರಗಳ ಬಗ್ಗೆ ಐ.ಜಿ, ಡಿ.ಜಿ ಮಹಿಳಾ ಆಯೋಗ, ಡಿಸಿ ಹಾಗೂ ಎಸ್ಪಿ ಕಚೇರಿಗೆ ಕೂಡ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ರಾಜ್ಯ ಪೊಲೀಸ್ ನಿರ್ದೇಶಕರು ಆದೇಶ ನೀಡಿದರು.

ಅದಾದ ಬಳಿಕ ನಡೆದ ತನಿಖೆಯಲ್ಲಿ ಪೊಲೀಸರೇ ಸುಳ್ಳು ಸಾಕ್ಷಿ ಸೃಷ್ಟಿ ಮಾಡಿ ತಪ್ಪು ವರದಿ ನೀಡಿದ್ದಾರೆ, ಇದರಲ್ಲಿ ಪೊಲೀಸರೇ ಪ್ರಮುಖ ಪಾತ್ರ ವಹಿಸಿದ್ದು ಪ್ರಜ್ವಲ್ ಹಾಗೂ ಭವಾನಿ ರೇವಣ್ಣ ಅವರ ಹಿಡಿತದಲ್ಲಿ ಪೊಲೀಸ್ರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕಳೆದ ಅನೇಕ ವರ್ಷಗಳಿಂದ 20 ಸಾವಿರ ಮೀನುಗಳನ್ನು ಒಳಗೊಂಡ ಮೀನುಗಾರಿಕೆ, ಕುರಿ ಮಾಂಸ ಮಾರಾಟ, ಮಾಡಿ ಒಂದಷ್ಟು ಆದಾಯ ಗಳಿಗೆ ಮಾಡುತ್ತಿದ್ದೆ, ಅದರಿಂದಲೇ ಒಂದಷ್ಟು ಅಸ್ಥಿ ಖರೀದಿ ನಿದ್ದೇನೆ ಎಂದು ಮಾಹಿತಿ ನೀಡಿದರು.

ಇಡೀ ಪ್ರಕರಣದಲ್ಲಿ
ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಹಾಗೂ ಆತನತಾಯಿ ಭವಾನಿ ರೇವಣ್ಣ ಮತ್ತು ಆತನತಂದೆ ಹಾಗೂ ಶಾಸಕ ಹೆಚ್.ಡಿ. ರೇವಣ್ಣ ಹಾಗೂ ಅವರ ಆಪ್ತ ಸಹಾಯಕ ರವಿಕುಮಾರ ಪಿ. ಹಾಗೂ ಹೊಳೇನರಸೀಪುರ ಗ್ರಾಮಾಂತರ ಪೋಲೀಸ್‌ ಠಾಣೆಯ ಸಬ್ ಇನ್ಸಪೆಕ್ಟರ್ ವಿನಯ್‌ ಕುಮಾರ, ಸ್ಥಳೀಯ ಅಜಿತ್ ಮತ್ತು ಇನ್ಸಪೆಕ್ಟರ್ ದೀಪಕ್ ಇವರು ಗಳಿಂದ ಅನ್ಯಾಯ ನಡೆದಿದ್ದು, ಇವರೆಲ್ಲರ ವಿರುದ್ದ ಅಪಹರಣ, ಹಲ್ಲೆ, ಕೊಲೆಬೆದರಿಕೆ, ಭ್ರೂಣ ಹತ್ಯೆ, ಗೂಂಡಾಗಿರಿ, ಅತಿಕ್ರಮ ಪ್ರವೇಶಹಾಗೂ ವಂಚನೆ ಮತ್ತು ನಂಬಿಕೆ ದ್ರೋಹ ಇಂತಹಗಂಭೀರ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಅವರನ್ನು ಬಂದನ ಮಾಡಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

Continue Reading
Click to comment

Leave a Reply

Your email address will not be published. Required fields are marked *

Hassan

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಯಾರು ಆತಂಕಪಡಬೇಕಾಗಿಲ್ಲ ಕಾಲವೇ ಉತ್ತರ ಕೊಡಲಿದೆ ಜೆಡಿಎಸ್ ಕಾರ್ಯಕರ್ತರಿಗೆ ದೈರ್ಯ ತುಂಬಿದ ಹೆಚ್.ಡಿ. ರೇವಣ್ಣ

Published

on

ಹಾಸನ : ಯಾರು ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕಾಗುತ್ತದೆ ಅಷ್ಟೇ. ನಮ್ಮ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ದೈರ್ಯ ತುಂಬಿದರು.

ನಗರದ ಕುವೆಂಪು ಬಡಾವಣೆಯಲ್ಲಿರುವ ಡಿ.ಟಿ. ಪರಮೇಶ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡುವುದಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಕೆಲಸ ಮಾಡ್ತಿವಿ, ೪೮ ಗಂಟೆಗಳಲ್ಲಿ ಪ್ರಜ್ವಲ್ ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ಮಾಡಿದ ವಿಚಾರವಾಗಿ ಮಾತನಾಡಿ, ಕೋರ್ಟ್‌ನಲ್ಲಿ ಕೇಸ್ ಇದ್ದಾಗ ನಾನು ಮಾತನಾಡುವುದಿಲ್ಲ. ಹೇಸಿಗೆಯಂತಹ ವಿಚಾರವವು ರಾಜ್ಯಕ್ಕೆ, ನಮಗೆ ಗೌರವ ತಂದುಕೊಡುವುದಿಲ್ಲ. ಈ ವಿಚಾರವನ್ನು ರಾಜಕೀಯವಾಗಿ ತೆಗದುಕೊಂಡು ಹೋಗಲಾಗುತ್ತಿದೆ. ಈದಕ್ಕೆಲ್ಲಾ ಮೂಲ ಯಾರಿದ್ದಾರೆ ಅವರನ್ನು ಬಂಧಿಸಿ ಶಿಕ್ಷೆ ವಿಧಿಸಲಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿದರು. ತಮ್ಮ ಮೇಲೆ ಎರಡು ಪ್ರಕರಣ ದಾಖಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ರೇವಣ್ಣ ಅವರು, ಯಾರು ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕು ಅಷ್ಟೇ. ನಮ್ಮ ಜಿಲ್ಲೆಯ ಜನರನ್ನು ಅರವತ್ತು ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನೀದ್ದೀನಿ, ಎ.ಮಂಜು, ಸ್ವರೂಪ್ ಪ್ರಕಾಶ್ ಇದ್ದಾರೆ. ಕಾರ್ಯಕರ್ತರು ಯಾರು ಭಯಪಡುವ, ಆತಂಕಪಡುವ ಅಗತ್ಯವಿಲ್ಲ. ನನಗೂ ಜಿಲ್ಲೆಯ ಜನ ಇಪ್ಪತ್ತೈದು ವರ್ಷ ಆಶೀರ್ವಾದ ಮಾಡಿದ್ದಾರೆ ಎಂದು ಕಾರ್ಯಕರ್ತರಿಗೆ ದೈರ್ಯ ತುಂಬಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷ ಆಗಿದ್ದು, ಈ ಸರ್ಕಾರದ ವೇಳೆ ಯಾವುದಾದರೂ ರಸ್ತೆ ಗುಂಡಿ ಮುಚ್ಚಿಲ್ಲ. ಶಿಕ್ಷಕರ ಹುದ್ದೆ ಭರ್ತಿ ಮಾಡಿಲ್ಲ. ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದರು. ರಾಜ್ಯ ಸರ್ಕಾರದ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ. ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲಾ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಹಾಸನ ಜಿಲ್ಲೆಗೆ ಏನು ಕೊಡುಗೆ ಕೊಡಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು. ನಮ್ಮ ಆಡಳಿತದಲ್ಲಿ ನಾವು ಶಾಲಾ, ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟು ತೋರಿಸಿದ್ದೇವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈ ಬಾರಿ ಹದಿನೈದನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಇದ್ದಾಗ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈ ರೀತಿಯಾಗಲೂ ಕಾರಣ ಯಾರು ಕಾರಣ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರೆ ಅದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾತ್ರ. ಕುಮಾರಸ್ವಾಮಿ ಆಡಳಿತದಲ್ಲಿ ರಾಜ್ಯದಲ್ಲಿ ೧೫೦೦ ಹೈಸ್ಕೂಲ್, ೨೪೦ ಪ್ರಥಮ ದರ್ಜೆ ಕಾಲೇಜು ತೆರೆದರು. ಖಾಲಿ ಇದ್ದ ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಎಚ್.ಡಿ.ಕುಮಾರಸ್ವಾಮಿ ಎಂದರು. ಐವತ್ತು ವರ್ಷ ಆಡಳಿತದ ಕಾಂಗ್ರೆಸ್ ಕೈಯಲ್ಲೂ ಆಗಿರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ಇಡೀ ಇಂಡಿಯಾ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು. ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆ ಮಾಡಿಲ್ಲ. ಆದರೇ ಶಿಕ್ಷಕರ ಮಕ್ಕಳಿಗೆ ಉದ್ಯೋಗದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಕೊಡಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಸನ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್, ಅರಕಲಗೂಡು ಶಾಸಕ ಎ. ಮಂಜು.ಸ್ವರೂಪ ಪ್ರಕಾಶ್. ಮಾಜಿ ಸಚಿವರಾದ ಎಚ್.ಕೆ. ಕುಮಾರಸ್ವಾಮಿ. ಮಾಜಿ ಶಾಸಕರಾದ ಕೆ.ಎಸ್. ಲಿಂಗೇಶ್ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಿವೇಕಾನಂದ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!