Connect with us

Mandya

ಪ್ರಜ್ವಲ್ ರೇವಣ್ಣರಿಗೆ ತೀವ್ರವಾದ ಶಿಕ್ಷೆಯಾಗಬೇಕು – ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್

Published

on

ಮಂಡ್ಯ: ಮಹಿಳೆಯರ ಮಾನಹಾನಿಗೆ ಕಾರಣರಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ತೀವ್ರವಾದ ಶಿಕ್ಷೆಗೆ ಒಳಪಡಿಸಬೇಕು ಎಂದು ಮಂಡ್ಯ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷೆ ಜಿ.ಎಸ್.ಅಂಜನಾ ಶ್ರೀಕಾಂತ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು , ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ತಲ್ಲಣ ಮೂಡಿಸಿರುವ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ತಮ್ಮ ವಿಕೃತ ಮನಸ್ಸಿನಿಂದ ಮಹಿಳೆಯರ ಮಾನಹಾನಿಗೆ ಕಾರಣನಾಗಿದ್ದಾನೆ.

ಮಹಿಳೆಯರ ಹಕ್ಕು ಜವಾಬ್ದಾರಿ ಗೌರವವನ್ನು ಬೀದಿಪಾಲು ಮಾಡುವುದರ ಮೂಲಕ ತಾನೊಬ್ಬ ಮಹಿಳಾ ವಿರೋಧಿ ಎಂಬುದನ್ನು ತೋರ್ಪಡಿಸಿದ್ದಾನೆ ಎಂದು ಕಿಡಿಕಾರಿದರು.

ಈ ನೆಲದ ಕಾನೂನು ವ್ಯಾಪ್ತಿಯಲ್ಲಿ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ, ಶೀಘ್ರದಲ್ಲೇ ನೊಂದ ಮಹಿಳೆಯರಿಗೆ ಸಮಾಜಕ್ಕೆ ಉತ್ತಮ ಸಂದೇಶ ಕೊಡುವ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಕಾರ್ಯೋನ್ಮುಕವಾಗಿರುತ್ತದೆ ಎಂದರು.

ಈಗಾಗಲೆ SIT ರಚನೆ ಮಾಡಿರುವುದನ್ನು ಅಭಿನಂದಿಸುತ್ತೇವೆ. ತುರ್ತಾಗಿ ಆ ವರದಿಯ ಆಧಾರದ ಮೇಲೆ ಇವನನ್ನು ಸಾರ್ವಜನಿಕ ಜೀವನದಿಂದ ವಜಾಗೊಳಿಸಲು ನಮ್ಮ ಸರ್ಕಾರ ಮತ್ತು ಜೆಡಿಎಸ್ ಪಕ್ಷ ಮುಂದಾಗಬೇಕು. ಈ ರೀತಿ ಮನಸ್ಥಿತಿ ಇರುವ ಈತನ ಎಲ್ಲಾ ಹಗರಣಗಳು ಹೊರಗೆ ಬರಬೇಕು. ಮತ್ತು ಮಹಿಳೆಯರ ವಿಡಿಯೋ ಹರಿ ಬಿಟ್ಟವರ ವಿರುದ್ದವೂ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಶಿಕ್ಷೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಬಿಜೆಪಿ ಪಕ್ಷದವರು ಇಂತಹ ಅಕ್ಷಮ್ಮ ಕೃತ್ಯವನ್ನು ಕಂಡು ಕೂಡ ಕಾಣದಂತೆ ವರ್ತಿಸುತ್ತಿರುವುದಾಗಿ ತೀವ್ರವಾಗಿ ಖಂಡಿಸಿದ ಅವರು, ಇದು ಇವರ ಮನಸ್ಥಿತಿಯನ್ನು ತೋರ್ಪಡಿಸುತ್ತದೆ. ಆದ್ದರಿಂದ ಬಿಜೆಪಿ ಈ ನಾಡಿನ ‌ಆ ಕೃತ್ಯಕ್ಕೆ ತಕ್ಕದಾದ ರೀತಿಯಲ್ಲಿ ಪ್ರತಿಕ್ರಿಯಿಸಬೇಕು. ಇಲ್ಲವಾದಲ್ಲಿ ಈ ಕೃತ್ಯಕ್ಕೆ ತಾವು ಕೂಡ ಪೂರ್ಣ ಜವಾಬ್ದಾರರು ಎಂದು ಪರಿಗಣಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ , ಇಂದಿರಾ ಸತೀಶ್ ಬಾಬು , ನೀಲಾಮೂರ್ತಿ, ಪದ್ಮ ಮೋಹನ್, ಸುವರ್ಣಾವತಿ, ಹೀನಾ ಕೌಸರ್ ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಡಿ.28 ರಂದು ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ : ಪಾಪಣ್ಣ

Published

on

ಮಳವಳ್ಳಿ : ಇದೇ ಡಿ.28 ರಂದು ಬೆಂಗಳೂರಿನ ಲಕ್ಷ್ಮೀನಾರಾಯಣಪುರದ ಒಡಲೂರು ಶ್ರೀ ಜ್ಯೋತಿ ರಾಮಲಿಂಗ ಸ್ವಾಮಿಗಳ ಸಮರಸ ಸನ್ಮಾರ್ಗ ಸಂಘದ ಕಚೇರಿಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರ್.ಆರ್ ವಧು- ವರರ ಕೇಂದ್ರದ
ಅಧ್ಯಕ್ಷ ಪಾಪಣ್ಣ ಅವರು ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಾರಾಯಣಪ್ಪ.ವಿ ಜಾಲಗೆರೆ ಮಾತನಾಡಿ, ಪಾಪಣ್ಣನವರ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ಹಾಗೂ ಸಹಭಾಗಿತ್ವವನ್ನು ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಮಡಿವಾಳರ ಖಡ್ಗ ಪತ್ರಿಕೆಯ ಚಂದ್ರಶೇಖರ್, ಶಂಕರಮಠ ವಾರ್ಡ್ ಒಬಿಸಿ ಅಧ್ಯಕ್ಷ ಜಯರಾಮ್, ಬಿಜೆಪಿ ಮುಖಂಡ ಕೆಂಚಪ್ಪ, ಮುಖಂಡರಾದ ನಾಗರಾಜ ಮತ್ತು ಮುನಿರಾಜು, ವೆಂಕಟಾದ್ರಿ ಟೆಂಟ್ ಹೌಸ್ ಮಾಲೀಕ ವೆಂಕಟೇಶ್ ಉಪಸ್ಥಿತರಿದ್ದರು.

Continue Reading

Mandya

ವಿವಿಧ ಗಣ್ಯರ ಪುತ್ಥಳಿ, ಸರ್ಕಲ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಶಾಸಕ ಕೆ.ಎಂ.ಉದಯ್‌

Published

on

ಮದ್ದೂರು:  ತಾಲೂಕಿನ ನಗರ ವ್ಯಾಪ್ತಿಯ ವಿವಿಧ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಶಾಸಕ ಕೆ. ಎಂ .ಉದಯ್  ಸ್ಥಳ  ಪರಿಶೀಲನೆ ನಡೆಸಿದ್ದಾರೆ.

ಮದ್ದೂರು ನಗರದ ಟಿ.ಬಿ. ಸರ್ಕಲ್‌ನಿಂದ ಪೇಟೆಬೀದಿ, ಕೊಲ್ಲಿ ಸರ್ಕಲ್‌ವರೆಗೆ 80 ಅಡಿ ರಸ್ತೆ ಮತ್ತು ಶಿವಪುರದ ಕೊಪ್ಪ ಸರ್ಕಲ್ ಸೇರಿದಂತೆ ನಗರದ ವಿವಿಧ ಪ್ರಮುಖ ಸರ್ಕಲ್‌ಗಳಲ್ಲಿ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ, ಶಿವಪುರದ ಕೊಪ್ಪ ಸರ್ಕಲ್ – ಭಕ್ತ ಕನಕದಾಸರು, ಕೊಲ್ಲಿ ಸರ್ಕಲ್ – ವಿಶ್ವಗುರು ಜಗಜ್ಯೋತಿ ಶ್ರೀ ಬಸವಣ್ಣ, ಹೂವಿನ ಸರ್ಕಲ್ – ಅಮರ ಶಿಲ್ಪಿ ಶ್ರೀ ಜಕಣಚಾರಿ, ಕೆಮ್ಮಣ್ಣು ನಾಲೆ ಸರ್ಕಲ್ – ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಸ್ಟೇಡಿಯಂ ಸರ್ಕಲ್ – ಶ್ರೀ ಶ್ರೀ ಶ್ರೀ ಬಾಲ ಗಂಗಾಧರನಾಥ ಸ್ವಾಮಿಜೀ ಹಾಗೂ ಟಿ.ಬಿ. ಸರ್ಕಲ್ – ನಾಡಪ್ರಭು ಶ್ರೀ ಕೆಂಪೇಗೌಡರು ರವರುಗಳ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಅಯೋಧ್ಯೆಯ ಬಾಲರಾಮನ ಕೆತ್ತನೆಯ ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ರವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆಯ ಮೂಲಕ ಯೋಜನೆಯ ವಿನ್ಯಾಸ, ಸ್ಥಳದ ಸೂಕ್ತತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿ, ಮುಂದಿನ ಕ್ರಮಗಳಿಗೆ ಅಗತ್ಯ ಮಾರ್ಗದರ್ಶನ ಪಡೆದಿದ್ದಾರೆ.

Continue Reading

Mandya

ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು

Published

on

ವರದಿ : ಅಲ್ಲಾಪಟ್ಟಣ ಸತೀಶ್

ಮಂಡ್ಯ :  ಜಿಲ್ಲೆಯ ಕೆ‌.ಆರ್.ಪೇಟೆ ತಾಲೂಕಿನಲ್ಲಿ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲುಗೊಂಡಿದೆ.

ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ರಮ್ಯಾ(26) ದೂರು ನೀಡಿರುವ ಯುವತಿಯಾಗಿದ್ದಾಳೆ. ಅದೇ ಗ್ರಾಮದ ಪಕ್ಕದ ಮನೆಯ ಪೃಥ್ವಿ(27) ಎಂಬಾತ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು,ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಮನೆಯಲ್ಲಿ ರಮ್ಯಾ ಒಬ್ಬಳೇ ಇರುವಾಗ ಅತ್ಯಾಚಾರವೆಸಗಿರುವುದಾಗಿ ಹೇಳಲಾಗಿದ್ದು, ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎನ್ನಲಾಗಿದೆ.

ಯಾರಿಗಾದರೂ ಹೇಳಿದರೆ ನಿಮ್ಮ ಅಪ್ಪ, ಅಮ್ಮನನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಯುವತಿ ತಿಳಿಸಿದ್ದಾಳೆ.

ಅಕ್ಟೋಬರ್ ತಿಂಗಳಲ್ಲಿ ರಮ್ಯಾಗೆ ವಾಂತಿ ಶುರುವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರ ಬಳಿ ತಪಾಸಣೆ ಮಾಡಲಾಗಿ ವೈದ್ಯರ ಸಲಹೆಯಂತೆ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಿಣಿಯಾಗಿರುವುದು ದೃಢ ಪಟ್ಡಿದೆ ಎನ್ನಲಾಗಿದೆ.

ಬಳಿಕ ಮದುವೆ ಮಾಡುವಂತೆ ಪೃಥ್ವಿ ಮನೆಯವರೊಂದಿಗೆ ಮಾತುಕತೆ ನಡೆದಿದ್ದು, ಮದುವೆಗೆ ಒಪ್ಪಿ ಇದೀಗ ಮದುವೆಯಾಗದೆ ಮೋಸ ಮಾಡಿರುವುದಾಗಿ ಸಂತ್ರಸ್ತೆ  ಠಾಣೆಗೆ ದೂರು ನೀಡಿದ್ದಾಳೆ.

ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Continue Reading

Trending

error: Content is protected !!