Mandya
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ – ಹೈಕೋರ್ಟ್ ಉಸ್ತುವಾರಿಯಲ್ಲಿ ತನಿಖೆಗೆ ಆಗ್ರಹ
ಮಂಡ್ಯ : ಹಾಸನ ಸಂಸದ ಪ್ರಜ್ವಲ್ ರೇವಣ್ಣರ ಮೇಲಿನ ಲೈಂಗಿಕ ಹಗರಣ ಕುರಿತು ನಿಷ್ಪಕ್ಷಪಾತ, ಪ್ರಾಮಾಣಿಕ ತನಿಖೆ ನಡೆಯುವ ಬಗ್ಗೆ ಅನುಮಾನ ಇದ್ದು, ಹೈಕೋರ್ಟ್ ಉಸ್ತುವಾರಿಯಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಸಮಗ್ರ ತನಿಖೆ ನಡೆಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆ ನಡೆಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಸಮಿತಿಯ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.
ರಾಜಕಾರಿಣಿಗಳ ಹೆಣ್ಣು ಬಾಕತನದಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಅಧಿಕಾರ ಹಣ ಬಲದಿಂದ ಕಾನೂನು,ಸಂವಿಧಾನಕ್ಕೆ ಕಿಮ್ಮತ್ತು ನೀಡದ ಹೆಣ್ಣು ಬಾಕ ಜನ ಪ್ರತಿನಿಧಿಗಳಿಗೆ ಕಾರ್ಯಾಂಗ, ಶಾಸಕಾಂಗ ಸಹಕಾರ ನೀಡುತ್ತಿದೆ,
ಇದಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಎಚ್ ವೈ ಮೇಟಿ, ರೇಣುಕಾಚಾರ್ಯ, ರಾಮದಾಸ್ ಮತ್ತು ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಗಳು ಸಾಕ್ಷಿಯಾಗಿವೆ,
ಅಕ್ರಮ ಲೈಂಗಿಕ ಹಗರಣದ ಬಗ್ಗೆ ಕಾರ್ಯಂಗ ವ್ಯವಸ್ಥೆಗೆ ಗೊತ್ತಿದ್ದರೂ ಕಾನೂನು ಕ್ರಮ ಜರುಗಿಸದೆ ಪ್ರಕರಣವನ್ನು ತಿರುಚಿ ಸಂತ್ರಸ್ತರನ್ನು ಬಲಿ ಮಾಡುವ ಸಂವಿಧಾನ ದ್ರೋಹಿ ಹೀನ ಕೃತ್ಯಗಳನ್ನು ಕಾಣುತ್ತಿದ್ದೇವೆ ಎಂದು ಕಿಡಿಕಾರಿದರು.
ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರ ಮತ್ತು ಹಣ ಬಲ ದುರ್ಬಳಕೆ ಮಾಡಿಕೊಂಡು ನೊಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದು, ಕಿಡಿಗೇಡಿಗಳು ಪೆನ್ ಡ್ರೈವ್ ಬಿಡುಗಡೆ ಮಾಡುವ ಮೂಲಕ ಮಹಿಳೆಯರ ಖಾಸಗಿ ಜೀವನ ಪ್ರದರ್ಶಿಸಿ ಮಾನಹಾನಿ ಮಾಡುತ್ತಿದ್ದಾರೆ. ಬಹು ದೊಡ್ಡ ಲೈಂಗಿಕ ಹಗರಣ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆಯ ಗುಪ್ತಚರ ವ್ಯವಸ್ಥೆ ವಿಫಲವಾಗಿದ್ದು, ಜೊತೆಗೆ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವೈಫಲ್ಯ ವಾಗಿದೆ ಎಂದು ಆರೋಪಿಸಿದರು.

ಲೈಂಗಿಕ ಹಗರಣ ಬೆಳಕಿಗೆ ಬಂದ ನಂತರ ರಾಜಕೀಯ ತೇಜೋವಧೆ ಮಾಡಲಾಗುತ್ತಿದೆ ವಿನಹ ಸಂತ್ರಸ್ತ ಮಹಿಳೆಯರ ಮಾನ ಉಳಿಸುವ ಮತ್ತು ನ್ಯಾಯ ದೊರಕಿಸಿ ಕೊಡುವ ಕೆಲಸ ಆಗುತ್ತಿಲ್ಲ. ಇದುವರೆಗೆ ನಡೆದಿರುವ ಲೈಂಗಿಕ ಹಗರಣದಲ್ಲಿ ಯಾವುದೇ ಒಬ್ಬ ಜನಪ್ರತಿನಿಧಿಗೆ ಶಿಕ್ಷೆಯಾದ ನಿದರ್ಶನ ಸಹ ಇಲ್ಲ. ಬದಲಾಗಿ ಕಾನೂನು ವ್ಯವಸ್ಥೆ ಜನಸಾಮಾನ್ಯರನ್ನು ಮಾತ್ರ ಶಿಕ್ಷಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮಹಿಳೆಯರ ಮಾನ ಪ್ರಾಣ ಸಂರಕ್ಷಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಎಚ್ ಡಿ ರೇವಣ್ಣ, ಪೆನ್ ಡ್ರೈವ್ ಬಿಡುಗಡೆ ಮಾಡಿರುವ ಎಲ್ಲರನ್ನು ಬಂಧಿಸಬೇಕು, ಹೈಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸಲು ನಿರ್ದೇಶಿಸಬೇಕು, ಸಂತ್ರಸ್ತ ಮಹಿಳೆಯರ ಖಾಸಗಿ ಜೀವನದ ಗೌಪ್ಯತೆ ಕಾಪಾಡಲು ತನಿಖಾ ತಂಡಕ್ಕೆ ಸೂಚನೆ ನೀಡಬೇಕು, ಹಗರಣದ ಎಲ್ಲಾ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಸಮಗ್ರ ತನಿಖೆ ನಡೆಸಬೇಕು ಎಂದು ಸಮಿತಿಯ ಮುಖಂಡರು ಒತ್ತಾಯಿಸಿದರು.

ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ,ಅನಿಲ್ ಕುಮಾರ್, ಕೆರಗೋಡು,ಕೆ.ಎಂ ಶ್ರೀನಿವಾಸ್, ಮರಂಕಯ್ಯ, ಎಸ್.ಕುಮಾರ್, ಭಾಗ್ಯಮ್ಮ, ಗೀತಾ ಮೇಲಕೋಟೆ, ಸುಕನ್ಯಾ ದುದ್ದ, ಸೋಮಶೇಖರ್, ಸುರೇಶ್ ಕುಮಾರ್ ಶೆಟ್ಟಳ್ಳಿ, ಬಿ.ಆನಂದ, ಚನ್ನಕೇಶವ ಸೇರಿದಂತೆ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Mandya
ಡಿ.28 ರಂದು ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ : ಪಾಪಣ್ಣ
ಮಳವಳ್ಳಿ : ಇದೇ ಡಿ.28 ರಂದು ಬೆಂಗಳೂರಿನ ಲಕ್ಷ್ಮೀನಾರಾಯಣಪುರದ ಒಡಲೂರು ಶ್ರೀ ಜ್ಯೋತಿ ರಾಮಲಿಂಗ ಸ್ವಾಮಿಗಳ ಸಮರಸ ಸನ್ಮಾರ್ಗ ಸಂಘದ ಕಚೇರಿಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಆರ್.ಆರ್ ವಧು- ವರರ ಕೇಂದ್ರದ
ಅಧ್ಯಕ್ಷ ಪಾಪಣ್ಣ ಅವರು ತಿಳಿಸಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ನಾರಾಯಣಪ್ಪ.ವಿ ಜಾಲಗೆರೆ ಮಾತನಾಡಿ, ಪಾಪಣ್ಣನವರ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ಹಾಗೂ ಸಹಭಾಗಿತ್ವವನ್ನು ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕೇಳಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಮಡಿವಾಳರ ಖಡ್ಗ ಪತ್ರಿಕೆಯ ಚಂದ್ರಶೇಖರ್, ಶಂಕರಮಠ ವಾರ್ಡ್ ಒಬಿಸಿ ಅಧ್ಯಕ್ಷ ಜಯರಾಮ್, ಬಿಜೆಪಿ ಮುಖಂಡ ಕೆಂಚಪ್ಪ, ಮುಖಂಡರಾದ ನಾಗರಾಜ ಮತ್ತು ಮುನಿರಾಜು, ವೆಂಕಟಾದ್ರಿ ಟೆಂಟ್ ಹೌಸ್ ಮಾಲೀಕ ವೆಂಕಟೇಶ್ ಉಪಸ್ಥಿತರಿದ್ದರು.
Mandya
ವಿವಿಧ ಗಣ್ಯರ ಪುತ್ಥಳಿ, ಸರ್ಕಲ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಶಾಸಕ ಕೆ.ಎಂ.ಉದಯ್
ಮದ್ದೂರು: ತಾಲೂಕಿನ ನಗರ ವ್ಯಾಪ್ತಿಯ ವಿವಿಧ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಶಾಸಕ ಕೆ. ಎಂ .ಉದಯ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮದ್ದೂರು ನಗರದ ಟಿ.ಬಿ. ಸರ್ಕಲ್‌ನಿಂದ ಪೇಟೆಬೀದಿ, ಕೊಲ್ಲಿ ಸರ್ಕಲ್‌ವರೆಗೆ 80 ಅಡಿ ರಸ್ತೆ ಮತ್ತು ಶಿವಪುರದ ಕೊಪ್ಪ ಸರ್ಕಲ್ ಸೇರಿದಂತೆ ನಗರದ ವಿವಿಧ ಪ್ರಮುಖ ಸರ್ಕಲ್‌ಗಳಲ್ಲಿ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ, ಶಿವಪುರದ ಕೊಪ್ಪ ಸರ್ಕಲ್ – ಭಕ್ತ ಕನಕದಾಸರು, ಕೊಲ್ಲಿ ಸರ್ಕಲ್ – ವಿಶ್ವಗುರು ಜಗಜ್ಯೋತಿ ಶ್ರೀ ಬಸವಣ್ಣ, ಹೂವಿನ ಸರ್ಕಲ್ – ಅಮರ ಶಿಲ್ಪಿ ಶ್ರೀ ಜಕಣಚಾರಿ, ಕೆಮ್ಮಣ್ಣು ನಾಲೆ ಸರ್ಕಲ್ – ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಸ್ಟೇಡಿಯಂ ಸರ್ಕಲ್ – ಶ್ರೀ ಶ್ರೀ ಶ್ರೀ ಬಾಲ ಗಂಗಾಧರನಾಥ ಸ್ವಾಮಿಜೀ ಹಾಗೂ ಟಿ.ಬಿ. ಸರ್ಕಲ್ – ನಾಡಪ್ರಭು ಶ್ರೀ ಕೆಂಪೇಗೌಡರು ರವರುಗಳ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಅಯೋಧ್ಯೆಯ ಬಾಲರಾಮನ ಕೆತ್ತನೆಯ ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ರವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ಮೂಲಕ ಯೋಜನೆಯ ವಿನ್ಯಾಸ, ಸ್ಥಳದ ಸೂಕ್ತತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿ, ಮುಂದಿನ ಕ್ರಮಗಳಿಗೆ ಅಗತ್ಯ ಮಾರ್ಗದರ್ಶನ ಪಡೆದಿದ್ದಾರೆ.
Mandya
ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
ವರದಿ : ಅಲ್ಲಾಪಟ್ಟಣ ಸತೀಶ್
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲುಗೊಂಡಿದೆ.
ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ರಮ್ಯಾ(26) ದೂರು ನೀಡಿರುವ ಯುವತಿಯಾಗಿದ್ದಾಳೆ. ಅದೇ ಗ್ರಾಮದ ಪಕ್ಕದ ಮನೆಯ ಪೃಥ್ವಿ(27) ಎಂಬಾತ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು,ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಮನೆಯಲ್ಲಿ ರಮ್ಯಾ ಒಬ್ಬಳೇ ಇರುವಾಗ ಅತ್ಯಾಚಾರವೆಸಗಿರುವುದಾಗಿ ಹೇಳಲಾಗಿದ್ದು, ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎನ್ನಲಾಗಿದೆ.
ಯಾರಿಗಾದರೂ ಹೇಳಿದರೆ ನಿಮ್ಮ ಅಪ್ಪ, ಅಮ್ಮನನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಯುವತಿ ತಿಳಿಸಿದ್ದಾಳೆ.
ಅಕ್ಟೋಬರ್ ತಿಂಗಳಲ್ಲಿ ರಮ್ಯಾಗೆ ವಾಂತಿ ಶುರುವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರ ಬಳಿ ತಪಾಸಣೆ ಮಾಡಲಾಗಿ ವೈದ್ಯರ ಸಲಹೆಯಂತೆ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಿಣಿಯಾಗಿರುವುದು ದೃಢ ಪಟ್ಡಿದೆ ಎನ್ನಲಾಗಿದೆ.

ಬಳಿಕ ಮದುವೆ ಮಾಡುವಂತೆ ಪೃಥ್ವಿ ಮನೆಯವರೊಂದಿಗೆ ಮಾತುಕತೆ ನಡೆದಿದ್ದು, ಮದುವೆಗೆ ಒಪ್ಪಿ ಇದೀಗ ಮದುವೆಯಾಗದೆ ಮೋಸ ಮಾಡಿರುವುದಾಗಿ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದಾಳೆ.
ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Hassan1 hour agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Special3 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Hassan21 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
Hassan19 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
State21 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
-
Mandya20 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
Kodagu20 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
State16 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
