Connect with us

State

ಪಂಚಭೂತಗಳಲ್ಲಿ ಕ್ಯಾ| ಪ್ರಾಂಜಲ್‌ ಲೀನ

Published

on

ಮೂರು ದಿನಗಳ ಹಿಂದೆ ಜಮ್ಮು- ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾಳಗದಲ್ಲಿ ಹುತಾತ್ಮರಾದ ಕ್ಯಾ| ಪ್ರಾಂಜಲ್‌
ಅವರು ಇಂದು ಪಂಚಭೂತಗಳಲ್ಲಿ ಲೀನರಾದರು. ಅವರ ಪಾರ್ಥಿವ ಶರೀರ ಶುಕ್ರವಾರ ರಾತ್ರಿ ಬೆಂಗಳೂರಿನ ಎಚ್‌ಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋತ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ. ಜಾರ್ಜ್‌, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ತೇಜಸ್ವಿ ಸೂರ್ಯ ಸಹಿತ ಗಣ್ಯರು ಉಪಸ್ಥಿತರಿದ್ದು ಅಂತಿಮ ಗೌರವ ನಮನ ಸಲ್ಲಿಸಿದರು. ಎಚ್‌ಎಎಲ್‌ ಏರ್‌ಪೋರ್ಟ್‌ಗೆ ಆಗಮಿಸಿದ ಸಂದರ್ಭ ಪಾರ್ಥಿವ ಶರೀರಕ್ಕೆ ಅಲ್ಲಿ ಮಿಲಿಟರಿ ಗೌರವ ಸಲ್ಲಿಸಲಾಯಿತು. ಕ್ಯಾ| ಪ್ರಾಂಜಲ್‌ ಅವರ ತಂದೆ ಎಂ. ವೆಂಕಟೇಶ್‌, ತಾಯಿ ಅನುರಾಧಾ, ಪತ್ನಿ ಅದಿತಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್‌ಚಂದ್‌ ಗೆಹೊÉàಟ್‌ ಗೌರವ ಅರ್ಪಿಸಿದರು. ಬಳಿಕ ಜಿಗಣಿಯ ಸ್ವಗೃಹಕ್ಕೆ ಪ್ರಾಂಜಲ್‌ ಪಾರ್ಥಿವ ಶರೀರವನ್ನು ತರಲಾಯಿತು. . ಇಂದು ಬೆಳಗ್ಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿ ಪಾರ್ಥಿವ ಶರೀರವನ್ನು ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತಂದು ಭಾರತೀಯ ಸೇನೆ ಮತ್ತು ಕರ್ನಾಟಕ ಪೊಲೀಸ್ ಇಲಾಖೆಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮಸುಂದರ ಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಕಣ್ಣೀರಿನ ಭಾವಪೂರ್ಣ ವಿದಾಯ ಸಲ್ಲಿಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

State

ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ: ಆರೋಪಿ ರನ್ಯಾರಾವ್‌ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Published

on

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಎ1 ಆರೋಪಿ ರನ್ಯಾರಾವ್‌ ಹಾಗೂ ಎ2 ಆರೋಪಿ ತರುಣ್ ರಾಜ್ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್‌ನ ಏಕಸದಸ್ಯ ಪೀಠವೂ ಆದೇಶ ಹೊರಡಿಸಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ನಟಿ ರನ್ಯಾರಾವ್‌ ಹಾಗೂ ಆಪ್ತ ತರುಣ್ ರಾಜ್ ಜಾಮೀನು ಕೋರಿ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆಯನ್ನು ಇಂದು(ಏಪ್ರಿಲ್‌.26) ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್ ಏಕಸದಸ್ಯ ಪೀಠವೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತೀರ್ಪು ನೀಡಿದೆ.

ನಟಿ ರನ್ಯಾರಾವ್‌ ಅವರ ಜಾಮೀನು ಅರ್ಜಿ ಇಲ್ಲಿಯವರೆಗೆ 2 ಬಾರಿ ವಜಾ ಆಗಿದೆ. ಹೀಗಾಗಿ ಇನ್ನೂ ಮುಂದಿನ ಒಂದು ವರ್ಷಗಳ ಕಾಲ ರನ್ಯಾರಾವ್ ಖಾಯಂ ವಿಳಾಸ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಾಗುತ್ತದೆ.

Continue Reading

State

ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Published

on

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್‌ ಅವರು ನಿಧನರಾಗಿದಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ ಎಂದಿದ್ದಾರೆ.

ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು. ಭಾರತದ ಹೆಮ್ಮೆಯ ಇಸ್ರೋ ಸಂಸ್ಥೆಗೆ ದೀರ್ಘ ಕಾಲ ಅಧ್ಯಕ್ಷರಾಗಿ ಮತ್ತು ಕೇಂದ್ರದ ಬಾಹ್ಯಾಕಾಶ ಮಂಡಳಿಯ ನಿರ್ದೇಶಕರಾಗಿ ಡಾ.ಕಸ್ತೂರಿ ರಂಗನ್ ಅವರು ಸಲ್ಲಿಸಿದ ಸೇವೆಯಿಂದಾಗಿ ಭಾರತ ಇಂದು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಿದೆ ಎಂದು ಹೇಳಿದ್ದಾರೆ.

ಡಾ.ಕಸ್ತೂರಿ ರಂಗನ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

Continue Reading

State

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ಪ್ರಕರಣ: ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಆರ್‌.ಅಶೋಕ್‌

Published

on

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸುವ ಮೂಲಕ ಅವರ ಧಾರ್ಮಿಕ ಭಾವನೆಗಳಿಗೆ, ಹಕ್ಕುಗಳಿಗೆ ಚ್ಯುತಿ ತಂದ ರಾಜ್ಯ ಸರ್ಕಾರದ ನಡೆ ವಿರುದ್ಧ ಕೇಂದ್ರ ಮಾನವ ಹಕ್ಕುಗಳ ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿ, ನಾಗರೀಕರ ಸಂವಿಧಾನದತ್ತ ಹಕ್ಕುಗಳು ಹಾಗು ಘನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ, ಈ ಪ್ರಕರಣದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಏಪ್ರಿಲ್.23 ರಂದು, ರಾಜ್ಯಾದ್ಯಂತ ಹಲವಾರು ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಭಯಭೀತ ಧಾರ್ಮಿಕ ಚಿಹ್ನೆಗಳಾದ ಜನಿವಾರ (ಯಜ್ಞೋಪವೀತ), ಶಿವದಾರ ಇತ್ಯಾದಿಗಳನ್ನು ತೆಗೆದುಹಾಕಲು ಒತ್ತಾಯಿಸಿ ಕರ್ನಾಟಕ ಸರ್ಕಾರವು ವೈಯಕ್ತಿಕ ನಂಬಿಕೆಗಳ ಉಲ್ಲಂಘನೆಯ ಘಟನೆಗಳ ಬಗ್ಗೆ ನಾನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.

ಇಂತಹ ಕಾನೂನುಬಾಹಿರ ಮತ್ತು ತಾರತಮ್ಯದ ಅಭ್ಯಾಸಗಳಿಂದ ಭವಿಷ್ಯವು ಅಪಾಯಕ್ಕೆ ಸಿಲುಕಬಾರದು ಎಂದು ನಾಗರಿಕರ, ವಿಶೇಷವಾಗಿ ಯುವಕರ ಹಕ್ಕುಗಳು ಮತ್ತು ಘನತೆಯನ್ನು ಕಾಪಾಡಲು ತ್ವರಿತ ಮತ್ತು ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಆಯೋಗಕ್ಕೆ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

Continue Reading

Trending

error: Content is protected !!