Connect with us

Hassan

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಸದರ-ಡಿಸಿ ಕಛೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Published

on

ಹಾಸನ: ಜನವರಿ ೨೩ ರಿಂದ ೨೫ ರವರೆಗೆ ಮೂರು ದಿನಗಳ ಕಾಲ ಸಂಸದರ ಕಛೇರಿ ಮುಂದೆ ಮತ್ತು ಜಿಲ್ಲಾಧಿಕಾರಿ ಕಚೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಅಂಗನವಾಡಿ ನೌಕರರು, ಅಕ್ಷರ ದಾಸೋಹ ನೌಕರರು ಹಾಗೂ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂತೇರ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಅವರು, ಬೆಲೆ ಏರಿಕೆ ವಿರುದ್ಧ, ಕಾರ್ಮಿಕ ಹಕ್ಕುಗಳ ರಕ್ಷಣೆಗಾಗಿ, ಸಂವಿಧಾನ ಮೌಲ್ಯಗಳ ರಕ್ಷಣೆಗಾಗಿ, ರೈತ ವಿರೋಧಿ ಕೃಷಿ ಕಾನೂನುಗಳ ವಾಪಸ್‌ಗಾಗಿ, ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಖಾತ್ರಿ ಜಾರಿಗಾಗಿ, ಕಾರ್ಮಿಕರಿಗೆ ಕನಿಷ್ಠ ವೇತನ ರೂ. ೩೧,೦೦೦ ನಿಗಧಿಗಾಗಿ, ಕನಿಷ್ಠ ರೂ.೬.೦೦೦ ಪಿಂಚಣಿಗಾಗಿ, ಅಂಗನವಾಡಿ ನೌಕರರ, ಗ್ರಾಮ ಪಂಚಾಯತಿ ನೌಕರರ, ಬಿಸಿಯೂಟ ನೌಕರರ, ಪ್ಲಾಂಟೇಷನ್ ಕಾರ್ಮಿಕರ, ಆಸ್ಪತ್ರೆ, ಹಾಸ್ಟೆಲ್, ಕೈಗಾರಿಕೆ ಕಾರ್ಮಿಕರ ಬೇಡಿಕೆಗಳಿಗಾಗಿ, ಗೌರವಧನ, ಗುತ್ತಿಗೆ ಮತ್ತು ಹೊರಗುತ್ತಿಗೆ ಕಾರ್ಮಿಕ ಪದ್ದತಿ ರದ್ದುಪಡಿಸಿ ಕಾರ್ಮಿಕರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ, ನಿರುದ್ಯೋಗ ಮತ್ತು ಖಾಸಗೀಕರಣದ ನೀತಿಗಳನ್ನು ವಿರೋಧಿಸಿ ಜನವರಿ ೨೩ ರಿಂದ ೨೫ ರವರೆಗೆ ಸಂಸತ್ ಸದಸ್ಯರ ಕಚೇರಿ ಮುಂದೆ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರು ಪ್ರತಿಭಟನಾ ಧರಣಿ ನಡೆಸಲಿದ್ದಾರೆ ಎಂದರು. ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಸರ್ಕಾರ ೧೦ ವರ್ಷಗಳ ಆಡಳಿತವನ್ನು ಪೂರೈಸಿ ಮತ್ತೊಂದು ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿದೆ. ಆದರೆ ಕಳೆದ ೧೦ ವರ್ಷಗಳಲ್ಲಿ ಜನರಿಗೆ ಒಳ್ಳೆಯ ದಿನಗಳು ಬರಲಿವೆ ಎನ್ನುವ ಭರವಸೆಯು ಮರೀಚಿಕೆಯಾಗಿಯೇ ಉಳಿಯಿತು. ಶ್ರೀಮಂತರು ಅತಿದೊಡ್ಡ ಶ್ರೀಮಂತಾದರು. ಬಡವರು ಮತ್ತಷ್ಟು ಕಡುಬಡತನಕ್ಕೆ ತಳ್ಳಲ್ಪಟ್ಟರು. ದೇಶದ ಸಾಲ ೨೦೫ ಲಕ್ಷ ಕೋಟಿಗಳಿಗೆ ಏರಿತು. ಶ್ರೀಮಂತರ ೧೫ ಲಕ್ಷ ಕೋಟಿ ಸಾಲ ಮನ್ನಾ ಮಾಡಲಾಯಿತು. ರೈತರ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡದೆ ಅವರ ಮೇಲಿನ ಸಾಲದ ಹೊರೆ ಇಳಿಸದೆ ಲಕ್ಷಗಟ್ಟಲೆ ರೈತರನ್ನು ಆತ್ಮಹತ್ಯೆಗೆ ದೂಡಲಾಯಿತು ಎಂದು ದೂರಿದರು. ಕಾರ್ಮಿಕರ ಕಾನೂನುಗಳನ್ನು ಸಂಹಿತೆಗಳನ್ನಾಗಿಸಿ ಕಾರ್ಮಿಕರನ್ನು ಮತ್ತೆ ಗುಲಾಮಗಿರಿಗೆ ನೂಕಿ ಅತಿಕಡಿಮೆ ಕೂಲಿ ಮತ್ತು ಸೌಲಭ್ಯಗಳನ್ನು ನೀಡಿ ಅತಿಹೆಚ್ಚು ದುಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿ ಕಾರ್ಪೊರೇಟ್ ಲೂಟಿಗೆ ಅವಕಾಶ ನೀಡಲಾಯಿತು. ನಿರುದ್ಯೋಗ ಮಟ್ಟ ಮಿತಿಮೀರಿ ಆಸ್ಪೋಟಕಾರಿ ಸ್ಥಿತಿಗೆ ತಲುಪಿತು. ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಗಳ ಖಾಸಗೀಕರಣದಿಂದ ಸಾಮಾನ್ಯ ಜನರು ಉತ್ತಮ ಗುಣಮಟ್ಟದ ಹಾಗೂ ಏಕರೂಪದ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.

ಸಮಗ್ರ ಮಕ್ಕಳ ರಕ್ಷಣಾ ಯೋಜನೆಯನ್ನು ರಾಜ್ಯದಲ್ಲಿ ೨೦೧೨ ರಿಂದ ಅನುಷ್ಠಾನ ಮಾಡಲಾಗುತ್ತಿದೆ, ಪ್ರಸ್ತುತ ಮಿಷನ್ ವಾತ್ಸಲ್ಯ ಎಂಬ ಹೆಸರಿನಿಂದ ಪರಿಷ್ಕರಿಸಲಾಗಿದೆ. ಈ ಯೋಜನೆಯ ಮೂಲಕ ಸಾವಿರಾರು ಪಾಲನೆ, ಪೋಷಣೆ ಮತ್ತು ರಕ್ಷಣೆಯ ಅವಶ್ಯಕತೆ ಇರುವ ಅನಾಥ, ಪರಿತ್ಯಕ್ತ, ಶೋಷಣೆ ಮತ್ತ ಹಿಂಸೆಗಳಿಗೆ ಒಳಪಟ್ಟು ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳನ್ನು ಸಂರಕ್ಷಿಸಿ ಅವರ ಘನತೆಯ ಬದುಕಿನ ರಕ್ಷಣೆಗಾಗಿ ಶ್ರಮಿಸಲಾಗುತ್ತಿದೆ. ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾರ್ಯವು ಶಾಸನಬದ್ಧ, ಅತೀ ಸೂಕ್ಷ್ಮ ಅಲ್ಲದೆ ಅತ್ಯಗತ್ಯ ಸೇವೆ ಒದಗಿಸುವ ಕ್ಷೇತ್ರವಾಗಿರುತ್ತದೆ. ಸರಾಸರಿ ೯೫ ರಷ್ಟು ಸಿಬ್ಬಂದಿಗಳನ್ನು ಆರಂಭದಲ್ಲಿ ಗುತ್ತಿಗೆ ಆಧಾರದಲ್ಲಿ ೨೦೧೫ರ ನಂತರ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲಾಗಿರುತ್ತದೆ. ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಪದವಿ, ಕಾನೂನು ಪದವಿ ಮತ್ತು ಸ್ನಾತ್ತಕೋತ್ತರ ಪದವಿಯೊಂದಿಗೆ ಹತ್ತು ಹಲವು ವರ್ಷಗಳಿಂದ ಸೇವಾ ಅನುಭವ ಹೊಂದಿರುವ ಸಿಬ್ಬಂದಿಗಳು ಅತ್ಯಂತ ಕಡಿಮೆ ವೇತನಕ್ಕೆ ದುಡಿಯುತ್ತಿದ್ದೇವೆ. ಅಲ್ಲದೆ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ ಮಾಡುತ್ತಾ ಬಂದಿದ್ದೇವೆ. ೮ ವರ್ಷಗಳ ನಂತರ ಮಿಷನ್ ವಾತ್ಸಲ್ಯ ಯೋಜನೆ ಹೆಸರಿನಲ್ಲಿ ಪರಿಷ್ಕರಣೆಯಾಗಿರುವ ವೇತನವು ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ಅತೀ ಕಡಿಮೆ ಇದೆ ಅಲ್ಲದೇ ಇನ್ನಿತರೆ ನಮ್ಮ ಬೇಡಿಕೆಗಳು ಇದುವರೆಗೆ ಈಡೇರಿರುವುದಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ಲೋಕಸಭಾ ಸದಸ್ಯರ ಕಛೇರಿಯ ಮುಂದೆ ಸ್ಟೀಮ್ ನೌಕರರೊಂದಿಗೆ ಧರಣಿ ಮಾಡಿ ಮನವಿ ಸಲ್ಲಿಸುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪಾ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಅರವಿಂದ್, ಕ.ರಾ.ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಜಯಂತಿ, ಕ.ಪ್ರೊ.ಪ್ಲಾಂಟೇಷನ್ ಕಾರ್ಮಿಕರ ಸಂಘದ ಕಾರ್ಯದರ್ಶಿ ಸೌಮ್ಯ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ ಖಾಯಂತೇರ ನೌಕರರು ಸಂಘದ ಪ್ರಧಾನ ಕಾರ್ಯದರ್ಶಿ ಕಾಂತರಾಜು, ಕ.ರಾ.ಗ್ರಾ.ಪಂ.ನೌಕರರ ಸಂಘದ ಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಟಿ. ಹೊನ್ನೇಗೌಡ, ಜಿಲ್ಲಾ ಖಜಾಂಚಿ ಕಲಾವತಿ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Published

on

ಹಾಸನ : ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

ಡಿಡಿಪಿಯು ಮಹಾಲಿಂಗಯ್ಯ ಆದೇಶ

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಳಿದ ತಾಲ್ಲೂಕುಗಳಲ್ಲಿ ಹೆಚ್ಚಿನ ಮಳೆಯಾದರೆ ರಜೆ ನೀಡುವ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ

ಡಿಸಿ ಅನುಮತಿ ಪಡೆದು ರಜೆ ಘೋಷಣೆ ಮಾಡಿದ ಡಿಡಿಪಿಯು

Continue Reading

Hassan

ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

Published

on

ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ರಾಜೇಶ್ (9) ಸಾವನ್ನಪ್ಪಿದ ಬಾಲಕ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮಾಡಾಳು ಗ್ರಾಮದಲ್ಲಿ ಘಟನೆ

ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್

ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್

ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್

ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಹಿಮ್ಸ್‌ಗೆ ದಾಖಲಾಗಿದ್ದ ರಾಜೇಶ್

ಚಿಕಿತ್ಸೆ ಫಲಕಾರಿಯಾಗದೆ ಇಂದು ರಾಜೇಶ್ ಸಾವು

Continue Reading

Hassan

2 ತಿಂಗಳ ಮಗುವಿಗೆ ಅನಾರೋಗ್ಯ ಬೇಸೆತ್ತ ಅಪ್ಪ ಆತ್ಮಹತ್ಯೆಗೆ ಯತ್ನ

Published

on

ಹಾಸನ: ಮಗುವಿನ ಆರೋಗ್ಯವು ಸುಧಾರಿಸದೇ ದಿನೆ ದಿನೆ ಹೆಚ್ಚಾದ ಹಿನ್ನಲೆಯಲ್ಲಿ ಮನಸ್ಸಿಗೆ ನೋವುಂಟು ಮಾಡಿದ ಹಿನ್ನಲೆಯಲ್ಲಿ ಏನು ಮಾಡುವುದು ಎಂಬುದು ತೋಚದೇ ಹಾಸನ ಜಿಲ್ಲಾ ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಹೋಗಿ ತುದಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕೊನೆಗೆ ಆಸ್ಪತ್ರೆ ಸಿಬ್ಬಂದಿಗಳು ಆತನ ಮನವೊಲಿಸುವಲ್ಲಿ ಯಶಸ್ವಿಯಾಗಿ ಬದುಕಿಸಿದ ಘಟನೆ ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಎಂಬುವರ ಎರಡು ತಿಂಗಳ ಮಗುವಿನ ಅನಾರೋಗ್ಯವು ಹೆಚ್ಚಾಗುತ್ತಿರುವ ಬಗ್ಗೆ ತಿಳಿದು ಬೇಸರದಿಂದ ಆತ್ಮಹತ್ಯೆ ಯತ್ನಿಸಿರುವುದಾಗಿ ಹೇಳಲಾಗಿದೆ. ಮಗುವಿನ ಅನಾರೋಗ್ಯದಿಂದ ತಂದೆ ಮನನೊಂದಿದ್ದು, ಹಾಸನದ ಜಿಲ್ಲಾ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ಸಾಯುವ ಹೈಡ್ರಾಮ ಮಾಡಲಾಗಿದೆ. ಕಟ್ಟಡದ ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹೊಡ್ಡಿದ್ದು,

ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದಂತಾಗಿದೆ. ಗಂಗಸ್ವಾಮಿಯನ್ನ ಆಸ್ಪತ್ರೆ ಕಟ್ಟಡದಿಂದ ಕೆಳಗಿಳಿಸಿ ನಂತರ ಪೊಲಿಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಈ ದೃಶ್ಯವನ್ನು ರಸ್ತೆಯಲ್ಲಿ ಸಾರ್ವಜನಿಕರು ನೋಡಿದ್ದು, ವಿಡಿಯೋ ಸೆರೆ ಹಿಡಿದಿದ್ದಾರೆ.

Continue Reading

Trending

error: Content is protected !!