Connect with us

Mandya

ಮೆದುಳು ಜ್ವರ ತಡೆಗೆ ಮುನ್ನೆಚ್ಚರಿಕೆ ಅಗತ್ಯ ಡಾ. ಎನ್ ಕಾಂತರಾಜು

Published

on

ಶ್ರೀರಂಗಪಟ್ಟಣ : ಮೆದುಳು ಜ್ವರದ ವೈರಾಣು ಹೊಂದಿದ ಹಂದಿ ಅಥವಾ ಪಕ್ಷಿಗಳನ್ನು ಕಚ್ಚಿದ ಕ್ಯುಲೆಕ್ಷ ಜಾತಿ ಸೊಳ್ಳೆಗಳು ಮನುಷ್ಯರನ್ನು ಕಚ್ಚಿದಾಗ ಆರೋಗ್ಯವಂತ ವ್ಯಕ್ತಿಗೆ ಮೆದುಳು ಜ್ವರ ಬರುತ್ತದೆ. ಅದಕ್ಕಾಗಿ ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎನ್.ಕಾಂತರಾಜು ಹೇಳಿದರು.

ಅವರು ಪಟ್ಟಣದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ಮಂಡ್ಯ,ತಾಲೂಕು ಆಡಳಿತ, ತಾಲೂಕು ಪಂಚಾಯತ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮೆದುಳು ಜ್ವರ ನಿಯಂತ್ರಣ ಮತ್ತು ಮುಂಜಾಗ್ರತ ಕ್ರಮಗಳ ಕುರಿತು ತಾಲೂಕು ಮಟ್ಟದ ಚುನಾಯಿತ ಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ, ಮೇಲ್ವಿಚಾರಕರಿಗೆ ಹಾಗೂ ಇತರರಿಗಾಗಿ ಆಯೋಜಿಸಿದ್ದ ಅಡ್ವೋಕೆಸಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮೆದುಳು ಜ್ವರ ತಡೆಗಟ್ಟಲು ಮೊದಲಿಗೆ ಸೊಳ್ಳೆಗಳ ನಿಯಂತ್ರಿಸುವುದು ಮತ್ತು ಅವುಗಳ ಉತ್ಪತ್ತಿ ತಾಣಗಳನ್ನು ನಾಶ ಮಾಡುವುದು ಹಾಗೂ ಹಂದಿಗಳನ್ನು ಜನ ವಾಸ ಸ್ಥಳದಿಂದ 3 ಕಿ ಮೀ ದೂರದಲ್ಲಿ ಸ್ಥಳಾಂತರಿಸುವುದು ಮುಖ್ಯವಾಗಿದೆ. ಮೆದುಳು ಜ್ವರದ ಲಕ್ಷಣಗಳಾದ ಪ್ರಾರಂಭದಲ್ಲಿ ವಿಪರೀತ ಜ್ವರ,ಕುತ್ತಿಗೆ ಬಿಗಿತ, ತಲೆ ಸುತ್ತುವಿಕೆ, ಮೈನಡುಕ, ಪ್ರಜ್ಞಾಹೀನತೆ ಸ್ಥಿತಿ ಕಂಡು ಬರುವುದು ಇಂತಹ ಲಕ್ಷಣಗಳು ಕಾಣಿಸಿದ ತಕ್ಷಣವೇ ವೈದ್ಯರಲ್ಲಿ ಚಿಕಿತ್ಸೆ ಪಡೆಯಬೇಕು. ಮೆದುಳು ರೋಗವು ಶೇ 30 ರಷ್ಟು ಮರಣಾಂತಿಕವಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿದರೆ ಈ ರೋಗದಿಂದ ದೂರ ಇರಬಹುದು ಎಂದರು.

ನಂತರ ಮಕ್ಕಳ ತಜ್ಞ ಡಾ.ಪಾರ್ವತಿ.ವಿ ಮಾತನಾಡಿ, ಸಾಮಾನ್ಯವಾಗಿ ಮಕ್ಕಳಲ್ಲಿ ಮೆದುಳು ಜ್ವರ ಬರುವ ಸಾಧ್ಯತೆ ಇದೆ ಮೆದುಳು ಜ್ವರವನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವದರ ಜೊತೆಗೆ ಮಕ್ಕಳಿಗೆ ಹುಟ್ಟಿದ 9ನೇ ತಿಂಗಳಲ್ಲಿ ಹಾಗೂ ಒಂದುವರೆ ವರ್ಷದಲ್ಲಿ ಕಡ್ಡಾಯವಾಗಿ ಮೆದುಳು ಜ್ವರದ ಲಸಿಕೆಯನ್ನು ಹಾಕಿಸಬೇಕೆಂದರು.

ನಂತರ ಜಿಲ್ಲಾ ಸಹಾಯಕ ಕೀಟ ಶಾಸ್ತ್ರಜ್ಞ ಜಾನೆಟ್ ಮೆನೇಜಿಸ್ ಮಾತನಾಡಿ, ಮೆದುಳು ಜ್ವರದ ರೋಗ ಹರಡುವಿಕೆಯಲ್ಲಿ ಸೊಳ್ಳೆಗಳ ಪಾತ್ರ ಹಾಗೂ ಹಂದಿ ಸಾಗಾಣಿಕೆ ವಿಧಾನಗಳ ಕುರಿತಂತೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಗಾಂಧೀವಾದಿ ಖಾಸಗಿ ವೈದ್ಯ ಡಾ.ಸುಜಯ್ ಕುಮಾರ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಸಿದ್ದಯ್ಯ,ಮುಖ್ಯ ಪಶು ವೈದ್ಯಾಧಿಕಾರಿ ಡಾ.ಕೆ.ಆನಂದ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಮೃತ ಕುರಣಿ ಹಾಗೂ ಮೇಲ್ವಿಚಾರಕರು, ಶಿಕ್ಷಣ ಸಂಯೋಜಕ ಎಸ್.ಆರ್.ಬಾಲಕೃಷ್ಣ, ಜಿಲ್ಲಾ ಮೇಲ್ವಿಚಾರಕ ಬಸವರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ರಾಜ್, ಜಿ ಬಿ ಹೇಮಣ್ಣ,ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಕೃಷ್ಣೇಗೌಡ, ಚಂದನ್, ಪಣಿಂದ್ರ, ಪ್ರಭಾರ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂಗಳ, ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ್ ಬಾಬು, ಪುರಸಭೆಯ ಆರೋಗ್ಯ ನಿರೀಕ್ಷಕಿ ಚಂಪಾಶ್ರೀ , ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

Published

on

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.

ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.

Continue Reading

Mandya

ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

Published

on

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು‌ ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ‌ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.

Continue Reading

Mandya

ಫೈನಾನ್ಸ್‌ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್‌.ಅಶೋಕ್‌

Published

on

ಮಂಡ್ಯ: ಮೈಕ್ರೋ ಫೈನಾನ್ಸ್‌ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್‌ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್‌ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್‌ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್‌.ಅಶೋಕ್‌ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್‌ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್‌, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್‌ ನೀಡಿದರು.

Continue Reading

Trending

error: Content is protected !!