Hassan
ಪ್ರೀತಂ ಜೆ. ಗೌಡ ಜನ್ಮದಿನ: ನಾಳೆ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮ
ಹಾಸನ: ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಪೌರಕಾರ್ಮಿಕರು ಹಾಗೂ ಸೈನಿಕರಿಗೆ ಸನ್ಮಾನ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅವರ ಜನ್ಮದಿನದ ಅಂಗವಾಗಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಅಭಿಮಾನಿಗಳ ಬಳಗ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ನ.14) ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಮಿತ್ ಗೌಡ ತಿಳಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೇಮಾವತಿ ಪ್ರತಿಮೆ ಸಮೀಪದ ಕಾರ್ ಶೆಡ್‌ನಲ್ಲಿ ಬೆಳಿಗ್ಗೆ ಕಾರ್ಯಕ್ರಮಗಳು ಆರಂಭವಾಗಲಿದ್ದು, ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಸೈನಿಕರು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸಲಾಗುವುದು. ನಿರ್ಗತಿಕರಿಗೆ ಕಂಬಳಿ ಮತ್ತು ಊಟ ವಿತರಣೆ, ಸರ್ಕಾರಿ ಶಾಲಾ ಮಕ್ಕಳಿಗೆ ಹಾಗೂ ಅಂಧ ಮಕ್ಕಳಿಗೆ ಶಾಲಾ ಸಾಮಗ್ರಿಗಳನ್ನು ವಿತರಿಸಲಾಗುವುದು. ವಯೋವೃದ್ಧರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.

ಹಾಸನಾಂಬ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸಿದ ಪೌರಕಾರ್ಮಿಕರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸೇವೆಯನ್ನು ಗುರುತಿಸಿ ಗೌರವಿಸಲಾಗುವುದು. ಕಳೆದ ಐದು ವರ್ಷಗಳಿಂದ ಪ್ರೀತಂ ಜೆ. ಗೌಡ ಅಭಿಮಾನಿಗಳ ಬಳಗವು ಜನ್ಮದಿನದ ಅಂಗವಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಪ್ರತಿವರ್ಷ ವಿಭಿನ್ನ ಪರಿಕಲ್ಪನೆಯೊಂದಿಗೆ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು. ಇದರೊಂದಿಗೆ ಹಾಸನ ಜಿಲ್ಲೆಯ ವಿವಿಧ ಗ್ರಾಮಗಳ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅನ್ನದಾಸೋಹ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಭಿಮಾನಿಗಳು ತಮ್ಮ ಶಕ್ತ್ಯಾನುಸಾರ ಆಯೋಜಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಹಾಸನ ವಿಧಾನಸಭಾ ಕ್ಷೇತ್ರದ ಜನತೆ, ಜಿಲ್ಲೆಯ ಪ್ರೀತಂ ಜೆ. ಗೌಡ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಮಿತ್ ಗೌಡ, ಪ್ರಧಾನ ಕಾರ್ಯದರ್ಶಿ ಮನು ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿತು, ಯುವ ಮೋರ್ಚಾ ನಗರಾಧ್ಯಕ್ಷ ರಾಕೇಶ್ ಎಚ್. ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ ಬಿ. ವೇದಾವತಿ ಸೇರಿದಂತೆ ಟೀಂ ಪ್ರೀತಂ ಜೆ. ಗೌಡ ಸದಸ್ಯರು ಉಪಸ್ಥಿತರಿದ್ದರು.
Hassan
ಶ್ರವಣಬೆಳಗೊಳಕ್ಕೆ ವಂದೇ ಭಾರತ್ ರೈಲು ಸಂಭ್ರಮದ ಸ್ವಾಗತ – ಯಾತ್ರಾರ್ಥಿಗಳು, ಪ್ರವಾಸಿಗರಿಗೆ ಹೆಚ್ಚಿನ ಅನುಕೂಲ: ಚಾರುಶ್ರೀ
ಶ್ರವಣಬೆಳಗೊಳ: ಬೆಂಗಳೂರು–ಶ್ರವಣಬೆಳಗೊಳ–ಮಂಗಳೂರು ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ಸಂಪರ್ಕ ಕಲ್ಪಿಸುವ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಶುಕ್ರವಾರ ಶ್ರವಣಬೆಳಗೊಳ ರೈಲು ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.
ಕ್ಷೇತ್ರದ ಪೀಠಾಧಿಪತಿ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಸ್ವಾಮೀಜಿ ಹಾಗೂ ಶಾಸಕ ಸಿ.ಎನ್.ಬಾಲಕೃಷ್ಣ ಅವರು ರೈಲಿಗೆ ಪೂರ್ಣಕುಂಭ ಸ್ವಾಗತ ನೀಡಿ, ಪುಷ್ಪಾರ್ಚನೆ ಹಾಗೂ ಮಂಗಳಾರತಿ ನೆರವೇರಿಸಿ ಬರಮಾಡಿಕೊಂಡರು. ರೈಲಿಗೆ ಈಡುಗಾಯಿ ಒಡೆದು, ಪುಷ್ಪವೃಷ್ಟಿ ಮಾಡುವ ಮೂಲಕ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ನೂತನ ವಂದೇ ಭಾರತ್ ರೈಲು ಸೇವೆಯಿಂದ ಶ್ರೀಕ್ಷೇತ್ರ ಶ್ರವಣಬೆಳಗೊಳಕ್ಕೆ ದೇಶದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರು, ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಲಿದೆ. ಉತ್ತರ ಭಾರತದ ಪ್ರವಾಸಿಗರು ದಕ್ಷಿಣ ಭಾರತದ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಸುಲಭವಾಗಿ ವೀಕ್ಷಿಸಲು ಇಂತಹ ಆಧುನಿಕ ರೈಲು ಸೇವೆಗಳು ಸಹಕಾರಿಯಾಗಲಿವೆ. ಇದರಿಂದ ಕ್ಷೇತ್ರದ ಪ್ರವಾಸೋದ್ಯಮ ಅಭಿವೃದ್ಧಿಗೂ ಮತ್ತಷ್ಟು ವೇಗ ದೊರೆಯಲಿದೆ ಎಂದರು.

ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಬೆಂಗಳೂರು–ಹಾಸನ ರೈಲು ಮಾರ್ಗ ನಿರ್ಮಾಣಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನೀಡಿದ ಕೊಡುಗೆ ಸ್ಮರಣೀಯ. ಅವರ ದೂರದೃಷ್ಟಿ ಹಾಗೂ ರೈಲ್ವೆ ಸಂಪರ್ಕ ಅಭಿವೃದ್ಧಿಗೆ ತೋರಿದ ಕಾಳಜಿಯಿಂದಾಗಿ ಇಂದು ಈ ಭಾಗದಲ್ಲಿ ಆಧುನಿಕ ರೈಲುಗಳ ಸಂಚಾರಕ್ಕೆ ಉತ್ತಮ ಅವಕಾಶ ದೊರೆತಿದೆ ಎಂದು ಸ್ಮರಿಸಿದರು.
ನೂತನ ರೈಲು ಸೇವೆಯು ವಿದ್ಯಾರ್ಥಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವುದರ ಜತೆಗೆ ಈ ಭಾಗದ ವಾಣಿಜ್ಯ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲಿದೆ. ವಾರದಲ್ಲಿ ಆರು ದಿನ ಸಂಚರಿಸಲಿರುವ ಈ ರೈಲು ಸೇವೆಯಿಂದ ಸಾರ್ವಜನಿಕರಿಗೆ ವೇಗದ ಹಾಗೂ ಆರಾಮದಾಯಕ ಪ್ರಯಾಣದ ಅವಕಾಶ ದೊರೆಯಲಿದೆ. ರೈಲು ಸೇವೆಗೆ ಸಹಕಾರ ನೀಡಿದ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ಅಭಿನಂದಿಸಿದರು.

ಕಾರ್ಯಕ್ರಮದ ಅಂಗವಾಗಿ ರೈಲ್ವೆ ನಿಲ್ದಾಣವನ್ನು ಪುಷ್ಪಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ರೈಲು ಆಗಮಿಸುತ್ತಿದ್ದಂತೆ ನೆರೆದಿದ್ದ ಸಾರ್ವಜನಿಕರು ಜಯಘೋಷ ಮೊಳಗಿಸಿ ಸಂಭ್ರಮಿಸಿದರು. ರೈಲ್ವೆ ಇಲಾಖೆಯ ವತಿಯಿಂದ ಸ್ವಾಮೀಜಿ ಹಾಗೂ ಶಾಸಕರನ್ನು ಗೌರವಿಸಲಾಯಿತು. ಇದೇ ವೇಳೆ ವಿದ್ಯಾರ್ಥಿಗಳಿಗೆ ರೈಲ್ವೆ ಇಲಾಖೆಯ ಕುರಿತು ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಸ್ವಾಮೀಜಿ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ರೈಲ್ವೆ ವಿಭಾಗೀಯ ಮುಖ್ಯ ವ್ಯವಸ್ಥಾಪಕ ಸಂಚಿತ್ ಶ್ರೀವಾತ್ಸವ್, ಎಸಿಎಂ ಉಮೇಶ್ ನಾಯಕ್, ಇನ್ಸ್‌ಪೆಕ್ಟರ್ ವಿನೋದ್, ಕಸ್ಟಮರ್ ಸೀನಿಯರ್ ಆಫೀಸರ್ ಪುನೀತ್ ರಾವ್, ಸ್ಥಳೀಯ ಮುಖಂಡರಾದ ಅಬ್ದುಲ್ ಅಫೀಜ್, ಎಸ್.ಎಂ.ಲಕ್ಷ್ಮಣ್, ಎಸ್.ಬಿ.ಜಗದೀಶ್, ಲೋಕೇಶ್, ಶರತ್ ಕುಮಾರ್, ಗಣೇಶ್ ಗೌಡ, ಎಸ್.ಬಿ.ಯಶಸ್, ಪ್ರವೀಣ್, ಸಾಗರ್ ಗೌಡ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ : ದಯಾನಂದ ಶೆಟ್ಟಿಹಳ್ಳಿ
Hassan
ಕುಂಭೇನಹಳ್ಳಿ ಗ್ರಾಮದಲ್ಲಿ 35 ವರ್ಷಗಳಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಶ್ರವಣಬೆಳಗೊಳ: ಕನ್ನಡ ನಾಡು ಉದಯವಾಗಿ 71 ವಸಂತಗಳನ್ನು ಪೂರೈಸಿರುವ ಅಂಗವಾಗಿ, ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಮುಂದಿನ ಪೀಳಿಗೆಗೆ ಉಳಿಸುವ ಉದ್ದೇಶದಿಂದ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಈ ಆಚರಣೆಯನ್ನು ಮುಂದುವರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಕುಂಭೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರಾಘು ಕದಂಬ ಹೇಳಿದರು.
ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಕುಂಭೇನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಸಂಜೀವಿನಿ ಆಂಜನೇಯ ಸ್ವಾಮಿ ಓಕುಳಿ ಕಾರ್ಯಕ್ರಮದ ಅಂಗವಾಗಿ ಸಂಪ್ರದಾಯದಂತೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವವನ್ನು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಳೆದ 35 ವರ್ಷಗಳಿಂದ ನಿರಂತರವಾಗಿ ಗ್ರಾಮದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ವಿಶೇಷವಾಗಿದ್ದು, ತಾಲ್ಲೂಕಿನಲ್ಲಿ ಕಾಂತರಾಜಪುರ ಗ್ರಾಮವನ್ನು ಹೊರತುಪಡಿಸಿದರೆ, ಕುಂಭೇನಹಳ್ಳಿ ಗ್ರಾಮದಲ್ಲಿ ಕಳೆದ 35 ವರ್ಷಗಳಿಂದ ಗ್ರಾಮಸ್ಥರೆಲ್ಲ ಸೇರಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ಗ್ರಾಮದ ಕನ್ನಡಾಭಿಮಾನಕ್ಕೆ ಸಾಕ್ಷಿಯಾಗಿದೆ ಎಂದರು.
ಗ್ರಾಮದ ನಿವೃತ್ತ ಶಿಕ್ಷಕ ದೇವರಾಜ್ ಹಾಗೂ ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಮಾಯಣ್ಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಇಬ್ಬರಿಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರು, ಗ್ರಾಮಸ್ಥರು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಭಾಗವಹಿಸಿದ್ದರು.
ವರದಿ ನಾಗೇಂದ್ರ ರಾಯ
Hassan
ಗೊಲ್ಲರ ಹೊಸಹಳ್ಳಿಯಲ್ಲಿ ಆನಂದಗೌಡ(ಎಜಿ) ಕಪ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಬಾಲಕೃಷ್ಣ ಚಾಲನೆ
ಚನ್ನರಾಯಪಟ್ಟಣ : ಯುವಕರು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತುಬದ್ಧ ಜೀವನ ನಡೆಸಬೇಕೆಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.
ಕಸಬಾ ಹೋಬಳಿಯ ಗೊಲ್ಲರಹೊಸಹಳ್ಳಿ ಗ್ರಾಮದಲ್ಲಿ ಗುರುವಾರದಂದು ಸಮಾಜ ಸೇವಕ ಹಾಗೂ”ಅವಾ ಸಲ್ಯೂಷನ್ಸ್ ” ನ ಮ್ಯಾನೇಜಿಂಗ್ ಡೈರೆಕ್ಟರ್ ಆದ ಆನಂದ್ ಗೌಡ ರವರು ಆಯೋಜಿಸಿದ್ದ ಎಜೆ ಕಪ್ ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಸತ್ಪ್ರಜೆಗಳಾದ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಬಾರದು.
ಯುವಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಕನಿಷ್ಠ ಒಂದು ಗಂಟೆಯಾದರೂ ವ್ಯಾಯಾಮ ಮಾಡಬೇಕು, ಶಿಸ್ತು ಬದ್ಧ ಜೀವನ ರೂಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು.

ತಾಲೂಕಿನ ಕಸಬಾ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿಗಳಾದ ದಿಂಡಗೂರು, ಕಲ್ಕೆರೆ, ಗುಲಸಿಂದ ಮತ್ತು ಬ್ಯಾಡರಹಳ್ಳಿ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಕ್ರೀಡಾಪಟುಗಳಿಗೆ ಈ ಒಂದು ಕ್ರಿಕೆಟ್ ಪಂದ್ಯಾವಳಿ ತುಂಬಾ ಸಹಕಾರಿಯಾಗಿದೆ ಈ ಭಾಗದ ಕ್ರೀಡಾಪಟುಗಳು ಉತ್ತಮವಾಗಿ ಆಟವಾಡಿ ಮುಂದಿನ ಹೆಚ್ಚು ಅವಕಾಶಗಳು ಸಿಗುವಂತಾಗಲಿ ಎಂದು ಶುಭ ಹಾರೈಸಿದರು.
ತಾಲೂಕಿನ ಬಹುತೇಕ ಎಲ್ಲಾ ಗ್ರಾಮಗಳಿಗೂ ರಸ್ತೆ ಅಭಿವೃದ್ಧಿಪಡಿಸಿದ್ದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು.
ಉದ್ಯಮಿ ಆನಂದ ಗೌಡ ಮಾತನಾಡಿ ಕಸಬಾ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ತಮ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಲಿ ಎನ್ನುವ ಕಾರಣಕ್ಕಾಗಿ ಈ ಪಂದ್ಯಾವಳಿಯನ್ನು ಆ ಯೋಜನೆ ಮಾಡಿ ಸದ್ಯ ನಾಲ್ಕು ಪಂಚಾಯಿತಿಯ ವ್ಯಾಪ್ತಿಯ ಕ್ರೀಡಾಪಟುಗಳಿಗಾಗಿ ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಹೋಬಳಿ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರಿಕೆಟ್ ಮತ್ತು ಕಬ್ಬಡ್ಡಿ ಸಂಬಂಧಿಸಿದ ಕ್ರೀಡಾಪಟುಗಳಿಗಾಗಿ ಕ್ರೀಡಾಪಂದ್ಯಗಳನ್ನು ಆಯೋಜನೆ ಮಾಡಿ ಪ್ರೋತ್ಸಾಹಿಸಲಾಗುವುದು ಎಂದರು.
ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು ಒಂಬತ್ತು ತಂಡಗಳು ಭಾಗವಹಿಸಿದ್ದು ಇಂದಿನಿಂದ ಮೂರು ದಿನಗಳವರೆಗೆ ನಡೆಯುತ್ತದೆ ಭಾನುವಾರದಂದು ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯ ನಡೆಯಲಿದೆ ಪ್ರತಿ ಪಂದ್ಯ ಆರು ಓವರ್ ಗಳಿಗೆ ಸೀಮಿತವಾಗಿರುತ್ತದೆ 9 ತಂಡದ ಆಟಗಾರರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಬಾರಕ್ ಪಠಾಣ್
ಕಸಬಾ ಸೊಸೈಟಿ ಅಧ್ಯಕ್ಷ ಶ್ರೀನಿವಾಸ
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗೇಶ್, ಮುಖಂಡರಾದ ಗಂಗಾಧರ ,ಕೆಂಬಾಳ್ ಚಂದ್ರು ರಾಜಣ್ಣ, ಗೌಸ್, ನಾಲ್ಕು ಪಂಚಾಯಿತಿ ವ್ಯಾಪ್ತಿಗಳಿಂದ ಆಗಮಿಸಿದ್ದ 9 ತಂಡದ ಕ್ರಿಕೆಟ್ ಕ್ರೀಡಾಪಟುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ ದಯಾನಂದ ಶೆಟ್ಟಿಹಳ್ಳಿ
-
Kodagu22 hours agoಅಂಗಾಂಗ ದಾನ ಮಾಡಿದ ಯುವಕ ಯೋಗೇಶ್ ಅವರ ಮನೆಗೆ ಶಾಸಕ ಡಾ. ಮಂತರ್ ಗೌಡ ಭೇಟಿ – ಪೋಷಕರಿಗೆ ಸಾಂತ್ವನ.
-
State5 hours agoಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ತಿರುಗೇಟು
-
State6 hours agoಅರಿಶಿನಕ್ಕೆ ವಿಶ್ವಮಟ್ಟದಲ್ಲಿ ಹೆಚ್ಚಿದ ಬೇಡಿಕೆ: 28 ರಾಷ್ಟ್ರಗಳೊಂದಿಗೆ ಆಯುರ್ವೇದ ಒಪ್ಪಂದ
-
Mandya13 hours agoಫೋನ್ ನೀಡಿದ್ದ ಅಮಾಯಕನಿಗೆ 2.5 ವರ್ಷ ಜೈ*ಲುವಾಸ : ಪ್ರತ್ಯಕ್ಷಗೊಂಡ ಕೊಲೆಯಾಗಿದ್ದಾಳೆಂದು ಭಾವಿಸಿದ್ದ ಮಹಿಳೆ..!
-
Mysore3 hours agoದೇಶದ ಮೊದಲ 8k ತಂತ್ರಜ್ಞಾನದ ತಾರಾಲಯ ‘ಕಾಸ್ಮೋಸ್ ಮೈಸೂರು’ ಲೋಕಾರ್ಪಣೆ
-
National4 hours agoಮೋದಿ ನನ್ನ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ ಆರೋಪ
-
State9 hours agoಬೆಂಗಳೂರಿಗರ ಪ್ರಯಾಣಕ್ಕೆ ಇನ್ಮುಂದೆ ಡಿಜಿಟಲ್ ಸ್ಪರ್ಶ: BMTC 2.0 ಆ್ಯಪ್ ಪರಿಚಯ!!
-
Kodagu2 hours agoಮಡಿಕೇರಿ ಸೇರಿದಂತೆ ವಿವಿಧೆಡೆ ನ.18 ಮತ್ತು 19 ರಂದು ವಿದ್ಯುತ್ ವ್ಯತ್ಯಯ
