Connect with us

Kodagu

ಪೊನ್ನಂಪೇಟೆ ಪಟ್ಟಣ ಪಂಚಾಯಿತಿ: ಚೊಚ್ಚಲ ಬಜೆಟ್ ಮಂಡನೆ

Published

on

ಪೊನ್ನಂಪೇಟೆ : ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿದ ನಂತರ ಇದೇ ಮೊದಲ ಬಾರಿಗೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಬಜೆಟ್ (ಆಯ-ವ್ಯಯ) ಮಂಡನೆಯಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಚೊಚ್ಚಲ ಮತ್ತು 2025-26ನೇ ಸಾಲಿನ ಬಜೆಟ್ ಮೊತ್ತವು ಒಟ್ಟು ರೂ. 71748000/- ಆಗಿರುತ್ತದೆ. ಪೊನ್ನಂಪೇಟೆ ತಾಲೂಕು ಘೋಷಣೆಯಾದ ನಂತರ ಕೇಂದ್ರ ಸ್ಥಾನ ಹೊಂದಿರುವ ಪೊನ್ನಂಪೇಟೆ ಪಟ್ಟಣದಲ್ಲಿದ್ದ ಗ್ರಾಮ ಪಂಚಾಯಿತಿ ಸರಕಾರದ ನಿಯಮಾವಳಿಯಂತೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿತ್ತು.

ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರಾದ ಆಲೀರ ಎಂ. ರಶೀದ್ ಮುಂದಿನ ಲೆಕ್ಕಪತ್ರ ಸಾಲಿನ ಬಜೆಟ್ ಅನ್ನು ಮಂಡಿಸಿದರು. ಪೊನ್ನಂಪೇಟೆಯು ದಿನೇ-ದಿನೇ ಬೆಳೆಯುತ್ತಿರುವ ಪಟ್ಟಣವಾಗಿದ್ದು, ಜನತೆಗೆ ಮೂಲಭೂತ ಸೌಕರ್ಯ ಒದಗಿಸುವುದು ಪಟ್ಟಣ ಪಂಚಾಯಿತಿಯ ಆದ್ಯ ಕರ್ತವ್ಯವಾಗಿರುತ್ತದೆ. ರಸ್ತೆ, ನೀರು, ಚರಂಡಿ, ನೈರ್ಮಲ್ಯ, ಬೀದಿ ದೀಪ ವ್ಯವಸ್ಥೆಗಳನ್ನು ಪಟ್ಟಣದ ಪ್ರಸಕ್ತ ಜನಸಂಖ್ಯೆಗೆ ಅನುಗುಣವಾಗಿ ವ್ಶೆಜ್ಞಾನಿಕ ರೂಪದಲ್ಲಿ ಜಾರಿಗೊಳಿಸಬೇಕಾಗಿದೆ ಎಂದು ಹೇಳಿದ ರಶೀದ್, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅತ್ಯುತ್ತಮ ಮೂಲಭೂತ ಸೌಲಭ್ಯ ಒದಗಿಸುವುದು ಮತ್ತು ಪಟ್ಟಣ ಪಂಚಾಯಿತಿಯನ್ನು ಆರ್ಥಿಕವಾಗಿ ಸದೃಡಗೊಳಿಸುವುದು ಮೊದಲ ಆದ್ಯತೆಯಾಗಿರುತ್ತದೆ ಎಂದು ತಿಳಿಸಿದರು.

ಆರ್ಥಿಕ ಕ್ರೋಡೀಕರಣ ಮತ್ತು ಜನರ ಬೇಡಿಕೆಯನ್ನು ಪರಿಗಣಿಸಿ ಪ್ರಸಕ್ತ ಬಜೆಟ್ ಅನ್ನು ತಯಾರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ತಕ್ಕ ಆದಾಯ ಮೂಲಗಳಾದ ತೆರಿಗೆ ಸಂಗ್ರಹ ಹಾಗೂ ಸರಕಾರದ ವಿವಿಧ ಯೋಜನೆಯ ಅನುದಾನ ಪಡೆಯಲು ನಿರ್ಧರಿಸಲಾಗಿದೆ. ಇವೆಲ್ಲವನ್ನು ಈ ಬಜೆಟ್ ಒಳಗೊಂಡಿದ್ದು, ಪಟ್ಟಣ ಪಂಚಾಯಿತಿಗೆ ಬರುವ ಆದಾಯಗಳಲ್ಲಿ ಆಸ್ತಿ ತೆರಿಗೆ, ವಾಣಿಜ್ಯ ಮಳಿಗೆ ಬಾಡಿಗೆ, ಉದ್ದಿಮೆ ಪರವಾನಗಿ, ಮಾರುಕಟ್ಟೆ ಬಾಡಿಗೆಗಳು ಹಾಗೂ ಇತರೆ ಶುಲ್ಕಗಳು ಮತ್ತು ಸರ್ಕಾರದಿಂದ ಬಿಡುಗಡೆ ಆಗುವ ಎಸ್.ಎಫ್.ಸಿ. ಅನುದಾನ, ಹಣಕಾಸು ಆಯೋಗದ ಅನುದಾನ, ಎಸ್.ಎಫ್.ಸಿ.ವಿಶೇಷ ಅನುದಾನ ಪ್ರಮುಖವಾಗಿವೆ. ಇವೆಲ್ಲವನ್ನು ಅಂದಾಜಿಸಿಕೊಂಡು ಪೊನ್ನಂಪೇಟೆ ಪಟ್ಟಣ ಪಂಚಾಯಿತಿಗೆ ಹೊಸದಾಗಿ ಸೇರಿಕೊಂಡಿರುವ ವಿಭಾಗಗಳಲ್ಲಿ ಚರಂಡಿ ನಿರ್ಮಾಣ, ಬೀದಿ ದೀಪ ಅಳವಡಿಕೆ, ನೀರು ವಿತರಣಾ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆಗೆ ಪ್ರಮುಖ ಆದ್ಯತೆ ಮತ್ತು ವಾಣಿಜ್ಯ ಮಳಿಗೆಗಳ ಮತ್ತು ಸ್ಥಿರಾಸ್ತಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ ಎಂದು ರಶೀದ್ ತಮ್ಮ ಬಜೆಟ್ ಭಾಷಣದಲ್ಲಿ ವಿವರಿಸಿದರು.

2025-26ನೇ ಸಾಲಿನಲ್ಲಿ ಒಟ್ಟು ರೂ. 70826727 ಮೊತ್ತದ ಆದಾಯವನ್ನು ನಿರೀಕ್ಷಿಸಲಾಗಿದೆ. ಈ ಪೈಕಿ ಎಸ್.ಎಫ್.ಸಿ. ವಿಶೇಷ ಅನುದಾನ ರೂ. 150 ಲಕ್ಷ, ಎಸ್.ಎಫ್.ಸಿ. ಅನುದಾನ ರೂ. 70 ಲಕ್ಷ, 15ನೇ ಹಣಕಾಸು ಅನುದಾನ ರೂ. 80ಲಕ್ಷ, ವಿದ್ಯುತ್ ಅನುದಾನ ರೂ. 75 ಲಕ್ಷ, ನೀರಿನ ಅಭಾವ ಅನುದಾನ ರೂ. 10ಲಕ್ಷ, ಎಸ್.ಎಫ್.ಸಿ. ವೇತನ ಅನುದಾನ ರೂ. 74.90ಲಕ್ಷ, ಕಟ್ಟಡ ಕಾಯ್ದೆಗಳಿಗೆ ಸಂಬಂಧಿಸಿದ ಶುಲ್ಕಗಳು ರೂ.5ಲಕ್ಷ, ಮಾರುಕಟ್ಟೆಗಳ,ವಾಹನ ನಿಲುಗಡೆ ಮತ್ತು ಸಂತೆ ಸುಂಕದ ಹರಾಜಿನ ಆದಾಯ ರೂ. 7.5ಲಕ್ಷ, ವಾಣಿಜ್ಯ ಮಳಿಗೆ ಬಾಡಿಗೆ ರೂ. 6.86ಲಕ್ಷ, ಆಸ್ತಿ ತೆರಿಗೆ ರೂ. 51.58ಲಕ್ಷ, ಉದ್ದಿಮೆ ಪರವಾನಿಗೆ ರೂ. 5ಲಕ್ಷ, ನೈರ್ಮಲ್ಯ ಮತ್ತು ಘನತ್ಯಾಜ್ಯ ವಸ್ತು ನಿರ್ವಹಣೆಗೆ ರೂ. 4.5ಲಕ್ಷ, ಪರಿಶಿಷ್ಟ ಜಾತಿ/ಪ.ಪಂ ಶ್ರೇಯೋಭಿವೃದ್ಧಿ ನಿಧಿಯಿಂದ ರೂ. 5ಲಕ್ಷ, ಇತರೆ ಬಡಜನರ ಕಲ್ಯಾಣ ನಿಧಿಯ ಶೇ.7.25%ರಂತೆ ರೂ.3ಲಕ್ಷ, ಅಂಗವಿಕಲರಿಗೆ ಶ್ರೇಯೋಭಿವೃದ್ಧಿ ನಿಧಿಯ ಶೇ.5%ರಂತೆ ರೂ. 2ಲಕ್ಷ ಮತ್ತು ಸ್ವಚ್ಛ್ ಭಾರತ ಯೋಜನೆ ಅನುದಾನದಿಂದ ರೂ. 5ಲಕ್ಷ ಅನುದಾನದ ನಿರೀಕ್ಷೆ ಹೊಂದಲಾಗಿದೆ ಎಂದು ರಶೀದ್ ಹೇಳಿದರು.

ಪ್ರಸ್ತುತ ಹಣಕಾಸು ಸಾಲಿನಲ್ಲಿ ಒಟ್ಟು ರೂ. 71110000/- ಮೊತ್ತದ ಖರ್ಚನ್ನು ಅಂದಾಜಿಸಲಾಗಿದೆ. ಈ ಪೈಕಿ
ನೌಕರರ ವೇತನಕ್ಕೆ ರೂ.1.05 ಕೋಟಿ, 15ನೇ ಹಣಕಾಸು ಯೋಜನೆ ಕಾಮಗಾರಿಗಳಿಗಾಗಿ ರೂ.80ಲಕ್ಷ, ನೈರ್ಮಲ್ಯ ಮತ್ತು ಘನತ್ಯಾಜ್ಯ ವಸ್ತು ನಿರ್ವಹಣೆಗೆ ರೂ. 86ಲಕ್ಷ, ನೀರು ಸರಬರಾಜು ಮೂಲಗಳು ಮತು ವಿತರಣಾ ವ್ಯವಸ್ಥೆ ಮತ್ತು ನಿರ್ವಹಣೆಗೆ ರೂ. 35ಲಕ್ಷ, ಬೀದಿ ದೀಪಗಳ ಅಭಿವೃದ್ಧಿಗಾಗಿ ರೂ. 10ಲಕ್ಷ, ಉದ್ಯಾನವನಗಳ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ರೂ.15ಲಕ್ಷ, ನಾಗರಿಕ ವಿನ್ಯಾಸಗಳಿಗಾಗಿ ರೂ. 5ಲಕ್ಷ, ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ನಿರ್ಮಾಣ ಕಾಮಗಾರಿಗಳಿಗೆ ರೂ. 20ಲಕ್ಷ, ಚರಂಡಿಗಳಿಗಾಗಿ (ರಸ್ತೆ ಬದಿ ಮತ್ತು ಮಳೆ ನೀರು ಚರಂಡಿ) ರೂ.25ಲಕ್ಷ, ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ರೂ. 30ಲಕ್ಷ, ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ರೂ.25ಲಕ್ಷ, ಕಛೇರಿ ಉಪಕರಣಗಳ ಖರೀದಿಗಾಗಿ ರೂ. 7ಲಕ್ಷ, ನೀರು ಸರಬರಾಜು ಮತ್ತು ಬೀದಿ ದೀಪಗಳ ವಿದ್ಯುತ್ ವೆಚ್ಚಕ್ಕೆ ರೂ. 77ಲಕ್ಷ, ಪರಿಶಿಷ್ಟ ಜಾತಿ/ಪ.ಪಂ ಶ್ರೇಯೋಭಿವೃದ್ಧಿಗೆ ಯೋಜನೆಗಳಿಗಾಗಿ ರೂ. 5ಲಕ್ಷ, ಇತರೆ ಬಡಜನರ ಕಲ್ಯಾಣ ನಿಧಿ ಶೇ.7.25%ರ ಯೋಜನೆಗಳಿಗೆ ರೂ.3ಲಕ್ಷ ಮತ್ತು ಅಂಗವಿಕಲರಿಗೆ ಶ್ರೇಯೋಭಿವೃದ್ಧಿಯ ಶೇ. 5%ರ ಯೋಜನೆಗಳಿಗೆ ರೂ. 2ಲಕ್ಷ ಅನುದಾನವನ್ನು ಖರ್ಚು ಮಾಡುವ ಗುರಿ ಹೊಂದಲಾಗಿದೆ ಎಂದು ಬಜೆಟ್ ಮಂಡಿಸಿದ ರಶೀದ್ ಮಾಹಿತಿ ನೀಡಿದರು. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ 2025 26 ನೇ ಸಾಲಿನ ಆಯ-ವ್ಯಯದ ಘೋಸ್ವಾರೆಯಲ್ಲಿ ಒಟ್ಟು ರೂ. 638641/- ಮೊತ್ತದ ಉಳಿತಾಯ ಸಾಧಿಸುವ ಗುರಿಯೂ ಹೊಂದಲಾಗಿದೆ ಎಂದು ರಶೀದ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಸಭೆಯಲ್ಲಿ ಮುಖ್ಯಾಧಿಕಾರಿಗಳಾದ ಎಸ್. ಗೋಪಿ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.

Continue Reading

Kodagu

ಮೋದಿ ಹುಟ್ಟುಹಬ್ಬ – ಉಚಿತವಾಗಿ ಮಸಾಲೆ ದೋಸೆ ವಿತರಣೆ

Published

on

ಕುಶಾಲನಗರ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟಹಬ್ಬವನ್ನು ಕುಶಾಲನಗರ ನಗರ ಬಿಜೆಪಿ ಘಟಕ ಹಾಗೂ ಅಭಿಮಾನಿ ಬಳಗದಿಂದ ವಿಭಿನ್ನವಾಗಿ ಆಚರಿಸಿತು. ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿದ ಸಾರ್ವಜನಿಕರಿಗೆ ಉಚಿತವಾಗಿ ಮಸಾಲೆ ದೋಸೆ, ಪಾನಿಪೂರಿ, ಇಡ್ಲಿವಡೆ, ಜಾಮೂನು, ಟೀ ವಿತರಣೆ ಮಾಡಲಾಯಿತು.
ಬಿಜೆಪಿ ಮುಖಂಡರಾದ ಬಿ.ಬಿ.ಭಾರತೀಶ್, ಗೌತಮ್, ಕೆ.ಜಿ.ಮನು, ಎಂ.ಡಿ.ಕೃಷ್ಣಪ್ಪ, ಜೈವರ್ಧನ್, ಅಮೃತ್ರಾಜ್, ಮಧುಸೂದನ್, ಪುಂಡರೀಕಾಕ್ಷ, ರಾಮನಾಥನ್, ಸಚಿನ್, ಚಂದ್ರಶೇಖರ್ ಹೇರೂರು, ಗಣಿಪ್ರಸಾದ್, ಡಿ.ಕೆ.ತಿಮ್ಮಪ್ಪ, ನಿಡ್ಯನಲೆ ದಿನೇಶ್, ಸುಮನ್, ನವನೀತ್ ಮತ್ತಿತರರು ಇದ್ದರು.

Continue Reading

Kodagu

ಮಾಲ್ದಾರೆ : ಕಾವೇರಿ ನದಿಯಲ್ಲಿ ಮುಳುಗಿ ಹೆಣ್ಣು ಕಾಡಾನೆ ಸಾವು.

Published

on

ಕುಶಾಲನಗರ : ಕೊಡಗು ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ಲೂರು ಹಾಗೂ ಮಾಲ್ದಾರೆ ನದಿಯಲ್ಲಿ ಕಾಡಾನೆಯೊಂದು ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಾವೇರಿ ನದಿಗೆ ನೀರು ಕುಡಿಯಲು ಇಳಿದ ಹೆಣ್ಣು ಕಾಡಾನೆ ಬುಧವಾರ ಬೆಳಿಗ್ಗೆ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದು,ಮಧ್ಯಾಹ್ನ ಆನೆಯ ಮೃತದೇಹ ಕಂಡು ಬಂದಿತು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ.ಗೋಪಾಲ ಅವರ ಮಾರ್ಗದರ್ಶನದಂತೆ ವಲಯ ಅರಣ್ಯಾಧಿಕಾರಿ ಆರ್.ರಕ್ಷಿತ್ ಹಾಗೂ ಮುಖ್ಯ ಪಶುವೈದ್ಯಾಧಿಕಾರಿ ಡಾ. ಮುಜೀಬ್,ಪಶುವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ನೇತೃತ್ವದಲ್ಲಿ ಮೃತಪಟ್ಟ ಆನೆಯನ್ನು ನದಿಯ ಮಧ್ಯಭಾಗದಿಂದ ಗುರುವಾರ ಬೆಳಿಗ್ಗೆ ಬೋಟಿನ ವ್ಯವಸ್ಥೆ ಮಾಡಿಕೊಡು ಸಾಕಾನೆಯ ಸಹಾಯದಿಂದ ಆನೆಯ ಮೃತದೇಹವನ್ನು ಹೊರತೆಗೆಯಲಾಯಿತು.

ಮೃತಪಟ್ಟ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರಾದ ಡಾ. ಮುಜೀಬ್ ಹಾಗೂ ಡಾ.ಚಿಟ್ಟಿಯಪ್ಪ ಅವರು ಮೃತಪಟ್ಟ ಆನೆಯು ಹೆಣ್ಣು ಕಾಡಾನೆಯಾಗಿದ್ದು ಆನೆಗೆ ಯಾವುದೇ ಗುಂಡು ತಗುಲಿ ಅಥವಾ ವಿದ್ಯುತ್ ಸ್ಪರ್ಷದಿಂದ ಮೃತಪಟ್ಟಿಲ್ಲ.

ಅದುನದಿ ನೀರಿನಲ್ಲಿ ಮುಳುಗಡೆ ಆಗಿ ಸತ್ತಿದೆ ಎಂದು ದೃಢಪಡಿಸಿದರು.ನಂತರ ಅರಣ್ಯ ಇಲಾಖೆ‌ ಸಿಬ್ಬಂದಿಗಳು, ಮಾವುತರು ಮಾಲ್ದಾರೆ ಅರಣ್ಯ ಪ್ರದೇಶದಲ್ಲಿ ಮೃತಪಟ್ಟ ಆನೆ ಅಂತ್ಯಸಂಸ್ಕಾರ ನಡೆಸಲಾಯಿತು.

ಕುಶಾಲನಗರ ಸಮೀಪದ ವಾಲ್ನೂರು ಹಾಗೂ ಮಾಲ್ದಾರೆ ಬಳಿಯ ‌ಕಾವೇರಿ ನದಿಯಲ್ಲಿ ಕಾಡಾನೆಯೊಂದು ಮುಳುಗಿ ಮೃತಪಟ್ಟಿದೆ.

ವರದಿ.ಟಿ.ಆರ್.ಪ್ರಭುದೇವ್
ಕುಶಾಲನಗರ

Continue Reading

Kodagu

ಗೋಣಿಕೊಪ್ಪಲಿನ ಸರ್ವದೈವತ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on

ಗೋಣಿಕೊಪ್ಪಲು : ಸರ್ಕಾರಿ ಪದವಿ ಪೂರ್ವ ಕಾಲೇಜು ಪಾಲಿಬೆಟ್ಟದಲ್ಲಿ ನಡೆದ ಪದವಿ ಪೂರ್ವ ಬಾಲಕಿಯರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಗೋಣಿಕೊಪ್ಪಲಿನ ಸರ್ವದೈವತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


ಬಾಲಕಿಯರು ಬಾಲ್ ಬ್ಯಾಡ್ಮಿಂಟನ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಬೋಧಕ ಮತ್ತು ಬೋಧಕೇತರ ವರ್ಗಅಭಿನಂದನೆ ಸಲ್ಲಿಸಿರುತ್ತಾರೆ.ಇವರಿಗೆ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಮೋದ್ ಗೌಡ ಇವರು ತರಬೇತಿ ನೀಡಿರುತ್ತಾರೆ

Continue Reading

Trending

error: Content is protected !!