Connect with us

Mandya

ಮಾ.11 ರಂದು ರವಿಕುಮಾರ್ ಶ್ರದ್ಧಾಂಜಲಿ ಸಭೆ

Published

on

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ.ರವಿಕುಮಾರ್ ಚಾಮಲಾಪುರ ಅವರು ನಿಧನರಾದ ಹಿನ್ನೆಲೆಯಲ್ಲಿ ಮಾ.11 ಸಂಜೆ 4 ಗಂಟೆಗೆ ಶ್ರದ್ಧಾಂಜಲಿ ಸಭೆಯು ನಗರದ ರೈತ ಸಭಾಂಗಣದಲ್ಲಿ ನಡೆಯಲಿದೆ.

ಕನ್ನಡ ಸಾಹಿತ್ಯ ಪರಿಷತ್, ವಿವಿಧ ಸಂಘಟನೆಗಳು ಮತ್ತು ನಾಗರಿಕರ ವತಿಯಿಂದ ಶ್ರದ್ಧಾಂಜಲಿ ಸಭೆ ಆಯೋಜನೆ ಮಾಡಲಾಗಿದೆ, ಸಿ.ಕೆ.ರವಿಕುಮಾರ್ ಚಾಮಲಾಪುರ ಅವರು 2015 ಮತ್ತು 2021 ರಲ್ಲಿ ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎರಡು ಬಾರಿ ಆಯ್ಕೆಯಾಗಿ ಜಿಲ್ಲಾದ್ಯಂತ ಹಲವಾರು ಸಾಹಿತ್ಯ ಸಮ್ಮೇಳನಗಳು, ಸಾವಿರಾರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನೂರಾರು ಸಾಹಿತ್ಯಿಕ ಕಾರ್ಯಕ್ರಮಗಳನ್ನು ನಡೆಸಿ ಜನಸಾಮಾನ್ಯರೂ ಸಾಹಿತ್ಯ ಪರಿಷತ್ತನ್ನು ಗುರುತಿಸುವ ಕೆಲಸ ಮಾಡಿದ್ದರು.

ಬೆನ್ನುಹುರಿಗೆ ಪೆಟ್ಟು ಬಿದ್ದು ಕಳೆದ ಹಲವಾರು ತಿಂಗಳುಗಳಿಂದ ಅನಾರೋಗ್ಯಕ್ಕೊಳಗಾಗಿ ಹಾಸಿಗೆ ಹಿಡಿದು ಮಾ.4 ರಂದು ದಿಢೀರ್ ನಿಧನ ಹೊಂದಿದ್ದರು. ಜಿಲ್ಲಾ ಕಸಾಪ ಪದಾಧಿಕಾರಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು, ಅಭಿಮಾನಿಗಳು ಕಳೆದ ಕೆಲ ದಿನಗಳ ಹಿಂದೆ ಕಸಾಪ ಭವನದಲ್ಲಿ ಸಭೆ ನಡೆಸಿ ಶ್ರದ್ಧಾಂಜಲಿ ಸಭೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರ ಅಧ್ಯಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಲಿದೆ.

ಅವರ ಆತ್ಮಕ್ಕೆ ಶಾಂತಿ ಕೋರಲು ಏರ್ಪಡಿಸಿರುವ ಶ್ರದ್ಧಾಂಜಲಿ ಸಭೆಗೆ ಸಾಹಿತ್ಯಾಸಕ್ತರು, ಕಸಾಪ ಪದಾಧಿಕಾರಿಗಳು, ಸಂಘಟನೆಗಳ ಪದಾಧಿಕಾರಿಗಳು ಸದಸ್ಯರುಗಳು, ನಾಗರಿಕ ಬಂಧುಗಳು ಹಾಗೂ ರವಿಕುಮಾರ್ ಚಾಮಲಾಪುರ ಅಭಿಮಾನಿಗಳು ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Mandya

ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

Published

on

ಮಂಡ್ಯ: ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಸದರಿ ಹುದ್ದೆಗೆ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸುವುದು, .

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು,
ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.

ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Mandya

ಒಳ ಮೀಸಲಾತಿ ಆದೇಶವನ್ನು ಕೂಡಲೇ ಜಾರಿಗೆ ತರಲು ಕ್ರಮ ವಹಿಸಬೇಕೆಂದು ಒತ್ತಾಯ

Published

on

ಮಂಡ್ಯ: ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ನೇತೃದಲ್ಲಿ ಏಳು ಮಂದಿ ನ್ಯಾಯಾಧೀಶರು ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಬಗ್ಗೆ ನೀಡಿರುವ ಆದೇಶವನ್ನು ಕೂಡಲೇ ಜಾರಿಗೆ ತರಲು ಕ್ರಮ ವಹಿಸಬೇಕೆಂದು ಬಿಜೆಪಿ ಮುಖಂಡ ಬಿ.ಕೃಷ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರ ನೇತೃತ್ವದಲ್ಲಿ ಏಳು ಮಂದಿ ನ್ಯಾಯಾಧೀಶರು ಒಳ ಮೀಸಲಾತಿ ನೀಡುವ ಸಂಬಂಧ ಆಯಾ ರಾಜ್ಯಗಳಿಗೆ ಅಧಿಕಾರವಿದೆ ಎಂದು ತಿಳಿಸಿದೆ. ಹಾಗಾಗಿ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ತುರ್ತಾಗಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ತುಳಿತಕ್ಕೆ ಒಳಗಾದವರು, ಶೋಷಿತ ಸಮಾಜಗಳ ಏಳಿಗೆಗಾಗಿ ದಲಿತ ಸಂಘರ್ಷ ಸಮಿತಿ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಆದಿ ಜಾಂಬವ ಸಂಘ ಸೇರಿದಂತೆ ಹಲವು ಸಂಘಟನೆಗಳು ಹಲವಾರು ವರ್ಷಗಳಿಂದ ಹೋರಾಟ ನಡೆಸಿದೆ. ನ್ಯಾಯಾಲಯದ ಈ ಆದೇಶ ನಮ್ಮ ಹೋರಾಟಕ್ಕೆ ಸಂದ ಜಯವಾಗಿದೆ ಎಂದರು.

ಈ ಹಿಂದೆ ನ್ಯಾಯಮೂರ್ತಿ ಸದಾಶಿವಯ್ಯ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತರಿಸಿಕೊಂಡಿದ್ದರು. ಆದರೆ ಆ ವರದಿಯನ್ನು ಯಾರು ಪರಿಗಣಿಸಲಿಲ್ಲ ಎಂದರು.
ಬಸವರಾಜ ಬೊಮ್ಮಾಯಿ ಅವರು ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಧವ್ ಸ್ವಾಮಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ಪಡೆದು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರು.

ಇತರರು ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ನ್ಯಾಯಾಲಯ ಕೂಲಂಕುಶವಾಗಿ ಪರಿಶೀಲಿಸಿ ಈ ಆದೇಶ ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಆದ್ದರಿಂದ ಈ ಆದೇಶವನ್ನು ಶೀಘ್ರವಾಗಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಆದಿ ಜಾಂಬವ ಸಂಗದ ಜಿಲ್ಲಾಧ್ಯಕ್ಷ ಕನಲಿ ಚನ್ನಪ್ಪ, ಕಾರ್ಯದರ್ಶಿ ಗವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Mandya

ಐದು ಚೆಕ್ಕುಗಳು ಮತ್ತು 5 ಆನ್ ಡಿಮ್ಯಾಂಡ್ ಪ್ರೊನೋಟ್ ಕಳುವು : ಪತ್ತೆಗೆ ಮನವಿ

Published

on

ಮಂಡ್ಯ: ನಗರದ ಮಾರ್ಕೆಟಿನಲ್ಲಿ ಚಿಲ್ಲರೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಜಿ.ಜೆ.ಶಿವಕುಮಾರ್ ಅವರಿಗೆ ಸೇರಿದ ಐದು ಚೆಕ್ಕುಗಳು ಮತ್ತು 5 ಆನ್ ಡಿಮ್ಯಾಂಡ್ ಪ್ರೊನೋಟ್ ಕಳುವಾಗಿದ್ದು, ಯಾರಿಗಾದರೂ ಸಿಕ್ಕಿದ್ದಲ್ಲಿ ಸೆಂಟ್ರಲ್ ಪೊಲೀಸ್ ಠಾಣೆಗೆ ತಲುಪಿಸುವಂತೆ ಅವರ ಸಹೋದರ ಗಾಂಧಾಳು ಜಯರಾಮ್ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿ.ಜೆ.ಶಿವಕುಮಾರ್ ಅವರು ಮಂಡ್ಯ ನಗರದ ಮಾರುಕಟ್ಟೆಯಲ್ಲಿ ಚಿಲ್ಲರೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಅವರು ಹನಕೆರೆ ಗ್ರಾಮದ ನಿವಾಸಿ ವಸಂತ ಕೋಂ ರಮೇಶ ಮತ್ತು ಅವರ ಮಗಳಾದ ಶಿಲ್ಪ ಅವರಿಗೆ ಐದು ಚೆಕ್ಕು ಮತ್ತು ಐದು ಆಡಿಮಂಡ್ ನೀಡಿ 3ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ. ಈ ಪೈಕಿ ಎರಡು ಲಕ್ಷ ರೂಪಾಯಿ ತೀರಿಸಲಾಗಿದೆ ಎಂದರು.


ಉಳಿಕೆ ಹಣವನ್ನು ನೀಡುತ್ತೇವೆ ದಾಖಲೆ ನೀಡಿ ಎಂದರೆ ಸಾಲ ನೀಡಿದ್ದವರು ಚೆಕ್, ಆನ್ ಡಿಮ್ಯಾಂಡ್ ಪ್ರೊನೋಟ್ ಕೊಟ್ಟಿದ್ದೇನೆ. ಇವರು ಯಾವುದೇ ಹಣ ನನಗೆ ನೀಡಬೇಕಿಲ್ಲ ಎಂದು ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾರೆ.

ಆದ ಕಾರಣ ಈ ಚೆಕ್ಕುಗಳು ದುರುಪಯೋಗ ಆಗಬಹುದೆಂದು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹಾಗಾಗಿ ಯಾರಿಗಾದರೂ ಚೆಕ್ಕುಗಳು ಸಿಕ್ಕಿದ ಪಕ್ಷದಲ್ಲಿ ಪೊಲೀಸ್ ಠಾಣೆಗೆ ತಂದು ಒಪ್ಪಿಸಬೇಕು. ಇಲ್ಲದಿದ್ದಲ್ಲಿ ಚಕ್ಕನ್ನು ದುರುಪಯೋಗ ಪಡಿಸಿಕೊಂಡಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ತಿಳಿಸಿದರು.

ಗೋಷ್ಠಿಯಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿ ಡಿಜೆ ಶಿವಕುಮಾರ್, ಜಿ ಮಲ್ಲಿಗೆರೆ‌ ಅಣ್ಣೇಗೌಡ, ಕೊಮ್ಮೇರಹಳ್ಳಿ ಆನಂದ ಉಪಸ್ಥಿತರಿದ್ದರು.

Continue Reading

Trending

error: Content is protected !!