Connect with us

Hassan

ಫೆ.೧೩-೧೪ ರಂದು ಆಶಾಕಾರ್ಯರ್ತೆಯರಿಂದ ರಾಜ್ಯಮಟ್ಟದ ವಿಧಾನಸೌಧ ಚಲೋ

Published

on

ಹಾಸನ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆಬ್ರವರಿ ೧೩ ಮತ್ತು ೧೪ ರಂದು ಆಶಾ ಕಾರ್ಯಕರ್ತೆಯರಿಂದ ಬೆಂಗಳೂರು ಫ್ರೀಡಂ ಪಾರ್ಕ್ ನಿಂದ ವಿಧಾನಸೌಧ ಚಲೋ ಹಮ್ಮಿಕೊಳಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡ ಜಿ. ಹನುಮೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಎಐಯುಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಇದೇ ಫೆಬ್ರವರಿ ೧೩-೧೪, ೨೦೨೪ ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಮಟ್ಟದ ’ವಿಧಾನಸೌಧ ಚಲೋ’ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ೨೦ ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಶಾಗಳನ್ನು ವಂಚಿಸುತ್ತಿರುವ ಆರ್.ಸಿ.ಹೆಚ್ ಪೋರ್ಟಲ್‌ನ್ನು ವೇತನ ಪಾವತಿ ಪ್ರಕ್ರಿಯೆಯಿಂದ ಡೀಲಿಂಕ್ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾಸಿಕ ಕನಿಷ್ಠ ರೂ.೧೫,೦೦೦ ನಿಗದಿ ಮಾಡಬೇಕು, ಪ್ರೋತ್ಸಾಹ ಧನವಿಲ್ಲದ ಹೆಚ್ಚುವರಿ ಕೆಲಸಗಳನ್ನು ಹಾಗೂ ಮೊಬೈಲ್ ಆಧಾರಿತ ಕೆಲಸಗಳನ್ನು ಒತ್ತಾಯಪೂರ್ವಕವಾಗಿ ನೀಡಬಾರದು, ಹಲವು ವರ್ಷಗಳಿಂದ ಬಾಕಿಯಿರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಮುಂತಾದ ಬೇಡಿಕೆಗಳಿಗಾಗಿ ಆಗ್ರಹಿಸಿ ಈ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

೮ ವರ್ಷಗಳ ಹಿಂದೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಆರ್.ಸಿ.ಹೆಚ್ ಪೋರ್ಟಲ್‌ಗೆ ಲಿಂಕ್ ಮಾಡಿ ನೀಡುವ ವೇತನ ಮಾದರಿ ಆಶಾ ಕಾರ್ಯಕರ್ತೆಯರಿಗೆ ದೊಡ್ಡ ಶಾಪವಾಗಿ ಪರಿಣಮಿಸಿದೆ. ವಿವಿಧ ದಾಖಲೆಗಳ ಪ್ರಕಾರ ಪ್ರತಿ ತಿಂಗಳು ಕನಿಷ್ಠ ಶೇ.೨೫-೩೦ರಷ್ಟು ಅಂದರೆ ೧೦,೦೦೦ ರಿಂದ ೧೨,೦೦೦ ಆಶಾಗಳು ಆರ್.ಸಿ.ಹೆಚ್ ಪೋರ್ಟಲ್‌ನ ಸಮಸ್ಯೆಗಳಿಂದ ದೊಡ್ಡ ಮೊತ್ತದ ನಷ್ಟಕ್ಕೆ ಒಳಗಾಗಿದ್ದಾರೆ. ಆಶಾಗಳು ಕಷ್ಟಪಟ್ಟು ದುಡಿದ ಹಣ ಸೋರಿಕೆಯಾಗುತ್ತಲೇ ಇದೆ. ಈ ಹಣ ಎಲ್ಲಿ ಹೋಗುತ್ತಿದೆ? ಎಂಬ ಪ್ರಶ್ನೆ ಆಶಾಗಳನ್ನು ಕಾಡುತ್ತಲೇ ಇದೆ. ಇದನ್ನು ಸರಿಪಡಿಸುವಂತೆ ಸಂಘವು ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದೆ, ಆರೋಗ್ಯ ಸಚಿವರ ಹಾಗೂ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಿದೆ. ಸಾಕಷ್ಟು ದಾಖಲೆಗಳನ್ನ ಸಹ ಸಂಘವು ನೀಡಿದೆ. ಆದರೂ ಆರೋಗ್ಯ ಇಲಾಖೆ ಹೇಗಾದರೂ ಈ ಪೋರ್ಟಲ್‌ಗೆ ಲಿಂಕ್ ಮಾಡಿ ಪ್ರೋತ್ಸಾಹ ಧನ ನೀಡುವ ಮಾದರಿಯನ್ನು ಉಳಿಸಿಕೊಳ್ಳುವ ತನ್ನ ಹಠಮಾರಿ ಧೋರಣೆನ್ನು ಮುಂದುವರೆಸಿದೆ. ’ಮೂಗಿಗೆ ತುಪ್ಪ ಸವರಿದಂತೆ’ ಕೆಲವು ಪರಿಹಾರ ನೀಡಲು ಆರೋಗ್ಯ ಇಲಾಖೆ ಮುಂದಾಯಿತೆ ಹೊರತು, ಸಮಸ್ಯೆಗಳ ಆಳಕ್ಕೆ ಇಳಿಯಲೇ ಇಲ್ಲ. ಈ ಮೂಲಕ ಆರೋಗ್ಯ ಇಲಾಖೆ ಸುಮ್ಮನೆ ಕಾಲಹರಣ ಮಾಡಿದೆಯೇ ಹೊರತು, ಬೇರೆ ಏನು ಸಾಧನೆಗೈಯಲಿಲ್ಲ ಎಂದು ದೂರಿದರು.

ಇದಕ್ಕೆ ಏಕೈಕ ಪರಿಹಾರವೆಂದರೆ ಆಶಾಗಳ ವೇತನ ಪಾವತಿ ಪ್ರಕ್ರಿಯೆಯನ್ನು ಆರ್.ಸಿ.ಹೆಚ್ ಪೋರ್ಟಲ್ ನಿಂದ ಡಿ-ಲಿಂಕ್ ಮಾಡುವುದು. ಈ ಹಿನ್ನಲೆಯಲ್ಲಿ, ಈ ಬೇಡಿಕೆಯ ಜೊತೆಗೆ ರೂ.೧೫,೦೦೦ ನಿಶ್ಚಿತ ವೇತನ ನೀಡುವಂತೆ, ಇನ್ನಿತರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಕರೆ ನೀಡುತ್ತದೆ. ಹಾಗೆಯೇ ಜನತೆ ಕೂಡ ಎಲ್ಲಾ ರೀತಿಯ ಬೆಂಬಲ ಸಹಕಾರ ನೀಡಬೇಕೆಂದು ಈ ಮೂಲಕ ಕೋರುತ್ತಿದ್ದೇವೆ ಎಂದು ಹೇಳಿದರು. ಕಳೆದ ೮ ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೆ ಆಗುತ್ತಿರುವ ವಂಚನೆ ತಡೆಗಟ್ಟಲು ಆಶಾ ಫೇಮೆಂಟ್ ಪ್ರಕ್ರಿಯೆಯಿಂದ ಆರ್.ಸಿ.ಹೆಚ್. ಪೋರ್ಟಲ್ ನ್ನು ಡೀಲಿಂಕ್ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ರೂ ೧೫ ಸಾವಿರ ಪ್ರೋತ್ಸಹ ಧನ ನೀಡಬೇಕು ಹಾಗೂ ಮೊಬೈಲ್ ಕೆಲಸಗಳನ್ನು ಒತ್ತಾಯಪೂರಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಟ್ಟು ಇಲ್ಲವೇ ಮೊಬೈಲ್, ಡಾಟಾ ಒದಗಿಸಿ ಮೊಬೈಲ್ ಕೆಲಸಗಳಿಗೆ ಪ್ರೋತ್ಸಹ ಧನ ನಿಗದಿ ಮಾಡಿ ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಮುಖಂಡರಾದ ತಾಹಿರಭಾನು, ಗೀತಾ, ಅಸಿವಮ್ಮ, ಜಿ. ಹನುಮೇಶ್, ಮಮತಾ, ಪಾರ್ವತಮ್ಮ, ಸುಮಿತ್ರ, ತಾರಮಣಿ, ನವೀನಾ, ಲಕ್ಷ್ಮಿ, ಶಿವಮ್ಮ, ತಾರ ಇತರರು ಉಪಸ್ಥಿತರಿದ್ದರು.       

Continue Reading
Click to comment

Leave a Reply

Your email address will not be published. Required fields are marked *

Hassan

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಾಫಿ ಕಳ್ಳತನ

Published

on

50 ಕೆಜಿ ಕಾಫಿಗೆ ಬರೋಬ್ಬರಿ 30000 ದರ ಹೆಚ್ಚಳ ಹಿನ್ನೆಲೆ,

ಮಲೆನಾಡಿನಲ್ಲಿ ಹೆಚ್ಚಾಗುತ್ತಿದ್ದಾರೆ ಕಾಫಿ ಕಳ್ಳರು,

*ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಗಿಡದಲ್ಲಿದ್ದ ಕಾಫಿಯನ್ನು ಕಳ್ಳತನ ಮಾಡುತ್ತಾರೆ ಖದೀಮರು*

ವಾಹನದಲ್ಲಿ ಬರ್ತಾರೆ ಸಿಕ್ಕಸಿಕ್ಕ ಕಡೆ ಕಾಫಿ ದೋಚಿ ಹೊರಡುವ ಕಳ್ಳರು,

ಸುದೀಪ್ ಹಾಗೂ ಮಧು ಎಂಬುವರ ಕಾಫಿ ತೋಟದಲ್ಲಿ ಗಿಡದಲ್ಲಿದ್ದ ಕಾಫಿಯನ್ನೇ ಕಳ್ಳತನ ಮಾಡಿದ ಚಾಲಾಕಿ ಕಳ್ಳರು,

ರಾತ್ರೋರಾತ್ರಿ ಮಿನಿ ಪಿಕಪ್ ವಾಹನದಲ್ಲಿ ಬಂದು ಕಳ್ಳತನ ಮಾಡಿರೋ ಕಾಫಿ ಕಳ್ಳರು,

ಬೇಲೂರು ತಾಲೂಕು, ಚಿನ್ನೇನಹಳ್ಳಿ ಗ್ರಾಮದಲ್ಲಿ ಘಟನೆ,

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿನ್ನೇನಹಳ್ಳಿ ಗ್ರಾಮ,

ಒಂದು ಎಕರೆ ಎರಡು ಎಕರೆ ಇರೋ ತೋಟವನ್ನೇ ಟಾರ್ಗೆಟ್ ಮಾಡಿರುವ ಕಾಫಿ ಕಳ್ಳರು,

ಗಿಡದಲ್ಲಿದ್ದ ಕಾಫಿಯನ್ನು ಬಿಡುತ್ತಿಲ್ಲ ಕದೀಮರು

Continue Reading

Hassan

MLA ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌: ಕಾನೂನು ಕ್ರಮಕ್ಕೆ ಆಗ್ರಹ

Published

on

ಸಕಲೇಶಪುರ: ಆಲೂರು, ಕಟ್ಟಾಯ -ಸಕಲೇಶಪುರ,ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌ ಮಾಡಿರುವ ವಿರುದ್ಧ ಕಾನೂನು ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಹಾಸನ ಜಿಲ್ಲಾಡಳಿತದ ವತಿಯಿಂದ ಶನಿವಾರದಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ  ಸಿಎಂ ಸಿದ್ದರಾಮಯ್ಯ, ಡಿಸಿಎಂ  ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಶಾಸಕರು ಅಧಿಕಾರಿಗಳು ಆಗಮಿಸಿದ್ದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ್ದರು. ಈ ಭಾಷಣದ ತುಣುಕನ್ನು Hassan News ಹಾಸನ್ ನ್ಯೂಸ್ ಫೇಸ್ಬುಕ್ ಪೇಜ್ ನಲ್ಲಿ ಬಿತ್ತರಿಸಲಾಗಿತ್ತು. ಸದರಿ ಪೇಜ್ ನಲ್ಲಿ vasanth kumar ಎಂಬ ಹೆಸರಿನ ಫೇಸ್ ಬುಕ್ ಖಾತೆಯುಳ್ಳ ವ್ಯಕ್ತಿಯು  ಶಾಸಕರ ವಿರುದ್ಧ “ಸಿಮೆಂಟ್ ಮಂಜಣ್ಣ ಹುಟ್ಟು ಕಳ್ಳನ್ ಮಗ” ಎಂದು ಕಾಮೆಂಟ್ ಮಾಡಿದ್ದು ಈ ರೀತಿಯ ಕಾಮೆಂಟ್ ನಿಂದ ಶಾಸಕರ ಘನತೆಗೆ ಧಕ್ಕೆ ಯಾವುದರ ಜೊತೆಗೆ ಕ್ಷೇತ್ರದ ಜನತೆಗೆ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದು ಕಾಮೆಂಟ್ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸಿ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರ ಠಾಣೆಗೆ ಬಾಳ್ಳುಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ. ಎಸ್. ಶಿವಕುಮಾರ್ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಳಗೋಡು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಮುಖಂಡರಾದ ನವೀನ್ ಶೆಟ್ಟಿ. ಕಿಟ್ಟಿ ಪುಟ್ಟರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Continue Reading

Hassan

ದೆಹಲಿ ನೋಟಿಸ್‌, ಕಾರ್ಟಿಯರ್ ವಾಚ್‌ ವಿವಾದದ ಬಗ್ಗೆ ಆತ್ಮವಿಶ್ವಾಸದ ನಿಲುವು ಘೋಷಿಸಿದ ಡಿಸಿಎಂ ಡಿಕೆಶಿ

Published

on

ಹಾಸನ: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ ಪ್ರಕರಣದಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯವಿರಲಿಲ್ಲ. ನಮಗೆ ಕಿರುಕುಳ ನೀಡಲು ಈ ಸಮನ್ಸ್ ನೀಡಲಾಗಿದೆ. ಇದು ಸರಿಯಲ್ಲ, ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಹಾಸನದಲ್ಲಿ ಇಂದು ಈ ಕುರಿತು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ವಿಭಾಗದ ದೆಹಲಿ ಪೊಲೀಸರು ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ಇದು ನಮಗೆ ಆಘಾತ ತಂದಿದೆ. ನನಗೆ ಹಾಗೂ ಸಹೋದರ ಸುರೇಶ್ ಅವರಿಗೆ ನೋಟೀಸ್ ನೀಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಹಿಂದೆ ಇಡಿ ನಮಗೆ ಸಮನ್ಸ್ ನೀಡಿತ್ತು ಎಂದರು.

ನಾವು ಮೊದಲಿನಿಂದಲೂ ಇಡಿ ತನಿಖೆಗೆ ಸಹಕಾರ ನೀಡಿ ಎಲ್ಲಾ ದಾಖಲೆಗಳನ್ನು ಒದಗಿಸಿದ್ದೇವೆ. ಇದು ನಮ್ಮ ಪಕ್ಷದ ಸಂಸ್ಥೆ, ಕಾಂಗ್ರೆಸಿಗರಾಗಿ ಆ ಸಂಸ್ಥೆಗೆ ಬೆಂಬಲ ನೀಡಲು ದೇಣಿಗೆ ನೀಡುವುದರಲ್ಲಿ ತಪ್ಪಿಲ್ಲ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಈ ಸಂಸ್ಥೆ ಕಷ್ಟಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ನೆರವು ನೀಡಿದ್ದು, ನನ್ನಂತೆ ಅನೇಕರು ದೇಣಿಗೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಇಡಿ ಚಾರ್ಜ್ ಶೀಟ್ ಹಾಕಿದ್ದು, ಅದರಲ್ಲಿ ನಮ್ಮ ಹೆಸರನ್ನು ಸೇರಿಸಿರಲಿಲ್ಲ. ನಮ್ಮ ಬಳಿ ಹೇಳಿಕೆ ಪಡೆದು, ಬಿಟ್ಟಿದ್ದರು. ಹೀಗಿರುವಾಗ ದೆಹಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಮ್ಮ ಎಲ್ಲಾ ವ್ಯವಹಾರ ಪಾರದರ್ಶಕವಾಗಿದೆ. ನಾವು ನ್ಯಾಯಲಯದಲ್ಲಿ ಹೋರಾಟ ಮುಂದುವರೆಸುತ್ತೇವೆ. ನಾವು ಸರಿಯಾಗಿ ತೆರಿಗೆ ಕಟ್ಟಿದ್ದು, ನಮ್ಮ ಹಣವನ್ನು ನಾವು ಇಷ್ಟಪಡುವ ಯಾರಿಗೆ ಬೇಕಾದರೂ ನೀಡಬಹುದು” ಎಂದು ಹೇಳಿದರು.

ನನ್ನ ವಿರುದ್ಧ ಪಿಎಎಲ್ಎ ಪ್ರಕರಣ ದಾಖಲಿಸಿ, ಆರೋಪ ಪಟ್ಟಿ ಸಲ್ಲಿಸಿದ್ದರು. ಇಷ್ಟಾದ ಮೇಲೂ ಯಾವ ಕಾರಣಕ್ಕೆ ಸಮನ್ಸ್ ನೀಡಿದ್ದಾರೆ? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಗೊಂದಲ ಮೂಡಿಸುವುದು ಇದರ ಉದ್ದೇಶ ” ಎಂದು ತಿಳಿಸಿದರು.

ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ, ನಾನು ಬಗ್ಗುವುದಿಲ್ಲ

“ನನಗೆ ಶುಕ್ರವಾರ ನೋಟೀಸ್ ಸಿಕ್ಕಿದ್ದು, ಇದನ್ನು ವಕೀಲರ ಜತೆ ಚರ್ಚೆ ಮಾಡುತ್ತೇನೆ. ನನ್ನ ಸಹೋದರ ಕೂಡ ಸಂಸದನಾಗಿದ್ದಾಗ ಈ ಸಂಸ್ಥೆಗೆ ದೇಣಿಗೆ ನೀಡಿದ್ದ. ದೆಹಲಿ ಪೊಲೀಸರು ಡಿ.19 ರ ಒಳಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ. ನಾನು ಸಮಯ ನೋಡಿಕೊಂಡು ಒಂದು ದಿನ ಹೋಗಿ, ಅವರ ನೋಟೀಸ್ ಗೆ ಯಾವ ರೀತಿ ಉತ್ತರ ನೀಡಬೇಕೋ ನೀಡುತ್ತೇನೆ. ಅವರು ನನ್ನನ್ನು ಬೆದರಿಸುವ ಪ್ರಯತ್ನ ಮಾಡಿದರೆ ನಾನು ಬಗ್ಗುವುದಿಲ್ಲ” ಎಂದು ಹೇಳಿದರು

 

Continue Reading

Trending

error: Content is protected !!