Connect with us

Hassan

ಡಿಸಿ ವಿರುದ್ಧ ರಾಷ್ಟ್ರಪತಿ, ರಾಜ್ಯಪಾಲರಿಗೆ ದೂರು ಅಗಿಲೆ ಯೋಗೀಶ್

Published

on

ಹಾಸನ: ರಾಜಕೀಯ ಪ್ರೇರಣೆಯಿಂದ ಇಡಿ ಅಧಿಕಾರಿಗಳು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ದೇಶದದ್ಯಂತ ಏಪ್ರಿಲ್ ೭ ರಂದು ಭಾನುವಾರ ಉಪವಾಸ ಸತ್ಯಗ್ರಹ ಹಮ್ಮಿಕೊಳ್ಳುವುದಾಗಿ ಡಿಸಿ ಅವರಿಗೆ ಮನವಿ ಮಾಡಿದರೇ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಪ್ರತಿಭಟನೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಅವಕಾಶ ಕೊಟ್ಟಿರುವುದಿಲ್ಲ ಈ ಬಗ್ಗೆ ರಾಷ್ಟ್ರಪತಿ ಮತ್ತು ರಾಜ್ಯ ಪಾಲರಿಗೆ ಪತ್ರ ಬರೆಯುವುದಾಗಿ ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಅಗಿಲೆ ಯೋಗೀಶ್ ಬೇಸರವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಇಡೀ ದೇಶದ ಎಲ್ಲಾ ಭಾಗಗಳಲ್ಲೂ ಪ್ರತಿಭಟನೆ ಮಾಡಲು ಅವಕಾಶ ಕೊಡಲಾಗಿದೆ. ಚುನಾವಣೆ ವೇಳೆ ನಾಮಪತ್ರ ಸಲ್ಲಿಸಲು ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಆ ವೇಳೆ ಕಾನೂನು ಸುವ್ಯವಸ್ಥೆ ಹಾಳಾಗುವುದಿಲ್ಲವೇ? ನಾವು ಪ್ರತಿಭಟನೆ ಮಾಡಿದರೇ ಮಾತ್ರ ಹದಗೆಡುತ್ತದೆಯೇ? ಎಂದು ಪ್ರಶ್ನೆ ಮಾಡಿದರು. ಬೇರೆ ಕಡೆ ಪ್ರತಿಭಟನೆಗೆ ಅವಕಾಶ ಕೊಡಬಹುದು ಆದರೇ ನಾವು ಇಲ್ಲಿ ಅನುಮತಿ ಕೊಡುವುದಿಲ್ಲ ಎಂದು ಹೇಳಿದ್ದಾರೆ ಎಂದು ದೂರಿದರು. ಇಂತಹ ಜಿಲ್ಲಾಧಿಕಾರಿಗಳನ್ನು ಕೂಡಲೇ ವಜಾ ಮಾಡಬೇಕೆಂದು ಈ ದೇಶದ ಸಂವಿಧಾನದ ಮುಖ್ಯಸ್ಥರಾದ ರಾಷ್ಟ್ರಪತಿಗಳಿಗೆ ಮತ್ತು ರಾಜ್ಯ ಪಾಲರಿಗೆ ಹಾಗೂ ಚುನಾವಣಾ ಮುಖ್ಯಾಧಿಕಾರಿಗಳು ಪತ್ರ ಬರೆಯಲಾಗುವುದು. ಇಂತಹ ನಡವಳಿಕೆಗಳು ಡಿಸಿಯವರಿಗೆ ಒಳ್ಳೆಯದಲ್ಲ. ಪ್ರತಿಭಟನೆ ಮಾಡುವಾಗ ರಕ್ಷಣೆ ಕೊಡಬೇಕು. ಯಾರಿಗೂ ದಕ್ಕೆ ಆಗದಂತೆ ಮಾಡಲು ನಿಬಂಧನೆ ಹಾಕಬೇಕು. ಚುನಾವಣೆಯನ್ನು ನಡೆಸುವುದಕ್ಕೆ ಬರುವುದಿಲ್ಲ ಎಂದರೇ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇಲ್ಲವೇ ರಜೆ ಹಾಕಿ ಮನೆಯಲ್ಲ ಇರಬೇಕೆಂದರು. ಒಂದು ರಾಜಕೀಯ ಪಕ್ಷಕ್ಕೆ ತೊಂದರೆ ಕೊಟ್ಟರೇ ಇನ್ನೊಂದು ರಾಜಕೀಯ ಪಕ್ಷಕ್ಕೆ ಅನುಕೂಲ ಮಾಡಿಕೊಟ್ಟಂತೆ. ಇದು ನೀತಿ ಸಂಹಿತೆ ಉಲ್ಲಂಘನೆ ಅಲ್ಲವೇ.

ಕೇಂದ್ರ ಬಿಜೆಪಿ ಸರ್ಕಾರ ಕೇಜ್ರಿವಾಲ್ ಅವರನ್ನು ರಾಜಕೀಯವಾಗಿ ಮುಗಿಸಬೇಕು ಎಂಬ ಉದ್ದೇಶದಿಂದ ಅವರನ್ನು ಈ.ಡಿ ಮೂಲಕ ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದರು ಜೊತೆಗೆ ತಮ್ಮ ನಾಯಕ ಕೇಜ್ರಿವಾಲ್ ಬಂಧನ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಹಾಸನದಲ್ಲಿ, ಶಾಂತಿಯುತ ಪ್ರತಿಭಟನೆಗೆ ಜಿಲ್ಲಾಧಿಕಾರಿಗಳ ಬಳಿ ಮನವಿ ಮಾಡಿದ ವೇಳೆ ಡಿಸಿ ಅವರು ಅನುಮತಿ ನೀಡಲು ನಿರಾಕರಿಸಿದ್ದಾರೆ. ದೇಶದ ವಿವಿಧೆಡೆ ಅನುಮತಿ ನೀಡಿದರು ಹಾಸನದಲ್ಲಿ ಮಾತ್ರ ಅನುಮತಿಗೆ ನಿರಾಕರಣೆ ಮಾಡಿರುವ ಡಿಸಿ ವಿರುದ್ದ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಎಪಿ ಪಕ್ಷದ ಜಿಲ್ಲಾಧ್ಯಕ್ಷ ಆನಂದ್, ನಗರ ಅಧ್ಯಕ್ಷ ನಜೀರ್ ಅಹಮದ್, ಗ್ರಾಮಾಂತರ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಶೇಷಪ್ಪ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

Published

on

ಎಸ್ಐಟಿ ಪೊಲೀಸರಿಂದ ಭಾವನಿ ರೇವಣ್ಣ ಕಾರು ಚಾಲಕನಿಗೆ ಸಮನ್ಸ್ ಜಾರಿ

ಕಾರು ಚಾಲಕ ಅಜಿತ್ ಗೆ ಎಸ್ಐಟಿ ಸಮನ್ಸ್ ಜಾರಿ

ಸಂತ್ರಸ್ಥೆ ಕಿಡ್ನಾಪ್ ಪ್ರಕರಣ ಸಂಬಂಧ ಎರಡು ಬಾರಿ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ

ಹೊಳೆನರಸೀಪುರ ಚಾಲಕ ಅಜಿತ್ ನಿವಾಸಕ್ಕೆ ತೆರಳಿ ಸಮನ್ಸ್

ಕಿಡ್ನಾಪ್ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿರುವ ಕಾರು ಚಾಲಕ ಅಜಿತ್

ಸಂತ್ರಸ್ಥೆಯನ್ನ ಕಾರಿನಲ್ಲಿ ಕರೆದೊಯ್ದಿದ್ದ ಕಾರು ಚಾಲಕ ಅಜಿತ್ ಎಂಬ ಆರೋಪ

ಕಿಡ್ನಾಪ್ ಪ್ರಕರಣ ಸಂಬಂಧ ಸಮನ್ಸ್ ಜಾರಿ ಮಾಡಿರುವ ಎಸ್ಐಟಿ ಪೊಲೀಸರು

Continue Reading

Hassan

ಯಾರು ಆತಂಕಪಡಬೇಕಾಗಿಲ್ಲ ಕಾಲವೇ ಉತ್ತರ ಕೊಡಲಿದೆ ಜೆಡಿಎಸ್ ಕಾರ್ಯಕರ್ತರಿಗೆ ದೈರ್ಯ ತುಂಬಿದ ಹೆಚ್.ಡಿ. ರೇವಣ್ಣ

Published

on

ಹಾಸನ : ಯಾರು ಆತಂಕಪಡಬೇಕಾಗಿಲ್ಲ. ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕಾಗುತ್ತದೆ ಅಷ್ಟೇ. ನಮ್ಮ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಲ್ಲಿ ನಿಲ್ಲುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ದೈರ್ಯ ತುಂಬಿದರು.

ನಗರದ ಕುವೆಂಪು ಬಡಾವಣೆಯಲ್ಲಿರುವ ಡಿ.ಟಿ. ಪರಮೇಶ್ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆ ಫಲಿತಾಂಶವನ್ನು ಜನತೆಗೆ ಬಿಟ್ಟಿದ್ದೇನೆ. ಜನತೆಯ ತೀರ್ಪಿಗೆ ತಲೆ ಬಾಗುತ್ತೇವೆ. ನಾವು ಅಧಿಕಾರಕ್ಕೋಸ್ಕರ ಹೋರಾಟ ಮಾಡುವುದಿಲ್ಲ. ಅಧಿಕಾರ ಇದ್ದರೂ ಇಲ್ಲದಿದ್ದರೂ ಕೆಲಸ ಮಾಡ್ತಿವಿ, ೪೮ ಗಂಟೆಗಳಲ್ಲಿ ಪ್ರಜ್ವಲ್ ರೇವಣ್ಣ ಬಾ ಎಂಬ ಕುಮಾರಸ್ವಾಮಿ ಮನವಿ ಮಾಡಿದ ವಿಚಾರವಾಗಿ ಮಾತನಾಡಿ, ಕೋರ್ಟ್‌ನಲ್ಲಿ ಕೇಸ್ ಇದ್ದಾಗ ನಾನು ಮಾತನಾಡುವುದಿಲ್ಲ. ಹೇಸಿಗೆಯಂತಹ ವಿಚಾರವವು ರಾಜ್ಯಕ್ಕೆ, ನಮಗೆ ಗೌರವ ತಂದುಕೊಡುವುದಿಲ್ಲ. ಈ ವಿಚಾರವನ್ನು ರಾಜಕೀಯವಾಗಿ ತೆಗದುಕೊಂಡು ಹೋಗಲಾಗುತ್ತಿದೆ. ಈದಕ್ಕೆಲ್ಲಾ ಮೂಲ ಯಾರಿದ್ದಾರೆ ಅವರನ್ನು ಬಂಧಿಸಿ ಶಿಕ್ಷೆ ವಿಧಿಸಲಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿದರು. ತಮ್ಮ ಮೇಲೆ ಎರಡು ಪ್ರಕರಣ ದಾಖಲು ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ರೇವಣ್ಣ ಅವರು, ಯಾರು ಆತಂಕಪಡಬೇಕಾಗಿಲ್ಲ, ಕಾಲವೇ ಉತ್ತರ ಕೊಡುತ್ತದೆ. ಟೈಂ ಬೇಕು ಅಷ್ಟೇ. ನಮ್ಮ ಜಿಲ್ಲೆಯ ಜನರನ್ನು ಅರವತ್ತು ವರ್ಷ ದೇವೇಗೌಡರು ಕಾಪಾಡಿದ್ದಾರೆ. ನಾನೀದ್ದೀನಿ, ಎ.ಮಂಜು, ಸ್ವರೂಪ್ ಪ್ರಕಾಶ್ ಇದ್ದಾರೆ. ಕಾರ್ಯಕರ್ತರು ಯಾರು ಭಯಪಡುವ, ಆತಂಕಪಡುವ ಅಗತ್ಯವಿಲ್ಲ. ನನಗೂ ಜಿಲ್ಲೆಯ ಜನ ಇಪ್ಪತ್ತೈದು ವರ್ಷ ಆಶೀರ್ವಾದ ಮಾಡಿದ್ದಾರೆ ಎಂದು ಕಾರ್ಯಕರ್ತರಿಗೆ ದೈರ್ಯ ತುಂಬಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷ ಆಗಿದ್ದು, ಈ ಸರ್ಕಾರದ ವೇಳೆ ಯಾವುದಾದರೂ ರಸ್ತೆ ಗುಂಡಿ ಮುಚ್ಚಿಲ್ಲ. ಶಿಕ್ಷಕರ ಹುದ್ದೆ ಭರ್ತಿ ಮಾಡಿಲ್ಲ. ಒಂದು ವರ್ಷದಲ್ಲಿ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದರು. ರಾಜ್ಯ ಸರ್ಕಾರದ ಮಂತ್ರಿಗಳೇ ಸರ್ಕಾರಕ್ಕೆ ಧಮ್ಕಿ ಹಾಕುತ್ತಿದ್ದಾರೆ. ನಮ್ಮಲ್ಲಿ ಇದ್ದು ಆ ಕಡೆ ಹೋಗಿದ್ದಾರಲ್ಲಾ ಕೆಲವರು ಸರ್ಕಾರ ಬಂದು ಒಂದು ವರ್ಷ ಆಗಿದೆ ಹಾಸನ ಜಿಲ್ಲೆಗೆ ಏನು ಕೊಡುಗೆ ಕೊಡಿಸಿದ್ದಾರೆ ಎಂದು ಪ್ರಶ್ನೆ ಮಾಡಿದರು. ನಮ್ಮ ಆಡಳಿತದಲ್ಲಿ ನಾವು ಶಾಲಾ, ಕಾಲೇಜಿಗೆ ಮೂಲಭೂತ ಸೌಕರ್ಯ ಕೊಟ್ಟು ತೋರಿಸಿದ್ದೇವೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ನಮ್ಮ ಜಿಲ್ಲೆ ಈ ಬಾರಿ ಹದಿನೈದನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಇದ್ದಾಗ ಹಾಸನ ಜಿಲ್ಲೆ ಮೊದಲ ಸ್ಥಾನದಲ್ಲಿತ್ತು. ಈ ರೀತಿಯಾಗಲೂ ಕಾರಣ ಯಾರು ಕಾರಣ. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರೆ ಅದು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಮಾತ್ರ. ಕುಮಾರಸ್ವಾಮಿ ಆಡಳಿತದಲ್ಲಿ ರಾಜ್ಯದಲ್ಲಿ ೧೫೦೦ ಹೈಸ್ಕೂಲ್, ೨೪೦ ಪ್ರಥಮ ದರ್ಜೆ ಕಾಲೇಜು ತೆರೆದರು. ಖಾಲಿ ಇದ್ದ ಶಿಕ್ಷಕರ ಹುದ್ದೆ ಭರ್ತಿ ಮಾಡಿದ್ದು ಎಚ್.ಡಿ.ಕುಮಾರಸ್ವಾಮಿ ಎಂದರು. ಐವತ್ತು ವರ್ಷ ಆಡಳಿತದ ಕಾಂಗ್ರೆಸ್ ಕೈಯಲ್ಲೂ ಆಗಿರಲಿಲ್ಲ. ಕುಮಾರಸ್ವಾಮಿ, ಯಡಿಯೂರಪ್ಪ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದಾರೆ. ಇಡೀ ಇಂಡಿಯಾ ದೇಶದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟಿದ್ದು ದೇವೇಗೌಡರು. ದೇವೇಗೌಡರ ಕುಟುಂಬ ಯಾವುದೇ ಖಾಸಗಿ ಶಾಲೆ ಮಾಡಿಲ್ಲ. ಆದರೇ ಶಿಕ್ಷಕರ ಮಕ್ಕಳಿಗೆ ಉದ್ಯೋಗದಲ್ಲಿ ಹತ್ತು ಪರ್ಸೆಂಟ್ ಮೀಸಲಾತಿ ಕೊಡಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಹಾಸನ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್, ಅರಕಲಗೂಡು ಶಾಸಕ ಎ. ಮಂಜು.ಸ್ವರೂಪ ಪ್ರಕಾಶ್. ಮಾಜಿ ಸಚಿವರಾದ ಎಚ್.ಕೆ. ಕುಮಾರಸ್ವಾಮಿ. ಮಾಜಿ ಶಾಸಕರಾದ ಕೆ.ಎಸ್. ಲಿಂಗೇಶ್ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಿವೇಕಾನಂದ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!