Mandya
ಕಾಂಗ್ರೆಸ್ ಬೆಂಬಲಿಸುವಂತೆ ಆರ್.ಕೃಷ್ಣ ಮನವಿ

ಮಂಡ್ಯ: ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವೆಂಕಟರಮಣೇಗೌಡ ಅವರನ್ನು ಬೆಂಬಲಿಸುವುದಾಗಿ ಅಖಿಲ ಕರ್ನಾಟಕ ಅರುಂಧತಿಯಾರ್ ಪೌರಕಾರ್ಮಿಕ ಮಹಾಸಭಾ ಮತ್ತು ಮಂಡ್ಯ ಜಿಲ್ಲಾ ಆದಿ ದ್ರಾವಿಡ ಸಫಾಯಿಕರ್ಮಚಾರಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಆರ್ ಕೃಷ್ಣ ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೌರ ಕಾರ್ಮಿಕ ಕುಟುಂಬಗಳಿಗೆ 40,000 ಸಹಾಯಧನ ನೀಡಿದೆ. ಪುನರ್ ವಸತಿ ಯೋಜನೆಯನ್ನು ಜಾರಿಗೆ ತಂದಿದೆ ಎಂದರು .
ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಎಲ್ಲಾ ವಸತಿ ಶಾಲೆಗಳಲ್ಲಿ ನೇರ ಪ್ರವೇಶ ಕಲ್ಪಿಸಿ ಉಚಿತ ಶಿಕ್ಷಣ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. 30 ವರ್ಷಗಳಿಂದ ಹೊರಗುತ್ತಿಗೆಯಲ್ಲಿ ಪೌರಕಾರ್ಮಿಕರಾಗಿ ಸೇವೆ ಮಾಡಿದ್ದ ಎಲ್ಲಾ ಪೌರ ಕಾರ್ಮಿಕರಿಗೆ ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನೇರ ಪಾವತಿ ಮತ್ತು ನೇರ ನೇಮಕಾತಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಅಲ್ಲದೆ ಬಾಕಿ ಇರುವ 24,000 ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ಗೊಳಿಸುವುದಾಗಿ ತಿಳಿಸಿದ್ದು, ಈ ಸರ್ಕಾರ ಪೌರಕಾರ್ಮಿಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವುದಾಗಿ ಅವರು ತಿಳಿಸಿದರು .
ಗೋಷ್ಠಿಯಲ್ಲಿ ನಾಗಮಣಿ, ಪಳನಿ ಸ್ವಾಮಿ, ಗಣೇಶ, ರವಿ, ಮಂಜುನಾಥ್, ರಂಗನಾಥ, ನವೀನ್, ನಾಗರಾಜ ಉಪಸ್ಥಿತರಿದ್ದರು
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu10 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar10 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu14 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್