Mandya
ಆಸ್ತಿಗಾಗಿ ತಂದೆ, ತಾಯಿ ಮೇಲೆ ಮಾರಣಾಂತಿಕ ಹಲ್ಲೆ : ಕ್ರಮ ಕೈಗೊಳ್ಳದ ಪೋಲೀಸರ ವಿರುದ್ದ ಬೇಸರ

ಮಂಡ್ಯ: ಆಸ್ತಿಗಾಗಿ ತಂದೆ, ತಾಯಿ ಎಂಬುದನ್ನೂ ನೋಡದೆ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕ ಜವರೇಗೌಡ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಗ ನೀಲೇಗೌಡ ಹಾಗೂ ಆತನ ಪತ್ನಿ ಕೀರ್ತಿ ಎಂಬುವವರು ತಮಗೆ ಆಸ್ತಿ ಪಾಲಾಗಿ ಬಂದ ನಂತರವೂ ಜೀವನ ನಿರ್ವಹಣೆಗೆ ಉಳಿಸಿಕೊಂಡ ಆಸ್ತಿಯೂ ತಮಗೇ ಬೇಕೆಂದು ಕಿರುಕುಳ ನೀಡುತ್ತಿದ್ದರು.
ನವೆಂಬರ್ ತಿಂಗಳ ೧೭ರಂದು ಮಾರಣಾಂತಿಕ ಹಲ್ಲೆ ಮಾಡಿದ್ದು,
ಹಲ್ಲೆಯಿಂದ ನನಗೆ ಕೈ ಮುರಿದಿದ್ದು ಜೊತೆಗೆ ತೀವ್ರ ತರನಾದ ಗಾಯಗಳಾಗಿವೆ. ಪತ್ನಿ ಭಾಗ್ಯಮ್ಮಗೆ ಕಾಲು ಮುರಿದಿದ್ದು, ಎದ್ದು ಓಡಾಡದ ಸ್ಥಿತಿಯಲ್ಲಿದ್ದಾರೆ. ಈ ಸಂಬಂದ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ ದೂರನ್ನು ಬದಲಿಸಿ ಕೊಡುವಂತೆ ಒತ್ತಡ ಹೇರಿ ಅನ್ಯಾಯ ಎಸಗಲಾಗುತ್ತಿದೆ ಎಂದು ಹೇಳಿದರು.
ಹಲ್ಲೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಮುಂದಾದರೆ, ಪೊಲೀಸರು ದೂರಿನಲ್ಲಿ ಮಾರಣಾಂತಿಕ ಹಲ್ಲೆ ಎಂಬುದನ್ನ ಬದಲಿಸಿ, ನೀಲೇಗೌಡನ ಮಾವ ಮತ್ತಿತರರ ಹೆಸರನ್ನು ತೆಗೆದು ದೂರು ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ ಎಂದು ದೂರಿದರು.
ಪ್ರಕರಣ ಸಂಬಂಧ ನ್ಯಾಯ ಒದಗಿಸಬೇಕೆಂದು ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಲ್ಲಿ ಮನವಿ ಮಾಡಿದ್ದು, ನ್ಯಾಯ ಒದಗಿಸಲಾಗದಿದ್ದರೆ ದಯಾಮರಣ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ಇದೇ ವೇಳೆ ತಿಳಿಸಿದರು.
ಗೋಷ್ಠಿಯಲ್ಲಿ ಪುತ್ರಿ ವರಲಕ್ಷ್ಮಿ, ವಕೀಲೆ ಸಲ್ಮ ಇತರರು ಇದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State11 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan7 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ