Connect with us

Mandya

ಸ್ಟಾರ್ ಚಂದ್ರು ರವರಿಗೆ ಮತ ನೀಡುವಂತೆ ಕ್ರಾಂತಿ ಸಿಂಹ ಮನವಿ

Published

on

ಮಂಡ್ಯ: ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ವೆಂಕಟರಮೇಗೌಡ ಅವರಿಗೆ ಮತ ನೀಡುವಂತೆ ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಸಿಎಂ ಕ್ರಾಂತಿ ಸಿಂಹ ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ಮಂಡ್ಯ ಜನತೆಯ ಸ್ವಾಭಿಮಾನದ ಚುನಾವಣೆಯಾಗಿದೆ. ನಮ್ಮ ಜಿಲ್ಲೆಯ ನಾಯಕತ್ವ ಸಂಕಷ್ಟದಲ್ಲಿದ್ದು ಹಾಗಾಗಿ ಜಿಲ್ಲೆಯ ಮನೆಯ ಮಗ ಕಾಂಗ್ರೆಸ್ ಅಭ್ಯರ್ಥಿ ಕೆಎಚ್ ವೆಂಕಟರಮಣೆಗೌಡ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಬಿಜೆಪಿಯಲ್ಲಿ ಓರ್ವ ಬಲಗೈ ಸಮುದಾಯದ ಶಾಸಕನಿದ್ದು ಇಲ್ಲಿಯವರೆಗೂ ಸಚಿವ ಸ್ಥಾನ ನೀಡಿಲ್ಲ ಎಂದು ದೂರಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಕೇಂದ್ರದಲ್ಲಿಯೂ ಅಧಿಕಾರಕ್ಕೆ ಬಂದಲ್ಲಿ ಮಹಿಳೆಯರಿಗೆ ಪ್ರತಿ ವರ್ಷ ಒಂದು ಲಕ್ಷ ಸೇರಿದಂತೆ ಹಲವಾರು ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಿಸಿದ್ದಾರೆ. ಆದ್ದರಿಂದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮದ್ದೂರು ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಟಿಎಂ ರಾಜಶೇಖರ್, ಮನು, ರವಿ, ರಮೇಶ್ ಬಾಬು, ಅನಿಲ್ ಕುಮಾರ್ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ

Published

on

ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.

Continue Reading

Mandya

ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ

Published

on

ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.

ಎಸ್‌.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.

ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.

ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Continue Reading

Mandya

ಜೆ.ಡಿ.ಎಸ್ ತೆಕ್ಕೆಗೆ ಹುಲಿಕೆರೆ ಪಂಚಾಯಿತಿ

Published

on

ನಾಗಮಂಗಲ : ಹುಲಿಕೆರೆ ಗ್ರಾಮ ಪಂಚಾಯಿತಿಯ ಈ ಹಿಂದೆ ಅಧ್ಯಕ್ಷರಾಗಿದ್ದ ಶಿವರಾಮು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಿತು. ಎರಡು ನಾಮಪತ್ರ ಸಲ್ಲಿಕೆಯಾಗಿದ್ದು ಕಾಂತರಾಜು ಗೆ ಮೂರು ಮತಗಳು ಹಾಗೂ ಸುಮಾ ಚೇತನ್ ಕುಮಾರ್ ರವರಿಗೆ 9 ಮತಗಳ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾದ ಸತೀಶ್ ರವರು ಘೋಷಣೆ ಮಾಡಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸುಮ ಚೇತನಕುಮಾರ್ ರವರು ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ ಹುಲಿಕೆರೆ ಗ್ರಾಮ ಪಂಚಾಯಿತಿಯು ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಹೆಸರು ಪಡೆದಿರುವಂತಹ ಪಂಚಾಯಿತಿ. ಇಲ್ಲಿ ನಾನು ಅಧ್ಯಕ್ಷರಾಗಿರುವುದಕ್ಕೆ ಸಂತಸದ ವಿಚಾರ ನನ್ನ ಆಯ್ಕೆ ಮಾಡಿದ ಪಂಚಾಯತಿ ಆತ್ಮೀಯ ಸದಸ್ಯರು ನನ್ನ ಮೇಲೆ ನಂಬಿಕೆ ಇಟ್ಟು ಈ ಹುದ್ದೆಯನ್ನು ನೀಡಿರುವುದಕ್ಕೆ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಗ್ರಾಮೀಣ ಪ್ರದೇಶದ ಕುಡಿಯುವ ನೀರು ರಸ್ತೆ ಮತ್ತು ವಿದ್ಯುತ್ ದೀಪಕ್ಕೆ ಮೊದಲನೇ ಆದ್ಯತೆ ನೀಡಿ ಮಹಾತ್ಮ ಗಾಂಧಿಯ ನರೇಗಾ ಯೋಜನೆಗೆ ಉತ್ತಮ ರೀತಿ ನಿರ್ವಹಣೆ ಮಾಡಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಅವರು ತಿಳಿಸಿದರು.

ಇದೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತೆ ಮುಖಂಡರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು

ಗ್ರಾಮ ಪಂಚಾಯತಿ ಸದಸ್ಯರಾದ ತಿಮ್ಮೇಗೌಡ. ಲಕ್ಷ್ಮೀದೇವಮ್ಮ. ಶಿವಲಿಂಗಯ್ಯ. ಮಂಜುಳ. ತಿಮ್ಮೇಗೌಡ. ದಿನೇಶ್ ಕಲ್ಲೇನಹಳ್ಳಿ. ನರಗನಹಳ್ಳಿ ದೇವೇಗೌಡ.ಪುರಸಭೆ ಸದಸ್ಯ ಶಂಕರ್ಲಿಂಗೇಗೌಡ. ಪಡುವಲ ಪಟ್ಟಣ ಪುಟ್ಟರಾಜು.ಎಂ ಎನ್ ಸುರೇಶ್ ಜವರೇಗೌಡ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.

Continue Reading

Trending

error: Content is protected !!