Hassan
ಪೆನ್ ಡ್ರೈವ್ ಪ್ರಕರಣ ಕುರಿತು ಪೊಲೀಸ್ ಇಲಾಖೆಗೆ ದೂರು ಎಷ್ಟೆ ಪ್ರಬಾವಿ ಆಗಿದ್ರು ಬಂಧಿಸಲಿ: ಹೆಚ್.ಎಸ್. ಲಿಂಗೇಗೌಡ
ಹಾಸನ : ಈಗಾಗಲೇ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿ ಮಹಿಳೆಯರ ಮಾನ ಹಾನಿಗೆ ಕಾರಣವಾಗಿರುವ ಅವರು ಎಷ್ಟೆ ಪ್ರಭಾವಿ ಆಗಿದ್ದರೂ ಕೂಡಲೇ ಬಂದಿಸಬೇಕು. ಪೆನ್ ಡ್ರೈವ್ ಪ್ರಕರಣದ ಬಗ್ಗೆ ತಮ್ಮ ಪಕ್ಷದ ವತಿಯಿಂದ ಪೊಲೀಸ್ ಇಲಾಖೆಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹೆಚ್.ಎಸ್. ಲಿಂಗೇಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪೆನ್ ಡ್ರೈವ್ ಪ್ರಕರಣದಿಂದ ಹಾಸನ ಜಿಲ್ಲೆಯ ಗೌರವ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹಾಳಾಗುತ್ತಿದೆ ಜೊತೆಗೆ ಒಂದಲ್ಲ ಎರಡಲ್ಲ ನೂರಾರು ಮಹಿಳೆಯರ ಮಾನ ಮರ್ಯಾದೆ ಕೂಡ ಬೀದಿಯಲ್ಲಿ ಹರಾಜ್ ಆಗುತ್ತದ್ದು, ಈ ಘಟನೆ ಬಗ್ಗೆ ಕೂಡಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪೊಲೀಸ್ ಇಲಾಖೆ ಕೂಡಲೇ ವಿಡಿಯೋದ ಮೂಲ ಹಾಗೂ ವಿಡಿಯೋದಲ್ಲಿರುವ ಮಹಿಳೆಯರ ಬಗ್ಗೆ ತನಿಖೆ ನಡೆಸಿ ವೀಡಿಯೋ ಯಾರು ಮಾಡಿದ್ದು, ಎಂಬುದನ್ನು ಪತ್ತೆ ಹಚ್ಚಿ ಅವರು ಎಂಥಾ ಪ್ರಭಾವಿಗಳಾಗಿದ್ದರು ಅವರ ವಿರುದ್ಧ ಕೂಡ ಕೇಸು ದಾಖಲಿಸಿ ಜೈಲಿಗಟ್ಟುವ ಕೆಲಸ ಮಾಡಬೇಕು ಇಲ್ಲವಾದರೆ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷಿತ ಇಲ್ಲ ಎಂಬುದು ಸಾಬೀತಾಗುತ್ತದೆ ಎಂದರು.
ತಮ್ಮ ಕಾಮದಾಟಕ್ಕೆ ತಮ್ಮ ಕಷ್ಟ ಹೇಳಿಕೊಳ್ಳಲು ಬಂದ ಮಹಿಳೆಯರನ್ನು ಎಲ್ಲ ಸಲದ ಆಮಿಷಗಳನ್ನು ಒಡ್ಡಿ ಬಳಸಿಕೊಂಡಿರುವ ಅನೇಕ ಉದಾಹರಣೆಗಳಿವೆ. ಆದರೆ ಈ ಪ್ರಕರಣದಲ್ಲಿ ತಪ್ಪು ಯಾರದಿದೆ ವಿಡಿಯೋ ಒರಿಜಿನಲ್ ಅಥವಾ ಎಡಿಟಿಂಗ್ ವಿಡಿಯೋ ಇದೆಯಾ ಎಂಬುದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಪ್ರಜ್ವಲ್ ರೇವಣ್ಣ ನವರ ಕಾರು ಚಾಲಕ ಕಾರ್ತಿಕ್ ರವರು ಡಿ ನಮ್ಮ ೧೩ ಎಕರೆ ಜಮೀನನ್ನ ಅಕ್ರಮವಾಗಿ ಬರೆಸಿಕೊಂಡಿದಾರೆ ಎಂದು ಮಾಧ್ಯಮಗಳ ಮುಂದೆ ಹೇಳುವಾಗ ಅನೇಕ ಕರ್ಮಕಾಂಡಗಳನ್ನು ಮಾಡಿದ್ದಾರೆ ಎಂದು ಹೇಳಿರುತ್ತಾರೆ. ಆದರಿಂದ ಅವರ ಕಾರಿನ ಚಾಲಕ ಕಾರ್ತಿಕ್ ನವರನ್ನು ವಿಚಾರಣೆಗೊಳಪಡಿಸಿ ಸಂತ್ರಸ್ತ ಮಹಿಳೆಯರ ವಸ್ತು ಸ್ಥಿತಿ ಬಗ್ಗೆ ತಿಳಿದುಕೊಳ್ಳಬೇಕು ಎಂದು ಆಗ್ರಹಿಸಿದರು.
Hassan
ರೈತ ಸಂಘದ ಹೋರಾಟ ಫಲಿಸಿದ್ದು ಜೋಳ ಖರೀದಿ ಆದೇಶ: ಖರೀದಿ ಕೇಂದ್ರ ತೆರೆಯಬೇಕು ಕಣಗಾಲ್ ಮೂರ್ತಿ ಅಗ್ರಹ
ಹಾಸನ: ರೈತ ಸಂಘದ ಹೋರಾಟ ಫಲಿಸಿದ್ದು, ರಾಜ್ಯ ಸರ್ಕಾರದಿಂದ ಜೋಳ ಖರೀದಿ ಆದೇಶ ನೀಡಿದ್ದು ಜಿಲ್ಲೆಯಲ್ಲಿ ಕೂಡಲೇ ಖರೀದಿ ಕೇಂದ್ರ ತೆರೆಯಬೇಕು ಎಂದು ಕಣಗಾಲ್ ಮೂರ್ತಿ ಅಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಹಾಸನ ಘಟಕದ ನಿರಂತರ ಹೋರಾಟದ ಪರಿಣಾಮವಾಗಿ, ಸರ್ಕಾರವು ಮೆಕ್ಕೆಜೋಳವನ್ನು ಕನಿಷ್ಠ 50 ಕ್ವಿಂಟಾಲ್‌ದಷ್ಟು ಪ್ರತಿಯೊಬ್ಬ ರೈತನಿಂದ ಖರೀದಿಸಲು ಆದೇಶ ಹೊರಡಿಸಿದೆ. ಜೊತೆಗೆ, ಬಿಳಿಸುಳಿ ರೋಗದಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡುವ ಭರವಸೆಯನ್ನೂ ಸರ್ಕಾರ ವ್ಯಕ್ತಪಡಿಸಿದೆ.
ನವೆಂಬರ್ 24ರಿಂದ 31ರ ವರೆಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತ ಸಂಘವು ಅಹೋರಾತ್ರಿ ಧರಣಿ–ಸತ್ಯಾಗ್ರಹ ನಡೆಸಿತ್ತು. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಮತ್ತು ಬಿಳಿಸುಳಿ ರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ತುರ್ತು ಪರಿಹಾರ ನೀಡಬೇಕು ಎಂಬುದು ಮುಖ್ಯ ಬೇಡಿಕೆಗಳಾಗಿದ್ದವು.
ಧರಣಿಯ ಬಳಿಕ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೆಎಂಎಫ್, ಎಪಿಎಂಸಿ, ಕೃಷಿ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕೆಎಂಎಫ್ 1 ಡಿಸೆಂಬರ್‌ರಿಂದಲೇ ಸರ್ಕಾರ ನಿಗದಿ ಪಡಿಸಿದ ರೂ.2400 ದರಕ್ಕೆ ಖರೀದಿ ಪ್ರಾರಂಭಿಸುವುದಾಗಿ ಹೇಳಿತ್ತು. ಆದರೆ ಪ್ರಾರಂಭಿಕ ಹಂತದಲ್ಲಿ ಒಬ್ಬ ರೈತನಿಗೆ 20 ಕ್ವಿಂಟಾಲ್‌ವರೆಗೆ ಮಾತ್ರ ಮಿತಿ ವಿಧಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಣಗಾಲ್ ಮೂರ್ತಿ ಅವರ ನೇತೃತ್ವದಲ್ಲಿನ ತಂಡವು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, 50 ಕ್ವಿಂಟಾಲ್ ಪೂರ್ಣ ಪ್ರಮಾಣದ ಖರೀದಿ ಹಾಗೂ ಬಿಳಿಸುಳಿ ರೋಗದಿಂದ ಬಳಲುತ್ತಿರುವ 12,000 ರೈತರಿಗೆ ಪರಿಹಾರ ನೀಡುವಂತೆ ಮನವಿ ಮಾಡಿತು.
ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ಪರಿಹಾರದ ಬಗ್ಗೆ ಭರವಸೆ ನೀಡಿದ್ದು, 7 ಡಿಸೆಂಬರ್ ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಮೂಲಕ ಪ್ರತಿಯೊಬ್ಬ ರೈತನಿಂದ 50 ಕ್ವಿಂಟಾಲ್ ಜೋಳವನ್ನು ಖರೀದಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ.
ಹಾಸನ ಜಿಲ್ಲೆಯಾದ್ಯಂತ ತಕ್ಷಣ ಜೋಳ ಖರೀದಿ ಕೇಂದ್ರಗಳನ್ನು ತೆರೆಯಬೇಕು ಹಾಗು ಬಿಳಿಸುಳಿ ರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆಯನ್ನು ವೇಗಗೊಳಿಸಲು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಜು ಬಿಟ್ಟ ಗೌಡನಹಳ್ಳಿ, ಲಕ್ಷ್ಮಣ್ , ಕಾಂತರಾಜ್ , ಶಿವಣ್ಣ ಇತರರು ಹಾಜರಿದ್ದರು
Hassan
ಗೋಸಾಗಾಟ ಕಾಯಿದೆ ತಿದ್ದುಪಡಿಗೆ ವಿರೋಧ: ನಾಳೆ ರಾಜ್ಯವ್ಯಾಪಿ ಪ್ರತಿಭಟನೆ-ಹಿಂದು ಸಂಘಟನೆಗಳ ಘೋಷಣೆ
ಹಾಸನ: ಕಾಂಗ್ರೆಸ್ ಸರ್ಕಾರ ತರಲು ಮುಂದಾಗಿರುವ ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ 2020ರ ತಿದ್ದುಪಡಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿಂದು ಸಂಘಟನೆಗಳು, ನಾಳೆ ರಾಜ್ಯವ್ಯಾಪಿ ತಳಮಟ್ಟದ ಪ್ರತಿಭಟನೆ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಮಹಿಪಾಲ್ ಅವರು ತಿಳಿಸಿದರು.
ಅಕ್ರಮ ಗೋಸಾಗಾಟ ಪ್ರಕರಣಗಳಲ್ಲಿ ವಶಪಡಿಸುವ ವಾಹನಗಳನ್ನು ಬ್ಯಾಂಕ್ ಗ್ಯಾರಂಟಿ ಇಲ್ಲದೆ ಕೇವಲ ಇಂಡೆಮ್ನಿಟಿ ಬಾಂಡ್ ಮೇಲೆ ಬಿಡುಗಡೆ ಮಾಡುವಂತೆಯಾದ ಈ ತಿದ್ದುಪಡಿ ಗೋವಿನ ರಕ್ಷಣೆಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಈ ತಿದ್ದುಪಡಿ ಮಂಡನೆಯಾಗಬಹುದೆಂಬ ವರದಿ ಹಿನ್ನೆಲೆಯಲ್ಲಿ, ವಿಶ್ವ ಹಿಂದು ಪರಿಷತ್ ಹಾಗೂ ಹಿಂದು ಜಾಗರಣ ವೇದಿಕೆ ಸೇರಿ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರದ ಈ ಕ್ರಮ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಹೇಳಿದ್ದಾರೆ.
ನಾಳೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ, ತಾಲೂಕು ಕೇಂದ್ರಗಳಲ್ಲಿ ಹಾಗೂ ಗ್ರಾಮ ಮಟ್ಟದಲ್ಲೂ ಶಾಂತ್ಯುತ ಪ್ರತಿಭಟನೆಗಳನ್ನು ಹಿಂದು ಸಂಘಟನೆಗಳು ನಡೆಸಲಿದ್ದು, ತಿದ್ದುಪಡಿಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಸನ ವಿಭಾಗ ಕಾರ್ಯದರ್ಶಿ ಮಹಿಪಾಲ್, ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ಲೋಕೇಶ್, ವಿ.ಹಿಂ.ಪ ಹಾಸನ ಜಿಲ್ಲಾಧ್ಯಕ್ಷ ಅನುಪ್, ಜಿಲ್ಲಾ ಸಹಕಾರ್ಯದರ್ಶಿ ಮಂಜು, ಬೀಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ವಿ.ಹಿಂ.ಪ ದಕ್ಷಿಣ ಪ್ರಾಂತ ಗೋರಕ್ಷಕ ವಿಕಾಸ್, ಬಜರಂಗದಳ ಜಿಲ್ಲಾ ಸಂಯೋಜಕ ಅಭಿಷೇಕ್ ಸೇರಿದಂತೆ ಘಟನೆಗೆ ಸಂಬಂಧಿಸಿದಂತೆ ತಮ್ಮ ಆಕ್ರೋಶ ವ್ಯಕ್ತಪಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಗೊಳ್ಳುವ ನಿರ್ಧಾರವನ್ನು ಘೋಷಿಸಿದರು.
Hassan
ಕರ್ನಾಟಕ ರತ್ನ ವಿಷ್ಣುವರ್ಧನ್ 75ನೇ ಅಮೃತ ಮಹೋತ್ಸವ:ಅನಿರುಧ್ ಪುಷ್ಪಾರ್ಚನೆ, ಅಭಿಮಾನಿಗಳಿಗೆ ಕೋಟಿಕೋಟಿ ನಮನ
ಹಾಸನ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಸರಸ್ವತಿ ದೇವಸ್ಥಾನ ವೃತ್ತದಲ್ಲಿರುವ ಕರ್ನಾಟಕ ರತ್ನ, ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ 75ನೇ ಅಮೃತ ಮಹೋತ್ಸವವನ್ನು ಸ್ಮರಿಸುವ ಕಾರ್ಯಕ್ರಮ ಭಾವಪೂರ್ಣವಾಗಿ ನಡೆಯಿತು.
ಅವರ ಪ್ರತಿಮೆಗೆ ನಟ ಅನಿರುದ್ದೀನ್ ಅವರು ಪುಷ್ಪಾರ್ಚನೆ ನೆರವೇರಿಸಿ, ದಿವಂಗತ ನಟನಿಗೆ ಗೌರವ ಸಲ್ಲಿಸಿದರು.
ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅನಿರುದ್ದ್, ಅಭಿಮಾನಿಗಳ ಪ್ರೀತಿ ಏನಿದೆ ಎಂಬುದು ವಿಷ್ಣುವರ್ಧನ್ ಅಪ್ಪನಿಗೆ ಸಿಗುತ್ತಿರುವ ಅಮೋಘ ಗೌರವದಿಂದಲೇ ಕಾಣಿಸುತ್ತದೆ.
ದೈಹಿಕವಾಗಿ ನಮ್ಮನ್ನೆಲ್ಲಾ ಬಿಟ್ಟು 16 ವರ್ಷ ಕಳೆದರೂ, ಜನರ ಪ್ರೀತಿ ಕ್ಷಣವೂ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಅಸಿಮ ಪ್ರೀತಿಗೆ ಕುಟುಂಬದ ಪರವಾಗಿ ನಾನು ಕೋಟಿಕೋಟಿ ನಮನ ಸಲ್ಲಿಸುತ್ತೇನೆ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಅವರು ತಮ್ಮ ಕಲಾ ಪ್ರಯಾಣದ ಕುರಿತು ಮಾತನಾಡುತ್ತಾ, ಪ್ರಸ್ತುತ “ಸೂರ್ಯವಂಶ” ಧಾರವಾಹಿಯಲ್ಲಿ ನಟಿಸುತ್ತಿದ್ದು, ಸುಮಾರು 550 ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದೇವೆ ಎಂಜu ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜೊತೆಗೆ ಬರವಣಿಗೆಯ ಮೇಲಿನ ಆಸಕ್ತಿ ಮುಂದುವರಿದಿದ್ದು, ಇತ್ತೀಚೆಗೆ “ಸಾಲುಗಳು” ಎಂಬ ಪುಸ್ತಕ ಬಿಡುಗಡೆಯಾಗಿದೆ. ಜನವರಿಯಲ್ಲಿ ಇದರ ಇಂಗ್ಲಿಷ್ ಆವೃತ್ತಿ ಸಹ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೆ ಒಂದು ಕಾದಂಬರಿಯ ಬರವಣಿಗೆ ಅಂತಿಮ ಹಂತದಲ್ಲಿದ್ದು, ಮುಂದಿನ ವರ್ಷವೇ ಅದನ್ನು ಲೋಕಾರ್ಪಣೆ ಮಾಡುವ ಯೋಜನೆ ಇದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಷ್ಣುವರ್ಧನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್, ಸಮಾಜಸೇವಕರಾದ ಗಣೇಶ್ ತಮ್ಲಾಪುರ, ವಿಜಯಕುಮಾರ್ ಸೇರಿದಂತೆ ಅನೇಕ ಅಭಿಮಾನಿಗಳು ಉಪಸ್ಥಿತರಿದ್ದರು.
-
Mysore19 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mysore22 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Mandya3 hours agoಡಿ 10 ಶ್ರೀರಂಗಪಟ್ಟಣ ಸೇರಿದಂತೆ ವಿವಿದೆಡೆ ವಿದ್ಯುತ್ ಕಡಿತ
-
Special17 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
State24 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Chikmagalur22 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
Chikmagalur22 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Mysore4 hours agoಡಾ.ಬಿ.ಆರ್. ಅಂಬೇಡ್ಕರ್ 69ನೇ ಮಹಾ ಪರಿನಿಬ್ಬಾಣ ದಿನ: ಸೇವಾ ಕಾರ್ಯದೊಂದಿಗೆ ಗೌರವ ನಮನ
