Chikmagalur
ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನುಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜೆ.ಎಸ್ ರೇಖಾ ಹುಲಿಯಪ್ಪಗೌಡ ಆಗ್ರಹಿಸಿದರು.

ಚಿಕ್ಕಮಗಳೂರು: ರಾಜಕೀಯ ಇತಿಹಾಸದಲ್ಲೇ ದುರಂತ ಘಟನೆಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನುಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜೆ.ಎಸ್ ರೇಖಾ ಹುಲಿಯಪ್ಪಗೌಡ ಆಗ್ರಹಿಸಿದರು.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಇದರ ನೈತಿಕ ಹೊಣೆ ಹೊತ್ತು ತಮ್ಮ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಬೇಕು. ಜೊತೆಗೆ ಜೆಡಿಎಸ್ ಪಕ್ಷವನ್ನು ತಕ್ಷಣವೇ ವಿಸರ್ಜಿಸಬೇಕೆಂದು ಒತ್ತಾಯಿಸಿದರು.
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಹಾಗೂ ಹೊಳೆನರಸೀಪುರ ಕ್ಷೇತ್ರದ ಶಾಸಕ ಹೆಚ್.ಡಿ ರೇವಣ್ಣ ಇವರು ಮಹಿಳೆಯರ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ದೂರಿದರು.
ಮೃಗಗಳಿಗೂ ಇವರಿಗೂ ಯಾವುದೇ ವ್ಯತ್ಯಾಸವಿಲ್ಲದಂತೆ ವರ್ತಿಸಿದ್ದಾರೆ. ಕರ್ನಾಟಕದ ರಾಜಕಾರಣಕ್ಕೆ ಬಳಿದ ಅಳಿಸಲಾಗದ ಮಸಿ. ಕರ್ನಾಟಕದವರೊಬ್ಬರು ದೇಶದ ಪ್ರಧಾನಮಂತ್ರಿಗಳಾಗಿದ್ದರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಕನ್ನಡಿಗರ ಮುಖಕ್ಕೆ ಬಳಿದ ಮಸಿಯಾಗಿದೆ ಎಂದು ಲೇವಡಿ ಮಾಡಿದರು.
ತನ್ನ ಮನೆಯಲ್ಲೇ ಇದ್ದ ಮೊಮ್ಮಗನ ಈ ಕೃತ್ಯಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ನೈತಿಕ ಹೊಣೆ ಹೊರಬೇಕು. ಹಾಗೂ ಸರ್ಕಾರ ಈ ಪ್ರಕರಣವನ್ನು ವಿಶೇಷ ತನಿಖಾತಂಡ ರಚಿಸಿ ತನಿಖೆಗೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ ಎಂದರು.
ಆರೋಪಿಯಾಗಿರುವ ರೇವಣ್ಣ ರವರನ್ನು ತಕ್ಷಣವೇ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ವಿದೇಶಕ್ಕೆ ರಾತ್ರೋ ರಾತ್ರಿ ಪಲಾಯನ ಮಾಡಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Chikmagalur
ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ ಕಲ್ಪಿಸುವರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನಸವಾರರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದ್ದು. ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Chikmagalur
ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.
Chikmagalur
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

ಚಿಕ್ಕಮಗಳೂರು : ಕೆಎಸ್‌ಆರ್‌ಟಿಸಿ ಬಸ್ – ಬೈ ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು. ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mandya23 hours ago
ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಕೊಳೆತ ಶ*ವಗಳು ಪತ್ತೆ
-
State19 hours ago
ಹಾಸನ ಏರ್ಪೋರ್ಟ್ 2026ಕ್ಕೆ ಪೂರ್ಣ: ಚಿಕ್ಕಮಗಳೂರು-ಮಡಿಕೇರಿಯಲ್ಲಿ ಹೆಲಿಪೋರ್ಟ್ ನಿರ್ಮಾಣಕ್ಕೆ ವರದಿ ಸಿದ್ಧ
-
Kodagu23 hours ago
ಗೃಹಲಕ್ಷ್ಮಿ ಯೋಜನೆ ಇ-ಕೆವೈಸಿ ಫೆಲ್ಯೂರ್: ಹತ್ತಿರದ ಸಿಡಿಪಿಓ ಕಚೇರಿ ತೆರಳಿ Status ಪರಿಶೀಲನೆ ಮಾಡಿಸಿ
-
Hassan23 hours ago
ಬೆಳೆ ವಿಮೆ ಪ್ರಚಾರದ ವಾಹನಗಳಿಗೆ ಡಿಸಿ ಸಿ. ಸತ್ಯಭಾಮ ಚಾಲನೆ
-
Hassan20 hours ago
ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ
-
Mandya24 hours ago
ಗೌರವ ಡಾಕ್ಟರೇಟ್ ಸ್ವೀಕರಿಸಲು ಪ್ರೊ.ಜಯಪ್ರಕಾಶ್ ಗೌಡ ಅವರಿಗೆ ಅಧಿಕೃತ ಆಹ್ವಾನ
-
State20 hours ago
16ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
-
State21 hours ago
ಕೇರಳದಲ್ಲಿ ಜೂ.17ರವರೆಗೂ ವ್ಯಾಪಕ ಮಳೆ: ರಾಜ್ಯದ ಮೀನುಗಾರರಿಗೆ ಐಎಂಡಿ ಎಚ್ಚರಿಕೆ