Hassan
ಬಿ.ಕಾಂ, ತರಗತಿಯ ಹೊಸ ಕೋರ್ಸು ಆರಂಭ, ಶಿಕ್ಷಣದ ಜೊತೆ ಉದ್ಯೋಗ, ಮೇ.೩೦ ರಂದು ಬೃಹತ್ ಉದ್ಯೋಗ ಮೇಳ: ಕೆ.ಜಿ. ಕವಿತ
ಹಾಸನ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ೨೦೨೪-೨೫ನೇ ಸಾಲಿನಲ್ಲಿ ಬಿ.ಕಾಂ. ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಶಿಪ್ ಎಂಬಾಡೆಂಡ್ ಡಿಗ್ರಿ ಪ್ರೊಗ್ರಾಮ್ ಎಂಬ ನೂತನ ಕೋರ್ಸ್‌ನ್ನು ಪ್ರಾರಂಭಿಸಲು ಮುಂದಾಗಿದ್ದು, ಶಿಕ್ಷಣದ ಜೊತೆಯಲ್ಲಿ ಉದ್ಯೋಗದ ಮೂಲಕ ಗಳಿಕೆ ಮಾಡಬಹುದು. ಮೇ.೩೦ ರ ಗುರುವಾರದಂದು ಕಾಲೇಜು ಆವರಣದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಕೆ.ಜಿ. ಕವಿತ ಮತ್ತು ವಾಣಿಜ್ಯ ಶಾಸ್ತ್ರದ ಮುಖ್ಯಸ್ಥರಾದ ರಾಜಶೇಖರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಈ ಹೊಸ ಕೋರ್ಸು ಈಗಾಗಲೇ ತೆಲಗಾಂಣ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಚಾಲ್ತಿಯಲ್ಲಿದ್ದು, ನಮ್ಮ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಗದಗ, ಧಾರವಾಡ, ಹಾವೇರಿ, ಮೈಸೂರು ಮತ್ತು ಹಾಸನ ೬ ಜಿಲ್ಲೆಗಳಲ್ಲಿ ಈ ಕೋರ್ಸ್‌ನ್ನು ಪ್ರಾರಂಭಿಸಲು ಅನುಮತಿ ನೀಡಿದೆ. ಅದರಲ್ಲಿ ನಮ್ಮ ಕಾಲೇಜು ಕೂಡ ಒಂದಾಗಿದೆ. ಈ ಕೋರ್ಸ್ ಮೂರು ವರ್ಷದ ಪದವಿಯಾಗಿದ್ದು, ಪ್ರಥಮ ಮತ್ತು ದ್ವಿತೀಯ ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡಿದರೆ ಮತ್ತು ಅಂತಿಮ ವರ್ಷ ಖಾಸಗಿ ಕಂಪನಿಯಲ್ಲಿ ತರಬೇತಿಯನ್ನು ಪಡೆದುಕೊಳ್ಳಲ್ಲಿದ್ದಾರೆ. ತರಬೇತಿ ಅವಧಿಯಲ್ಲಿ ರೂ.೭೦೦೦ ರಿಂದ ರೂ. ೧೦೦೦೦ ಗಳವರೆಗೆ ಸ್ಪೆಫಂಡ್‌ನ್ನು ನೀಡುತ್ತಾರೆ. ಕಾಲೇಜು ಶಿಕ್ಷಣ ಇಲಾಖೆಯು ಖಂSಅI ಖಇಖಿಂIಐ ಂSSಔಅIಂಖಿIಔಓ SಏIಐಐS ಅಔUಓಅIಐ ಔಈ IಓಆIಂ) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ. ಈ ನೂತನ ಕೋರ್ಸ್‌ಗೆ ಒಂದು ವರ್ಷದಲ್ಲಿ ೬೦ ವಿದ್ಯಾರ್ಥಿಗಳಿಗೆ ಮಾತ್ರ ಕಲಿಯಲು ಅವಕಾಶ ಸಿಗಲಿದೆ ಎಂದರು. ೨ ವರ್ಷ ಕಾಲೇಜಿನಲ್ಲೇ ವ್ಯಾಸಂಗ ಮಾಡಿದ ಬಳಿಕ ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳುವ ಕಾರ್ಖಾನೆ ಅಥವಾ ಕಂಪನಿಗಳಲ್ಲೇ ಉಳಿದು ಕೆಲಸ ಮಾಡಬೇಕು. ಆ ಅವಧಿಯಲ್ಲಿ ಮಾಸಿಕ ೧೦ ಸಾವಿರ ಸೈಫಂಡ್ ಸಿಗಲಿದೆ ಎಂದರು. ಉದ್ಯೋಗಕ್ಕೆ ಪೂರಕವಾದ ಪಡೆಯಲು ಕೌಶಲ್ಯವನ್ನು ಕಾಲೇಜು ಜೊತೆಗೆ ಅಲ್ಲೂ ಕಲಿತು ಈ ಕೊಳ್ಳಬಹುದು ಎಂದ ಅವರು, ಈ ಸಂಬಂಧ ಸರ್ಕಾರ ರಾಜ್ಯದ ಒಟ್ಟು ೧೧ ಜಿಲ್ಲೆಗಳ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಪದವಿನ ಜೊತೆಗೆ ಸಂಪಾದನೆಯೂ ಆಗಲಿದೆ. ತಿಳುವಳಿಕೆ ಜೊತೆಗೆ ಉದ್ಯೋಗ ನಿರ್ವಹಣೆಯ ಚಾಕಚಾಕ್ಯತೆ ಸಹ ಪಡೆಯಬಹುದು. ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ಪದವಿ ಕೋರ್ಸುಗಳಾದ ಬಿ.ಎ., ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ., ಮತ್ತು ಬಿ.ಬಿ.ಎ. ಕೋರ್ಸುಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ ಎಂದು ಹೇಳಿದರು.
ಮೇ ೩೦ರ ಗುರುವಾರದಂದು ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಕೆ. ಹರ್ಷ,. ಯೋಗೀಶ್, ಮಂಜೂಳಾ, ಮಧುಸೂದನ್ ಇತರರು ಉಪಸ್ಥಿತರಿದ್ರು.
Hassan
ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ವ್ಯಕ್ತಿ ದುರ್ಮರಣ
ಹಾಸನ : ವರಮಹಾಲಕ್ಷ್ಮೀ ಹಬ್ಬಕ್ಕೆ ತಾವರೆ ಹೂ ಕೀಳಲು ಹೋಗಿ ವ್ಯಕ್ತಿ ದುರ್ಮರಣ
ದೇವರಾಜ್ (38) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ವ್ಯಕ್ತಿ
ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ,
ಬೆಳಮೆ ಗ್ರಾಮದಲ್ಲಿ ಘಟನೆ

ರಾಮೇಶ್ವರ ಗ್ರಾಮದಲ್ಲಿ ವಾಸವಿದ್ದ ಬಿಕ್ಕೋಡು ಗ್ರಾಮದ ದೇವರಾಜ್
ನಾಳೆ ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ಕೆರೆಗೆ ತಾವರೆ ಹೂವು ಕೀಳಲು ಇಳಿದಿದ್ದ ದೇವರಾಜ್
ತಾವರೆ ಹೂವು ಕೀಳುವಾಗ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದೇವರಾಜ್
ಮೂರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಶವ ಮೇಲೆತ್ತಿದ ಅಗ್ನಿಶಾಮಕದಳದ ಸಿಬ್ಬಂದಿ
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ
ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Hassan
ಮೈಸೂರಿನಿಂದ ತಿರುಪತಿಗೆ ಹೆಚ್ಚುವರಿ ರೈಲು ಸೇವೆ ಒದಗಿಸಲು ಯದುವೀರ್ ಮನವಿ
ಮೈಸೂರು, ಆ. 7: ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಕ್ಷೇತ್ರವಾದ ತಿರುಪತಿಗೆ ಸಾಂಸ್ಕೃತಿಕ ರಾಜಧಾನಿ ಮೈಸೂರು, ಮಂಡ್ಯ, ಚಾಮರಾಜನಗರದಿಂದ ಅತಿ ಹೆಚ್ಚು ಭಕ್ತರು ಪ್ರಯಾಣಿಸುತ್ತಿರುವುದರಿಂದ ಹೆಚ್ಚುವರಿ ರೈಲ್ವೆ ಸೇವೆ ಒದಗಿಸಬೇಕು ಎಂದು ಕೇಂದ್ರ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವರಾದ ಅಶ್ವಿನ್ ವೈಷ್ಣವ್ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ರೈಲ್ವೆ ಸಚಿವರನ್ನು ಭೇಟಿ ಮಾಡಿ ತಿರುಪತಿ-ಬೆಂಗಳೂರು ನಡುವಿನ ವಂದೇಭಾರತ್ ರೈಲನ್ನು ಮೈಸೂರಿನವರೆಗೆ ವಿಸ್ತರಣೆ ಮಾಡಬೇಕು ಎಂದು ಮನವಿ ಸಲ್ಲಿಸಿದ ಬಳಿಕೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಆಂಧ್ರಪ್ರದೇಶದ ತಿರುಪತಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರವಾಗಿದೆ. ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರು ತಿರುಪತಿಗೆ ನಿರಂತರವಾಗಿ ಭೇಟಿ ನೀಡುತ್ತಿರುತ್ತಾರೆ. ಭಕ್ತರ ದೀರ್ಘಕಾಲದ ಬೇಡಿಕೆಯಂತೆ ತಿರುಪತಿ-ಬೆಂಗಳೂರು ವಂದೇ ಭಾರತ್ ರೈಲು ಸಂಚಾರವನ್ನು ಮೈಸೂರಿನವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ, ಅಸ್ತಿತ್ವದಲ್ಲಿರುವ ರೈಲು ಸೇವೆಗಳು ವಿರಳವಾಗಿವೆ. ಕೆಲವು ದೀರ್ಘ ಪ್ರಯಾಣದ ಅವಧಿಯದ್ದಾಗಿದೆ. ಇದರಿಂದ ಹಿರಿಯ ನಾಗರಿಕರು, ಭಕ್ತರು ಮತ್ತು ಪ್ರವಾಸಿಗರಿಗೆ ಅನಾನುಕೂಲತೆಯನ್ನುಂಟು ಮಾಡುತ್ತಿದೆ ಎಂದು ಸಚಿವರಿಗೆ ವಿವರಿಸಲಾಯಿತು ಎಂದು ಹೇಳಿದ್ದಾರೆ.
ಮೈಸೂರು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ಲಭ್ಯತೆ ಮತ್ತು ನಿರ್ವಹಣಾ ಸೌಲಭ್ಯಗಳನ್ನು ಪರಿಗಣಿಸಿ, ಮೈಸೂರು – ರೇಣಿಗುಂಟ/ತಿರುಪತಿ – ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಿಸಬಹುದಾಗಿದೆ. ಈ ನಿಟ್ಟಿನಲ್ಲಿ, ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ವಿಸ್ತರಿಸಲು ಎಂದು ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಯದುವೀರ್ ತಿಳಿಸಿದ್ದಾರೆ.

ಈ ಅತಿ ವೇಗದ, ಆಧುನಿಕ ರೈಲು ಸೇವೆಯು ಸಾವಿರಾರು ಪ್ರಯಾಣಿಕರಿಗೆ ಸುರಕ್ಷಿತ, ಆರಾಮದಾಯಕ ಮತ್ತು ಉತ್ತಮ ಪ್ರಯಾಣ ಆಯ್ಕೆಯನ್ನು ಒದಗಿಸುತ್ತದೆ. ಇದರಿಂದ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಡಲಾಗಿದೆ ಎಂದು ವಿವರಿಸಿದ್ದಾರೆ.
ಮೈಸೂರು-ರೇಣಿಗುಂಟ/ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭವಾದರೆ ಕರ್ನಾಟಕದ ಮೈಸೂರು ಭಾಗದಿಂದ ಸಾವಿರಾರು ಭಕ್ತರು ತೆರಳಿ ದರ್ಶನ ಪಡೆಯಲು ಸಹಾಯವಾಗಲಿದೆ ಎಂದು ಯದುವೀರ್ ಹೇಳಿದ್ದಾರೆ.

ಮನವಿ ಪತ್ರವನ್ನು ಸ್ವೀಕರಿಸಿದ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರು ಅತಿ ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ.
ರೈಲ್ವೆ ಸಚಿವರಿಗೆ ಕೃತಜ್ಞತೆ
ಮೈಸೂರು-ಚಾಮರಾಜನಗರ ರೈಲು ಮಾರ್ಗದ ವಿದ್ಯುದೀಕರಣವನ್ನು ತ್ವರಿತಗೊಳಿಸುವಲ್ಲಿ ರೈಲ್ವೆ ಸಚಿವರು ನೀಡಿದ ಬೆಂಬಲಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ, ಇದು ಈಗ ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ದಾರಿ ಮಾಡಿಕೊಡುವ ನಿರ್ಣಾಯಕ ಹೆಜ್ಜೆಯಾಗಿದೆ. ಅವರ ಸಕಾಲಿಕ ನಡೆಯು ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಯದುವೀರ್ ತಿಳಿಸಿದ್ದಾರೆ.
Hassan
ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶೀಘ್ರ ಕಾರ್ಯಾರಂಭಕ್ಕೆ ಆಗ್ರಹಿಸಿ
ಹಾಸನ: ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಶೀಘ್ರ ಕಾರ್ಯಾರಂಭ ಮತ್ತು ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಸಬಲೀಕರಣಕ್ಕೆ ಒತ್ತಾಯಿಸಿ ಮಹಿಳಾ ಪರ ಸಂಘಟನೆಗಳು ಮತ್ತು ಕಾರ್ಯಕರ್ತೆಯರ ನಿಯೋಗದಿಂದ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಲ್ಲಿ ಗುರುವಾರ ಜಿಲ್ಲಾಧಿಕಾರಿ ಲತಾ ಕುಮಾರಿ ಅವರಿಗೆ ಮನವಿಸಲ್ಲಿಸಲಾಯಿತು.
ಇದೆ ವೇಳೆ ಸಾಹಿತಿಗಳು ಮತ್ತು ಸಾಮಾಜಿಕ ಹೋರಾಟಗಾರ್ತಿ ರೂಪ ಹಾಸನ್ ಮಾಧ್ಯಮದೊಂದಿಗೆ ಮಾತನಾಡಿ, ಸಾರ್ವಜನಿಕ ಹಾಸನ ನಗರದಲ್ಲಿ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಕೂಡಲೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳಿಗೆ (ಐ.ಪಿ.ಎಚ್.ಎಸ್) ಅನುಗುಣವಾಗಿ ಸೌಲಭ್ಯಗಳನ್ನು ನೀಡಿ ಉನ್ನತೀಕರಿಸಿ ಸಬಲೀಕರಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದ ನೇತೃತ್ವದಲ್ಲಿ ’ಜನಾರೋಗ್ಯಕ್ಕಾಗಿ ಜನಾಂದೋಲನ’ ಆರಂಭಿಸಲಾಗಿದೆ. ಇದರ ಭಾಗವಾಗಿ ಆಗಸ್ಟ್ ೧೫ರ ಸ್ವಾತಂತ್ರ್ಯ ದಿನದಂದು ಹಾಸನದ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಮುಂದೆ ’ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ’ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಮೊದಲಿಗೆ ಜಿಲ್ಲೆಯ ವಿವಿದ ಜನಪರ ಸಂಘಟನೆಗಳು, ಸಂಘಸಂಸ್ಥೆಗಳು ಮತ್ತು ನಾಗರಿಕರಿಂದ ನಿರಂತರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು. ಅದರ ಭಾಗವಾಗಿ ಇಂದು ಮಹಿಳೆ ಮತ್ತು ಮಹಿಳಾ ಪರ ಸಂಘಟನೆಗಳ ವತಿಯಿಂದ ಈ ಹಕ್ಕೊತ್ತಾಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಗಸ್ಟ್ ೧೪ರಂದು ಜಿಲ್ಲೆಯ ಜನರ ಪರವಾಗಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ತಮಗೆ ಸಲ್ಲಿಸಲಾಗುವುದು. ಆಗಸ್ಟ್ ೧೫ರಂದು ನಡೆಯುವ ’ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ಧರಣಿ ಸತ್ಯಾಗ್ರಹ’ದ ಸ್ಥಳಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು, ಮಾನ್ಯ ಸಂಸದರು, ಮಾನ್ಯ ಶಾಸಕರು ಹಾಗೂ ಮಾನ್ಯ ಜಿಲ್ಲಾಧಿಕಾರಿಯವರಾದ ತಾವು ಸ್ಥಳಕ್ಕೆ ಆಗಮಿಸಿ ಜನಾರೋಗ್ಯದ ಹಕ್ಕೊತ್ತಾಯಗಳನ್ನು ಈಡೇರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಈ ಮೂಲಕ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿ ಅವುಗಳಿಗೆ ಐ.ಪಿ.ಎಚ್.ಎಸ್. ಮಾನದಂಡಗಳ ಅನುಸಾರ ಪ್ರಾಥಮಿಕ ಸೌಲಭ್ಯಗಳಾದ ಸುಸಜ್ಜಿತ ವೈದ್ಯಕೀಯ ಪ್ರಯೋಗಾಲಯ, ಇಸಿಜಿ, ಎಕೋ, ಎಕ್ಸ್ರೇ, ತುರ್ತು ಚಿಕಿತ್ಸಾ ಘಟಕ ಮತ್ತು ಅಂಬುಲೆನ್ಸ್ ಹಾಗೂ ತಜ್ಞ ವೈದ್ಯರು ಮತ್ತು ಸಿಬ್ಬಂದಿಗಳನ್ನು ಒದಗಿಸಬೇಕು. ತಾಲ್ಲೂಕು ಆಸ್ಪತ್ರೆಗಳನ್ನು ಐ.ಪಿ.ಎಚ್.ಎಸ್. ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಿ ಹೃದಯ ಮತ್ತು ಮೂತ್ರಪಿಂಡ ಸಂಬಂಧಿ ಹಾಗೂ ಇನ್ನಿತರೆ ಮಾರಣಾಂತಿಕ ಖಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದರು. ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಹಾಗೂ ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆವಹಿಸಬೇಕು ಎಂದರು. ಕೃಷಿಯಲ್ಲಿ ಅಪಾಯಕಾರಿ ಕ್ರಿಮಿ/ಕೀಟನಾಶಕಗಳು ಮತ್ತು ರಾಸಾಯನಿಕಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲೆ ನಿಯಂತ್ರಣ ಹೇರಬೇಕು ಎಂಧು ಹೇಳಿದರು.

ಈ ಬೇಡಿಕೆಗಳು ಈಡೇರುವವರೆಗೂ, ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ- ಹಾಸನ ಜಿಲ್ಲೆಯ ಎಲ್ಲಾ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ನಡೆಸಿ ಆಗಸ್ಟ್ ೧೫ ರ ಸ್ವಾತಂತ್ರ್ಯ ದಿನದಂದು ನಡೆಯುತ್ತಿರುವ ’ಜನಾರೋಗ್ಯದ ಸ್ವಾತಂತ್ರ್ಯಕ್ಕಾಗಿ ಸಾಮೂಹಿಕ ದರಣಿ ಸತ್ಯಾಗ್ರಹದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗಿಳಿಸಬೇಕೆಂದು ಈ ಮೂಲಕ ಮನವಿ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದರು.
ಇದೆ ವೇಳೆ ಹಿರಿಯ ಮಹಿಳಾಮುಖಂಡರಾದ ಜಯಲಕ್ಷ್ಮಿ ರಾಜಣ್ಣಗೌಡ., ಬಿ.ಜಿ.ವಿ.ಎಸ್ ನ ಸಮತಾ ಸಂಚಾಲಕಿ, ಮಮತಾ ಶಿವು, ಜನನಿ ಫೌಂಡೇಶನ್ ಅಧ್ಯಕ್ಷೆ ಭಾನುಮತಿ., ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಎಂ.ಜಿ., ಜೀವನಧಾರ ಸೇವಾ ಕೇಂದ್ರದ ಹೇಮಾ, ಮುನೀರಾ ಬೇಗಮ್., ಮಹಿಳಾ ಮುಖಂಡರಾದ ಶೋಭಾ., ಹರಿಣಿ ಕುಮಾರಿ, ಲೇಖಕಿ ಸಿ. ಸುವರ್ಣ, ಪ್ರೇರಣಾ ಖಾನಾವಳಿಯ ಧರಣಿ, ಬಿಜಿವಿಎಸ್ ನ ಸ್ವಾಮಿ ಚಿನ್ನೇನಹಳ್ಳಿ ಸೇರಿದಂತೆ ಪೌಲೋಸ್, ತೇಜಸ್, ಪ್ರಜ್ವಲ್ ಇತರರು ಉಪಸ್ಥಿತರಿದ್ದರು.
-
Mandya19 hours agoಆ.10ರಂದು ಕೆ.ಆರ್.ಎಸ್ ಪಕ್ಷದಿಂದ ಮಹಾಧಿವೇಶನ
-
Hassan22 hours agoಹಾಸನ : ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ
-
Manglore20 hours agoಧರ್ಮಸ್ಥಳ ಅಹಿತಕರ ಘಟನೆ- ಒಟ್ಟು ಏಳು ಪ್ರಕರಣ ದಾಖಲು
-
Kodagu14 hours agoಸಮುದಾಯ ಭವನದ ಸ್ಥಳ ವೀಕ್ಷಣೆ ಹಾಗೂ ಪರಿಶೀಲನೆ ಮಾಡಿದ ಪೊನ್ನಣ್ಣ
-
Hassan19 hours agoನಂಜೆ ದೇವರ ಕಾವಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ಶಾಸಕ ಸ್ವರೂಪ್ ಪ್ರಕಾಶ್
-
Hassan20 hours agoಪಟೇಲ್ ಶಿವಪ್ಪನವರನ್ನು ಹಾಸನದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಬೇಕು: ಜಿಲ್ಲಾ ಕುರುಬರ ಸಂಘದ ನಿರ್ದೇಶಕ ರಾಜಣ್ಣ
-
Kodagu16 hours agoಕೊಡವ ಸಂಸ್ಕೃತಿ, ಕಲೆಗಳ ಶ್ರೀಮಂತಿಕೆಗೆ ಎಲ್ಲೆಡೆ ಗೌರವ: ಎ.ಎಸ್.ಪೊನ್ನಣ್ಣ
-
State18 hours agoಧರ್ಮಸ್ಥಳದಲ್ಲಿ ಮಾಧ್ಯಮದವರ ಮೇಲೆ ಹಲ್ಲೆ: ಕೆಯುಡಬ್ಲ್ಯೂಜೆ ಖಂಡನೆ
