Mandya
ಈ ಸೋಲು ನನ್ನ ಸೋಲಲ್ಕ : ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ – ಮರಿತಿಬ್ಬೇಗೌಡ
ಮಂಡ್ಯ: ಈ ಸೋಲು ನನ್ನ ಸೋಲಲ್ಲ ಬದಲಿಗೆ ಶಿಕ್ಷಕರ ಸೋಲಾಗಿದೆ ಈ ಬಗ್ಗೆ ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕಾಲ ಬಂದಿದೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ತಿಳಿಸಿದರು .
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ನನ್ನ ಕ್ಷೇತ್ರದ ನಾಲ್ಕು ಮಂದಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಮೇಲೆ ಅಪಾರ ವಿಶ್ವಾಸವಿಟ್ಟು ಟಿಕೆಟ್ ನೀಡಿದ್ದರು. ಆದರೆ ಗೆಲುವು ಸಾಧಿಸಲು ಆಗಲಿಲ್ಲ ಎಂದು ವಿಷಾದಿಸಿದರು.
ಈ ಚುನಾವಣೆ ನನಗೆ ಮಹತ್ವದ ಚುನಾವಣೆಯಾಗಿತ್ತು .ನಾಲ್ಕು ಬಾರಿ ನನ್ನನ್ನು ಶಿಕ್ಷಕರು ಆಯ್ಕೆ ಮಾಡಿ ವಿಧಾನ ಪರಿಷತ್ತಿಗೆ ಕಳುಹಿಸಿದ್ದರು. ಎಲ್ಲಾ ಸಂದರ್ಭದಲ್ಲೂ ನಾನು ವಿರೋಧ ಪಕ್ಷದಲ್ಲಿದ್ದೆ. ಆದರೆ ಪ್ರಸ್ತುತ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು ಈ ಪಕ್ಷದಿಂದ ಸ್ಪರ್ಧೆ ಮಾಡಿ ತಮ್ಮನ್ನು ಬೆಂಬಲಿಸುವಂತೆ ಶಿಕ್ಷಕರಲ್ಲಿ ಮನವಿ ಮಾಡಿದ್ದೆ ಎಂದರು.

ದೀರ್ಘಕಾಲದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಅವಕಾಶ ಈ ಬಾರಿ ಸಿಕ್ಕಿತು .ಆದರೆ ಬಹುತೇಕ ಶಿಕ್ಷಕರು ಸೋಲು ಉಂಟು ಮಾಡಿದ್ದಾರೆ .ಆದರೂ ಸಾಕಷ್ಟು ಮಂದಿ ಮತ ಹಾಕಿದ್ದು ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಸೋಲು ಗೆಲುವು ಪ್ರಜಾಪ್ರಭುತ್ವದಲ್ಲಿ ಸಹಜ. ಆದರೆ ಆಡಳಿತ ಪಕ್ಷದಲ್ಲಿ ಇರುವಾಗ ಸೋಲಾಗಿದ್ದು, ಇದು ನನ್ನ ಸೋಲಲ್ಲ .ಬದಲಿಗೆ ಶಿಕ್ಷಕರ ಸೋಲಾಗಿದ್ದು ಶಿಕ್ಷಕರು ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ ಎಂದರು.
ನಾನು ಶಿಕ್ಷಕರ ಪರ ಕೆಲಸ ಮಾಡಿದ್ದೇನೆ. ಶಿಕ್ಷಕರಿಗೆ ಅವಮಾನ ಮಾಡುವ ಕೆಲಸ ಮಾಡಿಲ್ಲ. ಮುಖ್ಯಮಂತ್ರಿಗಳು ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದರು. ಶಾಸಕರು ಎಲ್ಲಾ ಕಡೆಗಳಲ್ಲಿಯೂ ಪ್ರಚಾರ ಮಾಡಿದ್ದಾರೆ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ನಾನು ಎಲ್ಲ ಸಮುದಾಯ ಮತ್ತು ವೃಂದದ ಹಿತ ಕಾಯುವ ಕೆಲಸ ಮಾಡಿದ್ದೇನೆ. ಶಿಕ್ಷಕರನ್ನು ನಿರ್ಲಕ್ಷಿಸಿಲ್ಲ. ಶಿಕ್ಷಕರನ್ನು ಗೌರವಿಸಿದ್ದೇನೆ. ಇವರಿಗೆ ನೀಡಿರುವ ಗೌರವವನ್ನು ಯಾರಿಗೂ ನೀಡಿಲ್ಲ ಎಂದರು.
ಗೋಷ್ಟಿಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್, ಶಂಕರೇಗೌಡ, ಗುರುಮೂರ್ತಿ, ಶಿವರುದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Mandya
ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ
ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು
ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.
ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
Mandya
ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.
Mandya
ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಮದ್ದೂರು: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.

ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.
ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.
ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.
ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.
ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.
-
Mandya13 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya14 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan14 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Chamarajanagar21 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore19 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya12 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special8 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mandya11 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
