Mandya
ವಿವಿಧ ಬೇಡಿಕೆಗಳ ಈಡೇರಿಕೆಗೆ ದಸಂಸ ಒತ್ತಾಯ
ಮಂಡ್ಯ: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಚಳುವಳಿಯ ಸಂಸ್ಥಾಪಕ ಸ್ವಾಭಿಮಾನಿ ಮತ್ತು ಕ್ರಾಂತಿಕಾರಿ ನಾಯಕ ಪ್ರೊಫೆಸರ್ ಬಿ ಕೃಷ್ಣಪ್ಪರವರ 86ನೇ ಜನ್ಮದಿನೋತ್ಸವ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ ದುರಾಡಳಿತ ವ್ಯವಸ್ಥೆಯನ್ನು ಖಂಡಿಸಿ ಜೂನ್ 18ರಂದು ಸಾಮಾಜಿಕ ನ್ಯಾಯಕ್ಕಾಗಿ ಸಂಘರ್ಷ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ಕೆ.ಎಂ.ಅನಿಲ್ ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 18ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಸಂಜಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಮೆರವಣಿಗೆ ನಡೆಸಿ ನಂತರ ಬಹಿರಂಗ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
![]()
ಅಂದು ನಡೆಯುವ ಸಭೆಯಲ್ಲಿ ಕಾಂತರಾಜ್ ಆಯೋಗದ ವರದಿ ಬಿಡುಗಡೆ, ಜಾತಿ ಜನ ಸಂಖ್ಯಾ ವಾರು ಮೀಸಲಾತಿ ಜಾರಿ, ದೌರ್ಜನ್ಯ, ಅತ್ಯಾಚಾರ ತಡೆಯಲು ಕಠಿಣ ಕ್ರಮ, ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ಮಕ್ಕಳಿಗೆ ಸರ್ಕಾರದಿಂದ ಶುಲ್ಕ ಭರಿಸಲು ಆದೇಶ, ದಲಿತ ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ, ಹೊರಗುತ್ತಿಗೆ ಪದ್ಧತಿ ರದ್ದು ಮಾಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು

ಅದೇ ರೀತಿ ಎಸ್ಸಿ – ಎಸ್ಟಿ ಉಪಯೋಜನಾ ಕಾಯ್ದೆ ರೂಪಿಸಿ ಜನಸಂಖ್ಯೆಗೆ ಅನುಗುಣವಾಗಿ ಶೇಕಡ 30ರಷ್ಟು ಅನುದಾನ ಜಾರಿ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವುದು, ಮೀಸಲಾತಿ ಮಿತಿಯನ್ನು ವಾಪಸ್ ಪಡೆಯುವುದು, ಕೇಂದ್ರ ಸರ್ಕಾರದ ಸೇವೆಯಲ್ಲಿ ಪರಿಶಿಷ್ಟ ಜಾತಿ ಪಂಗಡದ ಎರಡು ಲಕ್ಷ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆ ತಿದ್ದುಪಡಿ ಸೇರಿದಂತೆ ಹಲವಾರು ಹಕ್ಕೊತ್ತಾಯಗಳನ್ನು ಕೇಂದ್ರ ಸರ್ಕಾರಕ್ಕೆ ಮಂಡಿಸಲಾಗುವುದು ಎಂದರು.

ಅಂದು ನಡೆಯುವ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟ ಗಿರಿಯಯ್ಯ ಉದ್ಘಾಟಿಸಲಿದ್ದು, ವಿಚಾರವಾದಿ ಡಾ.ತುಕಾರಾಂ ಅವರು ಪ್ರೊಫೆಸರ್ ಬಿ ಕೃಷ್ಣಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ
ಮುಖ್ಯ ಅತಿಥಿಗಳಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜನಾರ್ಧನ ಬಾಬು, ರಂಗನಾಥ್, ಮುನಿರಾಜ್, ನಾಗೇಶ್, ಭಾಗ್ಯಮ್ಮ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸುರೇಶ್, ರಾಜು, ಆನಂದ್, ರಂಗಸ್ವಾಮಿ, ಮರಂಕಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.
Mandya
ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ
ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು
ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.
ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
Mandya
ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.
Mandya
ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಮದ್ದೂರು: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.

ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.
ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.
ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.
ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.
ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.
-
Mandya6 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya7 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan8 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Chamarajanagar14 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore12 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya5 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special1 hour agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mandya4 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
