Hassan
ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಹಾನ್ ದ್ರೋಹವನ್ನು ಖಂಡಿಸಿ ಜು.26 ರಂದು ಧರಣಿ : ಗಂಗಾಧರ್ ಹೇಳಿಕೆ
ಹಾಸನ: ಹಾಸನ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗಕ್ಕೆ ಲಕ್ಷಾಂತರ ಕೋಟಿ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಮೀಸಲು ಹಣವನ್ನು ಅ ಜನಾಂಗದ ಪ್ರಗತಿಗೆ ಬಳಸದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಹಾನ್ ದ್ರೋಹವನ್ನು ಖಂಡಿಸಿ ಜುಲೈ ೨೬ ರಂದು ಬಹುಜನ ಸಮಾಜ ಪಾರ್ಟಿಯಿಂದ ಹಾಸನ ಜಿಲ್ಲಾ ಕೇಂದ್ರದಲ್ಲಿ ಧರಣಿ ಮಾಡುವುದಾಗಿ ಬಿ.ಎಸ್.ಪಿ. ರಾಜ್ಯ ಉಪಾಧ್ಯಕ್ಷ ಗಂಗಾಧರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆಂದು ಜಾರಿಗೆ ತಂದ ಎಸ್ ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ ಅನ್ವಯ ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನ ೨ ವರ್ಷಗಳಲ್ಲಿ ರೂ. ೨೫ ಸಾವಿರದ ೩೯೯ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ನೇರವಾಗಿ ಎಸ್ ಸಿ /ಎಸ್‌ಟಿಗಳ ಕುತ್ತಿಗೆ ಕುಯ್ಯುವ ಕೆಲಸ ಮಾಡಿದೆ. ೨೦೧೪ ರಿಂದ ಇದುವರೆಗೆ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನ ಈ ಮೂರು ಸರ್ಕಾರಗಳು ಒಟ್ಟು ಸುಮಾರು ೭೦ ಸಾವಿರ ಕೋಟಿ ರೂಪಾಯಿಗಳ ದುರ್ಬಳಕೆ ಮಾಡಿಕೊಂಡು ಮಹಾನ್ ದ್ರೋಹ ಬಗೆದಿವೆ ಎಂದು ದೂರಿದರು. ಮೀಸಲು ಹಣವನ್ನು ದುರ್ಬಳಕೆ ಮಾಡಲು ನಾಂದಿ ಹಾಡಿದ್ದು, ಇದೇ ಕಾಂಗ್ರೆಸ್ ಸರ್ಕಾರ. ಮುಂದೆ ಬಂದ ಬಿಜೆಪಿ ಮತ್ತು
ಜೆಡಿಎಸ್ ಸರ್ಕಾರಗಳೂ ಕೂಡ ಇದೇ ದಾರಿಯನ್ನು ಹಿಡಿದು ಎಸ್ ಸಿ /ಎಸ್‌ಟಿ ಮೀಸಲು ಹಣವನ್ನು ದುರ್ಬಳಕೆ ಮಾಡಿಕೊಳ್ಳಲು ಹಿಂಜರಿಯಲಿಲ್ಲ. ಎಸ್.ಸಿ.ಎಸ್.ಪಿ. / ಟಿ.ಎಸ್.ಪಿ. ಕಾನೂನು ಜಾರಿಯಾದಾಗಿನಿಂದ ಇದೂವರೆಗೆ ಹತ್ತು ವರ್ಷಗಳಲ್ಲಿ ೨ ಲಕ್ಷದ ೫೬ ಸಾವಿರ ೧೨ ಕೋಟಿಗಳನ್ನು ಈ ಯೋಜನೆಗೆ ಮೀಸಲಿರಿಸಲಾಗಿದೆ. ಈ ಹಣದಿಂದ ಕರ್ನಾಟಕದ ಎಸ್‌ಸಿ/ಎಸ್‌ಟಿ ಜನಾಂಗದ ಅಭಿವೃದ್ಧಿಗೆ ಮಾಡಬಹುದಾಗಿದ್ದ ಯೋಜನೆಗಳು ಎಂದರೇ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಎಂ.ಬಿ.ಬಿ.ಎಸ್. ಪಿಹೆಚ್.ಡಿ ವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು. ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ, ಬಿ.ಇ, ಲಕ್ಷಾಂತರ ಎಸ್‌ಸಿ/ಎಸ್‌ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು.
ಮನೆ ಇಲ್ಲದ ಪ್ರತಿಯೊಂದು ಎಸ್‌ಸಿ/ಎಸ್‌ಟಿ ಕುಟುಂಬಗಳಿಗೂ ಸುಸಜ್ಜಿತ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು. ಭೂರಹಿತ ಈ ಜನಾಂಗದ ಕೃಷಿ ಕಾರ್ಮಿಕರಿಗೆ ತಲಾ ೫ ಎಕರೆ ಕೃಷಿ ಜಮೀನು ಖರೀದಿಸಿ ಕೊಡಬಹುದಿತ್ತು. ಎಲ್ಲಾ ರೀತಿಯ ರೋಗಿಗಳಿಗೂ ಉಚಿತವಾಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆ ಕೊಡಿಸಿ ಉಳಿಸಬಹುದಿತ್ತು. ಆದರೆ ಈ ಮೂರೂ ಪಕ್ಷದ ಸರ್ಕಾರಗಳು ಈ ಯೋಜನೆಯ ಶೇ. ೧೦% ರಷ್ಟನ್ನು ಕೂಡ ಎಸ್‌ಸಿ/ಎಸ್‌ಟಿಗಳಿಗೆ ನೇರವಾಗಿ ತಲುಪಿಸದೆ ಮಹಾ ದ್ರೋಹ ಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆದರೆ ಎನ್ ಸಿ /ಎಸ್‌ಟಿ ವಿದ್ಯಾರ್ಥಿಗಳು ಕೇವಲ ಟಾಪ್ ೧೦೦ ಯೂನಿವರ್ಸಿಟಿಗಳಲ್ಲಿ ಸೀಟು ಪಡೆದರೆ ಮಾತ್ರ ಸ್ಕಾಲರ್ಶಿಪ್ ಎಂಬ ಕೊಕ್ಕೆ ಹಾಕಿ ಅನ್ಯಾಯವನ್ನು ಮಾಡಿದೆ. ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳ, ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ಪ್ರಾರಂಭದಲ್ಲೇ ಪೂರ್ಣ ಶುಲ್ಕ ಪಾವತಿಸುವಂತೆ ಮಾಡಲಾಗಿದೆ. ಎರಡು ವರ್ಷಗಳಿಂದ ಸಮಯಕ್ಕೆ ಸರಿಯಾಗಿ ಎಸ್ ಸಿ/ಎಸ್‌ಟಿ ಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಚುನಾವಣೆಯಲ್ಲಿ ಭರವಸೆ ನೀಡಿದ್ದಂತೆ ಲಕ್ಷಾಂತರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ಖಾಸಗಿ ವಲಯದಲ್ಲಿ ಮೀಸಲಾತಿಗೆ ಕಾಯ್ದೆ ತಂದಿರುವುದಿಲ್ಲ ಎಂದ ಅವರು, ಸಮಾಜಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಎಸ್ ಸಿ ಮತ್ತು ಎಸ್ ಟಿ ಮೀಸಲು ಕ್ಷೇತ್ರಗಳಿಂದ ಗೆದ್ದಿರುವ ಮೂರೂ ಪಕ್ಷಗಳ ಒಬ್ಬ ಶಾಸಕನೂ, ಮಂತ್ರಿ, ಸಂಸದರಾಗಳಲ್ಲಿ ಬಾಯಿ
ಬಿಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ಈಘೋರ ಅನ್ಯಾಯವನ್ನು ಪ್ರತಿಭಟಿಸಿ ಸರಿಪಡಿಸದಿದ್ದರೆ ಮುಂದಿನ ಪೀಳಿಗೆಗೆ ಏನೂ ಇಲ್ಲದಂತಾಗಿ ಅವರು ನಮ್ಮನ್ನು ಖಂಡಿತ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದರು. ಕಾಂಗ್ರೆಸ್ ಸರ್ಕಾರವು ಇಂದು ಎಸ್ ಸಿ ಎಸ್ ಟಿ ಗಳಿಗೆ ಅನ್ಯಾಯ ಮಾಡಿದಾಗ ಸುಮ್ಮನಿದ್ದರೆ ನಾಳೆ ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಅನ್ಯಾಯ ಮಾಡಲು ಮುಂದಾಗುತ್ತದೆ. ಬಿಜೆಪಿ, ಜೆಡಿಎಸ್ ಇದೇ ಚಾಳಿಯನ್ನು ಮುಂದುವರೆಸುತ್ತವೆ. ಏಳಿ ಎದ್ದೇಳಿ ಜಾಗೃತರಾಗಿ ಬಂಧುಗಳೇ, ಈ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಂತಹ ಮನುವಾದಿ ಪಕ್ಷಗಳಿಂದ ಖಂಡಿತಾ ನಮ್ಮ ಉದ್ಧಾರ ಸಾಧ್ಯವಿಲ್ಲ. ಬಾಬಾಸಾಹೇಬರು ಹೇಳಿದಂತೆ “ದಗಾಕೋರರ ಮನಬದಲಿಸಿ ನಮ್ಮ ನಿಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ನಿರಂತರ ಹೋರಾಟದಿಂದ ಮಾತ್ರ ಇದು ಸಾಧ್ಯ
ಎಂಬುದನ್ನು ಮರೆಯುವುದು ಬೇಡ”. ಜ್ಯಾತ್ಯಾತೀತ ಮನುವಾದಿ ಕಾಂಗ್ರೆಸ್ ಮತ್ತು ಜಾತಿವಾದಿ ಮನುವಾದಿ ಬಿಜೆಪಿ ಮತ್ತು ಜೆಡಿಎಸ್ ಒಂದೇ ದೇಹದ ಎರಡು ಕೈಗಳಿದ್ದಂತೆ. ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಇವರಿಂದ ಬಹುಜನರ ಉದ್ಧಾರ ಸಾಧ್ಯವಿಲ್ಲ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಬಹುಜನ ಸಮಾಜ ಪಾರ್ಟಿಯ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ. ಶಿವಮ್ಮ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್, ಜಿಲ್ಲಾ ಸಂಯೋಜಕ ಲಕ್ಷ್ಮಣ್ ಕೀರ್ತಿ, ಹೆಚ್.ಬಿ. ಮಲ್ಲಯ್ಯ ಇತರರು ಉಪಸ್ಥಿತರಿದ್ದರು.
Hassan
22 ಸಾವಿರ ಕ್ಯು.ಹೊರಕ್ಕೆ ಜೀವನದಿ ಹೇಮಾವತಿ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಸಂಪೂರ್ಣ ಒಡಲು ತುಂಬಿಕೊಂಡಿದೆ
ಎರಡು ವರ್ಷಗಳ ಕಾವೇರಿಕೊಳ್ಳದ ಪ್ರಮುಖ ಜಲಾಶಯ ಭರ್ತಿಯಾಗಿದೆ. ಜಲಾಶಯದ ಒಟ್ಟು ನೀರಿನ ಸಂಗ್ರಹ ಸಾಮರ್ಥ್ಯ ೩೭.೧೦೩ ಟಿಎಂಸಿ ಆಗಿದ್ದು, ಹಾಲಿ ೩೬.೧೫೬ ಟಿಎಂಸಿ ನೀರಿದೆ. ಜಲಾಶಯದ ಗರಿಷ್ಠ ಮಟ್ಟ ೨೯೨೨.೦೦ ಅಡಿಗಳಾಗಿದ್ದು, ಇಂದು ೨೯೨೧.೦೨ ಅಡಿ ನೀರು ಇದೆ. ೨೩೩೬೩ ಕ್ಯುಸೆಕ್ ಒಳಹರಿವಿದ್ದು, ೨೨,೫೩೨ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಹಾಗೆಯೇ ಜಲಾಶಯದ ಎಲ್ಲಾ ಕಾಲುವೆಗಳಿಗೂ ನೀರು ಹರಿಸಲಾಗುತ್ತಿದೆ.
ತುಮಕೂರು ಹಾಗು ಮಂಡ್ಯ ಜಿಲ್ಲೆಗೆ ನೀರು ಹರಿಸೋ ನಾಲೆಗೆ ೨೦೦೦ ಕ್ಯುಸೆಕ್ ಹಾಗೂ ಇತರೆ ನಾಲೆಗಳಿಗೆ ೨೯೫ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಅಣೆಕಟ್ಟೆ ತುಂಬಿರುವುದರಿಂದ ೨೨ ಸಾವಿರ ಕ್ಯುಸೆಕ್ ನೀರನ್ನು ಹೊಡ ಬಿಡಲಾಗುತ್ತಿದೆ. ಹೇಮಾವತಿ ಜಲಾಶಯದ ದೃಶ್ಯವೈಭವ, ಧುಮ್ಮಿಕ್ಕುವ ಜಲಧಾರೆ ಕಣ್ತುಂಬಿಕೊಳ್ಳಲು ನಗರ ಹಾಗೂ ಜಿಲ್ಲೆಯ ಜನರು ತಂಡೋಪ ತಂಡವಾಗಿ
ಜಲಾಶಯದತ್ತ ದಾಂಗುಡಿ ಇಡುತ್ತಿದ್ದಾರೆ. ನೀರಿನ ಸೌಂದರ್ಯ ಕಣ್ತುಂಬಿಕೊಂಡು ಸಂಭ್ರಮ ಪಡುತ್ತಿದ್ದಾರೆ. ಕೆಲವರು ನೀರಿನ ತುಂತುರು ಹೊಡೆತದಿಂದ ಕುಣಿದು ಕುಪ್ಪಳಿಸುತ್ತಿದ್ದಾರೆ.
Hassan
ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ
ಹಾಸನ, ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮಳೆ
ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ
ವಿದ್ಯಾರ್ಥಿಗಳು, ವಾಹನ ಸವಾರರ ಪರದಾಟ
ಬಾರಿ ಮಳೆ ಗಾಳಿಗೆ ಮಠದ ಮೇಲೆ ಬಿದ್ದ ಬೃಹತ್ ಗಾತ್ರದ ಮರ
ಮರ ಬಿದ್ದ ಪರಿಣಾಮ ಮಠದ ಗೋಡೆಯ ಕಲ್ಲುಗಳಲ್ಲಿ ಬಿರುಕು
ಹಾಸನ ನಗರದ ಸಂಗಮೇಶ್ವರ ಬಡಾವಣೆಯಲ್ಲಿರುವ ಜವೇನಹಳ್ಳಿ ಮಠ ಘಟನೆ
ಜವೇನಹಳ್ಳಿ ಮಠದೊಳಗಿರುವ ಈಶ್ವರ ದೇವಾಲಯ
ಮಠದ ಮೇಲೆ ಉರುಳಿಬಿದ್ದಿರುವ ಬೃಹತ್ ಗಾತ್ರದ ಮರ
ಮಠದಲ್ಲಿ ಯಾರು ಇಲ್ಲದಿದ್ದರಿಂದ ತಪ್ಪಿದ ಬಾರಿ ಅನಾಹುತ
ಹಳೆಯ ಮಠ ಮತ್ತು ಮಳೆಗಾದಲ್ಲಿ ಸೋರುತ್ತಿದ್ದರಿಂದ ಬೇರೆಡೆ ತಂಗುತ್ತಿದ್ದ ಮಠದ ಪೀಠಾಧ್ಯಕ್ಷ ಶ್ರೀ ಸಂಗಮೇಶ್ವರ ಸ್ವಾಮೀಜಿ
700 ವರ್ಷ ಹಳೆಯದಾದ ಜವೇನಹಳ್ಳಿ ಮಠ
ಮಠ ದುರಸ್ತಿ ಮಾಡುವಂತೆ ಭಕ್ತಾಧಿಗಳ ಆಗ್ರಹ
Hassan
ಬಾರಿ ಮಳೆಗೆ ಮಠದ ಮೇಲೆ ಉರುಳಿದ ಬೃಹತ್ ಬನ್ನಿ ಮರ
ದುರಸ್ತಿ ಮಾಡಿಸಲು ಪರಿಹಾರ ಘೋಷಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ಭಕ್ತರ ಆಗ್ರಹ
ಹಾಸನ: ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಬಾರಿ ಮಳೆಗೆ ಮಣ್ಣಿನ ತೇವಾಂಶ ಹೆಚ್ಚಾಗಿ ಹಳೆಯ ಕಾಲದ ಬನ್ನಿಮರವೊಂದು ಇತಿಹಾಸ ಪ್ರಸಿದ್ಧ ಶ್ರೀ ಜವೇನಹಳ್ಳಿ ಮಠದ ಮೇಲೆ ಬಿದ್ದು, ಬಹುತೇಕ ಹಾನಿಯಾದ ಘಟನೆ ರಾತ್ರಿ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಆಗಿರುವುದಿಲ್ಲ. ದುರಸ್ತಿ ಮಾಡಿಸಲು ಕೂಡಲೇ ಪರಿಹಾರ ಘೋಷಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ಮಠದ ಸದ್ಬಕ್ತರು ಆಗ್ರಹಿಸಿದ್ದಾರೆ.
ನಗರದ ಶ್ರೀ ಸಂಗಮೇಶ್ವರ ಬಡಾವಣೆಯಲ್ಲಿರುವ ಸುಮಾರು ೭೦೦ ವರ್ಷಗಳ ಇತಿಹಾಸ ಹೊಂದಿರುವ ಶ್ರೀ ಜವೇನಹಳ್ಳಿ ಮಠದ ಮೇಲೆ ೩೦೦ ವರ್ಷಗಳ ಹಳೆಯ ಬೃಹತ್ ಮರವೊಂದು ಧರೆಗೆ ಉರುಳಿದ ಹಿನ್ನಲೆಯಲ್ಲಿ ಕಲ್ಲಿನ ಮಠವು ಬಹುತೇಕ ಡ್ಯಾಮೇಜು ಆಗಿದ್ದು, ಗರ್ಭಗುಡಿಗೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಭೂಮಿ ತೇವಾಂಶ ಹೆಚ್ಚಾಗಿ ಈಗಾಗಲೇ ಅನೇಕ ಮರಗಳು ಕಳೆಗೆ ಬೀಳುತ್ತಿದೆ. ಮರ ಬೀಳುವ ವೇಳೆ ಏನಾದರೂ ಮಠದ ಒಳಗೆ ಭಕ್ತರು ಇದ್ದರೇ ಬಾರಿ ಅನಾಹುತವೇ ಆಗುತಿತ್ತು. ಆದರೇ ಮರ ಬಿದ್ದ ವೇಳೆ ಭಕ್ತರು ಗರ್ಭ ಗುಡಿಯ ದೂರದಲ್ಲಿ ಇದ್ದುದರಿಂದ ಯಾವುದೇ ಪಾಣ ಹಾನಿ ಸಂಭವಿಸಿರುವುದಿಲ್ಲ. ಇದೆ ವೇಳೆ ಶ್ರೀ ಜವೇನಹಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿಯವರು ಹಾಗೂ ಸದ್ಭಕ್ತರು ಮಠದ ಮೇಲೆ ಬೃಹತ್ ಮರ ಬಿದ್ದಿರುವುದನ್ನು ವೀಕ್ಷಣೆ ಮಾಡಿ ಅಸಮಧಾನವ್ಯಕ್ತಪಡಿಸಿದರು.
ಶ್ರೀ ಜವೇನಹಳ್ಳಿ ಹಿತಾರಕ್ಷಣಾ ಸಮಿತಿ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ನಗರದಲ್ಲಿರುವ ಸುಮಾರು ೭೦೦ ವರ್ಷಗಳ ಇತಿಹಾಸವಿರುವಂತಹ ಶ್ರೀ ಜವೇನಹಳ್ಳಿ ಮಠ ಇಂದು ದುಸ್ತಿತಿಯಲ್ಲಿದೆ. ಹೆಚ್ಚಿನ ಮಳೆಯಿಂದ ಮಠದ ಬಳಿ ಇದ್ದಂತಹ ಮುನ್ನೂರು ವರ್ಷಗಳ ಹಳೆಯದಾದ ಬನ್ನಿಮರವೊಂದು ಮಠದ ಮೇಲೆ ಬಿದ್ದು ಹೆಚ್ಚು ಹಾನಿಯಾಗಿದೆ. ಈ ಮಠದ ಪುನರ್ ದೇವಾಲಯವನ್ನು ನಿರ್ಮಾಣ ಮಾಡಬೇಕಾಗಿರುವುದರಿಂದ ಎಲ್ಲಾ ಭಕ್ತರ ಸಹಕಾರ ಅಗತ್ಯವಿದೆ ಎಂದರು. ಈ ಮಠ ಹಾನಿ ಆಗಿರುವ ಬಗ್ಗೆ ಜಿಲ್ಲಾಡಳಿತ ತಾಲೂಕು ಆಡಳಿತವು ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಜಡಿ ಮಳೆ ಹಿಡಿದಿರುವುದರಿಂದ ಬಹಳ ಹಳೆಯ ಬೃಹತ್ ಮರ ಮಠದ ಮೇಲೆ ಬಿದ್ದಿರುವುದರಿಂದ ಮಠದ ಹಳೆಯ ಕಾಲದ ಕಲ್ಲುಗಳೆಲ್ಲಾ
ಜರುಗಿದ್ದು, ಮಠದ ಒಳಗೆ ಮಳೆ ನೀರು ಹರಿಯುತ್ತಿದೆ. ಇದನ್ನ ಅಭಿವೃದ್ಧಿಯನ್ನು ಪಡಿಸಬೇಕಾಗಿದೆ. ಈ ದುರಂತದಿಂದ ದೇವಸ್ಥಾನದ ಒಳಗೆ ಹೋಗಲು ಸ್ಥಳವಾಕಾಶ ಇಲ್ಲದೇ ನಮ್ಮ ಅರ್ಚಕರು ಹೊರಗಡೆಯೇ ಪೂಜೆ ಮಾಡಿದ್ದಾರೆ. ಶೀಘ್ರವೇ ಜಿಲ್ಲಾಡಳಿತ ಗಮನವಹಿಸಿ ದುರಸ್ತಿ ಮಾಡಿಸಲು ಮುಂದಾಗುವಂತೆ ಮನವಿ ಮಾಡಿದರು.
-
Mysore3 months ago
ಶ್ರೀಮತಿ ಭವಾನಿ ರೇವಣ್ಣ ಸಹೋದರ ಇಂದು ಅಂತ್ಯಕ್ರಿಯೆ
-
State6 months ago
Free sewing machine, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಸಲ್ಲಿಸಿ!
-
State6 months ago
ಶಾಲಾ ಮಕ್ಕಳಿಗೆ ಫೆಬ್ರವರಿ ತಿಂಗಳಲ್ಲಿ ಭರ್ಜರಿ ಹಾಲಿಡೇ! ಇಲ್ಲಿದೆ ರಜಾ ಲಿಸ್ಟ್!!!
-
Health6 months ago
Sugar Control ಆಗಬೇಕು ಅಂದ್ರೆ ಈ ಹಿಟ್ಟನ್ನು ತಿನ್ನಬೇಕಂತೆ! ಕನ್ಫ್ಯೂಸ್ ಆಗ್ಬೇಡಿ ಸುದ್ದಿ ಓದಿ
-
Hassan3 months ago
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ
-
Uncategorized2 months ago
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
-
Uncategorized8 months ago
ಅರ್ಜುನನ ಸಮಾದಿಗೆ ಪೂಜೆ ಸಲ್ಲಿಸಿದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
-
State6 months ago
ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!. ‘ಹಳೆ ಪಿಂಚಣಿ’ ಜಾರಿಗೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ.