Connect with us

Kodagu

ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ ಗರಿ

Published

on

ವಿರಾಜಪೇಟೆ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಇಬ್ಬರು ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕೊಡಗಿನ ಯಲಿಯಂಗಾಡು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅಶ್ವಿನಿ ಎಂ.ಎಸ್. ಹಾಗೂ ಮುಳ್ಳೂರು ಸ.ಕಿ.ಪ್ರಾ. ಶಾಲೆಯ ಶಿಕ್ಷಕ ಜಾನ್ ಪೌಲ್ ಡಿಸೋಜ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಇಬ್ಬರೂ ಶಿಕ್ಷಕರಿಗೆ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು, ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ಕಮಲಮ್ಮ ಹಾಗೂ ಪದಾಧಿಕಾರಿಗಳು ಆತ್ಮೀಯವಾಗಿ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಶೈಕ್ಷಣಿಕ ಸೇವೆಗೆ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್ , ಸಾಂಸ್ಕೃತಿಕ ಕಾರ್ಯದರ್ಶಿ ಪದ್ಮ ಹೆಚ್.ಎನ್. ,ಜಿಲ್ಲಾ ಸಂಚಲ ಕಾರದ ಲೋಕೇಶ್ , ಜಿಲ್ಲಾ ಕಾರ್ಯಧ್ಯಕ್ಷರಾದ ಜಯಮಾಲಾ ಮತ್ತು ತಾಂತ್ರಿಕ ಸಲಹೆಗಾರರಾದ ಕಮರುನ್ನೀಸ ಡಿ.ಎ ಹಾಜರಿದ್ದರು.

Continue Reading

Kodagu

ಸ್ತಬ್ದಚಿತ್ರ ವಿಜೇತರಿಗೆ 1 ಲಕ್ಷ ಬಹುಮಾನ

Published

on

ಪೊನ್ನಂಪೇಟೆ : ಗೋಣಿಕೊಪ್ಪ ದಸರಾ ಆಚರಣೆಯಲ್ಲಿ ನಡೆಯುವ ಸ್ತಬ್ದಚಿತ್ರ ಮೆರವಣಿಗೆ ಸ್ಪರ್ಧಾ ವಿಜೇತರಿಗೆ 1 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ನಾಡ ಹಬ್ಬ ದಸರಾ ಸಮಿತಿ ಗೌರವ ಅಧ್ಯಕ್ಷ ಪ್ರಭಾಕರ್ ನೆಲ್ಲಿತ್ತಾಯ ತಿಳಿಸಿದರು.
ವಿಜಯದಶಮಿಯಂದು (ಅಕ್ಟೋಬರ್ 21) ನಡೆಯುವ ಚಿತ್ರ ಮೆರವಣಿಗೆಯಲ್ಲಿ ವಿಜೇತ ತಂಡಕ್ಕೆ 50 ಸಾವಿರ ನಗದು, ದ್ವಿತೀಯ ತಂಡಕ್ಕೆ 30 ಸಾವಿರ, ತೃತೀಯ ತಂಡಕ್ಕೆ 20 ಸಾವಿರ ನಗದು ನೀಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸ್ತಬ್ದಚಿತ್ರ ನಿರ್ಮಾಣಕ್ಕೆ ಪ್ರೋತ್ಸಾಹ ನೀಡಲು ಉತ್ತಮ ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ. ಸಮಧಾನಕರ ಬಹುಮಾನವಾಗಿ ಭಾಗವಹಿಸುವ ಎಲ್ಲ ಸ್ತಬ್ದ ಚಿತ್ರಗಳಿಗೆ ತಲಾ 5 ಸಾವಿರ ನಗದು ಪ್ರೋತ್ಸಾಹ ಧನ ನೀಡಲಾಗುವುದು. ಇದರಿಂದ ಸ್ತಬ್ದಚಿತ್ರ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಸರಿದೂಗಿಸಿಕೊಳ್ಳಲು ಸಹಕಾರಿಯಾಗಬಹುದು ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

ಹಿಂದೆ ಸ್ಥಳೀಯ ಸಂಘ ಸಂಸ್ಥೆಗಳು ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದವು. ಇದರಿಂದ ಕಲಾಭಿಮಾನಿಗಳಿಗೆ ಹೆಚ್ಚು ಚಿತ್ರಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ದೊರೆಯುತ್ತಿತ್ತು. ಈ ಬಾರಿ ಕೂಡ ವಿವಿಧ ಇಲಾಖೆಗಳ ಸ್ತಬ್ದಚಿತ್ರಗಳು ಭಾಗವಹಿಸಲಿವೆ ಎಂದರು.
ಸಾಮಾಜಿಕ ಸಂದೇಶ ಮತ್ತು ಪೌರಾಣಿಕ ಹಿನ್ನೆಲೆ ಇರುವ ಸ್ತಬ್ದಚಿತ್ರಗಳು ಪಾಲ್ಗೊಳ್ಳಬಹುದಾಗಿದೆ. ಒಂದು ವಿಭಾಗದಲ್ಲಿ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.
ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಮಧ್ಯಾಹ್ನ 2 ಗಂಟೆಗೆ ಮೆರವಣಿಗೆ ಆರಂಭಗೊಳ್ಳಲಿದ್ದು, ಸ್ಪರ್ಧಿಗಳು ಮಧ್ಯಾಹ್ನ 1 ಗಂಟೆಗೆ ಆವರಣದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕಿದೆ. ಈ ಬಗ್ಗೆ ಸ್ಪರ್ಧಿಗಳು ಸೂಕ್ತವಾಗಿ ಸ್ಪಂದಿಸಬೇಕಿದೆ. ಪಾಲ್ಗೊಳ್ಳುವ ತಂಡಗಳು ಸ್ಪರ್ಧಾ ದಿನಕ್ಕೂ ಮುನ್ನ ಹೆಸರು ನೋಂದಣಿ ಕಡ್ಡಾಯವಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸಮಿತಿ ಅಧ್ಯಕ್ಷ ಕಂಜಿತAಡ ಪ್ರವೀಣ್ ಕುಶಾಲಪ್ಪ ಮಾತನಾಡಿ, ಸ್ತಬ್ದ ಚಿತ್ರ ನಿರ್ಮಾಣಕ್ಕೂ ಮುನ್ನ ಸಮಿತಿ ಪ್ರಮುಖರೊಂದಿಗೆ ಚರ್ಚಿಸಿ ಚಿತ್ರ ನಿರ್ಮಿಸುವುದರಿಂದ ಲೋಪ ಮತ್ತು ನಕಲಿ ಚಿತ್ರ ತಿದ್ದಿಕೊಳ್ಳಲು ಸಾಧ್ಯವಿದೆ. ಇದರಿಂದ ಮತ್ತಷ್ಟು ಗುಣಮಟ್ಟದ ಚಿತ್ರಗಳನ್ನು ನೀಡಲು ಸಾಧ್ಯವಿದೆ. ಇದರಿಂದಾಗಿ ಸಮಿತಿ ಸಲಹೆ ಪಡೆಯಲು ಸ್ಪರ್ಧಿಗಳು ಮುಂದಾಗಬೇಕು ಎಂದು ಹೇಳಿದರು.
ಹೆಚ್ಚಿನ ಮಾಹಿತಿಗೆ 9449813300, 9448311081, 9900910926 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ಕಾರ್ಯದರ್ಶಿ ಸುದರ್ಶನ್ ಬಾರಿತ್ತಾಯ, ಉಪಾಧ್ಯಕ್ಷ ಸುನಿಲ್ ಪ್ರಭಾಕರ್, ಖಜಾಂಚಿ ಲಕ್ಷö್ಮಣ, ಸಹ ಕಾರ್ಯದರ್ಶಿ ದಿನೇಶ್, ಪ್ರಮುಖರಾದ ಮಣಿ, ನಾರಾಯಣ ಸ್ವಾಮಿ ನಾಯ್ಡು, ಪ್ರವೀಣ್ ಪೂಜಾರಿ ಇದ್ದರು.

Continue Reading

Kodagu

ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ

Published

on

ಮಡಿಕೇರಿ : ಡಾ.ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ ಪಂಚಾಯಿತಿ ಆಡಳಿತಾಧಿಕಾರಿ ಸಚಿನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕುಂದಚೇರಿ ಗ್ರಾ.ಪಂ ವ್ಯಾಪ್ತಿಗೆ ನಾಲ್ಕು ಗ್ರಾಮಗಳು ಒಳಪಡುತ್ತಿದ್ದು, ನಾಲ್ಕು ಸಾವಿರಕ್ಕೂ ಅಧಿಕ ಮಂದಿ ವಾಸಿಸುತ್ತಿದ್ದಾರೆ. ಗ್ರಾಮಗಳು ಶಾಲೆ, ಅಂಗನವಾಡಿ, ಆಸ್ಪತ್ರೆ, ಸಮುದಾಯ ಭವನ, ಪರಿಶಿಷ್ಟ ಜಾತಿ, ಪಂಗಡಗಳ ಕಾಲೋನಿಗಳು, ಕುಡಿಯುವ ನೀರಿನ ಕಟ್ಟೆಗಳು, ಪೈಪ್ ಲೈನ್ ಗಳು ಸೇರಿದಂತೆ ಜನ ವಸತಿ ಪ್ರದೇಶಗಳನ್ನು ಹೊಂದಿವೆ. ೨೦೧೪ ರ ಕಸ್ತೂರಿ ರಂಗನ್ ವರದಿಯಲ್ಲಿ ಶೇ.೩೭ರಷ್ಟು ಅರಣ್ಯ ಪ್ರದೇಶವನ್ನು ಹೊಂದಲು ಶಿಫಾರಸ್ಸು ಮಾಡಲಾಗಿತ್ತು. ಕುಂದಚೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ೭೩೮೮ ಹೆಕ್ಟೇರ್ ಭೂಪ್ರದೇಶವಿದ್ದು, ೪೧೫೨ ಹೆಕ್ಟೇರ್ ಎಂದರೆ ಶೇ.೫೬.೨೫ ಅರಣ್ಯ ಪ್ರದೇಶವಾಗಿದೆ. ಕಸ್ತೂರಿ ರಂಗನ್ ವರದಿಯಲ್ಲಿ ಉಲ್ಲೇಖಿಸಿರುವುದಕ್ಕಿಂತ ಹೆಚ್ಚಿನ ಭಾಗ ಅರಣ್ಯವಿರುವುದರಿಂದ ಸೂಕ್ಷ್ಮ ವಲಯ ಪ್ರದೇಶಗಳನ್ನು ಶೂನ್ಯ ಮಾಡುವಂತೆ ಸಭೆಯಲ್ಲಿ ಒಮ್ಮತದ ಒತ್ತಾಯದ ನಿರ್ಧಾರ ಕೈಗೊಳ್ಳಲಾಯಿತು.


ಹಿಂದೆ ೧೯೮೦ ರಿಂದ ಸರಕಾರದ ವತಿಯಿಂದ ರೈತರು, ಕಾರ್ಮಿಕರು ಹಾಗೂ ನಿವೃತ್ತ ಯೋಧರಿಗೆ ಹಕ್ಕುಪತ್ರ, ಪಹಣಿ ಪತ್ರ ಮತ್ತು ಮಂಜೂರಾತಿ ಪತ್ರ ನೀಡಲಾಗಿದೆ. ಈ ಜಾಗಗಳನ್ನು ಹೊರತು ಪಡಿಸಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸರ್ವೆ ನಡೆಸಿ ಹದ್ದುಬಸ್ತು ಗುರುತಿಸಿಕೊಡಬೇಕೆಂದು ಹಿರಿಯರಾದ ಕೆದಂಬಾಡಿ ಸುರೇಂದ್ರ ಅಭಿಪ್ರಾಯ ಮಂಡಿಸಿದರು. ಇದಕ್ಕೆ ಸರ್ವರೂ ಸಮ್ಮತಿ ಸೂಚಿಸಿದರು.
೨೦೧೪ ನವೆಂಬರ್ ೨೫ ರಂದು ವಿಶೇಷ ಸಭೆ ನಡೆಸಿ ಕಸ್ತೂರಿ ರಂಗನ್ ವರದಿಗೆ ವಿರೋಧ ವ್ಯಕ್ತಪಡಿಸಿ ಕೇಂದ್ರ ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ನಂತರ ೨೦೨೬ ಜುಲೈ ೪ ರಂದು ಗ್ರಾಮಸ್ಥರ ಸಭೆಯಲ್ಲಿ ಚರ್ಚಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಿ ಪಿಡಿಒ ಅವರ ಮೂಲಕ ಆಕ್ಷೇಪಣೆ ಸಲ್ಲಿಸಲಾಗಿದೆ. ಅಲ್ಲದೆ ಗ್ರಾಮಗಳ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
೨೦೧೩ ನವೆಂಬರ್ ೧೩ ರ ನೋಟಿಫಿಕೇಶನ್ ನ್ನು ಹಿಂಪಡೆಯಬೇಕು, ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ ಮತ್ತು ದೋಷಗಳಿರುವುದರಿಂದ ಯಥಾವತ್ತಾಗಿ ಜಾರಿಗೊಳಿಸಲು ಸಾಧ್ಯವಿಲ್ಲ ಎನ್ನುವುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಪರಿಸರ ಅಧ್ಯಯನಕ್ಕೆ ಗ್ರಾಮ ಮಟ್ಟದಲ್ಲಿ ಹೊಸ ಸಮಿತಿ ರಚಿಸಬೇಕು, ಸ್ಥಳೀಯವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ೭೩೮೮ ಹೆಕ್ಟೇರ್ ಭೂಪ್ರದೇಶದಲ್ಲಿ ೪೧೫೨ ಹೆಕ್ಟೇರ್ ಪ್ರದೇಶ ಅರಣ್ಯವಿರುವುದರಿಂದ ಕುಂದಚೇರಿ ಗ್ರಾ.ಪಂ ವ್ಯಾಪ್ತಿಯ ಎರಡು ಗ್ರಾಮಗಳನ್ನು ವರದಿ ವ್ಯಾಪ್ತಿಯಿಂದ ಕೈಬಿಡಬೇಕು. ಕಸ್ತೂರಿ ರಂಗನ್ ವರದಿ ಆಧಾರದ ಮೇಲೆ ಇಎಸ್‌ಎ ಜಾರಿಗೆ ತರುವ ಸಂದರ್ಭ ಸ್ಥಳೀಯ ಜನರ ಅಭಿಪ್ರಾಯ ಮತ್ತು ಗ್ರಾಮಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಪಿ.ಬಿ.ದಿನೇಶ್, ಮಾಜಿ ಸದಸ್ಯ ಕೆ.ಯು.ಹಾರಿಸ್, ಪ್ರಮುಖರಾದ ಕೀರ್ತಿ ಉತ್ತಪ್ಪ, ಕೀರ್ತಿ ಕುಮಾರ್, ದಬ್ಬಡ್ಕ ಶ್ರೀಧರ್, ಸೆಟ್ಟೇಜನ ಬ್ರಿಜೇಶ್, ಕೆದಂಬಾಡಿ ಜಯಪ್ರಕಾಶ್, ಮಂಗೇರಿರ ಸೋಮಯ್ಯ, ಸಿ.ಎಸ್.ವೇಣು ಗೋಪಾಲ್, ಕೆದಂಬಾಡಿ ಪ್ರವೀಣ್ ಕುಮಾರ್, ಕಾಡಂಡ ಭೀಮಯ್ಯ ಅವರುಗಳು ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದರು.
ಆಡಳಿತಾಧಿಕಾರಿ ಸಚಿನ್ ಅವರು ಸಭೆಯ ನಿರ್ಣಯ ಹಾಗೂ ಜನಾಭಿಪ್ರಾಯವನ್ನು ಸಂಬಂಧಪಟ್ಟ ಇಲಾಖೆಗೆ ತಲುಪಿಸುವುದಾಗಿ ತಿಳಿಸಿದರು. ಪಿಡಿಒ ಹರೀಶ್ ಸ್ವಾಗತಿಸಿ ವಂದಿಸಿದರು.

Continue Reading

Kodagu

ಆಯುರ್ವೇದ ಕಾಯಿಲೆ ತಡೆಯುವ ಜೀವನ ವಿಧಾನ: 11 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ

Published

on

ಮಡಿಕೇರಿ : ಆಯುರ್ವೇದವು ಕೇವಲ ಕಾಯಿಲೆ ಬಂದ ನಂತರ ಚಿಕಿತ್ಸೆ ನೀಡುವ ಪದ್ಧತಿಯಲ್ಲ, ಆರೋಗ್ಯ ಕಾಪಾಡಿಕೊಂಡು ಕಾಯಿಲೆ ತಡೆಗಟ್ಟುವ ಜೀವನ ವಿಜ್ಞಾನವಾಗಿದೆ ಎಂದು ಕುಶಾಲನಗರ ಯೋಗಕ್ಷೇಮ ಆಸ್ಪತ್ರೆಯ ಆಯುರ್ವೇದ ವೈದ್ಯರಾದ ಡಾ.ಶ್ಯಾಮ್ ಪ್ರಸಾದ್ ಹೇಳಿದರು.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ’ಆರೋಗ್ಯಕರ ನಾಳೆಗಾಗಿ ಆಯುರ್ವೇದ’ ಎಂಬ ಘೋಷವಾಕ್ಯದೊಂದಿಗೆ ನಗರದ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಬುಧವಾರ ನಡೆದ ೧೧ ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು.

ಆಯು ಎಂದರೆ ಜೀವನ ಅಥವಾ ಆಯಸ್ಸು ಹಾಗೂ ವೇದ ಎಂದರೆ ವಿಜ್ಞಾನ. ಜೀವನ ಹೇಗೆ ಆರೋಗ್ಯಕರವಾಗಿ ನಡೆಸಬೇಕು ಎಂಬುದನ್ನು ತಿಳಿಸಿಕೊಡುವುದೇ ಆಯುರ್ವೇದದ ಪ್ರಮುಖ ಉದ್ದೇಶವಾಗಿದೆ. ನಮ್ಮ ಹಿರಿಯರು ಅನುಭವದ ಮೂಲಕ ತಿಳಿದುಕೊಂಡು, ಪೀಳಿಗೆಯಿಂದ ಪೀಳಿಗೆಗೆ ಅನುಸರಿಸಿಕೊಂಡು ಬಂದಿರುವ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಮನೆ ಮದ್ದುಗಳಲ್ಲಿಯೂ ಆಯುರ್ವೇದದ ತತ್ವಗಳು ಅಡಕವಾಗಿವೆ ಎಂದು ವಿವರಿಸಿದರು.
ಪ್ರಸ್ತುತ ಜೀವನಶೈಲಿಯಿಂದಾಗಿ ಮಧುಮೇಹ, ಬೊಜ್ಜು ಸೇರಿದಂತೆ ಹಲವು ಜೀವನಶೈಲಿ ಆಧಾರಿತ ಕಾಯಿಲೆಗಳು ಹೆಚ್ಚುತ್ತಿವೆ. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯ. ಆರೋಗ್ಯಕರ ಆಹಾರ, ಸಮಯಕ್ಕೆ ಸರಿಯಾಗಿ ಊಟ, ಸಮರ್ಪಕ ನಿದ್ರೆ ಹಾಗೂ ನಿಯಮಿತ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಹಲವು ಆರೋಗ್ಯ ಸಮಸ್ಯೆ ದೂರವಿಡಬಹುದು ಎಂದರು.

ಜೀರ್ಣಶಕ್ತಿಯನ್ನು ಉತ್ತಮವಾಗಿ ಕಾಪಾಡಿಕೊಳ್ಳುವುದು ಆರೋಗ್ಯದ ಪ್ರಮುಖ ಅಂಶವಾಗಿದೆ. ಹಸಿವು ಮತ್ತು ನಿದ್ರೆಯ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಇಂದಿನ ದಿನಗಳಲ್ಲಿ ಒತ್ತಡ, ಆತಂಕ ಹಾಗೂ ಖಿನ್ನತೆಯಂತಹ ಸಮಸ್ಯೆಗಳೂ ಹೆಚ್ಚುತ್ತಿವೆ. ದೈನಂದಿನ ಜೀವನದಲ್ಲಿ ಸೂಕ್ತ ವಿಶ್ರಾಂತಿ ಪಡೆಯುವುದು, ಸಾಧ್ಯವಾದ? ನೈಸರ್ಗಿಕ ವಾತಾವರಣದಲ್ಲಿ ಸಮಯ ಕಳೆಯುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿ ಅನುಸರಿಸುವುದು ಅಗತ್ಯವಾಗಿದೆ ಎಂದು ಡಾ.ಶ್ಯಾಮ್ ಪ್ರಸಾದ್ ಅವರು ಹೇಳಿದರು.
ನೀಮಾ ಸಂಸ್ಥೆಯ ಡಾ.ರಾಜಾರಾಮ್ ಅವರು ಮಾತನಾಡಿ, ಆಯುರ್ವೇದವು ಕೇವಲ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯಲ್ಲ, ಆರೋಗ್ಯವನ್ನು ಕಾಪಾಡಿಕೊಳ್ಳುವ ಸಮಗ್ರ ಜೀವನಶೈಲಿಯಾಗಿದೆ. ಪ್ರಕೃತಿ ಮತ್ತು ದೇಹದ ನಡುವಿನ ಸಮತೋಲನ ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ನಡೆಸಲು ಆಯುರ್ವೇದ ಮಾರ್ಗದರ್ಶನ ನೀಡುತ್ತದೆ ಎಂದು ಹೇಳಿದರು.
ಇಂದಿನ ಆಧುನಿಕ ಜೀವನಶೈಲಿಯಿಂದಾಗಿ ಒತ್ತಡ, ಆಹಾರ ಪದ್ಧತಿಯ ಬದಲಾವಣೆ ಹಾಗೂ ನಿದ್ರೆಯ ಕೊರತೆಯಂತಹ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇಂತಹ ಸಂದರ್ಭದಲ್ಲಿ ಸರಿಯಾದ ಆಹಾರ, ನಿಯಮಿತ ಜೀವನಕ್ರಮ, ಯೋಗ, ವ್ಯಾಯಾಮ ಹಾಗೂ ಪ್ರಕೃತಿಗೆ ಹೊಂದಿಕೊಂಡ ಜೀವನಶೈಲಿಗೆ ಆಯುರ್ವೇದದಲ್ಲಿ ಮಹತ್ವ ನೀಡಲಾಗಿದೆ ಎಂದರು.
ಆಯುರ್ವೇದವು ರೋಗದ ಲಕ್ಷಣಗಳ ಜೊತೆಗೆ ವ್ಯಕ್ತಿಯ ದೇಹಪ್ರಕೃತಿ, ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಪರಿಗಣಿಸಿ ಆರೋಗ್ಯ ಸಂರಕ್ಷಣೆಗೆ ಒತ್ತು ನೀಡುತ್ತದೆ ಎಂದು ತಿಳಿಸಿದರು.

ಆಯುರ್ವೇದದ ಔ?ಧಿಯನ್ನು ತಜ್ಞ ವೈದ್ಯರ ಸಲಹೆಯೊಂದಿಗೆ ಮಾತ್ರ ಬಳಸಬೇಕು. ಸ್ವಯಂ ಚಿಕಿತ್ಸೆ ಮಾಡಿಕೊಳ್ಳದೆ, ಅಗತ್ಯವಿದ್ದಾಗ ಅರ್ಹ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ಆರೋಗ್ಯಕರ ಆಹಾರ ಮತ್ತು ಶಿಸ್ತಿನ ಜೀವನಶೈಲಿಯೊಂದಿಗೆ ಆಯುರ್ವೇದದ ತತ್ವ ಅಳವಡಿಸಿಕೊಂಡರೆ ದೈಹಿಕ ಹಾಗೂ ಮಾನಸಿಕ ಕ್ಷೇಮವನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ಜೊತೆಗೆ ಸಮಾಜದಲ್ಲಿಯೂ ಆರೋಗ್ಯದ ಕುರಿತು ಜಾಗೃತಿ ಮೂಡಿಸಬೇಕು ಎಂದು ಡಾ.ರಾಜಾರಾಮ್ ಕರೆ ನೀಡಿದರು.

ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಆಯುರ್ವೇದವು ಕೇವಲ ರೋಗ ನಿವಾರಣೆ ಮಾಡುವ ವೈದ್ಯ ಪದ್ಧತಿಯಲ್ಲ, ಅದು ಸೌಹಾರ್ದಯುತ ಮತ್ತು ಆರೋಗ್ಯಕರ ಜೀವನ ನಡೆಸುವ ಜೀವನ ಶೈಲಿಯಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ನೈಸರ್ಗಿಕ ಆರೋಗ್ಯ ರಕ್ಷಣೆಗೆ ಆಯುರ್ವೇದ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಜಿ ಅವರು, ದಿನದ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಸಬಿತ, ಆಶಾ ಕಾರ್ಯಕರ್ತೆಯರು, ಇಲಾಖೆ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು. ಆಯುಷ್ ಇಲಾಖೆಯ ದಿಶಾ ಪ್ರಾರ್ಥಿಸಿದರು, ಡಾ.ಸರಸ್ವತಿ ಸ್ವಾಗತಿಸಿದರು, ಡಾ.ಪಲ್ಲವಿ ನಾಯಕ್ ನಿರೂಪಿಸಿದರು, ಡಾ.ಸೌಪರ್ಣಿಕ ಉಪನ್ಯಾಸಕರ ಪರಿಚಯ ಮಾಡಿದರು. ಡಾ.ಕೆ.ಜಿ.ಶುಭ ವಂದಿಸಿದರು.

ಕಾರ್ಯಕ್ರಮದಲ್ಲಿ ದಿನನಿತ್ಯದ ಬದುಕಿನಲ್ಲಿ ಬಳಸಬಹುದಾದ ಪ್ರಮುಖ ಗಿಡಮೂಲಿಕೆಗಳು ಹಾಗೂ ಮನೆಮದ್ದುಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಗಿಡಮೂಲಿಕೆಗಳ ಪ್ರದರ್ಶನ ನಡೆಯಿತು. ಇದೇ ಸಂದರ್ಭ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

Continue Reading

Trending

error: Content is protected !!