Connect with us

Mandya

ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಸವಿತಾ ಮಹರ್ಷಿ: ಜಯಪ್ಪ ಹೊನ್ನಾಳಿ

Published

on

ಮಂಡ್ಯ: ಸವಿತಾ ಮಹರ್ಷಿಗಳು ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದಾರೆ, ಇವರು ರಥಸಪ್ತಮಿಯ ದಿನ ಶಿವನ ಬಲಗಣ್ಣಿನಿಂದ ಜನ್ಮ ತಾಳಿದ್ದರಿಂದ, ಪ್ರತಿವರ್ಷ ರಥಸಪ್ತಮಿಯ ದಿನ ಸವಿತಾ ಮಹರ್ಷಿ ಜಯಂತಿ ಆಚರಿಸಲಾಗುತ್ತದೆ ಎಂದು ಸಾಹಿತಿ ಜಯಪ್ಪ ಹೊನ್ನಾಳಿ ಹೇಳಿದರು.

ನಗರದ ಕರ್ನಾಟಕ ಸಂಘದ ಕೆವಿಎಸ್‌ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ 2023-24ನೇ ಸಾಲಿನ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಸವಿತಾ ಮಹರ್ಷಿಯವರು ಸವಿತಾ ಸಮಾಜದ ಮೂಲಪುರುಷರಾಗಿದ್ದು, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದವರ ಉದ್ಧಾರಕ್ಕಾಗಿ ಶ್ರಮಿಸಿದ ಮಹಾನ್ ವ್ಯಕ್ತಿ. ಇವರು ಕ್ಷತ್ರಿಯ, ವೈದ್ಯ, ಕ್ಷೌರಿಕ, ಸಂಗೀತ ವಾದ್ಯ ನುಡಿಸುವವರು ಹಾಗೂ ಆಯುಷ್ಕರ್ಮ ಮಾಡುವ ಕಾಯಕ ಶೂರರಾಗಿದ್ದರು. 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರಿಗೆ ಆಶ್ರಯ ನೀಡಿದ ಸವಿತಾ ಸಮಾಜದ ದೊರೆ ಬಿಜ್ಜಳ ಎಂಬುದು ಹೆಮ್ಮೆಯ ಸಂಗತಿ ಎಂದು ವಿವರಿಸಿದರು.

ಸರ್ಕಾರದಿಂದ ಹಲವು ಶರಣರ ಜಯಂತಿ ಆಚರಣೆಯಂತೆಯೇ ರಾಜ್ಯ, ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಪ್ರತಿ ವರ್ಷ ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ ಮಾಡಲು ನಿರ್ಧರಿಸುವುದು ಖುಷಿ ವಿಚಾರವಾಗಿದೆ, ರಾಷ್ಟ್ರಕೂಟ, ವಿಜಯನಗರ, ಕಲ್ಯಾಣ ಚಾಲುಕ್ಯರ ಶಾಸನಗಳಲ್ಲಿ ಸವಿತಾ ಸಮಾಜದ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳ ಮೇಲೆ ಸವಿತಾ ಸಮಾಜದ ಸಾಧನೆಗಳಾದ ಕತ್ತಿ, ಕನ್ನಡಿ ಹಾಗೂ ಕತ್ತರಿಗಳನ್ನು ಕೆತ್ತಲಾಗಿದೆ. ಅನೇಕ ವರ್ಷಗಳಿಂದ ಸುದೀರ್ಘ ಇತಿಹಾಸವನ್ನು ಹೊಂದಿದ ಸವಿತಾ ಸಮಾಜ ತನ್ನ ಸೇವ ಕಾರ್ಯದಿಂದಲೇ ಹೆಸರುವಾಸಿಯಾಗಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್ ಮಾತನಾಡಿ, ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೋರಿಸಿದೆ. ಜನಸಾಮಾನ್ಯರು ಸವಿತಾ ಮಹರ್ಷಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸೂರ್ಯವಂಶದ ಸವಿತಾ ಮಹರ್ಷಿಯವರು ಶಿವನ ಬಲಗಣ್ಣಿನಿಂದ ಜನಿಸಿದರು. ಅಪಾರ ಜ್ಞಾನ ಭಂಡಾರ ಹೊಂದಿದ ಮಹರ್ಷಿಯವರು ಚತುರ್ವೇದಗಳಲ್ಲಿ ಒಂದಾದ ಸಾಮವೇದವನ್ನು ರಚಿಸಿದ್ದಾರೆ. ಇವರ ಮಗಳಾದ ಗಾಯಿತ್ರಿ ದೇವಿ ಶ್ರೇಷ್ಠ ಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ. ಅತ್ಯಂತ ಶ್ರೀಮಂತ ಪರಂಪರೆ ಇರುವ ಸವಿತಾ ಸಮಾಜ ಒಗ್ಗಟ್ಟಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಇತರರಿಗೆ ಆದರ್ಶವಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು.

ಕುಲಭಾಂದವರ ವೇದಿಕೆ ರಾಜಾಧ್ಯಕ್ಷ ಲೋಕೇಶ್, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಪ್ರತಾಪ್, ಮುಖಂಡರಾದ ಎಂ.ಎಸ್.ರಾಜಣ್ಣ, ಕೊತ್ತತ್ತಿ ನಾಗರಾಜ್, ಸೋಮಣ್ಣ, ಸಂತೋಷ್, ಮೂರ್ತಿ, ರಾಮಲಿಂಗಯ್ಯ, ನಂದೀಶ್, ಕೆಂಪರಾಜು, ಎಲ್‌.ಸಂದೇಶ್‌ ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಅಕ್ರಮ ಖಾತೆ ಮಾಡಿದ್ದಾರೆಂದು ಆರೋಪಿಸಿ ಶವವಿಟ್ಟು ಪ್ರತಿಭಟನೆ ನಡೆಸಿದ ಕುಟುಂಬಸ್ಥರು

Published

on

ಮದ್ದೂರು: ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಕ್ರಮ ಖಾತೆ ಮಾಡಿದ್ದಾರೆಂದು ಆರೋಪಿಸಿ ತಾಲೂಕಿನ ಮರಳಿಗ ಗ್ರಾಮದ ಬೀದಿ ಮಧ್ಯೆ ಶವವಿಟ್ಟು ಕುಟುಂಬಸ್ಥರು ಮಂಗಳವಾರ ಪ್ರತಿಭಟನೆ ಮಾಡಲಾಯಿತು.

ಗ್ರಾಮದ ಗ್ರಾ.ಪಂ .ಸಹಾಯಕ ವೆಂಕಟೇಶ್ (58) ಇವರು ಸೋಮವಾರ ಅನಾರೋಗ್ಯದಿಂದ ಮೃತಪಟ್ಟಿದ್ದರು.

ವೆಂಕಟೇಶ್ ಅವರ ವಾಸದ ಸ್ಥಳವನ್ನು ಹಲವಾರು ವಷಗಳ ಹಿಂದೆ ಅಕ್ರಮವಾಗಿ ಬೇರೆಯವರ ಹೆಸರಿಗೆ ಖಾತೆ ಮಾಡಿಕೊಟ್ಟಿದ್ದಾರೆ. ಅಕ್ರಮ ಖಾತೆಯನ್ನು ರದ್ದು ಪಡಿಸಿ ಮೃತ ವೆಂಕಟೇಶ್ ಕುಟುಂಬಕ್ಕೆ ವಾಸದ ಸ್ಥಳವನ್ನು ಖಾತೆ ಮಾಡಿಕೊಡಬೇಕೆಂದು ಆಗ್ರಹಿಸಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಜಿ.ಪಂ.ಮಾಜಿ ಅಧ್ಯಕ್ಷ ಜವಹರ್‌ಲಾಲ್‌ ಮಾತನಾಡಿ, ವೆಂಕಟೇಶ್ ಅವರು ಹಲವಾರು ವರ್ಷಗಳಿಂದ ಗ್ರಾಮದಲ್ಲಿ ವಾಸವಿದ್ದು, ಅವರಿರುವ ವಾಸದ ಸ್ಥಳವನ್ನು ಅಧಿಕಾರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡು ಬೇರೆಯವರಿಗೆ ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ. ಅಕ್ರಮವಾಗಿ ಮಾಡಿರುವ ಖಾತೆಯನ್ನು ರದ್ದುಪಡಿಸಿ ವೆಂಕಟೇಶ್ ಅವರ ಕುಟುಂಬಕ್ಕೆ ವಾಸದ ಸ್ಥಳವನ್ನು ಖಾತೆ ಮಾಡಿಸಿಕೊಡಬೇಕೆಂದು ಒತ್ತಾಯಿಸಿದರು.

ದಲಿತ ಮುಖಂಡ ಮರಳಿಗ ಶಿವರಾಜ್ ಮಾತನಾಡಿ, ಮರಳಿಗ ಗ್ರಾಪಂಯಲ್ಲಿ ಈ ಹಿಂದೆ ಹಲವಾರು ಖಾತೆಗಳಗಳನ್ನು ಅಕ್ರಮವಾಗಿ ಅಧಿಕಾರಿಗಳು ಮಾಡಿದ್ದಾರೆ. ಈ ಬಗ್ಗೆ ಸಂಬಂಧಿಸಿದವರು ತನಿಖೆ ನಡೆಸಿ ತಪ್ಪಿಸ್ಥ ಅಧಿಕಾರಿಗಳಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು ಹಾಗೂ ಮುಂದೆ ಈ ರೀತಿ ಅಕ್ರಮವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಮಾಡಿದರು.


ಸ್ಥಳಕ್ಕೆ ಆಗಮಿಸಿ ತಾ.ಪಂ. ಇಒ ರಾಮಲಿಂಗಯ್ಯ ಮಾತನಾಡಿ, ಮಂಗಳವಾರ ನಡೆದ ಮರಳಿಗ ಗ್ರಾಪಂಯ ಗ್ರಾಮ ಸಭೆಯಲ್ಲಿ ನಾನು, ತಹಸೀಲ್ದಾರ್ ಪರಶುರಾಮ್‌ ಸುತ್ತಿಗೇರಿ, ಗ್ರಾ.ಪಂ. ಅಧ್ಯಕ್ಷೆ ಸುನೀತಾ ಶ್ರೀನಿವಾಸ್ ಹಾಗೂ ಸದಸ್ಯರು ಈ ಸಂಬಂಧ ಪರಿಶೀಲನೆ ನಡೆಸಿ ಬೇರೆಯವರ ಹೆಸರಿಗೆ ಆಗಿರುವ ಖಾತೆ ನಿಯಾಮನುಸಾರ ಆಗಿರದ ಹಿನ್ನೆಲೆಯಲ್ಲಿ ಅದನ್ನು ರದ್ದುಪಡಿಸಿ ಗ್ರಾ.ಪಂ. ಸಭೆಯಲ್ಲಿ ಗ್ರಾಮ ಸಹಾಯಕ ವೆಂಕಟೇಶ್ ಅವರ ಕುಟುಂಬಕ್ಕೆ ಕರ ನಿರ್ಧಾರಣ ಪತ್ರ ಸಿದ್ದಪಡಿಸಿ ನೀಡಲಾಗಿದೆ ಎಂದು ತಿಳಿಸಿ, ಕರ ನಿರ್ಧಾರಣ ಪತ್ರವನ್ನು ಕುಟುಂಬದ ಸದಸ್ಯರಿಗೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದು, ಶವಸಂಸ್ಕಾರ ಮಾಡಲಾಯಿತು.

ಘಟನೆಯಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಮದ್ದೂರು ವೃತ್ತ ನಿರೀಕ್ಷಕ ಎಚ್.ಎಸ್.ನವೀನ ನೇತೃತ್ವದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿತ್ತು.

ಪ್ರತಿಭಟನೆಯಲ್ಲಿ ಮುಖಂಡರಾದ ಜವಹರ್‌ಲಾಲ್‌, ಮರಳಿಗ ಶಿವರಾಜು, ವೆಂಕಟೇಶ್, ಯತೀಶ್‌ ಕುಮಾರ್‌, ಪುಟ್ಟಸ್ವಾಮಿ, ಶಿವಲಿಂಗೇಗೌಡ, ರಂಜಿತ, ಹರೀಶ್, ದಾಸಯ್ಯ, ಲೋಕೇಶ್ ಸೇರಿದಂತೆ ಇತರರು ಇದ್ದರು.

Continue Reading

Mandya

ಭತ್ತ ಮತ್ತು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗಧಿ

Published

on

ಮಂಡ್ಯ: ಜಿಲ್ಲೆಯಲ್ಲಿ 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 57,148 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಹಾಗೂ 56,573 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬೆಳೆಯು ಆವರಿಸಿದ್ದು, ಭತ್ತದ ಕಟಾವು ಕಾರ್ಯ ಪ್ರಾರಂಭವಾಗಿದೆ.

 

ಜಿಲ್ಲೆಯಲ್ಲಿ ಕೂಲಿ ಕಾರ್ಮಿಕರ ಅಭಾವದಿಂದ ಭತ್ತ ಹಾಗೂ ರಾಗಿ ಕಟಾವಿಗೆ ರೈತರು ಕಂಬೈನ್ಡ್ ಹಾರ್ವೆಸ್ಟರ್ ಯಂತ್ರಗಳನ್ನು (ಸಂಯುಕ್ತ ಕುಯ್ಲು ಒಕ್ಕಣೆ ಯಂತ್ರ) ಬಾಡಿಗೆಗೆ ಪಡೆದು ಕಟಾವು ಮತ್ತು ಒಕ್ಕಣೆ ಮಾಡುವುದು ವಾಡಿಕೆಯಾಗಿರುತ್ತದೆ. ಆದ್ದರಿಂದ ಕಂಬೈನ್ಡ್ ಹಾರ್ವೆಸ್ಟರ್ ಯಂತ್ರಗಳ ಬಾಡಿಗೆ ದರವನ್ನು ನಿಗಧಿಪಡಿಸುವ ಸಲುವಾಗಿ ಜಿಲ್ಲಾ ಹಾಗೂ ತಾಲ್ಲೂಕುಮಟ್ಟದ ಕೃಷಿಕ ಸಮಾಜದ ಅಧ್ಯಕ್ಷರು, ಪ್ರಗತಿ ಪರ ರೈತರು, ಪೋಲಿಸ್ ಅಧಿಕಾರಿಗಳು, ಆರ್.ಟಿ.ಒ ಅಧಿಕಾರಿಗಳು ಹಾಗೂ ಸಂಬಂಧಿಸಿದ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡಂತೆ ಭತ್ತ ಹಾಗೂ ರಾಗಿ ಕಟಾವು ಯಂತ್ರದಿಂದ ಕಟಾವು ಮಾಡಲು ಪ್ರತಿ ಗಂಟೆಗೆ ನಿಗಧಿಪಡಿಸಿದ ದರದ ವಿವರವು ಈ ಕೆಳಕಂಡಂತಿದೆ.

ಯಂತ್ರದ ವಿವರ ಪ್ರತಿ ಗಂಟೆಗೆ ನಿಗಧಿಪಡಿಸಿದ ದರ (ರೂ. ಗಳಲ್ಲಿ)
1 ಚೈನ್/ಟ್ರಾಕ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2500
2 ಟೈರ್ (ಗ್ರಿಪ್) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2000
3 ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 1800
4 ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ರೂ. 2900/- ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Mandya

SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ದಾಖಲಾಗಿದ್ದ ಶಾಲೆಗಳಿಗೆ ಜಿ.ಪಂ. ಸಿಇಓ ಭೇಟಿ

Published

on

ಮಂಡ್ಯ: ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ದಾಖಲಾಗಿದ್ದ ಶಾಲೆಗಳಿಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಕೃಷ್ಣರಾಜ ಪೇಟೆ ತಾಲೂಕಿನ ಸಿಂಧಘಟ್ಟ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಕನ್ನಡ ಬಾಷೆಯ ಪಠ್ಯವನ್ನು ಸರಿಯಾಗಿ ಬೋದನೆ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಸಿಇಓ ರವರಿಗೆ ತಿಳಿಸಿದರು. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ನಾಳೆಯೇ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ತಿಳಿಸಿರುವ ವಿಷನ್ ಬಗ್ಗೆ ಪರಿಶೀಲಿಸಿ ಒಂದು ವಾರದೊಳಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿ ಸಲ್ಲಿಸಲು ಸೂಚಿಸಿದರು.

ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ಶಾಲೆಗೆ ಸರಬರಾಜು ಮಾಡಿರುವ ಅಡುಗೆ ಎಣ್ಣೆಯ ಅವಧಿ ಮುಕ್ತಾಯವಾಗಿರುವುದನ್ನು ಗಮನಿಸಲಾಗಿದ್ದು, ಈ ಬಗ್ಗೆ ಮಧ್ಯಾಹ್ನ ಬಿಸಿ ಊಟ ಯೋಜನೆಯ ಶಿಕ್ಷಣಾಧಿಕಾರಿ ಮತ್ತು ಸಹಾಯಕ ನಿರ್ದೇಶಕರು ಪರಿಶೀಲಿಸಿ ವರದಿ ನೀಡುವಂತೆ ಜಿ.ಪಂ. ಸಿಇಓ ಸೂಚಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಭೇಟಿ: ಸಿಂದಘಟ್ಟ ಗ್ರಾಮದಲ್ಲಿನ 3 ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ವಿಧಾನ, ಪೌಷ್ಠಿಕ ಆಹಾರ ವಿತರಣೆ, ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ವಿಶೇಷ ಚೇತನ ಅಂಗನವಾಡಿ ಕಾರ್ಯಕರ್ತೆ ತುಳಸಿ ರವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದು, ಈ ಬಗ್ಗೆ ಮಕ್ಕಳ ಕಲಿಕಾ ಮಟ್ಟವನ್ನು ಪರಿಶೀಲಿಸಿ ತುಳಸಿರವರ ಕಾರ್ಯವನ್ನು ಪ್ರಶಂಸಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ಸಿಂದಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರು ಮತ್ತು ರೋಗಿಗಳೊಂದಿಗೆ ಸಂವಾದ ನಡೆಸಿ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ ಇದೆ. ಆದರೂ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದರು.

ಆಸ್ಪತ್ರೆಯಲ್ಲಿನ ಜೌಷದಿಗಳು ಮತ್ತು ಇತರೆ ಸೌಲಭ್ಯಗಳ ಬಗ್ಗೆ ವೈದ್ಯರು ಮತ್ತು ಸಿಬ್ಬಂದಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಡಿಹೆಚ್ಓ ರವರಿಂದ ಮಾಹಿತಿ ಪಡೆದು ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಪಶು ಆಸ್ಪತ್ರೆಯಲ್ಲಿನ ಸೌಲಭ್ಯಗಳ ಪರಿಶೀಲನೆ: ಸಿಂಧಘಟ್ಟ ಗ್ರಾಮದ ಪಶು ಆಸ್ಪತ್ರಗೆ ಭೇಟಿ ನೀಡಿ ಔಷದಿಗಳ ಸಂಗ್ರಹ, ಆಸ್ಪತ್ರೆಯ ಮೂಲಭೂತ ಸೌಲಭ್ಯ ಹಾಗೂ ಲಸಿಕಾಕರಣದ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿನ ಪಶುಗಳ ಸಂಖ್ಯೆಗೆ ಅನುಗುಣವಾಗಿ ಔಷದಿಗಳ ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.

ಗ್ರಾ.ಪಂ. ಗ್ರಂಥಾಲಯಕ್ಕೆ ಮೆಚ್ಚುಗೆ: ಸಿಂಧಘಟ್ಟ ಗ್ರಾಮ ಪಂಚಾಯತ್ ಕಚೇರಿಯ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ನಿರ್ವಹಣೆ ಮತ್ತು ಗ್ರಂಥಾಲಯದಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಪಿಡಿಓ ವಾಣಿರ ಹಾಗೂ ಗ್ರಂಥಪಾಲಕರಾದ ವಸಂತಮ್ಮವರನ್ನು ಪ್ರಶಂಸಿಸಿದರು. ಗ್ರಾ.ಪಂ. ನಲ್ಲಿ 2 ಗ್ರಂಥಾಲಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಕಚೇರಿಯ ಅಭಿಲೇಖಾಲಯಕ್ಕೆ ಭೇಟಿ ನೀಡಿ ಗ್ರಾ.ಪಂ.ನ ಕಡತಗಳು ಮತ್ತು ಇ-ಸ್ವತ್ತು ದಾಖಲೆಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಪರಿಶೀಲಿಸಿದರು. ಅಭಿಲೇಖಾಲಯದ ನಿರ್ವಹಣೆ ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ ಕಡತಗಳನ್ನು ಎ,ಬಿ,ಸಿ,ಡಿ ಎಂದು ವಿಂಗಡಿಸಲಾಗುತ್ತಿದ್ದು ಒಂದು ತಿಂಗಳೊಳಗಾಗಿ ಅಭಿಲೇಖಾಲಯ ಪೂರ್ಣಗೊಳಿಸಲಾಗುವುದು ಎಂದು ಪಿಡಿಓ ರವರು ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಪರಿಶೀಲನೆ: ಸಿಂದಘಟ್ಟ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಹಾಸ್ಟೆಲ್ ನಲ್ಲಿ ನಿಗದಿತ ಮೆನು ಪ್ರಕಾರ ಗುಣಮಟ್ಟದ ಶುಚಿ, ರುಚಿಯಾದ ಊಟೋಪಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಶೌಚಾಲಯ, ಮಲಗುವ ಕೋಣೆ ಸೇರಿದಂತೆ ಇತರೆ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ವಸತಿ ನಿಲಯಗಳಲ್ಲಿನ ಕುಂದು ಕೊರತೆ ಆಲಿಸಲು ನೀಡಲಾಗಿರುವ ಸಹಾಯವಾಣಿ ಸಂಖ್ಯೆಯನ್ನು ಹಾಸ್ಟೆಲ್ ನ ಊಟದ ಹಾಲ್, ನೋಟೀಸ್ ಬೋರ್ಡ್ ಸೇರಿದಂತೆ ಇತರೆ ಕಡೆಗಳಲ್ಲಿ ಅಳವಡಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ವೈ.ಕೆ, ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರುದ್ರೇಶ್, ಬಿಸಿ ಊಟ ಯೋಜನೆಯ ಸಹಾಯಕ ನಿರ್ದೇಶಕ ಯತೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Trending

error: Content is protected !!