Connect with us

Mysore

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ

Published

on

ಸರಗೂರು
ತಾಲ್ಲೂಕಿನ ತಹಸೀಲ್ದಾರ್ ಕಛೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರ ರಂದು ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು ತಹಸೀಲ್ದಾರ್ ಪುಷ್ಪಾರ್ಚನೆ ಸಲ್ಲಿಸಿ ನಂತರ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ತಹಸೀಲ್ದಾರ್ರ್ ರುಕಿಯಾಬೇಗಂ ಮಾತನಾಡಿ
ಮಹಾನ್‌ ವ್ಯಕ್ತಿಗಳ ತತ್ವ-ಸಂದೇಶಗಳು ಸರ್ವಕಾಲಿಕವಾಗಿದ್ದು ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ, ಉತ್ತಮ ಸಮಾಜ ನಿರ್ಮಾಣದೊಂದಿಗೆ ಸದೃಢ ಭಾರತ ಹೊರಹೊಮ್ಮಲು ಸಾಧ್ಯವಿದೆ.ಎಂದರು.
ಮುಖ್ಯ ಭಾಷಣಕಾರಾದ ಜೆಎಸ್ಎಸ್ ಶಾಲೆಯ ಶಿಕ್ಷಕ ಸಿದ್ದಲಿಂಗಸ್ವಾಮಿ ಮಾತನಾಡಿ ಪುರಾಣ ಗ್ರಂಥಗಳ ಪ್ರಕಾರ ಸವಿತಾ ಮಹರ್ಷಿ ದೇವ ದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆಂದು ಕಾಶಿ ಕ್ಷೇತ್ರದಲ್ಲಿ ದೊರೆತ ಮಹಾಗ್ರಂಥದಲ್ಲಿ ಉಲ್ಲೇಖಿಸಲಾಗಿದೆ.
ಸವಿತಾ ಮಹರ್ಷಿಗಳು ಸಮಾಜದ ಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ನಮಗೆ ಬೆಳಕು ತೊರಿಸಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ನರಸಿಂಹ, ಉಪಾಧ್ಯಕ್ಷ ಸುರೇಶ, ಟೌನ್ ಅಧ್ಯಕ್ಷ ಬಸವರಾಜು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಜೆ, ಖಜಾಂಚಿ ಕಾಳಶಟ್ಟಿ, ಟೌನ್ ಉಪಾಧ್ಯಕ್ಷ ರಾಜು,ಗಡಿಯಜಮಾನ ಚಂದ್ರಶೇಖರ, ಚಿಕ್ಕ ಯಜಮಾನ ನಿಂಗರಾಜು,ಪಪಂ ಉಪಾಧ್ಯಕ್ಷ ವಿನಾಯಕ ಪ್ರಸಾದ್, ಮುಖ್ಯಾಧಿಕಾರಿ ಎಸ್ ಎಸ್ ಮಂಜುನಾಥ್, ಮುಖಂಡರು ರಾಮಚಂದ್ರ, ಕುಮಾರ್,ಮುರಾರಿ,ಮಾದೇವ್, ಗೋವಿಂದರಾಜು, ಜಯರಾಮ,ಕೂಸಣ್ಣ, ಗ್ರೇಡ್ 2 ತಹಸೀಲ್ದಾರ್ ಪರಶಿವಮೂರ್ತಿ, ಉಪತಹಸೀಲ್ದಾರ್ ಸುನೀಲ್, ಶೀರದ್ತಾರ್ ಗುರುರಾಜು, ಮುಜೀಬ್, ಸಿಬ್ಬಂದಿ ವರ್ಗದವರು ಹಾಗೂ ಮುಖಂಡರು ಸೇರಿದಂತೆ ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ಭೈರತಿ ಸುರೇಶ್ ಕುಟುಂಬ ಸಮೇತ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ

Published

on

ನಂಜನಗೂಡು ಸೆ.08

ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕುಟುಂಬ ಸಮೇತ ನಂಜನಗೂಡಿಗೆ ಭೇಟಿ ನೀಡಿ ಶ್ರೀ ನಂಜುಂಡೇಶ್ವರ ಸ್ವಾಮಿ ದೇವರ ದರ್ಶನ ಪಡೆದರು.

ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.

ದೇವಾಲಯದ ಸುತ್ತಲೂ ಪ್ರದಕ್ಷಣೆ ಹಾಕಿ, ನಂಜುಂಡೇಶ್ವರ, ಗಣಪತಿ, ಸುಬ್ರಮಣ್ಯ, ಚಂಡಿಕೇಶ್ವರ, ಪಾರ್ವತಮ್ಮ, ನಾರಾಯಣಸ್ವಾಮಿ‌ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ ಪುನೀತರಾದರು.

ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿ ಪ್ರತಿ ವರ್ಷವೂ ಶ್ರೀ ಚಾಮುಂಡೇಶ್ವರಿ ದೇವಾಲಯ ಮತ್ತು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಮೇತ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸುವುದು ನಮ್ಮ ಕುಟುಂಬದ ವಾಡಿಕೆಯಾಗಿದೆ. ಅದರಂತೆ ಇದು ಮನೆದೇವರಾದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ದರ್ಶನ ಪಡೆದಿದ್ದೇವೆ ಎಂದು ಸಚಿವ ಭೈರತಿ ಸುರೇಶ್ ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ನಗರಸಭೆ ಆಯುಕ್ತರು ನಂಜುಂಡಸ್ವಾಮಿ, ದೇವಸ್ಥಾನದ ಕಾರ್ಯನಿರ್ವಾಹಕಧಿಕಾರಿ ಜಗದೀಶ್, ಸೇರಿದಂತೆ ಇದ್ದರು.

Continue Reading

Mysore

ಶೋಷಿತ ಸಮುದಾಯಗಳ ಪರ ನಮ್ಮ ಸರ್ಕಾರ ಇರಲಿದೆ: ಡಾ.ಎಚ್.ಸಿ.ಮಹದೇವಪ್ಪ

Published

on

ಮೈಸೂರು: ಶೋಷಿತ ಸಮುದಾಯದ ಏಳಿಗೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ನಮ್ಮ ಸರ್ಕಾರದಿಂದ ಒದಗಿಸಲಾಗುವುದು. ಸಾಮಾಜಿಕ ಮತ್ತು ಆರ್ಥಿಕ ಸಬಲತೆಗಾಗಿ ಸರ್ಕಾರವು ಸಮುದಾಯದ ಪರ ಸದಾ ಇರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಭರವಸೆ ನೀಡಿದರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಾನುವಾರ ಕಲಾಮಂದಿರಲ್ಲಿ ಆಯೋಜಿಸಿದ್ದ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ನುಲಿಯ ಚಂದಯ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಚಿವರು ಮಾತನಾಡಿದರು.

ಸಮಾನತೆ ಹಾಗೂ ಸಮಾನ ಅವಕಾಶಗಳು ಸಂವಿಧಾನದ ಆಶಯವಾಗಿದೆ. ಅದನ್ನು ಸಾಕಾರಗೊಳಿಸುವುದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸಿ, ತುಳಿತಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತುವುದೇ ನಮ್ಮ ಸರ್ಕಾರದ ಪ್ರಮುಖ ಆಶಯವಾಗಿದೆ ಎಂದು ಹೇಳಿದರು.

ಹನ್ನೆರಡೇ ಶತಮಾನದ ಶರಣ ಚಳವಳಿಯನ್ನು ನೆನಪಿಸಿಕೊಳ್ಳುವ ಕಾರ್ಯಕ್ರಮ ಇದಾಗಿದೆ. ಸಾಮಾಜಿಕ ಪಿಡುಗು ಮತ್ತು ಮೌಢ್ಯಗಳನ್ನು ಪ್ರತಿಪಾದನೆ ಮಾಡುತ್ತ ವೈದಿಕಶಾಹಿಗಳು ಶ್ರಮಜೀವನಕ್ಕೆ ಒಗ್ಗದೆ ಕಾಯಕ ಸಮುದಾಯಗಳಲ್ಲಿ ಮೂಢನಂಬಿಕೆ ಬಿತ್ತು, ಅನೇಕ ಸಂಪ್ರದಾಯಗಳನ್ನು ಹೇರಿದರು. ಇದರ ವಿರುದ್ಧ ಬಸವಣ್ಣನವರು ಹೋರಾಟ ನಡೆಸಿದರು ಎಂದರು.

ಮೂಲಭೂತವಾದ ಮತ್ತು ಮೂಢನಂಬಿಕೆ ವಿರುದ್ಧ ಚಳವಳಿಯನ್ನು ಹುಟ್ಟುಹಾಕಿದ ಬಸವಣ್ಣನ ಸಮಕಾಲಿನವರಾದ ನುಲಿಯ ಚಂದಯ್ಯ ಅವರು ಶ್ರಮ ಹಾಗೂ ಕಾಯಕ ಸಂಸ್ಕೃತಿಯನ್ನು ನಂಬಿದವರು. ಸದಾ ಕಾಯಕ ಮತ್ತು ದಾಸೋಹ ಪರಿಕಲ್ಪನೆಯಲ್ಲಿ ತನ್ಮಯರಾಗಿದ್ದರು. ಸಮಸಮಾಜದ ನಿರ್ಮಾಣ ಮಾಡಲು ಸಾಮಾಜಿಕ ಪಿಡುಗು ಹಾಗೂ ಮೂಢನಂಬಿಕೆ ವಿರುದ್ಧ ಜನರಿಗೆ ಅರಿವು ಮೂಡಿಸಿದರು ಎಂದು ಹೇಳಿದರು.

ಭಾರತವು ಅನೇಕ ಧರ್ಮ, ಭಾಷೆ, ವೈವಿಧ್ಯವಾದ ಆಚಾರ ವಿಚಾರದ ನಡುವೆ ಏಕತೆಯನ್ನು ಕಾಣುತ್ತಾ ಬಂದಿದೆ. ಈ ದೇಶದ ಮೂಲನಿವಾಸಿಗಳು ದಲಿತರು‌. ಈ ಸಮುದಾಯದ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕ ಅಭಿವೃದ್ಧಿಗೆ ಸಂವಿಧಾನವಿದೆ. ಇದರೊಂದಿಗೆ ಅನುಭವ ಮಂಟಪದ ವಿಚಾರದ ಅಡಿಯಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ನಾವೆಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕುಂದೂರು ಮಠದ ಪೀಠಾಧಿಪತಿ ಶ್ರೀ ಶರತ್ ಚಂದ್ರ ಸ್ವಾಮೀಜಿ , ಸಾಲೂರು ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಸಾನಿಧ್ಯ ವಹಿಸಿದ್ದರು. ಶಾಸಕ ಹರೀಶ್ ಗೌಡ, ಮಾಜಿ ಶಾಸಕ ಜಿ.ಚಂದ್ರಣ್ಣ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಎಕೆಎಂಎಸ್ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ರಾಜ್ಯ ಉಪಾಧ್ಯಕ್ಷೆ ಭೀಮಪುತ್ರಿ ನಾಗಮ್ಮ, ಕೃಷ್ಣದೇವರಾಯ ವಿ.ವಿ. ಕುಲಪತಿ ಎನ್.ಮುನಿರಾಜು, ನಿವೃತ್ತ ಜಿಲ್ಲಾಧಿಕಾರಿ ಎಸ್.ಟಿ.ಅಂಜನ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ಪತ್ರಕರ್ತ ಮೋಹನ್ ಕಾಯಕ ಉಪಸ್ಥಿತರಿದ್ದರು.

Continue Reading

Mysore

ಮುಡಾ ಮಾಜಿ ಅಧ್ಯಕ್ಷ ಎಚ್. ವಿ.ರಾಜೀವ್ ವಿರುದ್ಧ ಶಾಸಕ ಶ್ರೀವತ್ಸ ವಾಗ್ದಾಳಿ

Published

on

ಮೈಸೂರು:
ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ.
ಒಂದೇ ದಿನದಲ್ಲಿ 848 ನಿವೇಶನ ಬಿಡುಗಡೆ ಮಾಡಿಸಿಕೊಂಡ ಪ್ರಕರಣ.
ಮುಡಾ ಮಾಜಿ ಅಧ್ಯಕ್ಷ ಎಚ್. ವಿ.ರಾಜೀವ್ ವಿರುದ್ಧ ಶಾಸಕ ಶ್ರೀವತ್ಸ ವಾಗ್ದಾಳಿ.
ಇಂತಹ ಹಗರಣಗಳಿಂದ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ರಾಜೀವ್ ಕಾಂಗ್ರೆಸ್ ಸೇರಿದ್ದಾರೆ.
ಇಲ್ಲದಿದ್ದರೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಪಕ್ಷ ಬಿಡಬಹುದಿತ್ತು.
ಸರ್ಕಾರ ಬದಲಾದ ಕಾರಣಕ್ಕೆ ತಮ್ಮ ರಕ್ಷಣೆಗೆ ರಾಜೀವ್ ಕಾಂಗ್ರೆಸ್ ಸೇರಿದ್ದಾರೆ.


ಜ್ಞಾನಗಂಗಾ ಹೌಸಿಂಗ್ ಸೊಸೈಟಿ ಅಧ್ಯಕ್ಷ ರಾಜೀವ್, ಮುಡಾ ಅಧ್ಯಕ್ಷ ಆದ ಸಂದರ್ಭದಲ್ಲಿ ಈ ನಿವೇಶನಗಳನ್ನು ಬಿಡುಗಡೆ ಮಾಡಿಸಿಕೊಂಡಿದ್ದಾರೆ.
ಬಡಾವಣೆ ಕಾಮಗಾರಿ ಸಂಪೂರ್ಣ ಆಗದಿರುವುದು, ಸ್ಥಳೀಯ ಸಂಸ್ಥೆಗಳಿಂದ ಎನ್‌ಒಸಿ ಪಡೆಯದೆ ನಿವೇಶನ ಬಿಡುಗಡೆ ಮಾಡಿಸಿಕೊಂಡಿರುವುದು ಅಕ್ರಮ.
ಇದರ ಬಗ್ಗೆ ಅಂದಿನ ಆಯುಕ್ತರೇ 2022ರಲ್ಲಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಇಲ್ಲಿ ಆಯುಕ್ತ ಕೇವಲ ಪತ್ರ ಬರೆದು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿದ್ದಾರೆ.
ಎರಡು ವರ್ಷ ಆದರೂ ಸರ್ಕಾರ ಯಾವುದೇ ಕ್ರಮ ವಹಿಸಿಲ್ಲ.
ಈಗಲಾದರೂ ತಪಿತಸ್ಥರ ವಿರುದ್ಧ ಕ್ರಮ ವಹಿಸಬೇಕು ಎಂಬುದು ನಮ್ಮ ವಾದ ಎಂದು ಶ್ರೀವತ್ಸ ಹೇಳಿದರು.

Continue Reading

Trending

error: Content is protected !!