Uncategorized
ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಸಾಧನೆ ಮಾಡುವುದೇ ಪೋಷಕರಿಗೆ ಕೊಡುವ ದೊಡ್ಡ ಕೊಡುಗೆ : ಶ್ರೀ ಶಂಭುನಾಥ ಸ್ವಾಮೀಜಿ
ಹಾಸನ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ ಕಲಿತು, ಓದುವ ಕಡೆ ಹೆಚ್ಚಿನ ಗಮನ ನೀಡಿ ಸಾಧನೆ ಮಾಡಿ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಇರುವುದೇ ನಾವು ಪೋಷಕರಿಗೆ ಕೊಡುವ ಬಹುದೊಡ್ಡ ಕೊಡುಗೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ತಿಳಿಸಿದರು..

ನಗರದ ಎಂ.ಜಿ ರಸ್ತೆಯ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ನಡೆದ ಬಿಜಿಎಸ್ ಪಿಯು ಕಾಲೇಜಿನ ಸ್ವಾಗತೋತ್ಸವ-೨೦೨೪ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಆಶೀರ್ವಚನದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನವನ್ನು ಸುಲಭವಾಗಿ ಪರಿಗಣಿಸಬೇಡಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಷ್ಟೇ ಕಲಿತರೂ ಸಾಲದು. ಅಧ್ಯಯನಶೀಲರಾಗಿ ಕೌಶಲ್ಯ,ಜ್ಞಾನ ಬೆಳೆಸಿಕೊಂಡು ನಮ್ಮ ಸ್ಥಾನವನ್ನು ನಾವು ಕಂಡುಹಿಡಿದುಕೊಳ್ಳದಿದ್ದರೆ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಬದುಕು ರೂಪಿಸುವ ವಿದ್ಯಾರ್ಥಿ ಜೀವನದಲ್ಲಿ ಸೋತರೆ ಜೀವನದುದ್ದಕ್ಕು ಕಷ್ಟದ ಹಾದಿಯಲ್ಲಿ ಕ್ರಮಿಸಬೇಕಾಗುತ್ತದೆ ಎಂದು ಕಿವಿಮಾತು ಹೇಳಿದರು. ಪೋಷಕರು ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ಉಣ ಬಡಿಸಬೇಕು.ಶಾಲಾ-ಕಾಲೇಜುಗಳಿಗೆ ಮಕ್ಕಳನ್ನು ದಾಖಲಿಸಿದ ಮಾತ್ರಕ್ಕೆ ತಮ್ಮ ಜವಾಬ್ದಾರಿ ಮುಗಿಯುವುದಿಲ್ಲ ತಮ್ಮ ಮಕ್ಕಳು ಹೇಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂಬುದನ್ನು ಅರಿಯಬೇಕು ಜೊತೆಗೆ ಅವರಿಗೆ ನಡೆ-ನುಡಿಯ ಬಗೆಗೆ ಮಾರ್ಗದರ್ಶನ ಮಾಡಬೇಕು ಆಗ ಮಾತ್ರ ವಿದ್ಯಾರ್ಥಿಗಳು ಈ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದರು.

ಸಂಪನ್ಮೂಲ ವ್ಯಕ್ತಿ ಡಾ.ಹೇಮಚಂದ್ರ ಮಾತನಾಡಿ, ಕಷ್ಟಕರವಾದ ಹಾದಿ ನಮ್ಮನ್ನು ಸುಂದರವಾದ ಪ್ರದೇಶಕ್ಕೆ ಕರೆದೊಯ್ಯುತ್ತದೆ ಎಂಬುದನ್ನು ಮರೆಯಬೇಡಿ ಅಂತೆಯೇ ಕಷ್ಟಪಟ್ಟು ವಿದ್ಯಾಭ್ಯಾಸ ನಡೆಸುವ ವಿದ್ಯಾರ್ಥಿಗೆ ಮುಂದೆ ಉತ್ತಮ ಭವಿಷ್ಯವಿರುತ್ತದೆ. ವಿದ್ಯಾರ್ಥಿ ದೆಸೆಯಲ್ಲಿ ಓದಲು ಅಸಡ್ಡೆ ತೋರಿದರೆ ಮುಂದಿನ ಬದುಕು ಕಷ್ಟವಾಗುತ್ತದೆ. ಹಾಗಾಗೀ ದೊಡ್ಡ ಗುರಿ ಮುಂದಿಟ್ಟುಕೊಂಡು ಉತ್ತಮ ವಿದ್ಯಾಭ್ಯಾಸ ನಡೆಸಿ ಸಾಧಕರಾಗಿ ಹೊರಹೊಮ್ಮಿ ಎಂದು ಸಲಹೆ ನೀಡಿದರು. ಬದುಕಿನಲ್ಲಿ ಸಾಧನೆ ಇಲ್ಲದೇ ಸತ್ತರೆ ಆ ಸಾವಿಗೆ ಅವಮಾನವಂತೆ. ಅಂತೆಯೇ ಈ ಪ್ರೌಢಾವಸ್ಥೆ ಹಗ್ಗದ ಮೇಲಿನ ನಡೆಗೆಯಂತೆ ಬಹಳ ಜಾಗರೂಕರಾಗಿರಬೇಕು. ಇದರಲ್ಲಿ ನೀವು ಯಶಸ್ವಿಯಾದರೆ ಸಮಾಜ ನಿಮ್ಮನ್ನು ಗುರಿಸುತ್ತದೆ ಹಾಗೂ ಗೌರವಿಸುತ್ತದೆ ಇಲ್ಲವಾದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್. ಮಲ್ಲೇಶಗೌಡ ಮಾತನಾಡಿ, ಪೋಷಕರು ಮಕ್ಕಳ ಬಗ್ಗೆ ಹಲವು ಕನಸುಗಳನ್ನು ಹೊತ್ತಿರುತ್ತಾರೆ. ಶಿಕ್ಷಕರು ಕೂಡ ತಮ್ಮ ವಿದ್ಯಾರ್ಥಿಗಳ ಸಾಧನೆಯನ್ನು ಕಣ್ತುಂಬಿಕೊಳ್ಳಲು ತುದಿಗಾಗಲ್ಲಿ ನಿಂತಿರುತ್ತಾರೆ. ಮಕ್ಕಳ ಯಶಸ್ಸು ವಿದ್ಯಾರ್ಥಿಗಳಿಗೆ ಸ್ವರ್ಗ ಸದೃಶ್ಯವಾಗಿರುತ್ತದೆ ಹಾಗಾಗೀ ಇದರ ಮೌಲ್ಯವನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದರು.

ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆದ ಬಿಜಿಎಸ್ ಪಿಯು ಕಾಲೇಜಿನ ಸ್ವಾಗತೋತ್ಸವ-೨೦೨೪ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಕಾಲೇಜಿನವತಿಯಿಂದ ಸನ್ಮಾನಿಸಲಾಯಿತು.
ಈ ಜಗತ್ತಿನಲ್ಲಿ ಅಸಾಧ್ಯವಾದುದ್ದು ಯಾವುದು ಇಲ್ಲ ಹಠ,ಛಲವಿದ್ದರೆ ಏನು ಬೇಕಾದರೂ ಸಾಧಿಸಬಹುದು. ಬಡತನದಲ್ಲಿ ವಿದ್ಯಾಭ್ಯಾಸ ಮಾಡಿದ ಅದೆಷ್ಟೋ ವಿದ್ಯಾರ್ಥಿಗಳು ಇಂದು ಮಹತ್ತರವಾದ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಿವುದನ್ನು ನಾವೆಲ್ಲ ನೋಡಿದ್ದೇವೆ, ಕೇಳಿದ್ದೇವೆ ಈ ನಿಟ್ಟಿನಲ್ಲಿ ಎಲ್ಲರೂ ಯೋಚಿಸಬೇಕು ಸಾಧನೆಯೊಂದನ್ನೆ ಮುಖ್ಯವಾಗಿರಿಸಿಕೊಂಡು ಮುನ್ನಡೆದು ಯಶಸ್ಸು ಗಳಿಸಿ ಎಂದರು.
ಕಾರ್ಯಕ್ರಮದಲ್ಲಿ ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಮೋಹನ್,ಶ್ರೀ ಮಠದ ವ್ಯವಸ್ಥಾಪಕ ಚಂದ್ರಶೇಖರ್, ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ ಇತರರು ಉಪಸ್ಥಿತರಿದ್ದರು.
Kodagu
ಉಡೋತ್ ಮೊಟ್ಟೆ : ಡಿ.6 & 7 ರಂದು ಕೊರಗಜ್ಜ ದೈವದ ನೇಮೋತ್ಸವ
ಮಡಿಕೇರಿ : ಉಡೋತ್‌ಮೊಟ್ಟೆಯ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ಡಿ.6ಮತ್ತು 7 ರಂದು ಐದನೇ ವರ್ಷದ ನೇಮೋತ್ಸವ ನಡೆಯಲಿದೆ.
ಡಿ.6ರಂದು ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಗೆ ದೈವದ ಭಂಡಾರ ಇಳಿಯುವುದು. ರಾತ್ರಿ 9 ಗಂಟೆಯಿಂದ ಡಿ.7ರ ಮಧ್ಯಾಹ್ನದ ವರೆಗೆ ಪರಿವಾರ ಸತ್ಯ ದೈವಗಳಾದ ಶ್ರೀ ಧರ್ಮದೈವ, ಪಂಜುರ್ಲಿ, ಶ್ರೀ ಸತ್ಯ ದೈವ ಕಲ್ಲುರ್ಟಿ, ಶ್ರೀ ಮಂತ್ರವಾದಿ ಗುಳಿಗ ಹಾಗೂ ಶ್ರೀ ಸಾರ್ಲಪಟ್ಟದ ಸ್ವಾಮಿ ಕೊರಗಜ್ಜ ದೈವದ ನೇಮ ಜರುಗಲಿದೆ.

ಎರಡು ದಿನವೂ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೈವಸ್ಥಾನದ ಪ್ರಮುಖರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9900931278 , 9591304757೯೫೯೧೩೦೪೭೫೭, ೯೪೮೩೩೯೯೦೭೭ ಸಂಪರ್ಕಿಸಬಹುದಾಗಿದೆ.
Uncategorized
ತರಳಬಾಳು ಸಮಾಗಮ, ಶಿಕ್ಷಣ ಕೇಂದ್ರದಿಂದ ರಾಜ್ಯೋತ್ಸವ, ದತ್ತಿ ಉಪನ್ಯಾಸ
ಮೈಸೂರು: ನಗರದ ಟಿ.ಕೆ. ಬಡಾವಣೆಯ ತರಳಬಾಳು ಶಿಕ್ಷಣ ಕೇಂದ್ರದಲ್ಲಿ ತರಳಬಾಳು ಸಮಾಗಮ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವ ಹಾಗೂ ಎಚ್.ಎಸ್. ರುದ್ರಪ್ಪ, ರೇವಮ್ಮ ಹಾಗೂ ಆರ್.ಬಿ. ಚನ್ನಬಸಪ್ಪ, ಎನ್. ಸುವರ್ಣ ಮತ್ತು ಎಚ್. ಗುರುಸಿದ್ದಪ್ಪ, ಕಲ್ಲಮ್ಮ ಹಾಗೂ ಎಂ. ಸಿದ್ದಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಉದ್ಘಾಟಿಸಿದರು. ಜೆಎಸ್ಎಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಎಲ್. ತಿಪ್ಪೇಸ್ವಾಮಿ ಉಪನ್ಯಾಸ ನೀಡಿದರು.

ತರಳಬಾಳು ಸಮಾಗಮ ಅಧ್ಯಕ್ಷ ಡಿ.ಎನ್. ಲೋಕಪ್ಪ ಅಧ್ಯಕ್ಷತೆ ವಹಿಸಿದ್ದರು. ತರಳಬಾಳು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್. ಮಹದೇವಸ್ವಾಮಿ, ಡಾ.ಎಚ್.ಎಸ್. ರುದ್ರೇಶ್ ಇದ್ದರು. ತರಳಬಾಳು ಸಮಾಗಮದ ಕಾರ್ಯದರ್ಶಿ ಶಿವಕುಮಾರ್ ಹಂಜಿ ಸ್ವಾಗತಿಸಿದರು. ದಾಕ್ಷಾಯಿಣಿ ಕಾರ್ಯಕ್ರಮ ನಿರೂಪಿಸಿದರು.
ಕನ್ನಡದಲ್ಲಿ ಅಧಿಕ ಅಂಕಗಳನ್ನು ಪಡೆದ ಪಿಯುಸಿಯ ಮೌರ್ಯ ಲೋಕೇಶ್, ಸಿ.ಎಸ್. ನಿಶ್ಚಲ್, ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಎಂ. ಧನುಷ್ ಹಾಗೂ ಜಿ. ನಮಿತಾ ಅವರಿಗೆ ಪುರಸ್ಕಾರ ನೀಡಲಾಯಿತು. ಆರು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳು ನೃತ್ಯ, ಸಾನ್ವಿ ಹಾಗೂ ಕವನ ಅವರು ಕನ್ನಡ ಭಾವಗೀತೆ ಹಾಡಿದರು.
Mysore
ಖೋಖೋ ಪಂದ್ಯಾವಳಿಗೆ ಚಾಲನೆ
ಮೈಸೂರು: ನಗರದ ಪ್ರತಿಷ್ಠಿತ ಚಾಮುಂಡಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಇಂದು ಏರ್ಪಡಿಸಿದ್ದ ಖೋಖೋ ಪಂದ್ಯಾವಳಿಯನ್ನು ನಟ ಜಯಪ್ರಕಾಶ್ (ಜೆಪಿ) ಉದ್ಘಾಟಿಸಿದರು. ಕ್ರೀಡಾಪಟುಗಳು ಸತತವಾಗಿ ಅಭ್ಯಾಸ ಮಾಡುವುದರ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಟಗಾರರಾಗಬೇಕೆಂದು ಜೆಪಿ ರವರು ಕ್ರೀಡಾಪಟುಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರಾದ ಹನುಮಂತೇಗೌಡ ರಘು ಆಚಾರ್, ಶ್ರೀನಿವಾಸ್ ಗೌಡ್ರು ಸುಧೀರ್ ಆದರ್ಶ್ ಗೌಡ ಮತ್ತು ರಾಘವೇಂದ್ರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
-
State22 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan19 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan22 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya18 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Mysore23 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Hassan23 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore16 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Hassan20 hours agoಹಾಸನದಲ್ಲಿ ಸರ್ಕಾರಿ ಸೇವೆಗಳ ಸಮರ್ಪಕ ಸಮರ್ಪಣಾ ಸಮಾವೇಶ ಹಿನ್ನೆಲೆ
