Connect with us

Mandya

ಮಿಸ್ಟರ್ ಎಂಎಲ್ಎ ನಿನಗೆ ರಾಜಕೀಯ ಜೀವದಾನ ಕೊಟ್ಟಿದ್ದು ಯಾರಪ್ಪಾ…

Published

on

ಮಂಡ್ಯ: ಮಿಸ್ಟರ್ ಎಂಎಲ್ಎ ನಿನಗೆ ರಾಜಕೀಯ ಜೀವದಾನ ಮಾಡಿದ್ದು ಯಾರಪ್ಪಾ… ಎಂದು ಮಾಜಿ ಶಾಸಕ ಅನ್ನದಾನಿ, ಶಾಸಕ ನರೇಂದ್ರ ಸ್ವಾಮಿ‌ ವಿರುದ್ದ ಪರೋಕ್ಷವಾಗಿ ಗುಡುಗಿದರು.

ಮಳವಳ್ಳಿಯ ಶ್ರೀ ಕನಕದಾಸರ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಂಡ್ಯ ಲೋಕಸಭಾ ಎನ್ ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ‌ ಪರ ಬೃಹತ್ ಸಮಾವೇಶದಲ್ಲಿ ಮಳವಳ್ಳಿ ಶಾಸಕರ ವಿರುದ್ದ ಹರಿಹಾಯ್ದರು.

ಇವತ್ತು ಕುಮಾರಸ್ವಾಮಿ ರವರು ಏನು ಕೊಡುಗೆ ಕೊಟ್ಟಿದ್ದಾರೆ ಎನ್ನುವ ನೀನು, ಅವರಿಂದ ಏನು ಜೀವದಾನ ಪಡೆದುಕೊಂಡಿದ್ದೀರಿ ಎಂಬುದನ್ನು ನೀವೆ ಪ್ರಶ್ನೆ ಮಾಡಿಕೊಳ್ಳಿ.

ಸಂವಿಧಾನವನ್ನು ತಿದ್ದುಪಡಿ ಮಾಡಿದವರು ಯಾರು, ಎಮರ್ಜೆನ್ಸಿ ಘೋಷಣೆ ಮಾಡಿ ಸಂವಿಧಾನ‌ ತಿದ್ದುಪಡಿ ಮಾಡುವ ಮೂಲಕ ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದವರು ಯಾರು ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದರು.

Continue Reading
Click to comment

Leave a Reply

Your email address will not be published. Required fields are marked *

Mandya

ಮಂಡ್ಯ ಪಾದಯಾತ್ರೆಯಲ್ಲಿ ಪ್ರೀತಂಗೌಡ; ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮುಕಿ

Published

on

ಮಂಡ್ಯ : ಬಿಜೆಪಿ ಹಾಗೂ ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯಲ್ಲಿ ಹಾಸನ ಬಿಜೆಪಿ ನಾಯಕ ಪ್ರೀತಂಗೌಡ ಯಾವುದೇ ಕಾರಣಕ್ಕೂ ಭಾಗಿಯಾಗಬಾರದು ಎಂದು ನೇರವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಗೆ ಮಂಡ್ಯದಲ್ಲಿ ಇರಿಸು ಮುರಿಸು ಉಂಟು ಮಾಡಿಸಲಾಗಿದೆ.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವೇಳೆ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿಯ ಮಂಡ್ಯದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಕೇಸರಿ ಶಾಲು ಧರಿಸಿಕೊಂಡು ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.

 

ಐದನೇ ದಿನದ ಪಾದಯಾತ್ರೆ ವೇಳೆ ಮಂಡ್ಯದಲ್ಲಿ ಕಾಣಿಸಿಕೊಂಡ ಮಾಜಿ ಶಾಸಕ ಪ್ರೀತಂಗೌಡ ಅವರನ್ನು ಬಿಜೆಪಿ ಕಾರ್ಯಕರ್ತರು ಹೆಗಲ ಮೇಲೆ ಹೊತ್ತುಕೊಂಡು ‘ಹಾಸನದ ಹುಲಿ’ ಎಂದು ಘೋಷಣೆ ಕೂಗಿ ಸಂಭ್ರಮ ವ್ಯಕ್ತಪಡಿಸಿದರು.

ಜೆಡಿಎಸ್‌ ಕಾರ್ಯಕರ್ತರು ಎದುರು ಬರುತ್ತಿದ್ದಂತೆ ಪ್ರೀತಂಗೌಡ ಬೆಂಬಲಿಗರು, “ಗೌಡಾ ಗೌಡಾ.. ಪ್ರೀತಂ ಗೌಡಾ” ಎಂದು ಕೂಗು ಹಾಕಿದರು. ಇದಕ್ಕೆ ಜೆಡಿಎಸ್‌ ಕಾರ್ಯಕರ್ತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಕ್ಷಣಕಾಲ ಮಾತಿನ ಚಕಮಕಿ ನಡೆದು, ಗಲಾಟೆ ಉಂಟಾಯಿತು.

ಜೊತೆಗೆ ಮಂಡ್ಯ ನಗರ ಪ್ರವೇಶದ ಆರಂಭದಲ್ಲೇ ಪ್ರೀತಂ ಗೌಡ ಫ್ಲೆಕ್ಸ್ ಹಾಕಲಾಗಿದೆ. ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿ ಲಾರಿಗೆ ಫ್ಲೆಕ್ಸ್ ಅಳವಡಿಸಲಾಗಿದೆ. ಪ್ರೀತಂ ಗೌಡಗೆ ಸ್ವಾಗತ ಕೋರುವ ಫ್ಲೆಕ್ಸ್​ಗಳನ್ನು ಮಂಡ್ಯ ನಗರ ಪ್ರವೇಶದಲ್ಲೇ ರಸ್ತೆಯ ಬದಿಗಳಲ್ಲಿ ಅಳವಡಿಕೆ ಮಾಡಲಾಗಿದ್ದು, ಪ್ರತಿ ಫ್ಲೆಕ್ಸ್‌ನಲ್ಲಿ ಪ್ರೀತಂ ಗೌಡ ಫೋಟೋ ರಾರಾಜಿಸುತ್ತಿದೆ.

“ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಕುಟುಂಬಕ್ಕೆ ವಿಷ ಹಾಕಿದವರನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡಲಾಗುತ್ತಿದೆ. ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿದವರ ಜೊತೆ ವೇದಿಕೆ ಹಂಚಿಕೊಳ್ಳಬೇಕಾ? ಪಾದಯಾತ್ರೆಗೆ ಇದಕ್ಕೆ ಜೆಡಿಎಸ್ ಬೆಂಬಲ ನೀಡಲ್ಲ” ಎಂದು ಕುಮಾರಸ್ವಾಮಿ ಪ್ರೀತಂ ಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈಗ ಮಂಡ್ಯದಲ್ಲಿ ಪ್ರೀತಂ ಗೌಡ ಆಗಮಿಸಿರುವುದಕ್ಕೆ ಮತ್ತು ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರ ನಡುವಿನ ಮಾತಿನ ಚಕಮುಕಿ ಸಂಭವಿಸಿದೆ.

ಮಂಡ್ಯದಲ್ಲಿ ಪ್ರೀತಂ ಗೌಡ ಮೆರವಣಿಗೆಯ ವಿಡಿಯೋವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಹಲವರು, ಹಾಸನದಲ್ಲಿ ಜೆಡಿಎಸ್ ಕಥೆ ಮುಗಿಯಿತು, ಇನ್ನೂ ಮಂಡ್ಯದ ಮೇಲೆ ಬಿಜೆಪಿಯ ಕಣ್ಣು ಬಿದ್ದಿದೆ, ಅದಕ್ಕಾಗಿಯೇ ಪ್ರೀತಂ ಗೌಡನನ್ನು ಕರೆತಂದಿದ್ದಾರೆ, ಇನ್ನು ಮುಂದೆ ಇನ್ನೇನಾಗುವುದೋ ಎಂದು ಕಮೆಂಟ್ ಮಾಡಿದ್ದಾರೆ.

Continue Reading

Mandya

ಬಹಿರಂಗ ಸಭೆಯಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದು ವಿಜಯೇಂದ್ರ, ಅಶೋಕ್*

Published

on

*ಬಹಿರಂಗ ಸಭೆಯಲ್ಲಿ ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದು ವಿಜಯೇಂದ್ರ, ಅಶೋಕ್*

ಮಂಡ್ಯ : ಮೈಸೂರು ಮೂಡಾ ಹಗರಣ ಖಂಡಿಸಿ ಮೈಸೂರು ಚಲೋ ಪಾದಯಾತ್ರೆ ನಡುಸುತ್ತಿರುವ ವೇಳೆ ನಗರದ ಸಂಜಯ ವೃತ್ತದಲ್ಲಿನ ಬಹಿರಂಗ ಸಭೆಯಲ್ಲಿ ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಸಿಎಂ ಹಾಗೂ ಡಿಸಿಎಂ ವಿರುದ್ಧ ಹರಿಹಾಯ್ದರು.

ಬಹಿರಂಗ ಸಭೆಯಲ್ಲಿ ಬಿ.ವೈ ವಿಜಯೇಂದ್ರ ಮಾತನಾಡಿ, ಎಸ್.ಎಂ.ಕೃಷ್ಣ, ಯಡಿಯೂರಪ್ಪ ಅವರಿಗೆ ಜನ್ಮ ಕೊಟ್ಟಿರೋ ಪುಣ್ಯ ಭೂಮಿ ಮುಡ್ಯ. ಅಹಿಂದ ಹೆಸರು ಹೇಳಿಕೊಂಡು ಸಿದ್ದರಾಮಯ್ಯ ಸರ್ಕಾರ ಅಧಿಕಾರ ಹಿಡಿದಿದ್ದಾರೆ. ಇದೀಗ ಭ್ರಷ್ಟಾಚಾರದಲ್ಲಿ ಈ ಸರ್ಕಾರ ಮುಳುಗಿದೆ ಭ್ರಷ್ಟ ಮುಖ್ಯಮಂತ್ರಿಯಿಂದ ಜನರಿಗೆ ನ್ಯಾಯ ಸಿಗಲು ಸಾಧ್ಯವಿಲ್ಲ. ಹಗಲು ದರೋಡೆಯನ್ನು ಈ ಸರ್ಕಾರ ಮಾಡ್ತಾ ಇದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಿಗೆ ಈ ಸರ್ಕಾರ ಅನ್ಯಾಯ ಮಾಡ್ತಾ ಇದ್ದಾರೆ. ಎಸ್‌ಐಟಿ ಅಂದ್ರೆ ಸಿದ್ದರಾಮ ಇನ್ನೇಸಿಕೇಷನ್ ಟೀಂ. ಇಂತಹ ಭ್ರಷ್ಟ ಕಾಂಗ್ರೆಸ್‌ನ್ನು ಧಿಕ್ಕರಿಸಬೇಕು ನಾವು ಭ್ರಷ್ಟ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡ್ತಾ ಇದೀವಿ ಭ್ರಷ್ಟ ಸಿಎಂ ಸಿದ್ದರಾಮಯನ್ನು ಕೆಳಗೆ ಇಳಿಸುವವರೆಗೆ ನಮ್ಮ ಹೋರಾಟ ನಿಲ್ಲಲ್ಲ. ನಮ್ಮ ಈ ಹೋರಾಟಕ್ಕೆ ರಾಜ್ಯದ ವಿವಿಧ ಭಾಗಳಿಂದ ಬಂದಿದ್ದಾರೆ ಎಂದರು.

ವಿಪಕ್ಷ ನಾಯಕ ಆರ್
ಅಶೋಕ್ ಮಾತನಾಡಿ, ಇದು ಪಾದಯಾತ್ರೆ ಅಲ್ಲ. ಜನಯಾತ್ರೆ ಸಿದ್ಧರಾಮಯ್ಯ ಅವರಿಗೆ ಮಹೂರ್ತ ಫಿಕ್ಸ್ ಆಗಿದೆ. ರಾಜೀನಾಮೆ ನೀಡಲು ಮಹೂರ್ತ ಫಿಕ್ಸ್ ಆಗಿದೆ. ಕುಂಕುಮಕ್ಕೆ 7. ಅರಶಿಣಕ್ಕೆ 7 ಸೈಟ್ ಕೊಟ್ಟಿದ್ದಾರೆ. ನಿಮಗೆ ನಡೆಸಿದರು. H ಬಂದಿತ್ತಾ..? ನಿಮಗೆ ಜ್ಞಾನ ಬೇಡವೇ ? ಎಂದು ಸಿದ್ದರಾಮಯ್ಯ ವಿರುದ್ಧ ವಿರುದ್ಧ ವಾಗ್ದಾಳಿ

ಮುಖ್ಯಮುತ್ರಿಯಾಗಿ ನಿಮಗೆ ಜ್ಞಾನ ಇರಬೇಕಲ್ವಾ.? ಗಬ್ಬು ಹಿಡಿದಿರುವ ಮೂಡದಲ್ಲಿ ಯಾಕೆ ಸೈಟ್ ಬರಿಸಿಕೊಂಡಿರೀ..? ದಲಿತ ಕುಟುಂಬದಿಂದ ಹೇಗೆ ಸೈಟ್ ಬರಿಸಿಕೊಂಡಿರಿ..? ಅವರ ಅಸ್ತಿ ಕಬಳಿಸಿದ್ದೀರಿ. ಇದು ನ್ಯಾಯಾನಾ..? ನೀನು ಸಿಎಂ ಆಗಿ ಜಮೀನು ಕಬಳಿಸಿದ್ದೀಯಾ ನ್ಯಾಯನಾ ? ಸತ್ತಿರುವವನ ಹೆಸರಿಗೆ ಡಿನೋಟಿಫಿಕೇಷನ್ ಮಾಡಿಸಿದ್ದಾರೆ. ಪ್ರತಿ ಹಂತದಲ್ಲೂ ಸಿದ್ದರಾಮಯ್ಯ ಅವರ ಪಾತ್ರ ಇದೆ. ಜಮೀನು ಐದು ಲಕ್ಷಕ್ಕೆ ಪಡೆದು ಇದೀಗ 62 ಕೋಟಿ ಕೇಳುತ್ತಿದ್ದಾರೆ. ಇದು ಲೂಟಿನಾ ? ಭಷ್ಟಚಾರದ ಕೂಪನಾ.? ಎಂದು ಪ್ರಶ್ನಿಸಿದರು.

ಸಿದ್ದರಾಮುಖ್ಯ ಅವರಿಗೆ ಬೆನ್ನಿಗೆ ಚೂರಿ ಹಾಕುವವರು ಪಕ್ಕದಲ್ಲೇ ಕುಳಿತಿದ್ದಾರೆ. ಕಾಂಗ್ರೆಸ್ ನಲ್ಲೆ ಬೆನ್ನಿಗೆ ಚೂರಿ ಹಾಕುವವರು ಇದ್ದಾರೆ. ವಿರೋಧ ಪಕ್ಷದಲ್ಲಿ ಇದ್ದಾಗ ಮಣ್ಣು ತಿನ್ನುತ್ತಿದ್ದೀರಾ..? ಅವಾಗ ಯಾಕೆ ಹಗರಣದ ಬಗ್ಗೆ ತಕ್ಕೆ ಮಾಡಲಿಲ್ಲ. ? ಈ ಹೋರಾಟ ಸಿದ್ದರಾಮಯ್ಯ ಲೂಟಿ ಮಾಡಿರುವ ಬಗ್ಗೆ. ಈ ಸೈಟ್ ಗಳು ವಾಪಾಸ್ ಬರಬೇಕು. ಈ ಪಾದಯಾತ್ರೆಯನ್ನ ದಾರಿ ತಪ್ಪಿಸಬೇಡಿ ಡಿ.ಕೆ.ಶಿವಕುಮಾರ್ ಎಂದು ಗುಡುಗಿದರು.

Continue Reading

Mandya

ಅಪರ ಸರ್ಕಾರಿ ವಕೀಲ ಹುದ್ದೆಗೆ ಅರ್ಜಿ ಆಹ್ವಾನ

Published

on

ಮಂಡ್ಯ: ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಸದರಿ ಹುದ್ದೆಗೆ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸುವುದು, .

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು,
ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು.

ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Trending

error: Content is protected !!