Hassan
ಮಾಧ್ಯಮ ಕ್ಷೇತ್ರಕ್ಕೆ ಹೆಚ್ಚು ಮಹಿಳೆಯರು ಬರಬೇಕು , ಪತ್ರಕರ್ತರ ಮಿಲನ ಸಮಾರಂಭದಲ್ಲಿ ಸಮ್ಜಾನಾ ಪೌಡಲ್ ಅಭಿಪ್ರಾಯ

ಹಾಸನ: ನೇಪಾಳ ಪತ್ರಿಕೋದ್ಯಮಕ್ಕೆ ಆರು ದಶಕಗಳ ಇತಿಹಾಸ ಇದ್ದು, ಇಲ್ಲಿನಂತೆಯೇ ಅಲ್ಲಿಯೂ ಮಹಿಳೆಯರ ಸಂಖ್ಯೆ ಕಡಿಮೆ ಇದೆ. ಹೆಚ್ಚು ಮಹಿಳಾ ಪತ್ರಕರ್ತರು ಮಾಧ್ಯಮ ಕ್ಷೇತ್ರಕ್ಕೆ ಬರಬೇಕೆಂದು ನೇಪಾಳ ದೇಶದ ಹಿರಿಯ ಪತ್ರಕರ್ತರಾದ ಸಮ್ಜಾನಾ ಪೌಡಲ್ ಅಭಿಪ್ರಾಯಪಟ್ಟರು.
ನಗರದ ಹೊರವಲಯದಲ್ಲಿರುವ ಪವನಪುತ್ರ ರೆಸಾರ್ಟ್ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಹಾಸನ, ಕೊಡಗು, ಚಿಕ್ಕಮಗಳೂರು ಮಲೆನಾಡು ಮೂರು ಜಿಲ್ಲೆಗಳ ಪತ್ರಕರ್ತರೊಂದಿಗೆ ನೇಪಾಳ, ಶ್ರೀಲಂಕಾ ಪತ್ರಕರ್ತರ ಬಾಂಧವ್ಯ ಬೆಸೆದ ಮಿಲನ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಪತ್ರಕರ್ತರು ಕೌಟುಂಬಿಕ ಜವಾಬ್ದಾರಿಗಳ ಜತೆಗೆ ಪತ್ರಿಕೋದ್ಯಮದ ಕೆಲಸಗಳನ್ನು ನಿಬಾಯಿಸುವುದು ಕಷ್ಟಕರ ಎನ್ನುವ ಕಾರಣಕ್ಕಾಗಿ ಹೆಚ್ಚಿನ ಸ್ತ್ರೀಯರು ಪತ್ರಿಕೋದ್ಯಮಕ್ಕೆ ಬರುತ್ತಿಲ್ಲ. ಕರೊನಾ ಸಮಯದಲ್ಲಿ ಪತ್ರಕರ್ತರು ಎಲ್ಲೆಡೆ ಓಡಾಡುತ್ತಾರೆ. ಸೋಂಕು ಹರಿಡಿಸುತ್ತಾರೆ ಎನ್ನುವ ಕಾರಣಕ್ಕಾಗಿ ಮನೆ ಮಾಲೀಕರು ಬಾಡಿಗೆಗೆ ಮನೆ ನೀಡುತ್ತಿರಲಿಲ್ಲ. ಬಾಡಿಗೆಗಿದ್ದ ಪತ್ರಕರ್ತರನ್ನು ಮನೆ ಖಾಲಿ ಮಾಡುವಂತೆ ಒತ್ತಡ ಹೇರುತ್ತಿದ್ದರ. ಅಂತಹ ಸಮಸ್ಯೆಗಳ ನಡುವೆಯೂ ನಾನು ಪತ್ರಕರ್ತೆಯಾಗಿ ಉಳಿದಿದ್ದೇನೆ. ಹಾಸನದ ಪತ್ರಕರ್ತರೊಂದಿಗಿನ ಒಡನಾಟ ಅದ್ಭುತ ಅನುಭವ ನೀಡಿದೆ ಎಂದರು. ಒಳಗೊಳ್ಳುವಿಕೆ, ಲಿಂಗ ಸಮಾನತೆ ಮತ್ತು ಪತ್ರಿಕೋದ್ಯಮದ ಸಮಗ್ರತೆಯ ಸಂರಕ್ಷಣೆಗಾಗಿ ನಾವು ಶ್ರಮಿಸೋಣ. ಒಟ್ಟಾಗಿ, ನೇಪಾಳಿ ಪತ್ರಕರ್ತರ ಒಕ್ಕೂಟದಂತಹ ಸಂಸ್ಥೆಗಳು ಮತ್ತು ಗಡಿಯುದ್ದಕ್ಕೂ ಸಹಯೋಗದ ಪ್ರಯತ್ನಗಳ ಮೂಲಕ, ನಾವು ಸವಾಲುಗಳನ್ನು ಜಯಿಸಬಹುದು ಮತ್ತು ಮುಕ್ತ ಮತ್ತು ಜವಾಬ್ದಾರಿಯುತ ಪತ್ರಿಕಾ ತತ್ವಗಳನ್ನು ಎತ್ತಿಹಿಡಿಯಬಹುದು ಎಂದು ಹೇಳಿದರು.
ಶ್ರೀಲಂಕಾದ ಹಿರಿಯ ಪತ್ರಕರ್ತೆ ಪತುಮ್ ತಿಲಂಕಾ ವಿಕ್ರಮ ಸಿಂಗೇ ಮಾತನಾಡಿ, ಡಿಜಿಟಲ್ ಪ್ಲಾಟ್ ಫಾರ್ಮ್‌ಗಳು ಕಾಮೆಂಟ್‌ಗಳ ವಿಭಾಗಗಳು, ಲೈವ್ ಚಾಟ್‌ಗಳು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಎಲ್ಲರ ತೊಡಗಿಸಿಕೊಳ್ಳುವಿಕೆಯಂತಹ ಸಂವಾದಾತ್ಮಕ ವೈಶಿಷ್ಟ್ಯಗಳ ಮೂಲಕ ತಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ಪತ್ರಕರ್ತರನ್ನು ಸಕ್ರಿಯಗೊಳಿಸಿವೆ. ಈ ದ್ವಿಮುಖ ಸಂವಹನವು ಸಮುದಾಯದ ಪ್ರಜ್ಞೆಯನ್ನು ಬೆಳೆಸುತ್ತದೆ ಮತ್ತು ಮಾಧ್ಯಮ ಉದ್ಯಮದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಪ್ರೋತ್ಸಾಹಿಸುತ್ತದೆ ಎಂದರು. ನಿರಂತರವಾಗಿ ವಿಕಸನಗೊಳ್ಳುತ್ತಿರುವ ಈ ಡಿಜಿಟಲ್ ಲ್ಯಾಂಡ್‌ಸ್ಕೇಪ್ ನ್ನು ನಾವು ಪತ್ರಕರ್ತರು ಪತ್ರಿಕೋದ್ಯಮದ ಪ್ರಮುಖ ತತ್ವಗಳನ್ನು ಎತ್ತಿಹಿಡಿಯುವಲ್ಲಿ ಜಾಗರೂಕರಾಗಿರಲು ಇದು ನಿರ್ಣಾಯಕವಾಗಿದೆ. ನಿಖರತೆ, ನ್ಯಾಯೋಚಿತತೆ ಮತ್ತು ನಿಷ್ಪಕ್ಷಪಾತ, ಪರಿಕರಗಳು ಮತ್ತು ತಂತ್ರಜ್ಞಾನಗಳು ಬದಲಾಗಬಹುದಾದರೂ, ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ನಮ್ಮ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ಕಿವಿಮಾತು ಹೇಳಿದರು. ಪತ್ರಿಕೋದ್ಯಮದ ಮೇಲೆ ಡಿಜಿಟಲ್ ಮಾಧ್ಯಮದ ಪ್ರಭಾವವನ್ನು ನಿರಾಕರಿಸಲು ಸಾಧ್ಯವಿಲ್ಲದ ಸ್ಥಿತಿ ಇದೆ. ಉದ್ಯಮದ ಭವಿಷ್ಯಕ್ಕಾಗಿ ಸವಾಲುಗಳು ಮತ್ತು ಅವಕಾಶಗಳೆರಡನ್ನೂ ಪ್ರಸ್ತುತಪಡಿಸುವ ಮೂಲಕ ಸುದ್ದಿ ಮಾಡುವ, ವಿತರಿಸುವ ಮತ್ತು ಅದರ ಬಳಕೆದಾರನಾಗುವ ರೀತಿಯಲ್ಲಿ ಕ್ರಾಂತಿ ಮಾಡಿದೆ. ಪತ್ರಕರ್ತರಾದ ನಾವು ಈ ಡಿಜಿಟಲ್ ಕ್ರಾಂತಿಯನ್ನು ಆಶಾವಾದ ಮತ್ತು ಸಮಗ್ರತೆಯಿಂದ ಸ್ವೀಕರಿಸೋಣ, ಸಮಾಜದಲ್ಲಿ ನಮ್ಮ ಪಾತ್ರವು ಎಂದಿಗೂ ಹೆಚ್ಚು ಮಹತ್ವ ಕಳೆದುಕೊಂಡಿಲ್ಲ ಎಂದು ಸಲಹೆ ನೀಡಿದರು.
ಶ್ರೀಲಂಕಾದ ಪತ್ರಕರ್ತರಾದ ಎಂ.ಆರ್.ಪಿ. ಶುಭಾ ಮೆನಕೆ ರತ್ನಾಯಕೆ ಮಾತನಾಡಿ, ನಾವು ಶ್ರೀಲಂಕದವರು ನಿಮ್ಮನ್ನು ಎಂದಿಗೂ ಭಾರತದಿಂದ ಬೇರೆಯಾಗಿ ಭಾವಿಸುವುದಿಲ್ಲ. ನಮ್ಮ ದೇಶ ಭಾರತವೆಂಬ ನದಿಯ ಒಂದು ಉಪನದಿಯಾಗಿದೆ. ನಮ್ಮ ಸಾಂಸ್ಕೃತಿಕ ಹಿನ್ನೆಲೆಗಳು, ಭಾಷೆ, ಹವಾಮಾನ, ಸಂಸ್ಕೃತಿಯಲ್ಲಿ ಸಾಮ್ಯತೆಗಳಿವೆ. ಹೀಗಾಗಿ ಇಲ್ಲಿಗೆ ಆಗಮಿಸುವುದು ಬಹಳ ಆಪ್ತ ಎನ್ನಿಸುತ್ತದೆ ಎಂದರು. ಭಾರತೀಯ ಸಂಸ್ಕೃತಿ ಹಾಗೂ ಹಿಂದಿ ಸಾಹಿತ್ಯ ನನಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ವಿ. ಶಿವಾನಂದ ತಗಡೂರು ಮಾತನಾಡಿ, ದೂರದ ಶ್ರೀಲಂಕಾ, ನೇಪಾಳದಿಂದ ಅತಿಥಿಗಳು ಬಂದಿದ್ದಾರೆ. ಶ್ರವಣಬೆಳಗೊಳದಲ್ಲಿ ನಡೆದ ಸಮ್ಮೇಳನದಲ್ಲಿ ೪೦ಕ್ಕೂ ಹೆಚ್ಚು ಪತ್ರಕರ್ತರು ಬಂದಿದ್ದರು. ಆಗ ಶ್ರೀಲಂಕಾದೊಂದಿಗೆ ಬಾಂಧವ್ಯ ಬೆಸೆಯುವ ಕೆಲಸ ಆಗಿತ್ತು. ಮದನಗೌಡ ಅವರು ಹೊರ ದೇಶಗಳಲ್ಲೂ ಬಾಂಧವ್ಯ ಬೆಳೆಸಿದ್ದಾರೆ. ೧೯೯೩ರಲ್ಲಿ ಡಿ.ವಿ. ಗುಂಡಪ್ಪ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವನ್ನು ಸ್ಥಾಪಿಸಿದರು. ಇಂತಹ ಸಂಘಟನೆ ಪತ್ರಕರ್ತರ ವಿಶ್ವಾಸ, ವೃತ್ತಿ ಕೌಶಲ ಹೆಚ್ಚಿಸುವ ಕೆಲಸ ಮಾಡುತ್ತಿದೆ. ಮನೆಯ ಅಂಗಳದ ಹೆಸರಿನಲ್ಲಿ ಹಿರಿಯ ಪತ್ರಕರ್ತರ ಮನೆಗೆ ಸಂಘವೇ ಭೇಟಿ ನೀಡಿ ಗೌರವಿಸುತ್ತಿದೆ. ಎಲ್ಲರ ಅಭಿಪ್ರಾಯ ದಾಖಲು ಮಾಡುವ ಕೆಲಸ ಮಾಡುತ್ತಿದೆ ಎಂದು ಸಂಘದ ಕಾರ್ಯಚಟುವಟಿಕೆಗಳನ್ನು ಮೆಲುಕು ಹಾಕಿದರು.
ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಎಚ್.ಬಿ. ಮದನಗೌಡ ಮಾತನಾಡಿ, ನೇಪಾಳ ಮತ್ತು ಶ್ರೀಲಂಕಾ ದೇಶಕ್ಕೆ ಭೇಟಿ ಕೊಟ್ಟು ಆರೋಗ್ಯಕರ ಚರ್ಚೆ ಮಾಡುವುದು ನಮ್ಮ ಉದ್ದೇಶವಾಗಿದೆ. ನೇಪಾಳ ದೇಶದಲ್ಲಿ ಒಟ್ಟು ಮೂರು ಕೋಟಿ ಜನಸಂಖ್ಯೆ ಇದ್ದು, ೧೬ ಸಾವಿರ ಜನ ಪತ್ರಕರ್ತರು ಇದ್ದಾರೆ. ಇವರಿಗೆ ಯಾವ ಸೌಲಭ್ಯ ಇರುವುದಿಲ್ಲ. ಇನ್ನು ಶ್ರೀಲಂಕಾದಲ್ಲಿ ಸಲ್ಪ ಪರವಾಗಿಲ್ಲ. ಕೆಲ ಸೌಲಭ್ಯಗಳು ದೊರಕುತ್ತಿದೆ ಎಂದರು. ಇದೊಂದು ಪರಿಚಯಾತ್ಮಕವಾದ ಕಾರ್ಯಕ್ರಮವಾಗಿದ್ದು, ಎಲ್ಲಾ ವಿಚಾರವನ್ನು ಚರ್ಚೆ ಮಾಡಲು ಮುಕ್ತ ಅವಕಾಶವಿದೆ ಎಂದರು.
ಬೆಂಗಳೂರಿನ ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಮಾತನಾಡಿ, ಈ ಹಿಂದೆ ಪತ್ರಿಕೋದ್ಯಮವನ್ನು ಕಾವಲು ನಾಯಿ ಎಂದು ಕರೆಯುತ್ತಿದ್ದರು. ಈಗ ಅದು ಸಾಕು ನಾಯಿ ಆಗಿದೆ ಎಂದು ಹೇಳುವ ಮಟ್ಟಿಗೆ ಕ್ಷೇತ್ರದ ಗುಣಮಟ್ಟ ಕುಸಿದಿದೆ ಎಂದು ವಿಜಯವಾಣಿ ಪತ್ರಿಕೆ ಸುದ್ದಿ ಸಂಪಾದಕ, ಹಿರಿಯ ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಬೇಸರ ವ್ಯಕ್ತಪಡಿಸಿದರು. ಯಾವುದೇ ಒಬ್ಬ ವ್ಯಕ್ತಿ, ಸಂಸ್ಥೆಯ ಗುಣಗಾನ ಮಾಡುತ್ತಾ ಕೂರುವುದರಿಂದ ನಾವು ಪತ್ರಿಕೋದ್ಯಮವನ್ನು ಹಿಂದಿನ ವೈಭವದ ದಿನಗಳಿಗೆ ಕೊಂಡೊಯ್ಯಲು ಸಾಧ್ಯವಿಲ್ಲ ಎಂದರು. ಮಾಧ್ಯಮ ಸಂಸ್ಥೆಗಳ ನಿರ್ವಹಣಾ ವೆಚ್ಚದ ಹೊರೆ, ಅದಕ್ಕಾಗಿ ಆರ್ಥಿಕ ಸಂಪನ್ಮೂಲ ಸಂಗ್ರಹಿಸುವ ಸವಾಲುಗಳಿಂದ ಪತ್ರಿಕೋದ್ಯಮದ ಗುಣಮಟ್ಟ ಹಾಗೂ ವಿಶ್ವಾಸಾರ್ಹತೆಗೆ ಧಕ್ಕೆ ತಂದೊಡ್ಡುತ್ತಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಳ್ಳುಗೋಪಾಲ್ ಅಧ್ಯಕ್ಷತೆ ನುಡಿಯಲ್ಲಿ ಮಾತನಾಡಿ, ಕರ್ನಾಟಕದಿಂದ ನಾವು ಎಲ್ಲೆ ಹೋದರೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಊರೆಂದು ಹೇಳುತ್ತಾರೆ. ಯಾವುದೇ ಕೆಲಸವನ್ನು ಸಂತೋಷವಾಗಿ ಮಾಡಬೇಕು. ನಮ್ಮದೆಯಾದ ಚಿಂತೆ ಮತ್ತು ವ್ಯವಸ್ಥೆಗಳನ್ನು ನಾವುಗಳೆಲ್ಲಾ ಒಗ್ಗಟ್ಟಾಗಿ ಹತ್ತಿರ ಇರುವ ಮೂರು ಜಿಲ್ಲೆಯವರು ಸೇರಿ ಮಾತನಾಡಿ ಪರಿಚಯ ಮಾಡಿಕೊಂಡು ಏನಾದರೂ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು. ಈ ನಿಟ್ಟಿನಲ್ಲಿ ಮೂರು ಜಿಲ್ಲೆಗಳ ಸೇರಿ ಈ ಮಿಲನ ಸಮಾರಂಭ ಕಾರ್ಯಕ್ರಮವನ್ನು ನಡೆಸಲಾಗಿದೆ ಎಂದು ತಮ್ಮ ಅಭಿಪ್ರಾಯ ಹೇಳಿಕೊಂಡರು.
ಕಾರ್ಯಕ್ರಮದಲ್ಲಿ ಇತ್ತಿಚಿಗೆ ಪ್ರಶಸ್ತಿಗೆ ಬಾಜನರಾಗಿದ್ದ ಹೆತ್ತೂರ್ ನಾಗರಾಜ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಶ್ರೀಲಂಕಾದಿಂದ ಆಗಮಿಸಿದ್ದ ಪತ್ರಕರ್ತರಾದ ಪತುಂತಿಲಂಕಾ ವಿಕ್ರಮ ರತ್ನೆ, ಎಂ.ಆರ್. ಪಿ. ಶುಭಾ ಮೆನಕೆ ರತ್ನಾಯಕೆ ಹಾಗೂ ನೇಪಾಳದ ಹಿರಿಯ ಪತ್ರಕರ್ತೆ ಸಮ್ಜಾನಾ ಪೌಡಲ್ ಅವರ ಭಾರತದ ಬಗೆಗಿನ ಭಾವನಾತ್ಮಕ ಮಾತುಗಳು ಭಾಷೆ, ದೇಶಗಳ ಬೇಲಿ ಗಡಿದಾಟಿ ಬಾಂಧವ್ಯ ಬೆಸೆಯಿತು.
ಇದೆ ವೇಳೆ ರಾಜ್ಯ ಸಮಿತಿ ವಿಶೇಷ ಆಹ್ವಾನಿತ ರವಿನಾಕಲಗೂಡು, ಸಂಪಾದಕರ ಸಂಘದ ಅಧ್ಯಕ್ಷ ಕೆಂಚೇಗೌಡ, ರಾಷ್ಟ್ರೀಯ ಮಂಡಳಿ ಸದಸ್ಯ ಜಿ. ಪ್ರಕಾಶ್, ರಾಷ್ಟ್ರೀಯ ಮಂಡಳಿ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಆರ್.ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಕೆ.ಎಚ್. ವೇಣುಕುಮಾರ್, ಎನ್. ನಂಜುಂಡೇಗೌಡ, ಖಜಾಂಚಿ ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಜು ಬನವಾಸೆ, ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎಸ್.ಎ. ಮೊದಲಿಯಾರ್, ಶ್ರವಣಬೆಳಗೊಳದ ಹಿರಿಯ ಪತ್ರಕರ್ತ ಎಸ್.ಎನ್. ಅಶೋಕ್ ಕುಮಾರ್ ಇತರರು ಉಪಸ್ಥಿತರಿದ್ದರು.
Hassan
ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾ*ವು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಟೌನ್ ಶೆಟ್ಟಿಹಳ್ಳಿ ಬಳಿ ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಈ ಘಟನೆ ಇಂದು ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಸಂಭವಿಸಿದೆ.
ಇನ್ನೂ ಈ ದುರಂತದಿಂದ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರಿಗೆ ಗಂಭೀರ ಗಾಯಾಗಳಾಗಿವೆ.
ಸದ್ಯ ಇವರಿಬ್ಬರನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
Hassan
ಅರ್ಹರಿಗೆ ಸರ್ಕಾರಿ ಸೌಲಭ್ಯವನ್ನು ಒದಗಿಸಿ : ಡಿಸಿ ಲತಾ ಕುಮಾರಿ





Hassan
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಪ್ರಾರಂಭಿಸಲು ಆಗ್ರಹಿಸಿ: ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ

ಹಾಸನ: ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರವೇ ಆರಂಭಿಸುವಂತೆ ಹಾಗೂ ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಿ ಜಿಲ್ಲೆಯ ಜನಾರೋಗ್ಯವನ್ನು ಖಾತ್ರಿಪಡಿಸುವಂತೆ ಆಗ್ರಹಿಸಿ ಇನ್ನು ಸಾರ್ವಜನಿಕರಿಗೆ ಸೇವೆ ಸಿಗದ ಹಾಸನದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಮುಂದೆ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನಾ ಸಭೆ ನಡೆಸಿದರು.
ಈ ವೇಳೆ ಸಾಮಾಜಿಕ ಹೋರಾಟಗಾರರು ಹಾಗೂ ಸಾಹಿತಿ ರೂಪ ಹಾಸನ್, ಹಸಿರುಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ ಮಾತನಾಡಿ,ಕಳೆದ ತಿಂಗಳಿನಿಂದೀಚೆಗೆ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹಠಾತ್ ಸಾವುಗಳು ಎಲ್ಲರನ್ನೂ ಆತಂಕಕ್ಕೆ ಈಡು ಮಾಡಿವೆ. ಜಿಲ್ಲೆಯ ಹೃಧಯಾಘಾತದ ಸಾವುಗಳು ದೇಶದಾದ್ಯಂತ ಸುದ್ದಿಯಾದವು. ಅದರಲ್ಲೂ ಎಳೆಯರ ಮತ್ತು ಯುವಜನರ ಹಠಾತ್ ಸಾವು ತೀವ್ರ ಆತಂಕವನ್ನು ಸೃಷ್ಟಿಮಾಡಿದೆ ಎಂದರು.
ಸರ್ಕಾರ ಈಗಾಗಲೇ ಈ ಹಠಾತ್ ಸಾವುಗಳ ಕುರಿತು ತಜ್ಞರ ಸಮಿತಿ ಮೂಲಕ ಅಧ್ಯಯನ ನಡೆಸಿ ವರದಿ ತರಿಸಿಕೊಂಡಿದೆ. ಹಾಗೂ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ತಜ್ಞರ ಸಮಿತಿಯ ವರದಿಯು ಹಠಾತ್ ಸಾವುಗಳಿಗೆ ಜೀವನ ಶೈಲಿ, ಆಹಾರ ಪದ್ದತಿ, ಪರಿಸರ ಮಾಲಿನ್ಯ ಮತ್ತು ಕೋವಿಡೋತ್ತರ ಪರಿಸ್ಥಿತಿಯ ಕಾರಣಗಳತ್ತ ಬೊಟ್ಟು ಮಾಡಿದೆ. ಈ ಸ್ಪರ್ಧಾತ್ಮಕ ಸಮಾಜದಲ್ಲಿ ಜನರು ಅನುಭವಿಸುತ್ತಿರುವ ಆರ್ಥಿಕ, ಸಾಮಾಜಿಕ ತಾರತಮ್ಯಗಳು ಮತ್ತು ಕೌಟುಂಬಿಕ ಒತ್ತಡಗಳು, ಇಂತಹ ಗಂಭೀರವಾದ ಪರಿಣಾಮಗಳಿಗೆ ಕಾರಣವಾಗುತ್ತಿವೆ. ಈ ಎಲ್ಲಾ ಪರಿಣಾಮಗಳಿಗೆ ಕೇವಲ ಜನರ ವಯಕ್ತಿಕ ಮಟ್ಟದ ಕಾರಣಗಳು ಮಾತ್ರವೇ ಆಗಿರದೆ ಪ್ರಮುಖವಾಗಿ ಅವುಗಳು ಸಾಮಾಜಿಕ ಆರ್ಥಿಕ ಕಾರಣಗಳಾಗಿವೆ. ಈ ಸಾಮಾಜಿಕ ಆರ್ಥಿಕ ಕಾರಣಗಳಿಗೆ ಮೊದಲು ಪರಿಹಾರ ದೊರಕಿಸಿಕೊಡುವ ಕೆಲಸ ಯಾವುದೇ ಪ್ರಜಾಸತ್ತಾತ್ಮಕ ನಾಗರಿಕ ಸರ್ಕಾರಗಳ ಮತ್ತು ಆಡಳಿತ ವ್ಯವಸ್ಥೆಯ ಹೊಣೆಗಾರಿಕೆಯಾಗಿದೆ ಎಂದು ದೂರಿದರು.
ಶಸ್ತ್ರಚಿಕಿತ್ಸಕ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ, ಮಕ್ಕಳ ತಜ್ಞ ಮತ್ತು ಅರಿವಳಿಕೆ ತಜ್ಞರು ಇರಬೇಕು. ಆದರೆ, ಹಾಸನ ಜಿಲ್ಲೆಯ ಹಲವು ಸಿ.ಹೆಚ್.ಸಿ.ಗಳಲ್ಲಿ ಈ ಬಹುತೇಕ ತಜ್ಞರ ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ಸಿ-ಸೆಕ್ಷನ್ ಹೆರಿಗೆ ಅಥವಾ ಇತರ ಪ್ರಮುಖ ಶಸ್ತ್ರಚಿಕಿತ್ಸೆಗಳಿಗೆ ಜಿಲ್ಲಾ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ. ವೈದ್ಯಾಧಿಕಾರಿಗಳು ಇಬ್ಬರು ವೈದ್ಯಾಧಿಕಾರಿಗಳ ಬದಲು ಒಬ್ಬರೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಲ್ಯಾಬ್ ಟೆಕ್ನಿಷಿಯನ್, ಫಾರ್ಮಾಸಿಸ್ಟ್ ಮತ್ತು ನರ್ಸಿಂಗ್ ಸಿಬ್ಬಂದಿಯ ಕೊರತೆಯೂ ಸಾಮಾನ್ಯವಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯುತ್ತಿದ್ದರೂ, ಖಾಯಂ ಹುದ್ದೆಗಳು ಖಾಲಿ ಇರುವುದು ಸೇವೆಯ ಮೇಲೆ ಪರಿಣಾಮ ಬೀರುತ್ತಿದೆ. ಸಿಬ್ಬಂದಿ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ, ಎಲ್ಲಾ ಪಿ.ಹೆಚ್.ಸಿ. ಗಳಲ್ಲಿ 24×7 ತುರ್ತು ಮತ್ತು ಹೆರಿಗೆ ಸೇವೆಗಳನ್ನು ಪರಿಣಾಮಕಾರಿಯಾಗಿ ನೀಡುವುದು ಸವಾಲಾಗಿದೆ. ಕೆಲವು ಸಿ.ಹೆಚ್.ಸಿ.ಗಳಲ್ಲಿ ಎಕ್ಸ್-ರೇ ಯಂತ್ರಗಳು ಇದ್ದರೂ, ಅವುಗಳನ್ನು ನಿರ್ವಹಿಸಲು ರೇಡಿಯೋಗ್ರಾಫರ್ ಇಲ್ಲದಿರುವುದು ಅಥವಾ ಯಂತ್ರಗಳು ಕೆಟ್ಟಿರುವುದು ವರದಿಯಾಗಿದೆ ಎಂದು ದೂರಿದರು.
ಇದೇ ರೀತಿ, ಎಲ್ಲಾ ಕೇಂದ್ರಗಳಲ್ಲಿ ಸಂಪೂರ್ಣ ಸುಸಜ್ಜಿತ ಪ್ರಯೋಗಾಲಯಗಳು ಲಭ್ಯವಿಲ್ಲ. ಐ.ಪಿ.ಹೆಚ್.ಎಸ್. ಪ್ರಕಾರ ಸಿ.ಹೆಚ್.ಸಿ. ಗಳು ಪ್ರಥಮ ರೆಫರಲ್ ಘಟಕವಾಗಿ ಕಾರ್ಯನಿರ್ವಹಿಸಲು ರಕ್ತ ಸಂಗ್ರಹಣಾ ಘಟಕವನ್ನು ಹೊಂದಿರಬೇಕು. ಮಾನದಂಡಗಳ ಪ್ರಕಾರ ಅಗತ್ಯ ತಜ್ಞ ವೈದ್ಯರ ಕೊರತೆ, ಅಗತ್ಯ ಕಟ್ಟಡ, ಲ್ಯಾಬೊರೇಟರಿ, ವೈದ್ಯಕೀಯ ಯಂತ್ರೋಪಕರಣಗಳು ಹಾಗೂ ಅಗತ್ಯ ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳ ಕೊರತೆಗಳನ್ನು ಎದುರಿಸುತ್ತಿವೆ ಎಂದು ಹೇಳಿದರು.
ಹಸಿರುಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ ಮಾತನಾಡಿ, ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಒಟ್ಟು ಮಂಜೂರಾದ 340 ವೈದ್ಯರ ಹುದ್ದೆಗಳಲ್ಲಿ 117 ವೈದ್ಯರ ಹುದ್ದೆಗಳು ಖಾಲಿಯಿವೆ. ಅವುಗಳಲ್ಲಿ 36 ತಜ್ಞ ವೈದ್ಯರು, 22 ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳು ಮತ್ತು 52 ಕರ್ತವ್ಯನಿರತ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇವೆ. ಒಟ್ಟು ಮಂಜೂರಾದ 1856 ವೈದ್ಯಕೀಯ ಸಿಬ್ಬಂದಿ ಹುದ್ದೆಗಳಲ್ಲಿ 815 ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಒಟ್ಟು ಮಂಜೂರಾದ 824 ವೈದ್ಯಕೀಯೇತರ ಸಿಬ್ಬಂದಿಗಳ ಹುದ್ದೆಗಳಲ್ಲಿ 664 ವೈದ್ಯಕೀಯೇತರ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಹಾಗೂ ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ಇಡೀ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯೊಳಗೆ ಕೇವಲ ಒಬ್ಬರ ಮಾತ್ರ ಹೃದ್ರೋಗ ತಜ್ಞರು (ಕಾರ್ಡಿಯಾಲಜಿಸ್ಟ್) ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನುವುದು ಜಿಲ್ಲೆಯ ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಸುತ್ತದೆ ಎಂದರು.
ಹಾಸನ ವೈಧ್ಯಕೀಯ ವಿಜ್ಞಾನಗಳ ಸಂಸ್ಥೆಯ ಜಿಲ್ಲಾ ಆಸ್ಪತ್ರೆ ಸಾಕಷ್ಟು ಉತ್ತಮ ಗುಣಮಟ್ಟದ ವೈಧ್ಯಕೀಯ ಸೇವೆಯನ್ನು ಉಚಿತ ಮತ್ತು ಅತ್ಯಂತ ಕಡಿಮೆ ದರದಲ್ಲಿ ಒದಗಿಸುತ್ತಿದ್ದರೂ ಕೂಡ ಜಿಲ್ಲೆಯ ಜನರಲ್ಲಿ ತೀವ್ರವಾಗಿ ಹೆಚ್ಚಾಗುತ್ತಿರುವ ಆರೋಗ್ಯದ ಸಮಸ್ಯೆಗಳು ಹಾಗೂ ಪಕ್ಕದ ಹೊರ ಜಿಲ್ಲೆಗಳಿಂದ ಬರುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಸ್ಪತ್ರೆಯ ಮೇಲೆ ತೀವ್ರ ಒತ್ತಡ ಹೆಚ್ಚಾಗುತ್ತಿದೆ. ಅಗತ್ಯ ವೈದ್ಯಕೀಯ ತಜ್ಞರು ಮತ್ತು ಶಸ್ತ್ರಚಿಕಿತ್ಸಾ ತಜ್ಞರು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬದಿಗಳ ಕೊರತೆ ತೀವ್ರವಾಗಿದೆ ಎಂದು ತಿಳಿಸಿದರು.
ಮಾರಣಾಂತಿಕ ಖಾಯಿಲೆಗಳಾದ ಹೃದ್ರೋಗ, ಕ್ಯಾನ್ಸರ್, ಮೂತ್ರಪಿಂಡ, ಮೆದುಳು ಮತ್ತು ನರರೋಗಗಳ ತಪಾಸಣೆ ಮತ್ತು ಚಿಕಿತ್ಸೆಗೆ ಸೂಕ್ತವಾಗುವ ತಜ್ಞ ವೈದ್ಯರುಗಳು, ಸಿಬ್ಬಂದಿಗಳು ಮತ್ತು ವೈದ್ಯಕೀಯ ವ್ಯವಸ್ಥೆಯ ಕೊರತೆಯಿದೆ. ಇತ್ತೀಚೆಗಷ್ಟೇ ಹಿಮ್ಸ್‌ನಲ್ಲಿ ಒಬ್ಬರು ಹೃದ್ರೋಗ ತಜ್ಞರು ಕರ್ತವ್ಯ ನಿರ್ವಹಿಸುತ್ತಿದ್ದು ಅವರು ಇಡೀ ಜಿಲ್ಲೆಗೆ ಒಬ್ಬರೇ ವೈದ್ಯರು ಕರ್ತವ್ಯ ನಿರ್ವಹಿಸುವಂತಾಗಿದೆ. ಹಿಮ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಮತ್ತಷ್ಟು ಉನ್ನತೀಕರಿಸಿ ಹಲವು ಬಗೆಯ ವೈದ್ಯಕೀಯ ವಿಭಾಗಗಳು ಆರಂಭವಾಗುವುದು ತುರ್ತು ಅಗತ್ಯವಿದೆ ಎಂದರು.
ಹೃದ್ರೋಗ, ನರರೋಗ ಸೇರಿದಂತೆ ಗಂಭೀರ ಸ್ವರೂಪದ ಆರೋಗ್ಯದ ಸಮಸ್ಯೆಗಳಿಗೆ ಚಿಕಿತ್ಸೆ ದೊರೆಯುವ ಹಿಮ್ಸ್‌ನ ಸೂಪರ್ ಸ್ಪೆಶಾಲಿಟಿ ಆತ್ಪತ್ರೆಯು ಆರಂಭವಾಗದೇ ಹಾಗೇ ನಿಂತಿದೆ. ಆಸ್ಪತ್ರೆಯ ಕಟ್ಟಡ ಕಾಮಗಾರಿ, ವೈದ್ಯಕೀಯ ಯಂತ್ರೋಪಕರಣ, ತಜ್ಞ ವೈದ್ಯರು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳ ನೇಮಕಾತಿಗಾಗಿ ಅಂದಾಜಿನ ಪ್ರಕಾರ ಕನಿಷ್ಟ ೫೦ ಕೋಟಿ ರೂಪಾಯಿಗಳ ಅನುದಾನದ ಅಗತ್ಯವಿದೆ. ಕೂಡಲೇ ಕರ್ನಾಟಕ ಸರ್ಕಾರಕ್ಕೆ ಅಗತ್ಯವಿರುವ ಅನುದಾನವನ್ನು ಬಿಡುಗಡೆಮಾಡಿ ಹಾಗೂ ಸ್ಪೆಶಾಲಿಟಿ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಅನುಮತಿ ನೀಡುವ ಅಗತ್ಯವಿದೆ ಎಂದು ಹೇಳಿದರು.
ಹಕ್ಕೋತ್ತಾಯಗಳೆಂದರೇ, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಹಿಮ್ಸ್) ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗೆ ಬೇಕಾದ ಕನಿಷ್ಟ 50 ಕೋಟಿ ರೂ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶೀಘ್ರವೇ ಕಾರ್ಯಾರಂಭ ಮಾಡಬೇಕು. ಹೃದ್ರೋಗ, ಮೂತ್ರಪಿಂಡ, ನರರೋಗ, ಕ್ಯಾನ್ಸರ್ ಮತ್ತಿತರೆ ಮಾರಣಾಂತಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ನೀಡಲು ವೈದ್ಯಕೀಯ ವಿಭಾಗಗಳು, ಕ್ಯಾತ್ ಲ್ಯಾಬ್, ಅತ್ಯಂತ ಸುಸಜ್ಜಿತವಾದ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳಿರುವ ಪ್ರತ್ಯೇಕ ಶಸ್ತ್ರಚಿಕಿತ್ಸಾ ಘಟಕಗಳನ್ನು ಕೂಡಲೇ ಪ್ರಾರಂಭಿಸಬೇಕು. ತಜ್ಞ ವೈದ್ಯರು, ವೈದ್ಯಕೀಯ ಮತ್ತು ವೈದ್ಯಕೀಯೇತರ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಿ ಅವುಗಳಿಗೆ ಮಾನದಂಡಗಳ ಅನುಸಾರ ಪ್ರಾಥಮಿಕ ಸೌಲಭ್ಯಗಳಾದ ಸುಸಜ್ಜಿತ ವೈಧ್ಯಕೀಯ ಪ್ರಯೋಗಾಲಯ, ಇಸಿಜಿ, ಎಕೋ, ಎಕ್ಸ್‌ರೇ, ತುರ್ತು ಚಿಕಿತ್ಸಾ ಘಟಕ ಮತ್ತು ಆಂಬುಲೆನ್ಸ್ ಹಾಗೂ ತಜ್ಞ ವೈಧ್ಯರು ಮತ್ತು ಸಿಬ್ಬಂಧಿಗಳನ್ನು ಒದಗಿಸಬೇಕು. ತಾಲ್ಲೂಕು ಆಸ್ಪತ್ರೆಗಳನ್ನು ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಿ ಹೃದಯ ಮತ್ತು ಮೂತ್ರಪಿಂಡ ಸಂಬಂಧಿ ಹಾಗೂ ಇನ್ನಿತರೆ ಮಾರಣಾಂತಿಕ ಖಾಯಿಲೆಗಳ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.
ಆರೋಗ್ಯ ತಪಾಸಣೆಗಾಗಿ ಮತ್ತು ಅವಶ್ಯಕ ಪರೀಕ್ಷೆಗಳಿಗಾಗಿ ಸಂಚಾರಿ ವೈದ್ಯಕೀಯ ವಾಹನ ವ್ಯವಸ್ಥೆಯನ್ನು ಏರ್ಪಡಿಸಿ, ಅದು ನಿಯಮಿತವಾಗಿ ಎಲ್ಲ ಹಳ್ಳಿಗಳನ್ನು ತಲುಪುವಂತೆ ಕ್ರಮ ಕೈಗೊಳ್ಳಿ. ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಹೆಚ್ಚುಗೊಳಿಸಿ ಮತ್ತು ನಿಯಮಿತಗೊಳಿಸಿ. ಆಮೂಲಕ ತುರ್ತು ಚಿಕಿತ್ಸೆಯ ಅವಶ್ಯಕತೆ ಇದ್ದವರನ್ನು ಗುರ್ತಿಸಲು ಸಾಧ್ಯವಾಗುತ್ತದೆ. ಆರೋಗ್ಯ ಸಹಾಯವಾಣಿ ಸಮರ್ಪಕವಾದ ಮತ್ತು ಗುಣಮಟ್ಟದ ಸೇವೆಯನ್ನು ನೀಡುತ್ತಿಲ್ಲ. ಇದನ್ನು ತುರ್ತಾಗಿ ಚುರುಕುಗೊಳಿಸಿ. ಹಾಗೂ ತುರ್ತು ಸೇವೆಗಾಗಿ ಅಂಬುಲೆನ್ಸ್ ಗಳ ಸಂಖ್ಯೆಯನ್ನು ಸಾಕಷ್ಟು ಸಂಖ್ಯೆಯಲ್ಲಿ ಹೆಚ್ಚಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿಧ್ಯಾರ್ಥಿ ಯುವಜನರಿಗೆ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಮಟ್ಟ, ಕಣ್ಣು, ಕಿವಿ, ಸ್ಥೂಲಕಾಯ ಮತ್ತಿತರೆ ಪ್ರಾಥಮಿಕ ವೈಧ್ಯಕೀಯ ತಪಾಸಣೆಯನ್ನು ಕಡ್ಡಾಯವಾಗಿ 6 ತಿಂಗಳಿಗೊಮ್ಮೆ ಮಾಡಿಸಬೇಕು. ಯಾವುದೇ ಹಾನಿಕಾರಕ ರಾಸಾಯನಿಕ, ಕೃತಕ ಮತ್ತು ಕಲುಷಿತ ಎಣ್ಣೆ ಮತ್ತು ಕೃತಕ ಬಣ್ಣಗಳು ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಮತ್ತು ಈಗಾಗಲೇ ನಿಷೇಧಿಸಲ್ಪಟ್ಟ ಅಪಾಯಕಾರಿ ಕೀಟ ನಾಶಕಗಳನ್ನು ಶುಂಠಿ ಸೇರಿದಂತೆ ವಿವಿದ ಬೆಳೆಗಳಲ್ಲಿ ಬಳಕೆ ಮಾಡಲಾಗುತ್ತಿದ್ದು ಇದರಿಂದಾಗುವ ದೂರಗಾಮಿ ಕೆಟ್ಟ ಪರಿಣಾಮಗಳನ್ನು ತಡೆಯಲು ಕೃಷಿಯಲ್ಲಿ ಅಪಾಯಕಾರಿ ಕೀಟನಾಶಕಗಳು ಮತ್ತು ರಾಸಾಯನಿಕಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಮೇಲೆ ನಿಯಂತ್ರಣ ಹೇರಬೇಕು ಎಂದು ಒತ್ತಾಯಿಸಿದರು.
ಈ ಬೇಡಿಕೆಗಳು ಈಡೇರುವವರೆಗೂ ಹಾಸನ ಜಿಲ್ಲೆಯ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವವರೆಗೂ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಜನಪರ ಸಂಘಟನೆಗಳು, ಸಂಘ ಸಂಸ್ಥೆಗಳು ಮತ್ತು ನಾಗರಿಕರು ನಿರಂತರವಾದ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಚ್ಚರಿಸಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ದಲಿತ ಹಿರಿಯ ಮುಖಂಡ ಎಚ್.ಕೆ. ಸಂದೇಶ್, ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಎಚ್.ಆರ್. ನವೀನ್‌ಕುಮಾರ್, ಮಾದಿಗ ದಂಡೋರ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಆರ್. ವಿಜಯಕುಮಾರ್, .ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ವಕೀಲ ಅನ್ಷಾದ್ ಪಾಳ್ಯ, ಎಫ಼್.ಐ ಜಿಲ್ಲಾ ಕಾರ್ಯದರ್ಶಿ ಎಸ್. ರಮೇಶ್, ಸಾಮಾಜಿಕ ಕಾರ್ಯಕರ್ತ ಮಲ್ನಾಡ್ ಮೆಹಬೂಬ್, ಸಾಹಿತಿ ಹರೀಶ್ ಕಟ್ಟೆಬೆಳಗುಲಿ, ಭಾರತೀಯ ರೆಡ್ ಕ್ರಾಸ್ ಕಾರ್ಯದರ್ಶಿ ಶಬ್ಬೀರ್, ಮಹಿಳಾ ಪರ ಚಿಂತಕರಾದ ಗೀತಾ, ಜನನಿ ಫೌಂಡೇಶನ್ ಅಧ್ಯಕ್ಷೆ ಭಾನುಮತಿ, ಸಿಐಟಿಯು ಪ್ರಧಾನ ಕಾರ್ಯದರ್ಶಿ ಪುಷ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
-
State14 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya10 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar16 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar10 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore12 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special15 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu11 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar10 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು