Mandya
ಜ.29 ರಂದು ನಬಾರ್ಡ್ ನೀತಿ ವಿರೋಧಿಸಿ ಪ್ರತಿಭಟನೆ

ಮಂಡ್ಯ: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ಕಿರುಕುಳ ತಡೆಗಟ್ಟಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜನವರಿ ೨೯ರ ಬೆಳಿಗ್ಗೆ ೧೧ಗಂಟೆಗೆ ಬೆಂಗೂರಿನ ರಿಸರ್ವ್ ಬ್ಯಾಂಕ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಕಾರ ಕಳೆದ ಮೂರು ವರ್ಷದಿಂದ ಕೃಷಿ ಕ್ಷೇತ್ರಕ್ಕೆ ನೀಡುವ ಸಾಲದ ಮೊತ್ತವನ್ನು ಕಡಿಮೆ ಮಾಡುತ್ತಿಲೇ ಬಂದಿದ್ದು, ಕಳೆದ ವರ್ಷ ರಾಜ್ಯಕ್ಕೆ ೫೬೦೦ ಕೋಟಿ ನೀಡಲಾಗಿದ್ದ ಸಾಲ ಪ್ರಸಕ್ತ ವರ್ಷಕ್ಕೆ ೨೩೪೦ಕ್ಕೆ ಇಳಿಸಿದೆ ಎಂದು ಆರೋಪಿಸಿದರು.
ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು ಶೇ.೫೮ರಷ್ಟು ತಗ್ಗಿಸುವ ಮೂಲಕ ರಾಜ್ಯದ ಕೃಷಿ ವ್ಯವಸ್ಥೆಯನ್ನೇ ನಾಶ ಮಾಡಿದೆ. ರೈತರು ಹೆಚ್ಚು ಬಡ್ಡಿ ತೆತ್ತು ವಾಣಿಜ್ಯ ಬ್ಯಾಂಕುಗಳ ಮೊರೆ ಹೋಗಿ, ಖಾಸಗಿ ಸಾಲದ ಸುಳಿಗೆ ಸಿಲುಕೊಂಡು ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇದರಿಂದ ಸಂಪೂರ್ಣ ಕಾರ್ಪೋರೇಟ್ ಕಂಪನಿಗಳ ವಶಕ್ಕೆ ನೀಡಲು ಹುನ್ನಾರ ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ಅವರ ಕಿರುಕುಳದಿಂದ ಗ್ರಾಮೀನ ಪ್ರದೇಶದ ಮಹಿಳೆಯರು ಹಾಗೂ ಇತರೆ ದುಡಿಯುವ ವರ್ಗ ಸಂಕಷ್ಟಕ್ಕೀಡಾಗಿದ್ದಾರೆ. ಇತ್ತೀಚೆಗೆ ರಾಮನಗರದಲ್ಲಿಯೂ ಮಹಿಳೆ ಆತ್ಮಹತ್ಯೆಗೆ ಶರಣಾದ ಪ್ರಕರಣ ನಡೆದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ನಡೆಯೇ ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ರೈತರು, ಸ್ವ ಸಹಾಯ ಸಂಘಗಳು ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳು ಭಾಗವಹಿಸುವಂತೆ ಕರೆ ನೀಡಿದರು.
ಗೋಷ್ಠಿಯಲ್ಲಿ ಬೋರಾಪುರ ಶಂಕರೇಗೌಡ, ಲಿಂಗಪ್ಪಾಜಿ, ಅಣ್ಣಯ್ಯ, ವಿ.ಸಿ.ಉಮೇಶ್, ವಿಜಿಕುಮಾರ್, ಮಂಜು ಇತರರಿದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State11 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan7 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports9 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan6 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ