Mandya
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಹೊರಗುತ್ತಿಗೆ ನೌಕರರ ಪ್ರತಿಭಟನೆ

ಮಂಡ್ಯ : ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಹಾಸ್ಟೆಲ್, ವಸತಿ ಶಾಲೆ -ಕಾಲೇಜುಗಳ ಹೊರಗುತ್ತಿಗೆ ನೌಕರರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ನೂರಾರು ನೌಕರರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ರವಾನಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಅಡುಗೆ ಕೆಲಸದವರು,ಸ್ವಚ್ಛತೆ, ಕಾವಲು,ಅಟೆಂಡರ್, ಕಂಪ್ಯೂಟರ್ ಆಪರೇಟರ್, ಡಾಟಾ ಎಂಟ್ರಿ ಆಪರೇಟರ್, ಹೊರಗುತ್ತಿಗೆ ಶಿಕ್ಷಕರು. ದಿನಗೂಲಿ ನೌಕರರು ಯಾವುದೇ ಭದ್ರತೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಇವರ ಬೇಡಿಕೆಗಳ ಬಗ್ಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಜೊತೆಗೆ ಕರ್ತವ್ಯದ ಸಮಯದಲ್ಲಿ ಗುತ್ತಿಗೆದಾರರು, ವಾರ್ಡನ್, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಶೋಷಣೆ ಮಿತಿಮೀರಿದೆ. ಹೊರಗುತ್ತಿಗೆ ನೌಕರರ ಸಮಸ್ಯೆ ಬಗ್ಗೆ ಚರ್ಚಿಸಲು ತುರ್ತಾಗಿ ಸಭೆ ಕರೆಯುವಂತೆ ಒತ್ತಾಯಿಸಿದರು.
ಹೊರಗುತ್ತಿಗೆ ನೌಕರರಿಗೆ ಪ್ರತಿ ತಿಂಗಳು 31 ಸಾವಿರ ಕನಿಷ್ಠ ವೇತನ ನೀಡಬೇಕು ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿ ಯಾಗುವರೆಗೂ ಸೇವಾ ಭದ್ರತೆ ನೀಡಬೇಕು. ಕಾರ್ಮಿಕ ಕಾನೂನು ಅನ್ವಯ ಕಡ್ಡಾಯವಾಗಿ ವಾರಕ್ಕೊಂದು ರಜೆ ನೀಡಬೇಕು. ಪ್ರತಿನಿತ್ಯ ಕೆಲಸದ ಸಮಯ ನಿಗಧಿ ಮಾಡಬೇಕು. ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಗುತ್ತಿಗೆದಾರರು ವೇತನದ ಚೀಟಿ,ನೇಮಕಾತಿ ಆದೇಶ ಪತ್ರ, ಗುರುತಿನ ಕಾರ್ಡ್ ಸರ್ವೀಸ್ ಸರ್ಟಿಫಿಕೇಟ್, ಇ ಎಸ್ ಐ ಮತ್ತು ಪಿಎಫ್ ಹಣ ತುಂಬಿದ ರಶೀದಿ ಕೊಡಬೇಕು. ಹಿಂದುಳಿದ ವರ್ಗ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿಗಳ ಸಂಖ್ಯೆ ಕಡಿತ ಮಾಡಿರುವ ಆದೇಶ ರದ್ದುಪಡಿಸಬೇಕು. 50 ವಿದ್ಯಾರ್ಥಿಗಳಿಗೆ ಮೂರು ಜನ ಸಿಬ್ಬಂದಿಯಂತೆ ಹಿಂದಿನ ಪದ್ಧತಿ ಮುಂದುವರಿಸಬೇಕು. ಪ್ರತಿ ತಿಂಗಳು ಐದನೇ ದಿನಾಂಕದೊಳಗೆ ವೇತನ ಪಾವತಿಸಬೇಕು ಬಾಕಿ ವೇತನ ತುರ್ತು ನೀಡಬೇಕು. 10 ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ತರಬೇಕು ಎಂದು ಆಗ್ರಹಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಕೆಲಸ ಕಳೆದುಕೊಂಡಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ಮರು ನೇಮಕ ಮಾಡಿಕೊಳ್ಳಬೇಕು. ಹೊಸದಾಗಿ ಪ್ರಾರಂಭ ಮಾಡುವ ಹಾಸ್ಟೆಲ್‌ಗಳಿಗೆ ಕಡ್ಡಾಯವಾಗಿ ನೇಮಕಾತಿ ಮಾಡಿಕೊಳ್ಳಬೇಕು. ಅಡುಗೆಯವರು, ಅಡುಗೆ ಸಹಾಯಕರು, ಸ್ವಚ್ಛತಾಗಾರರಿಂದ ಶೌಚಾಲಯ ಸ್ವಚ್ಛ ಮಾಡಿಸಬಾರದು. ವಸತಿ ಶಾಲೆ ಮತ್ತು ಹಾಸ್ಟೆಲ್‌ಗಳಿಗೆ ವಾರ್ಡನ್ ಗಳು ಮಕ್ಕಳ ಅಡುಗೆಗೆ ಆಗತ್ಯವಾಗಿ ಬೇಕಾದ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಸರಿಯಾದ ಪ್ರಮಾಣದಲ್ಲಿ ತಂದು ಕೊಡಬೇಕು. ನಿವೃತ್ತಿ ನಂತರ ಜೀವನ ನಿರ್ವಹಣೆಗೆ ವರ ಗುತ್ತಿಗೆ ನೌಕರರಿಗೆ 10 ಲಕ್ಷ ಪರಿಹಾರ ಧನ ನೀಡಬೇಕು ಎಂದು ಒತ್ತಾಯಿಸಿದರು.
ಸಂಘದ ರಾಜ್ಯ ಕಾರ್ಯದರ್ಶಿ ಕೆ ಹನುಮೇಗೌಡ, ಜಿಲ್ಲಾಧ್ಯಕ್ಷ ನಂಜುಂಡಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ,ಚಂದ್ರಶೇಖರ, ಆಶಾ ರಾಣಿ, ಇಂದ್ರಾಣಿ, ಎಂ ಬೈರೇಗೌಡ, ಆಶಾ ಕೆ ಜಿ, ನಾಗಮ್ಮ, ಶ್ರೀಕಾಂತ್,ಸುನಂದಮ್ಮ, ತಾಯಮಣಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu9 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ