Mysore
ಸರ್ಕಾರಿ ಜಾಗ ಕಬಳಿಕೆ ಸಾಬೀತು : ಶಾಸಕ ದರ್ಶನ್ ಧೃವನಾರಾಯಣ್ ಮಧ್ಯಪ್ರವೇಶಕ್ಕೆ BJP ಒತ್ತಾಯ
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ಪಟ್ಟಣದ ಸರ್ವೆ ನಂ. 24ಕ್ಕೆ ಸೇರಿದ ಸರ್ಕಾರಿ ಜಾಗ ಕಬಳಿಕೆ ಆಗಿರೋದು ಸ್ಪಷ್ಟ, ಮಾಜಿ ನಗರಸಭೆ ಅಧ್ಯಕ್ಷ ಶ್ರೀಕಂಠ ಸೇರಿ ಇನ್ನಿತರರು ಮಾಡಿರುವ ಅಕ್ರಮ ಸಮರ್ಥನೆ ಮಾಡಿಕೊಳ್ಳದೇ, ಈ ವಿಚಾರದಲ್ಲಿ ಮೌನ ಮುರಿದು ಸರ್ಕಾರಿ ಭೂಮಿ ಉಳಿಸುವಂತೆ ಶಾಸಕ ದರ್ಶನ್ ಧೃವನಾರಾಯಣ್ ಅವರಿಗೆ ಬಿಜೆಪಿ ಮಹಾಶಕ್ತಿ ಸಂಘದ ಅಧ್ಯಕ್ಷ ಅನಂತು, ಬಿಜೆಪಿ ನಗರಾಧ್ಯಕ್ಷ ಸಿದ್ದರಾಜು ಸೇರಿದಂತೆ ಇನ್ನಿತರರು ಒತ್ತಾಯ ಮಾಡಿದ್ದಾರೆ.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ವೆ ನಂ. 25ರ ಮಸಣ ಶೆಟ್ಟಿ ಹಾಗೂ ಮಾಜಿ ನಗರಸಭೆ ಅಧ್ಯಕ್ಷ ಶ್ರೀಕಂಠ ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, ಅದನ್ನು ಲೇಔಟ್ ಆಗಿ ಪರಿವರ್ತಿಸಿ ನಿವೇಶನಗಳಾಗಿ ಮಾರಾಟ ಮಾಡುತ್ತಿದ್ದಾರೆ ಎಂದು ದಾಖಲೆಗಳ ಸಮೇತ ಈ ಹಿಂದೆ ನಾವು ಆರೋಪ ಮಾಡಿದ್ದೆವು.

ನಮ್ಮ ಆರೋಪಗಳು ಸುಳ್ಳಾಗಿದ್ದಲ್ಲಿ ನಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಹಿರಂಗವಾಗಿ ಕೂಡ ಸವಾಲು ಹಾಕಿದ್ದೆವು.ಆದರೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು “ಅಲ್ಲಿ ಯಾವುದೇ ಗಡಿ ಕಲ್ಲುಗಳೇ ಇಲ್ಲ”, “ದಿನಾಂಕ ತೋರಿಸಿರುವುದು ತಪ್ಪು” ಹಾಗೂ “ನಮ್ಮ ಆರೋಪಗಳು ನಿರಾಧಾರ” ಎಂದುಸಾರ್ವಜನಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದರು.
ಆದರೆ ನಾವು ಕೈಗೊಂಡ ನಿರಂತರ ಕಾನೂನು ಹೋರಾಟದ ಫಲವಾಗಿ, ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಾಲೂಕು ದಂಡಾಧಿಕಾರಿಗಳು ಸ್ಥಳದ ಸರ್ವೆ ನಡೆಸುವಂತಾಯಿತು. ಇದೀಗ ಸರ್ವೆ ವರದಿ ಬಂದಿದ್ದು, ಸರ್ವೆ ನಂ. 24ಕ್ಕೆ ಸೇರಿದ 26 ಕುಂಟೆ ಸರ್ಕಾರಿ ಜಾಗವನ್ನು ಅಕ್ರಮವಾಗಿ ಕಬಳಿಸಿರುವುದು ಸ್ಪಷ್ಟವಾಗಿ ಸಾಬೀತಾಗಿದೆ.

ಅಲ್ಲದೆ, ಸಾರ್ವಜನಿಕ ರಸ್ತೆಗೆ ಸೇರಿದ ಇನ್ನೂ 8 ಕುಂಟೆ ಜಾಗವೂ ಅತಿಕ್ರಮಣವಾಗಿರುವುದು ಸರ್ವೆ ವರದಿಯಲ್ಲಿ ಬೆಳಕಿಗೆ ಬಂದಿದೆ.
ಈ ಅಕ್ರಮಕ್ಕೆ ಸಂಬಂಧಿಸಿದವರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಶಾಸಕರ ಆಪ್ತರು ಎಂಬ ಕಾರಣದಿಂದ ಅಧಿಕಾರಿಗಳು ಈ ಹಿಂದೆ ಸರ್ವೆ ನಡೆಸಲು ಸಹ ಹಿಂದೇಟು ಹಾಕುತ್ತಿದ್ದರು. ಆದರೆ ನಾವು ಮೇಲ್ಮಟ್ಟದಲ್ಲಿ ಕಾನೂನು ಹೋರಾಟ ನಡೆಸಿದ ನಂತರವೇ ಸರ್ವೆ ನಡೆದಿದ್ದು, ಅಕ್ರಮ ನಡೆದಿರುವುದು ಈಗ ಅಧಿಕೃತ ದಾಖಲೆಗಳಿಂದಲೇ ದೃಢಪಟ್ಟಿದೆ.
ಪ್ರಶ್ನೆ ಏನೆಂದರೆ, ಸರ್ವೆ ವರದಿ ಬಂದಿದ್ದರೂ ಇಂದಿಗೂ ಅಕ್ರಮ ತೆರವುಗೊಳಿಸುವ ಯಾವುದೇ ಕ್ರಮ ಏಕೆ ಕೈಗೊಳ್ಳಲಾಗಿಲ್ಲ? ಇದು ಕೇವಲ ಕಾಗದದಲ್ಲೇ ಉಳಿದಿರುವುದೇಕೆ? ಅಕ್ರಮದಲ್ಲಿ ಭಾಗಿಯಾಗಿರುವವರು ಆಡಳಿತ ಪಕ್ಷದ ಮುಖಂಡರು ಹಾಗೂ ಶಾಸಕರ ಆಪ್ತರಾಗಿರುವ ಕಾರಣವೇ ಕ್ರಮ ಕೈಗೊಳ್ಳಲಾಗುತ್ತಿಲ್ಲವೇ ಎಂಬ ಅನುಮಾನ ನಮ್ಮನ್ನೂ ಸೇರಿದಂತೆ ನಂಜನಗೂಡಿನ ಸಾರ್ವಜನಿಕರಲ್ಲಿ ಮೂಡಿದೆ. ಇದೇ ಕಾರಣಕ್ಕೆ ಅಧಿಕಾರಿಗಳು ಅಕ್ರಮ ತೆರವಿಗೆ ಮುಂದಾಗುತ್ತಿಲ್ಲವೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಈಗಲಾದರೂ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಸರ್ವೆ ವರದಿಯ ಆಧಾರದ ಮೇಲೆ ಅಕ್ರಮ ಒತ್ತುವರಿಯನ್ನು ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಈ ಜಾಗವು ಸರ್ಕಾರಿ ಸ್ವತ್ತು ಎಂಬ ಫಲಕ ಅಳವಡಿಸಿ, ಜಾಗಕ್ಕೆ ಸೂಕ್ತ ಬೇಲಿ ನಿರ್ಮಿಸಿ ಸಂರಕ್ಷಣೆ ಮಾಡುವ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರುಗಳಾದ ರಾಘವೇಂದ್ರ, ರತ್ನಾಕರ್, ಶಂಕ್ರಪ್ಪ, ರಘು , ಸೇರಿದಂತೆ ಇದ್ದರು.
Mysore
ಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
ಹುಣಸೂರು: ಜು.21: ಮೈಸೂರು ಜಿಲ್ಲೆಯ ಹುಣಸೂರು ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಘಟನೆಯಿಂದ ಸ್ಥಳದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಮೃತರನ್ನು ಹರೀಶ್ (43), ಪತ್ನಿ ನಿಶ್ಚಿತ (35), ಪುತ್ರಿಯರಾದ ನಿಕ್ಷ (13) ಹಾಗೂ ರಕ್ಷಾ (9) ಎಂದು ಗುರುತಿಸಲಾಗಿದೆ.

ಇವರು ನಗರದ ಮಾರುತಿ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮೂಲತಃ ತಾಲೂಕಿನ ರತ್ನಾಪುರಿ ಗ್ರಾಮದ ಕೋಡಿ ನಿವಾಸಿಗಳಾಗಿದ್ದ ಕುಟುಂಬವು ಇತ್ತೀಚೆಗೆ ಹುಣಸೂರು ನಗರದ ಮಾರುತಿ ಬಡಾವಣೆಯಲ್ಲಿ ಹೊಸ ಮನೆ ನಿರ್ಮಿಸಿ ವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
Mysore
ನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
ನಂಜನಗೂಡು: ಜು.21: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಗ್ರಾಮಸ್ಥರು ಹಿಡಿದು ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸುರೇಶ್ (23) ಎಂದು ಗುರುತಿಸಲಾಗಿದೆ.

ಮಾಹಿತಿಯಂತೆ, ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಬಾಲಕಿ ಮನೆಯಲ್ಲಿ ಒಂಟಿಯಾಗಿರುವುದನ್ನು ಗಮನಿಸಿದ ಸುರೇಶ್ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಬಾಲಕಿ ಜೋರಾಗಿ ಕಿರುಚಿಕೊಂಡಿದ್ದು, ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿದ್ದಾರೆ. ಆರೋಪಿಯನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು ಬಳಿಕ ಹುಲ್ಲಹಳ್ಳಿ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Mysore
ಇಮ್ಮಾವು ಚಿತ್ರನಗರಿ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರಕ್ಕೆ ಆಗ್ರಹಬಿಡದಿಯಲ್ಲಿ 7,464 ಎಕರೆ ಭೂಸ್ವಾಧೀನ ವಿರೋಧಿಸಿ ರೈತ ಸಂಘ ಪ್ರತಿಭಟನೆ
ನಂಜನಗೂಡು : ಇಮ್ಮಾವು ಚಿತ್ರನಗರಿ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕು. ಜೊತೆಗೆ ಬಿಡದಿ ಸಮೀಪ 7,464 ಎಕರೆ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಂಡು ಟೌನ್‌ಶಿಪ್ ನಿರ್ಮಿಸಲು ಸರ್ಕಾರ ಮುಂದಾಗಿರುವ ಕ್ರಮವನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘದ ಮುಖಂಡ ಹೊಸ ಕೋಟೆ ಬಸವರಾಜು, ರೈತರ ಸಂಕಷ್ಟ ಅಧಿಕಾರಿಗಳಿಗೆ ಅರ್ಥವಾಗುತ್ತಿಲ್ಲ. 589 ಎಕರೆ ಭೂಸ್ವಾಧೀನಕ್ಕೆ ಒಳಗಾದ ರೈತರಿಗೆ ಇನ್ನೂ ಸಮರ್ಪಕ ಪರಿಹಾರ ದೊರೆತಿಲ್ಲ. ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ ಅನೇಕ ರೈತರನ್ನು ಕಡೆಗಣಿಸಲಾಗಿದ್ದು, ಮತ್ತೊಂದೆಡೆ ಕಾನೂನು ವ್ಯಾಪ್ತಿಯನ್ನು ಮೀರಿ ಕೆಲವರಿಗೆ ಪರಿಹಾರ ವಿತರಿಸಿರುವುದು ತೀವ್ರ ಅನ್ಯಾಯ ಎಂದು ಆರೋಪಿಸಿದರು.

ನಮ್ಮ ಹೋರಾಟ ಸಂಪೂರ್ಣ ಅಹಿಂಸಾತ್ಮಕವಾಗಿದೆ. ಅದನ್ನು ಪ್ರಚೋದಿಸುವ ಪ್ರಯತ್ನ ಮಾಡಬಾರದು. ರೈತರ ತಾಳ್ಮೆಗೂ ಮಿತಿಯಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಪಕ್ಷಪಾತದ ನಡವಳಿಕೆಯಿಂದ , ಗ್ರಾಮಗಳ ರೈತರು ಬೀದಿಪಾಲಾಗುವ ಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಕೂಡಲೇ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲ್ಲೂಕು ಅಧ್ಯಕ್ಷ ಕೆ.ಆರ್.ಪುರ ಮಹೇಶ್, ಕಾರ್ಯದರ್ಶಿ ರವಿ ಮೈಸೂರು, ಯುವ ಘಟಕದ ಜಿಲ್ಲಾ ಅಧ್ಯಕ್ಷ ಪ್ರೇಮ್ ರಾಜ್, ಮಹಿಳಾ ಘಟಕದ ಅಧ್ಯಕ್ಷೆ ರಾಜಮ್ಮ, ರಾಚಮ್ಮ, ಹೊಸಕೋಟೆ ರಘು, ಮಾದಯ್ಯನ ಹುಂಡಿ ಬಸಪ್ಪ, ಯುವ ಘಟಕದ ತಾಲ್ಲೂಕು ಅಧ್ಯಕ್ಷ ಇಮ್ಮಾವು ರಂಗಸ್ವಾಮಿ, ಯುವ ಘಟಕದ ಸಂಘಟನಾ ಕಾರ್ಯದರ್ಶಿ ಮಹೇಂದ್ರ, ಅಡಕನಹಳ್ಳಿ ಶ್ರೀಕಂಠ, ಇಮ್ಮಾವು ಪ್ರಕಾಶ್, ಹುಳಿಮಾವು ಬಸವರಾಜು, ರವಿ, ರಂಗಪ್ಪ, ಆಯರಹಳ್ಳಿ ಇಮ್ಮಾವು ಮೊಳ್ಳಶೆಟ್ಟರು, ಮಹದೇವಪ್ಪ, ಜವನೆಗೌಡ, ಹುಂಡಿ ರಾಜಣ್ಣ, ನಾಗಣ್ಣ ಸೇರಿದಂತೆ ರೈತ ಮುಖಂಡರು, ರೈತ ಮಹಿಳೆಯರು ಹಾಗೂ ರೈತರು ಭಾಗವಹಿಸಿದ್ದರು.
-
Mysore9 hours agoಹುಣಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆ; ಸಾವಿನ ಕಾರಣ ನಿಗೂಢ
-
Mysore15 hours agoನಂಜನಗೂಡಿನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರಿಂದ ಧರ್ಮದೇಟು, ಪೊಲೀಸರ ವಶಕ್ಕೆ
-
Kodagu12 hours agoಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ
-
Politics4 hours agoಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ
-
Politics5 hours agoರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ
-
Kodagu5 hours agoಹಾರಂಗಿ ಜಲಾಶಯದ ನೀರು ಕುಡಿಯಲು ಮಾತ್ರ: ರೈತರಿಗೆ ಬೆಳೆ ಬೆಳೆಯದಂತೆ ಮನವಿ
-
Kodagu7 hours agoಕೂಡಿಗೆ ವ್ಯಾಪ್ತಿಯಲ್ಲಿ 1 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಡಾ. ಮಂತರ್ ಗೌಡ ಚಾಲನೆ
-
Manglore3 hours agoಮನೆ ಕಾಮಗಾರಿಗೆ ಬಂದು 6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು- ಕೃತ್ಯ ಎಸಗಿದ 24 ಗಂಟೆಯೊಳಗೆ ಆರೋಪಿ ಅಂದರ್
