State
PSI Free ಕೋಚಿಂಗ್ ಗಾಗಿ ಅರ್ಜಿ ಅಹ್ವಾನ : ಅರ್ಜಿ ಹೇಗೆ ಸಲ್ಲಿಸಬೇಕು?
PSI Free Coachng 2025 – ಪದವಿ ಪಾಸಾಗಿ ಕರ್ನಾಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗಾಗಿ ತಯಾರಿ ನಡೆಸುತ್ತಿರುವಂತಹ ಅಭ್ಯರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೂರು ತಿಂಗಳ ಉಚಿತ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.

ಈ ಒಂದು ಉಚಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸಲು ಯಾವ ಯಾವ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಸೇರಿದಂತೆ ಇತರೆ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಉಚಿತ ತರಬೇತಿ ಕುರಿತು :
Department of Minority Karnataka – ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ರಾಜ್ಯದ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಶೀಘ್ರದಲ್ಲಿಯೆ ನೇಮಕಾತಿ ಅಧಿಸೂಚನೆ ಬರಲಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ 90 ದಿನಗಳ ಪರೀಕ್ಷಾ ಪೂರ್ವ ತರಬೇತಿ ನೀಡಲು ಅಧಿಸೂಚನೆ ಹೊರಡಿಸಿದೆ.

ಯಾರು ಅರ್ಹರು?
ಈ ಉಚಿತ ವಸತಿ ಸಹಿತ ಪರೀಕ್ಷೆ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ & ಪಾರ್ಸಿ ಸಮುದಾಯದವರಾಗಿರಬೇಕು ಹಾಗೂ ಯಾವುದಾದರು ಪದವಿ ಮುಗಿಸಿರಬೇಕು.
ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಇದಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯ್ಕೆಪರೀಕ್ಷೆ ನಡೆಸಿ ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 23 ಮೇ 2025
ಅರ್ಜಿ ಸಲ್ಲಿಸೋದು ಹೇಗೆ?
ರಾಜ್ಯದ ಎಲ್ಲಾ ಜಿಲ್ಲೆಗಳ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಅಧಿಕೃತ ಲಿಂಕ್ ಮುಕಾಂತರ ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಲಿಂಕ್ – https://dom.karnataka.gov.in/
State
SBI ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಬೃಹತ್ ನೇಮಕಾತಿ : ಪದವಿ ಓದುತ್ತಿರುವವರು ಕೂಡ ಅರ್ಜಿ ಸಲ್ಲಿಸಬಹುದು
SBI Bank Junior Associates Recruitment 2025 : ಭಾರತ ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವಂತಹ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಜೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದಾರೆ .
ವಿಶೇಷತೆ ಏನೆಂದರೆ, ಸದ್ಯಕ್ಕೆ ಅಂತಿಮ ಸೆಮಿಸ್ಟರ್ನಲ್ಲಿ ಪದವಿ ಶಿಕ್ಷಣ ಓದುತ್ತಿರುವ ಅಭ್ಯರ್ಥಿಗಳು ಕೂಡ ಈ ಒಂದು ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ನೇಮಕಾತಿಯ ವಿವರ : ಭಾರತ ದೇಶಾದ್ಯಂತ ವಿವಿಧ ರಾಜ್ಯಗಳ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ ಒಟ್ಟು 5,180 ಹುದ್ದೆಗಳನ್ನು ಈ ನೇಮಕಾತಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಅಭ್ಯರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಮುಗಿಸಿದಂತಹ ಅಥವಾ ಅಂತಿಮ ಸೆಮಿಸ್ಟರ್ ನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ. ವಯೋಮಿತಿ ನೋಡುವುದಾದರೆ 20 ರಿಂದ 28 ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು. ನೀವು ಮೀಸಲಾತಿ ವರ್ಗಕ್ಕೆ ಸೇರಿದವರಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು.
ಆಯ್ಕೆಯಾದವರಿಗೆ ಮಾಸಿಕ ವೇತನ ಎಷ್ಟು?
ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 24,050ರೂ. ಯಿಂದ 64,480ರೂ. ವರೆಗೆ ಸಿಗಲಿದೆ.
ಅರ್ಜಿ ಸಲ್ಲಿಕೆಗೆ ನಿಗದಿಪಡಿಸಿದ ಅರ್ಜಿ ಶುಲ್ಕ :
• ಸಾಮಾನ್ಯ,ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 750ರೂ.
• ಉಳಿದ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 26, 2025
ಅರ್ಜಿ ಸಲ್ಲಿಸುವ ಡೈರೆಕ್ಟ ಲಿಂಕ್ – https://sbi.co.in/web/careers
Politics
ಸಾರಿಗೆ ನೌಕರರ ಮುಷ್ಕರದ ಬಗ್ಗೆ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಜಟಾಪಟಿ
ಬೆಂಗಳೂರು: ಸಾರಿಗೆ ನೌಕರರ ಮುಷ್ಕರದ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಇದೀಗ ಅಶೋಕ್ ಅವರು ತಮ್ಮ ಖಾತೆಯಿಂದ ಟ್ವೀಟ್ ಮಾಡುವ ಮುಖಾಂತರ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್ ಅವರು, ಸಿಎಂ ಸಿದ್ದರಾಂಯ್ಯ ಅವರೇ, ಸಾರಿಗೆ ಸಂಸ್ಥೆಗಳು ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಲಾಭದಲ್ಲಿದೆ ಎಂದು ಸುಳ್ಳು ಹೇಳಿಕೊಂಡು ಪುಟಗಟ್ಟಲೇ ಜಾಹೀರಾತು ಕೊಟ್ಟು ಬಿಟ್ಟಿ ಪ್ರಚಾರ ಪಡೆದಿದ್ದೆ ನಿಮ್ಮ ಏಕೈಕ ಸಾಧನೆ. ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯ ಸಾರಿಗೆ ಸಂಸ್ಥೆಗಳನ್ನ ದಿವಾಳಿ ಮಾಡಿದ ಕುಖ್ಯಾತಿ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ನಿಮ್ಮ ದುರಾಡಳಿತದಿಂದ ಬಸ್ ನಿಲ್ದಾಣಗಳನ್ನೂ ಲೀಸ್‌ಗಿಡುವ ಹೀನಾಯ ಸ್ಥಿತಿಗೆ ಇಂದು KSRTC ಸಂಸ್ಥೆ ತಲುಪಿದೆ. ನಿಮ್ಮ ಕಾರ್ಯವೈಖರಿಗೆ ಇದಕ್ಕಿಂತ ಸಾಕ್ಷಿ ಬೇಕಾ? ಎಂದು ಪ್ರಶ್ನಿಸಿದ್ದಾರೆ.

ಒಂದೆಡೆ, ಈಗಾಗಲೇ 15-30% ಟಿಕೆಟ್ ದರ ಏರಿಕೆ ಮಾಡಿದ್ದೀರಿ, ಮತ್ತೊಂದೆಡೆ KSRTC ಸಂಸ್ಥೆಯನ್ನ 2,000 ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೀರಿ. ನೌಕರರಿಗೆ 1,800 ಹಿಂಬಾಕಿ ಉಳಿಸಿಕೊಂಡಿದ್ದೀರಿ, ನಿಗಮಗಳಿಗೆ 6,000 ಕೋಟಿ ರೂಪಾಯಿ ಬಾಕಿ ಇದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಅರ್ಥಿಕ ಪರಿಸ್ಥಿತಿ ನಿಭಾಯಿಸಲು ಬಸ್ ನಿಲ್ದಾಣಗಳನ್ನು ಹರಾಜು ಹಾಕಿದರೂ ಅಚ್ಚರಿಯಿಲ್ಲ! ಎಂದು ವಾಗ್ದಾಳಿ ನಡೆಸಿದ್ದಾರೆ.
2013ರಲ್ಲಿ ನಾನು ಸಾರಿಗೆ ಸಚಿವನಾಗಿದ್ದಾಗ, ಸಾರಿಗೆ ಸಂಸ್ಥೆಗಳಲ್ಲಿ ₹1,000 ಕೋಟಿಗೂ ಹೆಚ್ಚು ಲಾಭ ತಂದುಕೊಟ್ಟಿದ್ದೆ. ಸಾರಿಗೆ ನಿಗಮಗಳಲ್ಲಿ 25,000 ಜನರಿಗೆ ಕಾಯಂ ಉದ್ಯೋಗ ಕೊಟ್ಟಿದ್ದೆ. ಪ್ರಯಾಣಿಕರಿಗೆ ಗುಣಮಟ್ಟದ ನಿಲ್ದಾಣ ಮತ್ತು ಬಸ್ ಸೇವೆ, ಇಂಧನ ಉಳಿತಾಯ, ಜೈವಿಕ ಇಂಧನ ಬಳಕೆ ಮತ್ತಿತರ ಕಾರ್ಯದಕ್ಷತೆ ಗಮನಿಸಿ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ರಾಜ್ಯಕ್ಕೆ 30ಕ್ಕೂ ಹೆಚ್ಚು ಪ್ರಶಸ್ತಿ ನೀಡಿತ್ತು ಎಂದು ತಿಳಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಾಂಕ್ರಾಮಿಕದ ಪರಿಣಾಮದಿಂದ ಸಾರಿಗೆ ಸಂಸ್ಥೆಗಳಿಗೆ ನಷ್ಟ ಆಗಿದ್ದು ನಿಜ. ಆದರೆ ಬೇರೆ ರಾಜ್ಯಗಲ್ಲಿ ಸಾರಿಗೆ ನೌಕರರಿಗೆ ಸಂಬಳವೂ ಕೊಡದಿದ್ದ ಸಂದರ್ಭದಲ್ಲೂ ನಾವು ವೇತನ ಕೊಟ್ಟಿದ್ದೇವೆ. ಅದು ಕಾರ್ಮಿಕರ ಕಲ್ಯಾಣದ ಬಗ್ಗೆ ನಮ್ಮ ಪಕ್ಷದ ಬದ್ಧತೆ. ನಮ್ಮ ಪಕ್ಷವಾಗಲಿ, ನಾನಾಗಲಿ ತಮ್ಮಿಂದ ಆಡಳಿತದ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.
Politics
ಇತಿಹಾಸದಲ್ಲಿಸಾರಿಗೆ ನೌಕರರಿಗೆ ಅನ್ಯಾಯ ಮಾಡಿದ್ದುನಿಮ್ಮದೇ ಸರ್ಕಾರ ಅಲ್ಲವೇ: ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಬಗ್ಗೆ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಇತಿಹಾಸದಲ್ಲಿಸಾರಿಗೆ ನೌಕರರಿಗೆ ಅನ್ಯಾಯ ಮಾಡಿದ್ದುನಿಮ್ಮದೇ ಸರ್ಕಾರ ಅಲ್ಲವೇ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ, ಅಧಿಕಾರ ಇದ್ದಾಗ ಹಗಲುವೇಷ, ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ, ಆರ್.ಅಶೋಕ್ ಅವರೇ, ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಸಾರಿಗೆ ನೌಕರರು ಮೊದಲ ಬಾರಿ ವೇತನ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಅಧಿಕಾರದ ಅವಧಿಯಲ್ಲಿ ಸಾರಿಗೆ ನೌಕರರ ತಿಂಗಳ ವೇತನ ಹೇಗೆ ಪಾವತಿಯಾಗುತ್ತಿತ್ತು ಎಂದು ಮಾಹಿತಿ ಪಡೆದು ತಿಳಿಸುವಿರಾ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿ ಸಾರಿಗೆ ನೌಕರರಿಗೆ ಅರ್ಧ ಸಂಬಳ, ಈ ತಿಂಗಳ ಸಂಬಳ ಮುಂದಿನ ತಿಂಗಳು ನೀಡುತ್ತಿದ್ದಾಗ ಅಧಿಕಾರದಲ್ಲಿದ್ದದ್ದು ನಿಮ್ಮದೇ ಪಕ್ಷ ಅಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ 2012-2016 ರವರೆಗೆ ವೇತನ ಹೆಚ್ಚಳ ಮಾಡಿ ಅದನ್ನು 2012 ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೊಳಿಸಿದ್ದೆವು. 2016-2020 ರವರೆಗೆ ವೇತನ ಹೆಚ್ಚಳ ಮಾಡಿದಾಗ 2016 ರಿಂದ ಜಾರಿ ಮಾಡಿದ್ದೆವು. ಆದರೆ ತಮ್ಮ ಪಕ್ಷದ ಆಡಳಿತದ ಅವಧಿಯಲ್ಲಿ ಸಾರಿಗೆ ನೌಕರರು 2020ರಿಂದಲೇ ವೇತನ ಹೆಚ್ಚಳ ಮಾಡಬೇಕೆಂದು ಬೇಡಿಕೆ ಸಲ್ಲಿಸಿದ್ದರೂ 01-03-2023ರಿಂದ ಜಾರಿಗೊಳಿಸಿ ( ಸರ್ಕಾರದ ಆದೇಶ ಸಂಖ್ಯೆ: ಟಿಡಿ 12 ಟಿಸಿಬಿ 2023, ಬೆಂಗಳೂರು) ನೌಕರರಿಗೆ ಅನ್ಯಾಯ ಮಾಡಿದ್ದು ನೀವೇ ಅಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ಮತ್ತು ಹೊಸ ಬಸ್ ಸೇರ್ಪಡೆ ಸ್ಥಗಿತಗೊಂಡಿತ್ತು, ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಹಣ ಪಾವತಿ, ಇತರೆ ಹೊಣೆಗಾರಿಕೆ ಹೀಗೆ ರೂ.5,900 ಕೋಟಿ ಬಾಕಿ ಇತ್ತು ಎಂಬುದರ ಬಗ್ಗೆ ನಿಮಗೆ ಮಾಹಿತಿಯಿದೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ನಿಮ್ಮ ಪಕ್ಷದ ಅಧಿಕಾರವಾಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದ ನೇಮಕಾತಿಗೆ ಚಾಲನೆ ನೀಡಿದವರು ನಾವು. 10,000 ಹೊಸ ನೇಮಕಾತಿ ಮಾಡಿದ್ದೆವು. ಇದರಲ್ಲಿ 8 ವರ್ಷಗಳಿಂದ ಅನುಕಂಪದ ಆಧಾರದ ನೌಕರಿ ನೀಡದಿರುವ 1,000 ಮೃತರ ಅವಲಂಬಿತರು ಇದ್ದಾರೆ. 5,200 ಹೊಸ ಬಸ್ಸುಗಳ ಸೇರ್ಪಡೆ ಮಾಡಿದ್ದೇವೆ. ಕನಿಷ್ಠ ಈ ಮಾಹಿತಿಯಾದರೂ ನಿಮಗೆ ತಿಳಿದಿಯೇ? ಎಂದು ಪ್ರಶ್ನಿಸಿದ್ದಾರೆ.
ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಮೊತ್ತ ಪಾವತಿ ಬಾಕಿ ಪಾವತಿಗಾಗಿ ರೂ.2,000 ಕೋಟಿ ಹಣವನ್ನು ಬ್ಯಾಂಕ್ ಗಳಿಂದ ಸಾಲ ಪಡೆದವರು ನೀವು. ಅದರ ಅಸಲು ಮತ್ತು ಬಡ್ಡಿಯನ್ನು ಮರುಪಾವತಿ ಮಾಡುತ್ತಿರುವವರು ನಾವು. ಇದೇನಾ ನಿಮ್ಮ ಕಾಲದ ಸರ್ಕಾರದ ಸಾಧನೆ? ಎಂದು ವ್ಯಂಗ್ಯ ಮಾಡಿದ್ದಾರೆ.
ನಾನು ಖುದ್ದಾಗಿ ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದೆ. ಇದಕ್ಕಿಂತ ಮೊದಲು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರೂ ಸಂಧಾನದ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಆರ್ .ಅಶೋಕರ್ ಅವರೇ, ನಿಮ್ಮ ಪಕ್ಷದ ಅಧಿಕಾರಾವಧಿಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿ ರೂ.718 ಕೋಟಿ ವೇತನಪರಿಷ್ಕರಣೆ ಬಾಕಿ ನೀಡಲು ಶಿಫಾರಸು ಮಾಡಿತ್ತು. ಆದರೆ ನಿಮ್ಮ ಸರ್ಕಾರ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಿರಲಿಲ್ಲ. ಆ ವೇತನ ಪರಿಷ್ಕರಣೆ ಬಾಕಿಯನ್ನು ಪಾವತಿ ಮಾಡಲು ನಮ್ಮ ಸರ್ಕಾರ ಬದ್ದವಾಗಿದೆ. ನಮ್ಮ ಸರ್ಕಾರದ ಈ ನಿಲುವನ್ನು ಸಾರಿಗೆ ನೌಕರರಿಗೆ ತಿಳಿಸಿ ಮುಷ್ಕರ ಕೈಬಿಟ್ಟು ಮುಂದಿನ ದಿನಗಳಲ್ಲಿ ಮಾತುಕತೆ ಮುಂದುವರಿಸಬಹುದು ಎಂದು ಮನವಿ ಮಾಡಿದ್ದರೂ ನೌಕರರ ಸಂಘಟನೆಗಳು ಮುಷ್ಕರ ಹೂಡಿದ್ದಾರೆ ಎಂದು ಹೇಳಿದ್ದಾರೆ.
ನಮ್ಮದು ಕಾರ್ಮಿಕರ ಪರ ಸರ್ಕಾರ, ಅವರ ಹಿತಾಸಕ್ತಿ ಕಾಪಾಡಲು ನಾವು ಬದ್ಧರಾಗಿದ್ದೇವೆ. ಭಾರತೀಯ ಜನತಾ ಪಕ್ಷ ರೈತರು ಮತ್ತು ಕಾರ್ಮಿಕರ ವಿರೋಧಿ ಎನ್ನುವುದಕ್ಕೆ ಇತಿಹಾಸವೇ ಸಾಕ್ಷಿ ಎಂದು ಟೀಕಿಸಿದ್ದಾರೆ.
ನಿಮ್ಮ ಮರೆಗುಳಿತನಕ್ಕೆ ನನ್ನ ಅನುಕಂಪ ಇದೆ. ನನ್ನ ಮತ್ತು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದಲು, ಸಾರಿಗೆ ಸಚಿವರಾಗಿ ನೀವು ಮತ್ತು ನಿಮ್ಮ ಸರ್ಕಾರ ರಾಜ್ಯ ರಸ್ತೆ ಸಾರಿಗೆ ನೌಕರರಿಗೆ ಮಾಡಿರುವ ಮೋಸ ಮತ್ತು ದ್ರೋಹದ ಇತಿಹಾಸವನ್ನು ನೆನಪು ಮಾಡಿಕೊಳ್ಳಿ ಎಂದು ಟಾಂಗ್ ನೀಡಿದ್ದಾರೆ.
-
Hassan13 hours agoಹುಡಾ ಅಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ಸಮುದಾಯದ ಮುಖಂಡರಿಂದ ಪ್ರತಿಭಟನೆ: ಪಕ್ಷಗೋಸ್ಕರ ಕೆಲಸ ಮಾಡಿದವರಿಗೆ ಸ್ಥಾನ ನೀಡುವಂತೆ ಕಯುಮ್ ಆಗ್ರಹ
-
Hassan15 hours agoನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಸೈಯದ್ ತಾಜಿಂ ಬೃಹತ್ ಪ್ರತಿಭಟನೆ.
-
Chikmagalur19 hours agoರೈತನ ಮೇಲೆ ಕಾಡಾನೆ ದಾಳಿ, ಬದುಕುಳಿದ ರೈತ ಫಿಲಿಪ್
-
Hassan15 hours agoಹಾಲುವಾಗಿಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಗುದ್ದಲಿ ಪೂಜೆ
-
Hassan17 hours agoಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರ
-
Kodagu12 hours agoಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಶಾಸಕ ಡಾ. ಮಂತರ್ ಗೌಡ ಭೇಟಿ
-
Manglore12 hours agoಧರ್ಮಸ್ಥಳ ಪ್ರಕರಣ- ಕಾಡಿನಲ್ಲಿ ಶೋಧನೆ ನಡೆಸಿ ತೆರಳಿದ ಎಸ್ಐಟಿ ತಂಡ
-
Mysore13 hours agoಪುರಸಭೆ ವಂಚನೆ ಪ್ರಕರಣ: ಸಿಐಡಿ ತನಿಖೆಯಾಗಬೇಕೆಂದು ಆಗ್ರಹಿಸಿದ ಡಾ. ಎ. ಎಸ್.ಚಂದ್ರಶೇಖರ್
