Mandya
ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 : ಡಾ ಎಚ್ ಎಲ್ ನಾಗರಾಜು

ಮಂಡ್ಯ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ -2 ನಡೆಯಲಿದೆ. ಮೊದಲನೇ ಪರೀಕ್ಷೆ ನಡೆದ ರೀತಿಯಲ್ಲೆ ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರು ಮಾತಾನಾಡಿದರು.
ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಜಿಲ್ಲೆಯಲ್ಲಿ 2024 ರಲ್ಲಿ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದವರಿಗೆ ಪರೀಕ್ಷೆ ನಡೆಸುವ ಕುರಿತು ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.
ಜಿಲ್ಲೆಯ 08 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ 08 ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮರಾದ ಕಣ್ಣಾವಲಿನಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆಯನ್ನು ವೆಬ್ ಕಾಸ್ಟಿಂಗ್ ಸಹ ಮಾಡಲಾಗುವುದು ಎಂದು ಹೇಳಿದರು.
ಪರೀಕ್ಷೆಯು ಕೆ. ಆರ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು , ಶ್ರೀರಂಗಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜು , ಮಂಡ್ಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ (ಕಲ್ಲು ಕಟ್ಟಡ) ಕಾಲೇಜು, ಮಂಡ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು( ಮಾಜಿ ಪುರಸಭೆ), ಮದ್ದೂರು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪಾಂಡವಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಳವಳ್ಳಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯಲಿದೆ.
ಪರೀಕ್ಷೆಯು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಬೇಕು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.
ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯವನ್ನು ಒದಗಿಸುವುದು.
ವಿಶೇಷ ಪ್ರಶ್ನೆಪತ್ರಿಕೆ ಪಾಲಕರಾಗಿ ನೇಮಕಗೊಂಡಿರುವ ಅಧಿಕಾರಿಗಳು ಬಯೋ ಮೆಟ್ರಿಕ್‌ನಲ್ಲಿ ಮಾಹಿತಿಯನ್ನು ನೊಂದಾಯಿಸಿಕೊಂಡು ಖುದ್ದು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಗೌಪ್ಯ ವಸ್ತುಗಳನ್ನು ಸ್ವೀಕರಿಸಿ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯದಲ್ಲಿ ತಲುಪಿಸಬೇಕು.
ಪರೀಕ್ಷಾ ದಿನಗಳಂದು ‘ಪ್ರಶ್ನೆಪತ್ರಿಕೆ ವಿತರಕರ’ ತಂಡದ ಬೆಂಗಾವಲಿಗೆ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರುಗಳನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು ಹಾಗೂ ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಇಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯ, ಸೂಕ್ತ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಬೇಕು ಎಂದರು.
ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪರೀಕ್ಷೆಗಳನ್ನು ಯಥಾಕ್ರಮದಂತೆ ಜರುಗಿಸಲು ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರುಗಳಿಗೆ ಸವಿವರವಾದ ಮಾರ್ಗಸೂಚಿಯನ್ನು ಕಳುಹಿಸಲಾಗಿದೆ ಹಾಗೂ ಕಾಲಕಾಲಕ್ಕೆ ಅಗತ್ಯ ಸಹಕಾರ ಹಾಗೂ ಮಾರ್ಗದರ್ಶನಗಳನ್ನು ಒದಗಿಸಲು ಇಲಾಖೆಯ ವತಿಯಿಂದ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಸಭೆಯಲ್ಲಿ,, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಚೆಲುವಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಎಚ್.ನಿರ್ಮಲ ಅವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Mandya
ಮುಂಡುಗದೊರೆ ಪಂಚಾಯ್ತಿಗೆ ಪದ್ಮ ಅಧ್ಯಕ್ಷೆ

ಶ್ರೀರಂಗಪಟ್ಟಣ : ತಾಲೂಕಿನ ಮುಂಡುಗದೊರೆ ಗ್ರಾ. ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಪದ್ಮ ಡಿ.ಎಸ್.ಕೋಂ ಸೋಮೇಶ ಹಾಗು ಉಪಾಧ್ಯಕ್ಷರಾಗಿ ಗಾಯಿತ್ರಿ ಕೋಂ ಶಿವರಾಜ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.
ನಿಕಟಪೂರ್ವ ಅಧ್ಯಕ್ಷ ಸೋಮಣ್ಣ ಹಾಗು ಉಪಾಧ್ಯಕ್ಷೆ ಸುಗುಣ ರಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರನ್ನು ಹೊರತು ಪಡಿಸಿ ಯಾರು ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಎಇಇ ಮಂಜುನಾಥ್ ಘೋಷಣೆ ಮಾಡಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಗ್ರಾಮಸ್ಥರು ಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂಧಿಸಿದರು.
Mandya
ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬ

ಮಂಡ್ಯ: ಎಸ್.ಬಿ ಎಜುಕೇಶನ್ ಟ್ರಸ್ಟ್, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜು, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನೆಹರು ನಗರ, ಮಂಡ್ಯ, ಈ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಹಬ್ಬದ ಕಾರ್ಯಕ್ರಮ ಶಾಲೆಯ ಆವರಣದಲ್ಲಿ ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಬಿ ಶಿವಲಿಂಗಯ್ಯರವರ ಅಧ್ಯಕ್ಷತೆಯಲ್ಲಿ ಜರುಗಿತು.
ಎಸ್.ಬಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತ್ಯುನ್ನತ ಶ್ರೇಣಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ರಾಹುಲ್ ಹಾಗೂ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಮಾಂಡವ್ಯ ಕಾಲೇಜಿನ ಪ್ರಾಂಶುಪಾಲರಾದ ಕೆ.ಕೆ. ಚಂದ್ರಶೇಖರ್ ರವರು ಬಹುಮಾನವನ್ನು ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಎಕ್ಸಲೆಂಟ್ ಸ್ಕೂಲ್ ನ ಕಾರ್ಯದರ್ಶಿ ಅಬ್ದುಲ್ ಮುನೀರ್, ಮಹದೇಶ್ವರ ಚಿಲ್ಡ್ರನ್ ಸ್ಕೂಲ್ ನ ಕಾರ್ಯದರ್ಶಿ ಎಂ. ರವಿ, ಶ್ರೀ ಗುರುವಿಜ್ಞಾನ ವಿದ್ಯಾಲಯದ ಅಧ್ಯಕ್ಷರಾದ ಎಮ್.ಸಿ. ಶಿವಕುಮಾರ್, ಮಾಂಡವ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಹದೇವಯ್ಯ, ಮಾಂಡವ್ಯ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಿನ ಶೈಕ್ಷಣಿಕ ಪಾಲದಾರರಾದ ಎಂ. ಅವಿನಾಶ್ ಡಾ. ಎಂ. ಮೋಹನ್, ಡಿ.ಎಸ್. ರಾಘವೇಂದ್ರ (ವಿಜ್ಞಾನ ವಿಭಾಗ), ಶೈಕ್ಷಣಿಕ ಪಾಲುಗಾರರಾದ ವಾಣಿಜ್ಯ ವಿಭಾಗದ ಚನ್ನೇಶ್ ಹಾಗೂ ಅರ್ಚನಾರವರು ವೇದಿಕೆಯಲ್ಲಿ ಹಾಜರಿದ್ದರು.
ವೇದಿಕೆಯ ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
Mandya
ಜೆ.ಡಿ.ಎಸ್ ತೆಕ್ಕೆಗೆ ಹುಲಿಕೆರೆ ಪಂಚಾಯಿತಿ

ನಾಗಮಂಗಲ : ಹುಲಿಕೆರೆ ಗ್ರಾಮ ಪಂಚಾಯಿತಿಯ ಈ ಹಿಂದೆ ಅಧ್ಯಕ್ಷರಾಗಿದ್ದ ಶಿವರಾಮು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇಂದು ನೂತನ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಿತು. ಎರಡು ನಾಮಪತ್ರ ಸಲ್ಲಿಕೆಯಾಗಿದ್ದು ಕಾಂತರಾಜು ಗೆ ಮೂರು ಮತಗಳು ಹಾಗೂ ಸುಮಾ ಚೇತನ್ ಕುಮಾರ್ ರವರಿಗೆ 9 ಮತಗಳ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿಯಾದ ಸತೀಶ್ ರವರು ಘೋಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾದ ಸುಮ ಚೇತನಕುಮಾರ್ ರವರು ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ ಹುಲಿಕೆರೆ ಗ್ರಾಮ ಪಂಚಾಯಿತಿಯು ಮಂಡ್ಯ ಜಿಲ್ಲೆಯಲ್ಲಿ ಉತ್ತಮ ಹೆಸರು ಪಡೆದಿರುವಂತಹ ಪಂಚಾಯಿತಿ. ಇಲ್ಲಿ ನಾನು ಅಧ್ಯಕ್ಷರಾಗಿರುವುದಕ್ಕೆ ಸಂತಸದ ವಿಚಾರ ನನ್ನ ಆಯ್ಕೆ ಮಾಡಿದ ಪಂಚಾಯತಿ ಆತ್ಮೀಯ ಸದಸ್ಯರು ನನ್ನ ಮೇಲೆ ನಂಬಿಕೆ ಇಟ್ಟು ಈ ಹುದ್ದೆಯನ್ನು ನೀಡಿರುವುದಕ್ಕೆ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಗ್ರಾಮೀಣ ಪ್ರದೇಶದ ಕುಡಿಯುವ ನೀರು ರಸ್ತೆ ಮತ್ತು ವಿದ್ಯುತ್ ದೀಪಕ್ಕೆ ಮೊದಲನೇ ಆದ್ಯತೆ ನೀಡಿ ಮಹಾತ್ಮ ಗಾಂಧಿಯ ನರೇಗಾ ಯೋಜನೆಗೆ ಉತ್ತಮ ರೀತಿ ನಿರ್ವಹಣೆ ಮಾಡಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಅವರು ತಿಳಿಸಿದರು.
ಇದೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತೆ ಮುಖಂಡರು ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದರು
ಗ್ರಾಮ ಪಂಚಾಯತಿ ಸದಸ್ಯರಾದ ತಿಮ್ಮೇಗೌಡ. ಲಕ್ಷ್ಮೀದೇವಮ್ಮ. ಶಿವಲಿಂಗಯ್ಯ. ಮಂಜುಳ. ತಿಮ್ಮೇಗೌಡ. ದಿನೇಶ್ ಕಲ್ಲೇನಹಳ್ಳಿ. ನರಗನಹಳ್ಳಿ ದೇವೇಗೌಡ.ಪುರಸಭೆ ಸದಸ್ಯ ಶಂಕರ್ಲಿಂಗೇಗೌಡ. ಪಡುವಲ ಪಟ್ಟಣ ಪುಟ್ಟರಾಜು.ಎಂ ಎನ್ ಸುರೇಶ್ ಜವರೇಗೌಡ ನೂತನ ಅಧ್ಯಕ್ಷರಿಗೆ ಶುಭ ಕೋರಿದರು.
-
Hassan20 hours ago
HASSAN: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ಪಲ್ಟಿ
-
Kodagu15 hours ago
ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ: ಕಾರಣವೇನು?
-
Kodagu12 hours ago
ಮಡಿಕೇರಿಯಲ್ಲಿ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
Kodagu12 hours ago
ಸ್ಪ್ರಿಂಕ್ಲರ್ ಪೈಪಿಗೆ ಕೃಷಿ ಇಲಾಖೆಯಿಂದ ಸಹಾಯಧನ
-
Mysore20 hours ago
ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ : ಆರೋಪಿ ಬಂಧನಕ್ಕೆ ರಸ್ತೆ ತಡೆದು ಪ್ರತಿಭಟನೆ
-
Hassan16 hours ago
ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ: ಮರು ಚುನಾವಣೆಗೆ ಒತ್ತಾಯ
-
State13 hours ago
ನಮ್ಮ ಮೆಟ್ರೋ ದರ ಏರಿಕೆ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ
-
Hassan20 hours ago
ಶ್ರೀ ಲಕ್ಷ್ಮೀ ವೆಂಕಟೇಶ್ವರಸ್ವಾಮಿ ಜಾತ್ರಾ ಮಹೋತ್ಸವ: ಜೆಡಿಎಸ್ ಹಾಗೂ ಕಾಂಗ್ರೆಸ್ನಿಂದ ಪ್ರತ್ಯೇಕವಾಗಿ ಆರ್ಕೆಸ್ಟ್ರಾ ಆಯೋಜನೆ