Mysore
ಪಲ್ಸ್ ಪೋಲಿಯೊ ಹನಿಯಿಂದ ಮುಕ್ತ ಸಮಾಜ ನಿರ್ಮಾಣ : ಜಿಲ್ಲಾಧ್ಯಕ್ಷ ಮಂಜುನಾಥ್
ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿಯನ್ನು ಹಾಕಿಸುವ ಮೂಲಕ ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡಬೇಕೆಂದು ರೈತ ಮತ್ತು ಕಾರ್ಮಿಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎಸ್.ಮಂಜುನಾಥ್ ಹೇಳಿದರು.
ಅವರು ತಾಲ್ಲೂಕಿನ ತಂದ್ರೆಕೊಪ್ಪಲು ಗ್ರಾಮದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿಯನ್ನು ಮೂಡಿಸಿದರೆ ಆ ಮೂಲಕ ಇಂತಹ ಆರೋಗ್ಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಕಾರ್ಯಕ್ರಮಗಳು ಯಶಸ್ವಿಯಾಗಲು ಸಹಕಾರಿಯಾಗಲಿದೆ. ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ಆರೋಗ್ಯಕ್ಕೆ ಸಂಭಂದಿಸಿದ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚು ಆಯೋಜನೆ ಮಾಡುವ ಮೂಲಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.
ಪೋಲಿಯೋದಿಂದ ಮಕ್ಕಳನ್ನು ರಕ್ಷಿಸಲು ಹಾಗೂ ಅವರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದು ಕರೆ ನೀಡಿದರು.
ಈ ಸಂಧರ್ಭದಲ್ಲಿ ಮುಖ್ಯ ಶಿಕ್ಷಕ ವೆಂಕಟೇಶ್, ಅಂಗನವಾಡಿ ಶಿಕ್ಷಕಿ ಜಮೀನ, ಜ್ಯೋತಿ, ಸುಮಾ, ಆಶಾ ಕಾರ್ಯಕರ್ತೆ ಮಂಜುಳಾ, ಮುಖಂಡರುಗಳಾದ
ರಾಮೇಗೌಡ, ರಾಮೇಗೌಡ, ಕೇಬಲ್ ರವಿ, ಮಂಜುನಾಥ್ ಸೇರಿದಂತೆ ಇತರರು ಇದ್ದರು.
Mysore
ಬಾಬಾ ಅಂಬೇಡ್ಕರ್ ‘ಬಹುಜನ’ ನಾಯಕರು
ತಿ.ನರಸೀಪುರ:-ದೇಶಕ್ಕೆ ಸಂವಿಧಾನ ಕೊಡುಗೆ ನೀಡಿ ಸರ್ವ ಜನಾಂಗದ ಸಮಾನತೆಗೆ ಮಹತ್ತರವಾದ ಕೊಡುಗೆ ನೀಡಿದ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಲ್ಲ, ಅವರು ಈ ದೇಶದ ಬಹುಜನರ ಪ್ರಶ್ನಾತೀತ ನಾಯಕರು ಎಂದು ತಹಸೀಲ್ದಾರ್ ಟಿ.ಜಿ.ಸುರೇಶ್ ಆಚಾರ್ ತಿಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಪರಿ ನಿರ್ವಾಣ ದಿನದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದ ಅವರು ವ್ಯಕ್ತಿಯೊಬ್ಬರನ್ನು ಅವನ ಬಣ್ಣ,ಜಾತಿ ಮತ್ತು ಧರ್ಮದಿಂದ ಗುರುತಿಸದೆ ಅವರ ವ್ಯಕ್ತಿತ್ವ ಮತ್ತು ಸಾಧನೆಯ ಮೂಲಕ ಗುರುತಿಸುವ ಮುಖೇನ ಗೌರವ ಸಲ್ಲಿಸಬೇಕು. ಅಂಬೇಡ್ಕರ್ ಅವರನ್ನು ಒಂದು ಜಾತಿ ಸೀಮಿತಗೊಳಿಸಿ ಅವರ ಮಹಾನ್ ವ್ಯಕ್ತಿತ್ವವನ್ನು ಸಂಕುಚಿತಗೊಳಿಸುವುದು ತರವಲ್ಲ. ಇದು ಅವರ ವ್ಯಕ್ತಿತ್ವಕ್ಕೆ ಸಲ್ಲಿಸುವ ಅಗೌರವ. ಅವರು ಒಂದೇ ಜಾತಿ, ಧರ್ಮಕ್ಕೆ ಸೀಮಿತರಲ್ಲ, ಅವರು ಈ ದೇಶದ ಬಹುಜನರ ನಾಯಕ ಎಂದರು.

ಅಂಬೇಡ್ಕರ್ ಅವರ ಜೀವನದ ಕಥೆಯನ್ನು ಗಮನಿಸಿದಾಗ, ಅವರು ತಮ್ಮ ವೈಯುಕ್ತಿಕ ಜೀವನದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸದೆ ದೇಶದಲ್ಲಿದ್ದ ಜಾತಿ ಅಸಮಾನತೆ,ದುರ್ಬಲರ ಆರ್ಥಿಕ ಕ್ಷೋಭೆಯನ್ನು ಗಮನದಲ್ಲಿಟ್ಟುಕೊಂಡು ಜನರ ಒಳಿತಿಗಾಗಿ ಅವರು ನಡೆಸಿದ ಹೋರಾಟದ ಮಾರ್ಗ ಅತ್ಯಂತ ಅವಿಸ್ಮರಣೀಯವಾದುದು ಎಂದರು.
ನಾಗರಿಕ ವೇದಿಕೆ ಮುಖಂಡ ಕರೋಹಟ್ಟಿ ಪ್ರಭುಸ್ವಾಮಿ ಮಾತನಾಡಿ, ಭಾರತದಲ್ಲಿ ಹಲವು ಜಾತಿ, ಧರ್ಮದ ಜನರು ವಾಸವಿದ್ದು, 140ಕೋಟಿ ಜನಸಂಖ್ಯೆ ಇರುವ ದೇಶಕ್ಕೆ ಸಂವಿಧಾನ ಎಂಬ ದಿಕ್ಸೂಚಿ ಭದ್ರ ಬುನಾದಿ ನೀಡಿದೆ. ಅಲ್ಲದೆ ದೇಶವನ್ನು ಉತ್ತಮ ಮಾರ್ಗದೆಡೆಗೆ ಸಾಗಿಸುತ್ತಿದೆ. ಅಂಬೇಡ್ಕರ್ ಅವರ ಬಗ್ಗೆ ಮಾತನಾಡಬೇಕೆಂದರೆ ಅವರ ಬಗ್ಗೆ ಆಳವಾದ ಅಧ್ಯಯನ ಅನಿವಾರ್ಯ. ಅಲ್ಪಮತಿಗಳಿಗೆ ಅಂಬೇಡ್ಕರ್ ಸಿದ್ದಿಸುವುದಿಲ್ಲ ಎಂದರು
ಇದೇ ವೇಳೆ ತಾಲೂಕು ಅಂಬೇಡ್ಕರ್ ಸಂಘದ ಕರೋಹಟ್ಟಿ ಮಹದೇವಯ್ಯ ಮತ್ತು ತಾಲೂಕು ಬಾಬು ಜಗಜೀವನ್ ರಾಂ ಸಂಘದ ಮಾಜಿ ಅಧ್ಯಕ್ಷ ಮೂಗೂರು ಸಿದ್ದರಾಜು ಅವರು ಅಂಬೇಡ್ಕರ್ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಜಿಪಂ ಸದಸ್ಯ ಹೊನ್ನನಾಯಕ, ಮಾಜಿ ತಾ ಪಂ ಉಪಾಧ್ಯಕ್ಷ ಬಿ.ಮರಯ್ಯ, ಸದಸ್ಯರಾದ ಗಣೇಶ್, ರಾಮಲಿಂಗಯ್ಯ, ಪ್ರಸನ್ನ, ಕಾಂಗ್ರೆಸ್ ಮುಖಂಡೆ ಪಾರ್ವತಿ, ದಸಂಸ ಸೋಸಲೆ ರಾಜಶೇಖರ್,
ವಿಜಯಪುರ ಶಿವಶಂಕರ್,ವಾಟಾಳು ಪುಟ್ಟಸ್ವಾಮಿ,ಸೋಸಲೆ ನಂಜುಂಡಯ್ಯ,ದಸಂಸ ಆಲಗೂಡು ಶಿವಣ್ಣ,ಕಾರ್ಮಿಕ ಮುಖಂಡ ಪುಟ್ಟಮಲ್ಲಯ್ಯ,ಎಚ್.ನಾಗರಾಜು, ತಾಲೂಕು ಭಾರತ್ ಕಿಸಾನ್ ಸಂಘದ ಅಧ್ಯಕ್ಷ ನಾಗಲಗೆರೆ,ಶಿವಕುಮಾರ್,ತಾಪಂ ಯೋಜನಾಧಿಕಾರಿ ಕೆ.ರಂಗಸ್ವಾಮಿ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಶಾಂತ,ಕೃಷಿ ಸಹಾಯಕ ನಿರ್ದೇಶಕಿ ರೂಪ,ತಾಲೂಕು ವೈದ್ಯಾಧಿಕಾರಿ ಡಾ.ರವಿಕುಮಾರ್ , ಸಿಡಿಪಿಒ ಗೋವಿಂದರಾಜು,ಪುಟ್ಟಸ್ವಾಮಿ, ಅಬಕಾರಿ ನಿರೀಕ್ಷಕಿ ಸುಧಾರಾಣಿ, ಪಿಡಬ್ಲ್ಯೂಡಿ ಎಇಇ ಸತೀಶ್ ಚಂದ್ರನ್,ಸೆಸ್ಕ್ ಎಇಇ ವೀರೇಶ್, ಸರ್ವೇ ಸಹಾಯಕ ನಿರ್ದೇಶಕ ಪಂಚಲಿಂಗಪ್ಪ,ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ.ಮಲ್ಲಿಕಾರ್ಜುನಸ್ವಾಮಿ,ಸಮಾಜ ಕಲ್ಯಾಣಾಧಿಕಾರಿ ಕೆ.ಡಿ.ವಿನೂತನ್, ನರಸೀಪುರ ಪುರಸಭೆ ಕೆ.ಸಿ.ತ್ರಿವೇಣಿ,
ಸಮಾಜ ಕಲ್ಯಾಣ ಇಲಾಖೆ ಮಹೇಶ್, ರಾಕೇಶ್ ಇತರರು ಹಾಜರಿದ್ದರು.
Mysore
ಬ್ಯಾಳಾರು ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನಾಚರಣೆ
ವರದಿ: ಮಹದೇವಸ್ವಾಮಿ ಪಟೇಲ್
ನಂಜನಗೂಡು: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಲಾಗುತ್ತದೆ ಇದನ್ನು ತಡೆಗಟ್ಟಲು ಸಂಘಟನೆ ಬಹು ಮುಖ್ಯ ಪಾತ್ರವಹಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಬ್ಯಾಳಾರು ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಇವರ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ದಲಿತರ ಬೀದಿಗಳಲ್ಲಿ ಹಬ್ಬ ಹರಿ ದಿನಗಳು, ಜಾತ್ರೆಗಳು ಹೆಚ್ಚಾಗಿ ನಡೆಯುತ್ತಿವೆ. ಇದರಿಂದ ಕೋಮುವಾದ ಮನೆ ಮನಗಳಿಗೆ ಹೋಗುತ್ತಿದೆ. ಬಾಬಾ ಸಾಹೇಬರು ಹೇಳಿರುವ ಹಾಗೆ ನಮ್ಮ ಮಕ್ಕಳಿಗೆ ಶಿಕ್ಷಣ ನೀಡಿ, ವೈಚಾರಿಕ ಮನೋಭಾವನೆಯನ್ನು ಬೆಳೆಸಬೇಕು. ಆದರೆ ಮೂಢನಂಬಿಕೆ ಕಡೆ ನಾವು ಸಾಗುತ್ತಿದ್ದೇವೆ ಎಂದರು.

ಅಂಬೇಡ್ಕರ್ ಅವರಿಗೆ ನಾವು ದ್ರೋಹ ಮಾಡುತ್ತಿದ್ದೇವೆ. ನಾವು ಇಂದು ಬದುಕುತ್ತಿರುವ ಹೈಟೆಕ್ ಜೀವನ ಅಂಬೇಡ್ಕರ್ ಅವರ ಶ್ರಮ ಮತ್ತು ಅವರ ಮಕ್ಕಳ ಸಮಾಧಿಗಳ ಮೇಲೆ ನಾವು ಸುಂದರವಾದ ಬದುಕನ್ನು ಕಟ್ಟಿಕೊಂಡಿದ್ದೇವೆ ಹೊರತು ನಮ್ಮ ಶ್ರಮದಿಂದಲ್ಲ. ಅಂಬೇಡ್ಕರ್ ರವರ ಋಣದಲ್ಲಿ ಪ್ರತಿಯೊಂದು ಸಮಾಜವು ಬದುಕುತ್ತಿದೆ. ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆಯುತ್ತಿದ್ದರು ಶೋಷಿತರಿಗೆ ಉದ್ಯೋಗ, ಶಿಕ್ಷಣ ಗುಣಮಟ್ಟ ಸುಧಾರಣೆ ಕಂಡಿಲ್ಲ. ಈ ದೇಶದ ಸಂವಿಧಾನವನ್ನು ನಾಶ ಮಾಡುವ ಹುನ್ನಾರ ನಡೆಯುತ್ತಿದೆ. ಮೂರ್ತಿಗಳಿಂದ ಅಂಬೇಡ್ಕರ್ ಅವರು ಜೀವಂತವಾಗಿದ್ದಾರೆ. ನಮಗೆ ಅವರು ಸ್ಪೂರ್ತಿಯಾಗಬೇಕು ಎಂದು ತಿಳಿಸಿದರು.
ನಂತರ ದಸಂಸ ತಾಲ್ಲೂಕು ಸಂಚಾಲಕ ಗಟ್ಟವಾಡಿ ಮಹೇಶ್ ಮಾತನಾಡಿ, ಅಂಬೇಡ್ಕರ್ ಅವರ ಹೆಸರು ಹೇಳುವುದೇ ರೋಮಾಂಚನ ಉಂಟು ಮಾಡುತ್ತದೆ. ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ. ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕಿದೆ.ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು. ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು.

ಇನ್ನೂ ದಸಂಸ ಅಂಬೇಡ್ಕರ್ ವಾದ ಸಂಘಟನೆಗೆ ನೊಂದಣಿ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ್, ತಾಲ್ಲೂಕು ಸಂಚಾಲಕ ಗಟ್ಟವಾಡಿ ಮಹೇಶ್, ಉಪವಿಭಾಗೀಯ ಸಂಚಾಲಕ ಸಿದ್ದರಾಜು, ಕ್ರಾಂತಿಕಾರಿ ಹೋರಾಟಗಾರ ಮೂಡಹಳ್ಳಿ ಪ್ರಸಾದ್, ಮಲ್ಲಹಳ್ಳಿ ಆದರ್ಶ್, ಬಸವಟ್ಟಿಗೆ ಕೃಷ್ಣಮೂರ್ತಿ, ಹೂವಯ್ಯ, ಸುರೇಶ್, ಬ್ಯಾಳಾರು ಆನಂದ್, ಅನಿಲ್, ನಾರಾಯಣ ಸ್ವಾಮಿ, ಬಸವರಾಜು, ಶಾಂತಮ್ಮ, ಕಾವೇರಿ ಸೇರಿದಂತೆ ಹಲವರು ಭಾಗವಹಿಸಿದ್ದರು.
Mysore
ಅದ್ದೂರಿಯಾಗಿ ಜರುಗಿದ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವ
ನಂಜನಗೂಡು: ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಡಿ. 4 ರಂದು ಗುರುವಾರ ನಡೆದ ಚಿಕ್ಕ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಶನಿವಾರ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವವು ಸಂಜೆ ಕಪಿಲಾ ನದಿಯಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ದಾ ಭಕ್ತಿಯಿಂದ ನಡೆಯಿತು.

ಬಣ್ಣ ಬಣ್ಣದ ಹೂವು ಹಾಗೂ ಚಿನ್ನ ವಜ್ರಾಭರಣಗಳಿಂದ ಅಲಂಕೃತಗೊಂಡ ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಕಪಿಲಾ ನದಿ ತೀರದ ಸ್ನಾನ ಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ಮಂಗಳವಾದ್ಯಗಳೊಂದಿಗೆ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿ ನಿರ್ಮಿಸಲಾದ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ತೆಪ್ಪೋತ್ಸವ ನಡೆಸಲಾಯಿತು.

ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಚಲಿಸುವ ಮೂಲಕ ಭಕ್ತರಿಗೆ ದರ್ಶನ ನೀಡಿ ಭಕ್ತರ ಮನಸೂರೆಗೊಂಡಿತು. ತೆಪ್ಪೋತ್ಸವದ ಎಲ್ಲಾ ಧಾರ್ಮಿಕ ಕಾರ್ಯಗಳು ದೇವಾಲಯದ ಪ್ರಧಾನ ಆಗಮಿಕರಾದ ಶ್ರೀ ನಾಗಚಂದ್ರ ದೀಕ್ಷಿತ್ ಅವರ ಆಚಾರ್ಯತ್ವದಲ್ಲಿ ನಡೆಯಿತು.
ನಂಜನಗೂಡು ನಗರವು ಸೇರಿದಂತೆ ವಿವಿಧ ಕಡೆಯಿಂದ ಬಂದ ಸಾವಿರಾರು ಭಕ್ತರು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅವರ ತೆಪ್ಪೋತ್ಸವವನ್ನು ಕಣ್ತುಂಬಿಕೊಂಡು ತಮ್ಮ ಭಕ್ತಿ ನಮನ ಸಲ್ಲಿಸಿದರು.

ನಂತರ ತಪೋತ್ಸವದಿಂದ ಹೊರ ತಂದ ಶ್ರೀ ಅವರ ಉತ್ಸವ ಮೂರ್ತಿಯನ್ನು ಸಣ್ಣ ರಥದಲ್ಲಿ ಕೂರಿಸಿ ಪಟ್ಟಣದ ರಥ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವಹಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸೇರಿದಂತೆ ದೇವಾಲಯದ ಅರ್ಚಕ ವೃಂದದವರು ಉಪಸ್ಥಿತರಿದ್ದರು.
-
Hassan21 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Mandya20 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Hassan22 hours agoಹಾಸನದಲ್ಲಿ ಸರ್ಕಾರಿ ಸೇವೆಗಳ ಸಮರ್ಪಕ ಸಮರ್ಪಣಾ ಸಮಾವೇಶ ಹಿನ್ನೆಲೆ
-
Mysore19 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
-
Hassan23 hours agoಹಾಸನಕ್ಕೆ ಆಗಮಿಸಿದ ಸಿಎಂ ಮತ್ತು ಡಿಸಿಎಂ
-
Mysore18 hours agoಪಠ್ಯದಿಂದ ಡಾ.ಅಂಬೇಡ್ಕರ್ ಹೊರಗಿಡುವ ಹುನ್ನಾರ: ಪ್ರೊ.ಪ್ರಸನ್ನಕುಮಾರ್ ಕೆರಗೋಡು ಶಂಕೆ
-
Chamarajanagar18 hours agoಕಠಿಣ ಶ್ರಮದಿಂದ ಗೆಲುವು ಖಚಿತ: ಡಾ. ಶಾಂತರಾಜು
-
Kodagu18 hours agoಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್ಸಿ
