State
ತಾಕತ್ತಿದ್ದರೆ ಎಲ್ಲ ರಾಮ ಕರಸೇವಕರನ್ನು ಬಂಧಿಸಿ ನೋಡಿ: ರಾಜ್ಯ ಸರಕಾರಕ್ಕೆ ಸುನೀಲ್ ಕುಮಾರ್ ಸವಾಲು
ಬೆಂಗಳೂರು: ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ರಾಜ್ಯದ ಎಲ್ಲ ರಾಮ ಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇವಲ ಹುಬ್ಬಳ್ಳಿಯ ಕಾರ್ಯಕರ್ತರನ್ನು ಬಂಧಿಸುವುದಲ್ಲ. 92ರ ಕರಸೇವೆಯಲ್ಲಿ ನಾನೂ ಭಾಗವಹಿಸಿದ್ದೆ. ಕರಸೇವಕರನ್ನು ಬಂಧನ ಮಾಡುವ ಮೂಲಕ ಹಿಂದುತ್ವ ವಿಚಾರವನ್ನು ಹತ್ತಿಕ್ಕಬಹುದೆಂಬ ಯೋಚನೆಯನ್ನು ಬಿಟ್ಟು ಬಿಡಿ. ರಾಜ್ಯದ ಎಲ್ಲ ಕರಸೇವಕರ ಪಟ್ಟಿಯನ್ನು ಕೊಡುವೆ. ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ಎಲ್ಲ ರಾಮಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಆಗ್ರಹಿಸಿದರು.

ಇನ್ನೂ ಕಾಲ ಮಿಂಚಿಲ್ಲ; ಆಹ್ವಾನ ಕೊಟ್ಟಿಲ್ಲ; ನೋಡೋಣ ಬರೋಣ ಎಂಬ ಮಾತನ್ನು ಬಿಟ್ಟು ಬಿಡಿ. ಯಾವುದೋ ಸ್ನೇಹಿತರ, ಕುಟುಂಬಸ್ಥರ ಮದುವೆಗೆ ಆಹ್ವಾನ ಕೊಟ್ಟಿಲ್ಲ ಎಂದಾಗ ಪಿಳ್ಳೆನೆವವನ್ನು ಕೆಲವರು ಮುಂದಿಡುತ್ತಾರೆ. ರಾಷ್ಟ್ರಮಟ್ಟದ ಈ ಕಾರ್ಯಕ್ರಮಕ್ಕೆ ಯಾವ ಆಹ್ವಾನವೂ ಬೇಡ. ನಿಮಗೆ ಬದ್ಧತೆ, ಹಿಂದುತ್ವದ ಬಗ್ಗೆ ನೈಜ ಕಳಕಳಿ ಇದ್ದರೆ ಚುನಾವಣೆಯ ಹಿಂದೂ ಆಗದೆ, ನೈಜ ಹಿಂದೂ ಎಂದು ಪ್ರಕಟ ಮಾಡಬೇಕಿದ್ದರೆ 22ರಂದು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇóಷವಾದ ಪೂಜೆ ಮಾಡಿಸಲು ಸೂಚಿಸಿ. 100 ದೇವಾಲಯಗಳಿಗೆ ತಲಾ 100 ಕೋಟಿ ಅನುದಾನವನ್ನು ಮುಂದಿನ 3 ವರ್ಷಗಳಲ್ಲಿ ಕೊಡುವ ಪ್ರಯತ್ನವನ್ನು ಈ ಸರಕಾರ ಮಾಡಲಿ ಎಂದು ಒತ್ತಾಯಿಸಿದರು.

ದತ್ತಪೀಠ ಸೇರಿ ರಾಜ್ಯದ 100 ದೇವಾಲಯಗಳನ್ನು ಈ ಸರಕಾರ ಆಯ್ಕೆ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದರು. ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ನಿರ್ಮಾಣ, ಸಾವಿರಾರು ಕೋಟಿ ರೂಪಾಯಿಯ ಅಭಿವೃದ್ಧಿ ಕಾರ್ಯ ನಡೆದಿದೆ. ಕಾಶಿ ವಿಶ್ವನಾಥನ ಕ್ಷೇತ್ರದಲ್ಲಿ ಕಾರಿಡಾರ್ ನಿರ್ಮಾಣ ನಡೆದು ಲಕ್ಷಾಂತರ ಜನರು ಅಲ್ಲಿಗೆ ಹೋಗುತ್ತಿದ್ದಾರೆ. ಮಧ್ಯಪ್ರದೇಶದ ಉಜ್ಜೈನಿಯಲ್ಲಿ ದೊಡ್ಡ ಪ್ರಮಾಣದ ಮಂದಿರ ನಿರ್ಮಾಣವಾಗಿ ಅಲ್ಲಿ ಲಕ್ಷಾಂತರ ಜನ ಭಕ್ತರು ಹೋಗುತ್ತಿದ್ದಾರೆ. ಟೆಂಪಲ್ ಟೂರಿಸಂ ಮತ್ತು ಆಧ್ಯಾತ್ಮಿಕ ಭಾವನೆಗಳು ಈ ದೇಶದ ಅಡಿಗಲ್ಲು. ಆ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳನ್ನೂ ಅಭಿವೃದ್ಧಿ ಮಾಡಿ ಎಂದು ಒತ್ತಾಯಿಸಿದರು.

ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ದೇಶದಲ್ಲಿ ಮಂಗಳಕರ ವಾತಾವರಣವಿದೆ. ಆದರೆ, ಅಪಶಕುನ ಸೃಷ್ಟಿಗೆ ಸಿದ್ದರಾಮಯ್ಯನವರು ಮುಂದಾಗಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. 32 ವರ್ಷಗಳ ಹಿಂದೆ ಕರಸೇವೆಯಲ್ಲಿ ಭಾಗವಹಿಸಿದ್ದ ಹುಬ್ಬಳ್ಳಿಯ ಕಾರ್ಯಕರ್ತರನ್ನು ಬಂಧನ ಮಾಡಿ ರಾವಣ ಮಾತ್ರ ರಾಮವಿರೋಧಿಯಲ್ಲ; ತಾನು ಕೂಡ ರಾಮವಿರೋಧಿ ಎಂಬುದನ್ನು ಕಾಂಗ್ರೆಸ್ ಸರಕಾರ ಸಿದ್ಧಗೊಳಿಸಿದೆ ಎಂದು ಟೀಕಿಸಿದರು.
ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ದಿನಗಳು ಹತ್ತಿರ ಬರುತ್ತಿದೆ. ರಾಮಮಂದಿರದ ಮೂಲಕ ರಾಷ್ಟ್ರ ಮಂದಿರ ನಿರ್ಮಾಣಕ್ಕಾಗಿ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದು ವಿವರಿಸಿದರು.
Special
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್: 25 ಲಕ್ಷ ರೂ.ವರೆಗೆ ಸುಲಭ ಸಾಲ
ವೈಯಕ್ತಿಕ ಅಗತ್ಯಗಳಿಗೆ ತಕ್ಷಣ ಹಣದ ಅವಶ್ಯಕತೆ ಇರುವವರಿಗೆ ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಉತ್ತಮ ಆಯ್ಕೆಯಾಗಿ ಪರಿಣಮಿಸಿದೆ. ಕಡಿಮೆ ಬಡ್ಡಿ, ಸರಳ ದಾಖಲೆಗಳು ಹಾಗೂ ವೇಗವಾದ ಅನುಮೋದನೆಯೊಂದಿಗೆ ಈ ಸಾಲವನ್ನು ಪ್ರತಿಯೊಬ್ಬರು ಸುಲಭವಾಗಿ ಪಡೆಯಬಹುದು.
ಯೋಜನೆಯ ಪ್ರಮುಖ ವೈಶಿಷ್ಟ್ಯಗಳು
•25 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು.
•ಕಡಿಮೆ ಬಡ್ಡಿದರ
•ಕಡಿಮೆ ದಾಖಲೆಗಳ ಪರಿಶೀಲನೆಯ ನಂತರ ಬೇಗನೆ ಸಾಲ ಬಿಡುಗಡೆಯಾಗುತ್ತದೆ.
•ನಿಮ್ಮ ಮಾಸಿಕ ಆದಾಯದ ಮೇಲೆ ಆಧರಿಸಿ ಪಾವತಿ ಅವಧಿಯನ್ನು ಆರಿಸಿಕೊಳ್ಳಲು ಅವಕಾಶವಿದೆ.
ಯಾರು ಅರ್ಹರು?
•ನಿಯಮಿತ ಆದಾಯವಿರುವ ನಾಗರಿಕರು
•ಉದ್ಯೋಗಸ್ತರು, ಸ್ವಯಂ ಉದ್ಯೋಗಿಗಳು ಹಾಗೂ ವ್ಯವಹಾರಿಗಳು
•ಮಾನ್ಯ ಗುರುತಿನ ದಾಖಲೆ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ ನೀಡಬಲ್ಲವರು

ಅರ್ಜಿ ಪ್ರಕ್ರಿಯೆ:
•ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
•ಅಗತ್ಯ KYC ದಾಖಲೆಗಳನ್ನು ಅಪ್‌ಲೋಡ್ ಮಾಡಿ.
•ಬ್ಯಾಂಕ್ 24–48 ಗಂಟೆಗಳಲ್ಲಿ ಪರಿಶೀಲನೆ ಮಾಡುತ್ತದೆ.ಬೇಕಾದರೆ ಹತ್ತಿರದ ಶಾಖೆಗೆ ದಾಖಲೆ ದೃಢೀಕರಣಕ್ಕೆ ಭೇಟಿ ಮಾಡಬಹುದು.
•ದಾಖಲೆಗಳು ಸರಿಯಾಗಿದ್ದರೆ ಸಾಲ ಮಂಜೂರಾತಿ. ಮಂಜೂರಾದ ನಂತರ ಸಾಲ ಮೊತ್ತ ಖಾತೆಗೆ ಜಮಾ
ಅಗತ್ಯ ದಾಖಲೆಗಳು
•ಆಧಾರ್ / ಪಾನ್ ಕಾರ್ಡ್
•ಆದಾಯ ಪ್ರಮಾಣ
•6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
•ಪಾಸ್‌ಪೋರ್ಟ್ ಗಾತ್ರದ ಫೋಟೋ
•ಪೂರ್ಣಗೊಂಡ ಸಾಲ ಅರ್ಜಿ ನಮೂನೆ

ಅಧಿಕೃತ ವೆಬ್‌ಸೈಟ್: Karnataka Bank https://share.google/Sdx236NRFLScWpmGm
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಕಡಿಮೆ ಷರತ್ತುಗಳು, ಬೇಗ ಅನುಮೋದನೆ ಮತ್ತು ಸುಲಭ ಪಾವತಿ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ತುಂಬಾ ಅನುಕೂಲಕರ. ದೊಡ್ಡ ಮೊತ್ತದ ಸಾಲವನ್ನು ತೊಂದರೆ ಇಲ್ಲದೆ, ಕಡಿಮೆ ಸಮಯದಲ್ಲಿ ಪಡೆಯಲು ಇದು ವಿಶ್ವಾಸಾರ್ಹ ಆಯ್ಕೆ.
State
ರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಅವರ ತಂದೆ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ಹಾಗಾದರೆ ಲೋಕಸಭೆ ವಿಪಕ್ಷ ನಾಯಕ ರಾಹುಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಇಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಕುರ್ಚಿಗೆ ಪೈಪೋಟಿ ನಡೆಯುತ್ತಿದೆ. ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ. ಅಲ್ಲದೇ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಸಿಎಂ ಸಿದ್ದರಾಮಯ್ಯನವರಿಗೆ ಅಧಿವೇಶನ ಪ್ರಾರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸಿಎಂ ವಿಚಾರದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಹೇಳಿದ್ದಾರೆ.
ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ಬಳಿಕವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು. ಆದರೆ ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರ 2,400 ರೂ. ಬೆಂಬಲ ಬೆಲೆ ನಿಗದಿಪಡಿಸಿದರೂ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ. ರೈತರು ಮೆಕ್ಕೆಜೋಳವನ್ನು 1,700- 1,600 ರೂ.ಗೆ ದಲ್ಲಾಳಿಗಳಿಗೆ, ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಬೆಳೆ ಪರಿಹಾರವನ್ನು ಘೋಷಿಸಿ 3 ತಿಂಗಳಾದರೂ ಸಮರ್ಪಕವಾಗಿ ಕೊಟ್ಟಿಲ್ಲ. ಭೀಕರ ಮಳೆಯಿಂದ ರಾಜ್ಯದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ, ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
State
ನಾಳೆ ದೆಹಲಿಯಲ್ಲಿ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ರಾಜ್ಯದ ಸಿಎಂ ಡಿಸಿಎಂ ಭಾಗಿ
ಬೆಂಗಳೂರು: ನಾಳೆ ದೆಹಲಿಯಲ್ಲಿ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿನ್ನರ್, ಬ್ರೇಕ್ಫಾಸ್ಟ್ ನಂತರ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯತ್ತ ಮುಖಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಈಗಾಗಲೇ ದೆಹಲಿಗೆ ಹಾರಿದ್ದು, ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಅಲ್ಲದೇ ನಾಳೆ ವೋಟ್ ಚೋರಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ನೆಪದಲ್ಲಿ ಇಬ್ಬರು ನಾಯಕರನ್ನು ದೆಹಲಿ ಕರೆಸಿಕೊಂಡರಾ ಎಂಬ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ದೇಶದ ಅನೇಕ ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ವೋಟ್ ಚೋರಿ ನಡೆದಿದೆ ಅಂತಾ ಕಾಂಗ್ರೆಸ್ ಸಮರ ಸಾರಿದೆ. ಇದೀಗ ಎರಡನೇ ಹಂತದ ವೋಟ್ ಚೋರಿ ಅಭಿಯಾನಕ್ಕೆ ಸಿದ್ಧತೆ ಮಾಡಿಕೊಂಡಿದೆ. ನಾಳೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಅಭಿಯಾನ ನಡೆಯಲಿದೆ. ಹೀಗಾಗಿ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ಮಂಡ್ಯ ನಾಯಕರ ಟೀಂ ದಿಲ್ಲಿ ಯಾತ್ರೆ ಕೈಗೊಂಡಿದೆ. ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ತಂಡ ದೆಹಲಿಗೆ ತೆರಳುವ ಯೋಜನೆ ಇತ್ತು. ಆದರೆ ಅನಾರೋಗ್ಯದ ಕಾರಣ ಚಲುವರಾಯಸ್ವಾಮಿ ದೆಹಲಿಗೆ ಹೋಗುತ್ತಿಲ್ಲ. ಉಳಿದಂತೆ ಶಾಸಕರುಗಳಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ದೆಹಲಿಗೆ ತೆರಳಿದ್ದಾರೆ.

ಮಂಡ್ಯ ಶಾಸಕ ದೆಹಲಿ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ನನ್ನ ಜೊತೆ ಯಾರೂ ದೆಹಲಿಗೆ ಬರುತ್ತಿಲ್ಲ. ಅವರವರ ಕ್ಷೇತ್ರದವರ ಜೊತೆ ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು ವೋಟ್ ಚೋರಿ ಬಗ್ಗೆ ಕಿಡಿಕಾರಿದ ಎಂಎಲ್ಸಿ ಸಲೀಂ ಅಹ್ಮದ್, ಇದು ವೋಟ್ ಚೋರಿ ಅಲ್ಲ, ಬಿಜೆಪಿ ಹಾಗೂ ಎಲೆಕ್ಷನ್ ಕಮಿಷನ್ನಿಂದ ಡಕಾಯಿತಿ ಅಂದಿದ್ದಾರೆ.
-
Hassan2 hours agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Special3 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Hassan21 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
State21 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
-
Hassan19 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Kodagu21 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
State17 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
Mandya20 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
