State
ರಾಯಚೂರು ವಿಶ್ವವಿದ್ಯಾನಿಲಯಕ್ಕೆ ವಾಲ್ಮೀಕಿ ವಿವಿ ಎಂದು ನಾಮಕರಣ
ಬೆಂಗಳೂರು: ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮದಡಿ, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಅಧಿನಿಯಮ, 2024ಕ್ಕೆ ರಾಜ್ಯಪಾಲರ ಅನುಮೋದನೆ ದೊರಕಿದ್ದು, ರಾಯಚೂರು ವಿಶ್ವವಿದ್ಯಾನಿಲಯವನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
National
‘ವೋಟ್ ಚೋರಿ’ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಸಿಎಂ, ಡಿಸಿಎಂ ಡಿಕೆಶಿ ಭಾಗಿ
ನವದೆಹಲಿ: ಭಾರತದ್ಯಂತ ಬಿಜೆಪಿಯಿಂದ ಮತಗಳವು ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ‘ವೋಟ್ ಚೋರಿ’ ವಿರುದ್ಧದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆದಿದ್ದು, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ಸಚಿವರು ಹಾಗೂ ಶಾಸಕರು ಭಾಗವಹಿಸಿದ್ದಾರೆ.
ಪ್ರತಿಭಟನೆ ನೆಪವಾಗಿಟ್ಟುಕೊಂಡು ದೆಹಲಿಯಲ್ಲಿ ಹೈಕಮಾಂಡ್ ಭೇಟಿಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ ಎನ್ನಲಾಗಿದೆ. ವೋಟ್ ಚೋರಿ ಪ್ರತಿಭಟನೆ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ‘ಕೈ’ ನಾಯಕರ ದಂಡು ಭೇಟಿ ಕೊಟ್ಟಿದೆ. ದೆಹಲಿಯಲ್ಲಿ ವರಿಷ್ಠರ ಭೇಟಿಗೆ ಸಿಎಂ ಮತ್ತು ಡಿಸಿಎಂ ಎರಡು ಬಣಗಳ ಶಾಸಕರು, ಸಚಿವರಿಂದ ಪ್ರಯತ್ನ ನಡೆದಿದೆ.

ಇಂದು ಮತ್ತು ನಾಳೆ ದೆಹಲಿಯಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಉಳಿಯಲಿದ್ದಾರೆ. ನ್ಯಾಷನಲ್ ಹೆರಾಲ್ಡ್ಗೆ ಸಂಬಂಧಿಸಿದಂತೆ ಸಮನ್ಸ್ ಹಿನ್ನೆಲೆ ಡಿಸಿಎಂ ಉಳಿದುಕೊಳ್ಳಲಿದ್ದಾರೆ. ಸೋಮವಾರ ದೆಹಲಿ ಪೊಲೀಸರ ಮುಂದೆ ಡಿಕೆ ಬ್ರದರ್ಸ್ ಹಾಜರಾಗಲಿದ್ದಾರೆ. ಈ ಎರಡು ದಿನಗಳ ಅವಧಿಯಲ್ಲಿ ಸೋನಿಯಗಾಂಧಿ ಭೇಟಿಗೂ ಪ್ರಯತ್ನ ಸಾಧ್ಯತೆ ಇದೆ. ವೋಟ್ ಚೋರಿ ಪ್ರತಿಭಟನೆ ಬಳಿಕ ದೆಹಲಿಯಿಂದ ಸಿಎಂ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆ. ಈ ಮಧ್ಯೆ ದೆಹಲಿಯಲ್ಲೇ ಕೂತು ಡಿ.ಕೆ.ಬ್ರದರ್ಸ್ ರಣತಂತ್ರ ರೂಪಿಸಿದ್ದಾರೆ.
ದೆಹಲಿಯಲ್ಲಿ ಡಿ.ಕೆ.ಶಿಕುಮಾರ್ ಮಾತನಾಡಿ, ಪ್ರಜಾಪ್ರಭುತ್ವ ಅಡಿಯಲ್ಲಿ ಮತ ಚಲಾಯಿಸಿಸುವುದು ಪ್ರತಿಯೊಬ್ಬನ ಕರ್ತವ್ಯ. 1 ಕೋಟಿ 33 ಲಕ್ಷ ಸಹಿ ಸಂಗ್ರಹ ಆಗಿದೆ ಎಂದು ತಿಳಿಸಿದ್ದಾರೆ.
ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ಬಿಜೆಪಿಯವರು ಕಳ್ಳರು. ಕಳ್ಳ ಮತಗಳಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚುಕ್ಕಾಣಿಯನ್ನ ಹಿಡಿದಿದ್ದಾರೆ. ಬಿಜೆಪಿ ಬಹಳಷ್ಟು ರಾಜ್ಯಗಳಲ್ಲಿ ವೋಟ್ ಚೋರಿಯಿಂದಲೇ ಅಧಿಕಾರಕ್ಕೆ ಬಂದಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಈ ಮೂಲಕ ಪ್ರಧಾನಿ ಮೋದಿ, ಎಲೆಕ್ಷನ್ ಕಮಿಷನ್, ಅಮಿತ್ ಶಾಗೆ ಪ್ರಶ್ನೆ ಮಾಡುತ್ತೇವೆ. ಚುನಾವಣಾ ಆಯೋಗ, ಇಡಿ, ಐಟಿ ಇವರ ನಿರ್ದೇಶನದಲ್ಲೇ ಕಾರ್ಯನಿರ್ವಹಿಸುತ್ತವೆ. ಬೆಂಗಳೂರು ಸೆಂಟ್ರಲ್, ಆಳಂದದಲ್ಲಿ ವೋಟ್ ಚೋರಿ ಆಗಿದೆ ಅಂತ ದಾಖಲೆ ಕೊಟ್ಟಿದ್ದೇವೆ. ಮುಂದಿನ ಚುನಾವಣೆಗಳಲ್ಲಿ ಮತಗಳ್ಳತನ ಮುಂದುವರೆಯಬಾರದು ಎಂಬುದು ಇದರ ಉದ್ದೇಶ ಎಂದು ತಿಳಿಸಿದ್ದಾರೆ.

ಸಚಿವ ಬೋಸರಾಜು ಪ್ರತಿಕ್ರಿಯಿಸಿ, ವೋಟ್ ಚೋರಿಗಾಗಿ ಪ್ರತಿಭಟಗೆ ದೆಹಲಿಗೆ ಆಗಮಿಸಿದ್ದೇವೆ. ಮಧ್ಯಾಹ್ನ ಎಐಸಿಸಿಗೆ ಹೋಗಿ ಅಲ್ಲಿಂದ ರಾಮಲೀಲಾ ಮೈದಾನಕ್ಕೆ ಹೋಗ್ತಿವಿ. ಹೈಕಮಾಂಡ್ ನಾಯಕರ ಜೊತೆಗೆ ಯಾವುದೇ ಚರ್ಚೆ ಇಲ್ಲ. ಐವತ್ತು ವರ್ಷದಿಂದ ಪಕ್ಷದಲ್ಲಿದ್ದೇನೆ ಎಂದಿದ್ದಾರೆ.
ಶಾಸಕ ಬಿಆರ್ ಪಾಟೀಲ್ ಮಾತನಾಡಿ, ಕರ್ನಾಟಕದಲ್ಲಿ ವೋಟ್ ಚೋರಿ ಆಗಿದೆ. ಕರ್ನಾಟಕಲ್ಲಿ ಇನ್ನೆರೆಡು ಮೂರು ಪ್ರಕರಣದಲ್ಲಿ ಹೀಗಾಗಿದೆ. ನನ್ನ ಹತ್ತಿರ ಮಾಹಿತಿ ಇದೆ. ನಮ್ಮ ವರಿಷ್ಠರು ಈ ಬಗ್ಗೆ ಕೇಳಿದಾಗ ಹೇಳುತ್ತೇನೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಮತಗಳ್ಳತನ ಆಗಿದೆ. ಬಿಜೆಪಿಯವರು ಕುತಂತ್ರದಿಂದ ಹೈಜಾಕ್ ಮಾಡಿ ಅಧಿಕಾರ ಪಡೆದಿದ್ದಾರೆ. ಜನಾದೇಶ ಅವರಿಗೆ ಕೊಡ್ತಿಲ್ಲ. ಹೀಗಾಗಿ ಬಿಜೆಪಿ ವೋಟ್ ಚೋರಿ ಮಾಡ್ತಿದೆ. ನಮ್ಮ ಪಕ್ಷದಿಂದ ಇಂದು ಬೃಹತ್ ಹೋರಾಟ ನಡೆಯುತ್ತಿದೆ. ಪ್ರಧಾನಿ ಮೋದಿ, ಅಮಿತ್ ಶಾ ಅಧಿಕಾರದಲ್ಲಿ ಮುಂದುವರೆಯಲು ಏನು ಬೇಕಾದ್ರೂ ಮಾಡಲು ತಯಾರಿದ್ದಾರೆ ಎಂದು ತಿಳಿಸಿದ್ದಾರೆ.
ಸಲೀಂ ಅಹಮದ್ ಮಾತನಾಡಿ, ಇದು ವೋಟ್ ಚೋರಿಯಲ್ಲ, ವೋಟ್ ಡಕಾಯಿತಿ. ಇದು ಮತಗಳ ಲೂಟಿ. ಅದು ಎಲೆಕ್ಷನ್ ಕಮಿಷನ್ ಅಲ್ಲ, ಬಿಜೆಪಿಯ ಕಮಿಷನ್. ಬಿಜೆಪಿ, ಎಲೆಕ್ಷನ್ ಕಮಿಷನ್ ಸೇರಿ ಮೂರು ರಾಜ್ಯಗಳಲ್ಲಿ ಗೆಲ್ಲಿಸಿದ್ದಾರೆ. ಬಿಹಾರ ಜನರ ಗೆಲುವಲ್ಲ, ಎಲೆಕ್ಷನ್ ಕಮಿಷನ್ ಗೆಲುವು. ಕೇಂದ್ರ ಸರ್ಕಾರದ ಗೆಲುವು. ಸಿಎಂ ನಿತೀಶ್ ಕುಮಾರ್‌ಗೆ ವಯಸ್ಸಾಗಿದೆ. ಹುಷಾರಿಲ್ಲ ಆದ್ರೂ ಗೆದ್ದಿದ್ದಾರೆ. ಅವರ ಗೆಲುವನ್ನ ನಂಬೋಕೆ ಆಗೋದಿಲ್ಲ. ಎಲೆಕ್ಷನ್ ಕಮಿಷನ್‌ನ ತಮ್ಮ ಕಪಿಮುಷ್ಟಿಯಲ್ಲಿ ಹಿಡಿದುಕೊಂಡು ಬಿಜೆಪಿ ಕೆಲಸ ಮಾಡಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಸಚಿವ ಆರ್‌ಬಿ ತಿಮ್ಮಾಪುರ ಪ್ರತಿಕ್ರಿಯಿಸಿ, ಇಂದಿನ ದಿನಗಳಲ್ಲಿ ಮತಗಳ್ಳತನ ನಡೆಯುತ್ತಿದೆ. ಅಡ್ಡದಾರಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಇದರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಶಾಸಕ ರವಿ ಗಣಿಗ ಮಾತನಾಡಿ, ಇಂದು ರಾಮ್ ಲೀಲಾ ಮೈದಾನದಲ್ಲಿ ಹೋರಾಟ ಮಾಡಲಾಗುತ್ತಿದೆ. ನಾವು ನಮ್ಮ ಕ್ಷೇತ್ರದಿಂದ 200 ಜನ ಕಾರ್ಯಕರ್ತರು ಬಂದಿದ್ದಾರೆ ಭಾಗವಹಿಸುತ್ತೇವೆ ಎಂದು ತಿಳಿಸಿದ್ದಾರೆ.
ಸಚಿವರಾದ ಆರ್.ಬಿ.ತಿಮ್ಮಾಪುರ, ಮಂಕಾಳ ವೈದ್ಯ, ಮಾಜಿ ಸಚಿವ ತನ್ವಿರ್ ಸೇಠ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಆನೇಕಲ್ ಶಿವಣ್ಣ, ಎ.ಸಿ.ಶ್ರೀನಿವಾಸ್, ಪ್ರದೀಪ್ ಈಶ್ವರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಂಎಲ್‌ಸಿಗಳಾದ ಪುಟ್ಟಣ್ಣ, ಮಂಜುನಾಥ್ ಭಂಡಾರಿ, ವಸಂತಕುಮಾರ್, ಬಸನಗೌಡ ಬಾದರ್ಲಿ, ಶ್ರೀನಿವಾಸ್, ಮಾಜಿ ಎಂಎಲ್ಸಿ ಯು.ಬಿ.ವೆಂಕಟೇಶ್ ಮತ್ತಿತರರು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಭವನದಲ್ಲಿ ಭಾನುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಅವರ ಜೊತೆ ಡಿಸಿಎಂ ಅವರು ಉಪಾಹಾರ ಸೇವಿಸಿದರು.
Special
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್: 25 ಲಕ್ಷ ರೂ.ವರೆಗೆ ಸುಲಭ ಸಾಲ
ವೈಯಕ್ತಿಕ ಅಗತ್ಯಗಳಿಗೆ ತಕ್ಷಣ ಹಣದ ಅವಶ್ಯಕತೆ ಇರುವವರಿಗೆ ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಉತ್ತಮ ಆಯ್ಕೆಯಾಗಿ ಪರಿಣಮಿಸಿದೆ. ಕಡಿಮೆ ಬಡ್ಡಿ, ಸರಳ ದಾಖಲೆಗಳು ಹಾಗೂ ವೇಗವಾದ ಅನುಮೋದನೆಯೊಂದಿಗೆ ಈ ಸಾಲವನ್ನು ಪ್ರತಿಯೊಬ್ಬರು ಸುಲಭವಾಗಿ ಪಡೆಯಬಹುದು.
ಯೋಜನೆಯ ಪ್ರಮುಖ ವೈಶಿಷ್ಟ್ಯಗಳು
•25 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು.
•ಕಡಿಮೆ ಬಡ್ಡಿದರ
•ಕಡಿಮೆ ದಾಖಲೆಗಳ ಪರಿಶೀಲನೆಯ ನಂತರ ಬೇಗನೆ ಸಾಲ ಬಿಡುಗಡೆಯಾಗುತ್ತದೆ.
•ನಿಮ್ಮ ಮಾಸಿಕ ಆದಾಯದ ಮೇಲೆ ಆಧರಿಸಿ ಪಾವತಿ ಅವಧಿಯನ್ನು ಆರಿಸಿಕೊಳ್ಳಲು ಅವಕಾಶವಿದೆ.
ಯಾರು ಅರ್ಹರು?
•ನಿಯಮಿತ ಆದಾಯವಿರುವ ನಾಗರಿಕರು
•ಉದ್ಯೋಗಸ್ತರು, ಸ್ವಯಂ ಉದ್ಯೋಗಿಗಳು ಹಾಗೂ ವ್ಯವಹಾರಿಗಳು
•ಮಾನ್ಯ ಗುರುತಿನ ದಾಖಲೆ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ ನೀಡಬಲ್ಲವರು

ಅರ್ಜಿ ಪ್ರಕ್ರಿಯೆ:
•ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
•ಅಗತ್ಯ KYC ದಾಖಲೆಗಳನ್ನು ಅಪ್‌ಲೋಡ್ ಮಾಡಿ.
•ಬ್ಯಾಂಕ್ 24–48 ಗಂಟೆಗಳಲ್ಲಿ ಪರಿಶೀಲನೆ ಮಾಡುತ್ತದೆ.ಬೇಕಾದರೆ ಹತ್ತಿರದ ಶಾಖೆಗೆ ದಾಖಲೆ ದೃಢೀಕರಣಕ್ಕೆ ಭೇಟಿ ಮಾಡಬಹುದು.
•ದಾಖಲೆಗಳು ಸರಿಯಾಗಿದ್ದರೆ ಸಾಲ ಮಂಜೂರಾತಿ. ಮಂಜೂರಾದ ನಂತರ ಸಾಲ ಮೊತ್ತ ಖಾತೆಗೆ ಜಮಾ
ಅಗತ್ಯ ದಾಖಲೆಗಳು
•ಆಧಾರ್ / ಪಾನ್ ಕಾರ್ಡ್
•ಆದಾಯ ಪ್ರಮಾಣ
•6 ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
•ಪಾಸ್‌ಪೋರ್ಟ್ ಗಾತ್ರದ ಫೋಟೋ
•ಪೂರ್ಣಗೊಂಡ ಸಾಲ ಅರ್ಜಿ ನಮೂನೆ

ಅಧಿಕೃತ ವೆಬ್‌ಸೈಟ್: Karnataka Bank https://share.google/Sdx236NRFLScWpmGm
ಕರ್ನಾಟಕ ಬ್ಯಾಂಕ್ ಪರ್ಸನಲ್ ಲೋನ್ ಕಡಿಮೆ ಷರತ್ತುಗಳು, ಬೇಗ ಅನುಮೋದನೆ ಮತ್ತು ಸುಲಭ ಪಾವತಿ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ ತುಂಬಾ ಅನುಕೂಲಕರ. ದೊಡ್ಡ ಮೊತ್ತದ ಸಾಲವನ್ನು ತೊಂದರೆ ಇಲ್ಲದೆ, ಕಡಿಮೆ ಸಮಯದಲ್ಲಿ ಪಡೆಯಲು ಇದು ವಿಶ್ವಾಸಾರ್ಹ ಆಯ್ಕೆ.
State
ರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಅವರ ತಂದೆ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ಹಾಗಾದರೆ ಲೋಕಸಭೆ ವಿಪಕ್ಷ ನಾಯಕ ರಾಹುಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಇಂದು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಿಎಂ ಕುರ್ಚಿಗೆ ಪೈಪೋಟಿ ನಡೆಯುತ್ತಿದೆ. ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ. ಅಲ್ಲದೇ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಸಿಎಂ ಸಿದ್ದರಾಮಯ್ಯನವರಿಗೆ ಅಧಿವೇಶನ ಪ್ರಾರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸಿಎಂ ವಿಚಾರದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಹೇಳಿದ್ದಾರೆ.
ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ಬಳಿಕವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು. ಆದರೆ ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ವ್ಯಂಗ್ಯ ಮಾಡಿದ್ದಾರೆ.

ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರ 2,400 ರೂ. ಬೆಂಬಲ ಬೆಲೆ ನಿಗದಿಪಡಿಸಿದರೂ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ. ರೈತರು ಮೆಕ್ಕೆಜೋಳವನ್ನು 1,700- 1,600 ರೂ.ಗೆ ದಲ್ಲಾಳಿಗಳಿಗೆ, ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಬೆಳೆ ಪರಿಹಾರವನ್ನು ಘೋಷಿಸಿ 3 ತಿಂಗಳಾದರೂ ಸಮರ್ಪಕವಾಗಿ ಕೊಟ್ಟಿಲ್ಲ. ಭೀಕರ ಮಳೆಯಿಂದ ರಾಜ್ಯದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ, ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Hassan3 hours agoಬೈರಾಪುರ-ಚನ್ನಪುರ- ಮಗ್ಗೆ ರಸ್ತೆ ತಾತ್ಕಾಲಿಕ ಬಂದ್: ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸೂಚನೆ
-
Special5 hours agoಕರ್ನಾಟಕ ಕುಕ್ಕುಟ ಸಂಜೀವಿನಿ ಯೋಜನೆ: ಮಹಿಳೆಯರಿಗೆ ಉಚಿತ ಕೋಳಿ ಮರಿ, ಶೆಡ್ ನಿರ್ಮಾಣಕ್ಕೆ ಭರ್ಜರಿ ಸಹಾಯಧನ
-
Hassan23 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
State18 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
Hassan21 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Mandya21 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
Kodagu22 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
State23 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
