State
ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು!
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ಹಿಂಗಾರು ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೀಪಾವಳಿಗೆ ಹಬ್ಬದಂದು ಬಿಡುವು ನೀಡಿದ ವರುಣ ಇಂದಿನಿಂದ ಕರಾವಳಿ ಹಾಗೂ ಒಳನಾಡಿನಲ್ಲಿ ಸಕ್ರಿಯವಾಗಲಿದ್ದಾನೆ. ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಿದೆ. ಇದರ ಪರಿಣಾಮವು ಕರ್ನಾಟಕದ ಹವಾಮಾನದ ಮೇಲಾಗಲಿದೆ ಎಂದು ಅಂದಾಜಿಸಲಾಗಿದೆ.
ಎಲ್ಲೆಲ್ಲಿ ಮಳೆ ಆಗುವ ಸಾಧ್ಯತೆ:
ಕರ್ನಾಟಕ ದಕ್ಷಿಣ ಒಳನಾಡು ಮತ್ತೆ ಭಾರೀ ಮಳೆಗೆ ಸಾಕ್ಷಿ ಆಗಲಿದೆ. ಬುಧವಾರ ನವೆಂಬರ್ 15ರಿಂದ (ಇಂದಿನಿಂದ) ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮಚರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವವಿದೆ. ಒಂದೆರಡು ಕಡೆ ಗುಡುಗು ಮಿಂಚು ಸಹಿತ ಜೋರು ಮಳೆ ಕಂಡು ಬರಲಿದೆ.
ನವೆಂಬರ್ 20 ರವರೆಗೆ ಇಲ್ಲಿ ಮಳೆ ಸಂಭವ ನಂತರ ಎರಡು ದಿನ ಅಂದರೆ ನವೆಂಬರ್ 20 ರವರೆಗೆ ಮೇಲಿನ ಜಿಲ್ಲೆಗಳು ಸೇರಿದಂತೆ ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಬಳ್ಳಾಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದೇ ಅವಧಿಯಲ್ಲಿ ನವೆಂಬರ್ 17 ರಿಂದ ಮೂರು ದಿನ ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ನಿರೀಕ್ಷೆ ಇದೆ.
State
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿ ಆಗಿರುವ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್
ಎಚ್ ಎಸ್ ಆರ್ ಪಿ ಬಡಿಕೆ ಸಮಯ ವಿಸ್ತರಣೆ : ಫೆ 17ರವರೆಗೆ ಅವಕಾಶಕ್ಕೆ ಸಾರಿಗೆ ಇಲಾಖೆ ನಿರ್ಧಾರ.
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಆದೇಶ ಹೊರಡಿಸಿದ್ದ ರಾಜ್ಯ ಸಾರಿಗೆ ಇಲಾಖೆ ನವೆಂಬರ್ 17ಕ್ಕೆ ಅಂತಿಮ ಗಡಗು ನೀಡಿತ್ತು.
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿ ಆಗಿರುವ ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಕೆಗೆ ನೀಡಲಾಗಿದ್ದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಿದ್ದು ವಾಹನ ಸವಾರರು ತರಾತುರಿ ಇಲ್ಲದೆ ಹೆಚ್ ಎಸ್ ಆರ್ ಪಿ ಅಳವಡಿಸಿಕೊಳ್ಳಬಹುದಾಗಿದೆ.
ಹೈ ಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಸಮಯದ ಡೆಡ್ ಲೈನ್ ಗೆ ಕಡಿಯ ಮೂರು ದಿನ ಬಾಕಿ ಇದ್ದು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೆ ಆತಂಕಕ್ಕೆ ಸಿಲುಕಿರುವ ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ.
ನವೆಂಬರ್ 17ಕ್ಕೆ ಅಂತಿಮ ಗಡುವು ಇದ್ದರೂ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅತಿ ಸುರಕ್ಷಿತ ನೊಂದಣಿ ಫಲಕ ಅಳವಡಿಕೆ ಕಾರ್ಯ ನಡೆದಿರುವುದರಿಂದಾಗಿ ವಾಹನ ಮಾಲೀಕರನ್ನು ದೃಷ್ಟಿಯಲ್ಲಿರಿಸಿಕೊಂಡು ಮತ್ತೊಂದು ಅವಕಾಶ ನೀಡಬೇಕು ಎನ್ನುವ ನಿರ್ಧಾರಕ್ಕೆ ಸಾರಿಗೆ ಇಲಾಖೆ ಬಂದಿದೆ. ಹಾಗಾಗಿ ನವೆಂಬರ್ 17ಕ್ಕೆ ಬದಲಾಗಿ 2024ರ ಫೆಬ್ರವರಿ 17ಕ್ಕೆ ಡೆಡ್ ಲೈನ್ ನಿಗದಿಪಡಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ರಾಜ್ಯದಲ್ಲಿ ಎಚ್ ಎಸ್ ಆರ್ ಪಿ ಅಳವಡಿಕೆ ಕಾರ್ಯ ನಡೆಯುತ್ತಿದೆ ಆದರೆ ಕೆಲವರು ಕೋರ್ಟ್ ಗೆ ಹೋಗಿದ್ದರಿಂದ ವಿಳಂಬವಾಗಿದೆ ಇನ್ನೂ ಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ ಆದ್ದರಿಂದ ವಾಹನ ಮಾಲೀಕರ ಹಿತದೃಷ್ಟಿಯಿಂದಾಗಿ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲು ನಿರ್ಧರಿಸಿದ್ದೇವೆ 2024ರ ಫೆಬ್ರವರಿ 17ರವರೆಗೆ ಕಾಲಾವಕಾಶ ವಿಸ್ತರಣೆ ಮಾಡಿದ್ದೇವೆ ಇನ್ನು ಮೂರು ತಿಂಗಳ ಕಾಲ ದಂಡ ಶುಲ್ಕವಿಲ್ಲದೆ ಹೆಚ್ ಎಸ್ ಆರ್ ಪಿ ಅಳವಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ
Kodagu
ನಕ್ಸಲ್ ಚಟುವಟಿಕೆ ಆತಂಕ – ಕೊಡಗಿನಲ್ಲಿ ಹೈ ಅಲರ್ಟ್
ಮಡಿಕೇರಿ: ಕೇರಳದ ವಯನಾಡಿನಲ್ಲಿ ಕಳೆದ ಒಂದು ತಿಂಗಳಿನಿಂದ ನಕ್ಸಲ್ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಬೀಳುವ ಅಪಾಯ ಕಾಣಿಸಿಕೊಂಡಿದೆ.
ಕೊಡಗು- ಕೇರಳ ಗಡಿಯಲ್ಲಿ ಸೋಮವಾರ ನಕ್ಸಲರು ಹಾಗೂ ಕೇರಳ ನಕ್ಸಲ್ ಕಾರ್ಯಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು, ಈತ ಚಿಕಿತ್ಸೆಗಾಗಿ ಅಥವಾ ರಕ್ಷಣೆಗಾಗಿ ಕೊಡಗು ಜಿಲ್ಲೆಯನ್ನು ಪ್ರವೇಶಿಸುವ ಸಾಧ್ಯತೆಗಳಿರುವುದರಿಂದ ಜಿಲ್ಲಾ ಪೊಲೀಸರು ಹೈಅಲರ್ಟ್ ಘೋಷಿಸಿದ್ದಾರೆ.
ಕೊಡಗಿನ 4- 5 ಕಿ.ಮೀ ದೂರದಲ್ಲಷ್ಟೇ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕೇರಳ ಅರಣ್ಯ ಪ್ರದೇಶದಿಂದ ಕೊಡಗನ್ನು ಪ್ರವೇಶಿಸುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಹೆಚ್ಚುವರಿಯಾಗಿ ಜಿಲ್ಲಾ ಸಶಸ್ತ್ರ ಪೊಲೀಸರನ್ನು ನಿಯೋಜಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಭಾಗದ ಆಸ್ಪತ್ರೆ, ಮೆಡಿಕಲ್ ಶಾಪ್ ಮತ್ತು ಹೋಂಸ್ಟೇ ಗಳಿಗೂ ಎಚ್ಚರದಿಂದ ಇರುವಂತೆ ತಿಳಿಸಲಾಗಿದೆ. ಅಲ್ಲದೆ ಪೊಲೀಸರನ್ನು ನಿಯೋಜಿಸಿ ನಿಗಾ ಇರಿಸಲಾಗಿದೆ.
ಕೇರಳ ಪೊಲೀಸರ ಕಾರ್ಯಾಚರಣೆಗೆ ಹೆದರಿ ಈ ನಕ್ಸಲರು ಕರ್ನಾಟಕ ಪ್ರವೇಶ ಮಾಡುವ ಅಪಾಯ ಇರುವುದರಿಂದ ಕೇರಳ-ಕರ್ನಾಟಕ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕೊಡಗು ಭಾಗದಲ್ಲಿರುವ ಕರ್ನಾಟಕ-ಕೇರಳ ಗಡಿ ಭಾಗವಾದ ಕುಟ್ಟ ಪ್ರದೇಶಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿದ್ದು, ಗಡಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಡಗಿನಲ್ಲಿ ನಕ್ಸಲ್ ಚಟುವಟಿಕೆ ಇಲ್ಲವಾದರೂ ಕೇರಳ ಗಡಿಗೆ ಹೊಂದಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನ ಗಡಿಭಾಗ ಕುಟ್ಟ, ಬಿರುನಾಣಿ, ತೆರಾಲು ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಮುಂಜಾಗ್ರತಾ ಕ್ರಮವಾಗಿ ಗಡಿಭಾಗದಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಕುಟ್ಟ ಗಡಿಯ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಪಾಸಣೆ ಬಿಗಿಗೊಳಿಸಿದ್ದಾರೆ.
ದಿನದ 24 ಗಂಟೆ ಪೊಲೀಸರು ಕರ್ತವ್ಯದಲ್ಲಿದ್ದು, ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ವಿಚಾರಣೆಗೆ ಒಳಪಡಿಸುವಂತೆ ಪೊಲೀಸರಿಗೆ ಎಸ್.ಪಿ. ರಾಮರಾಜನ್ ನಿರ್ದೇಶನ ನೀಡಿದ್ದಾರೆ. ಕುಟ್ಟ ಭಾಗದಲ್ಲಿ ಎ.ಎನ್.ಎಫ್. ತಂಡ ಕಳೆದ ಹಲವು ಸಮಯದಿಂದ ಕೆಲಸ ನಿರ್ವಹಿಸುತ್ತಿದೆ. ಅಲ್ಲದೆ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದೆ.
State
ಮಹಿಳೆಯರಿಗೆ ಗುಡ್ ನ್ಯೂಸ್ – ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಅವಕಾಶ!
ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಸಾರಿಗೆ ಸಂಸ್ಥೆ ಅವಕಾಶ ನೀಡಿ ಆದೇಶ ಹೊರಡಿಸಿದೆ.
ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾಮಾನ್ಯ ಸ್ಥಾಯಿ ಆದೇಶ ಸಂಖ್ಯೆ 179 ದಿನಾಂಕ 7.6.2023 ರಲ್ಲಿ ಅವಕಾಶ ಕಲ್ಪಿಸಿತ್ತು.
ಮುಂದುವರೆದ ಉಲ್ಲೇಖ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಟಲ್ ಹಾರ್ಡ್ ಮತ್ತು ಸಾಫ್ಟ್ ಕಾಪಿ ಮಾದರಿಯಲ್ಲಿ ತೋರಿಸಿದ್ದಲ್ಲಿ ಹಾಜರುಪಡಿಸಿದ್ದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಿದಾಗಿದೆ.
ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಅಧಿಕೃತ ಗುರುತಿನ ಚೀಟಿ ತೋರಿಸಿದರೂ ಸಹ ಮೊಬೈಲ್ ನಲ್ಲಿನ ಗುರುತಿನ ಚೀಟಿ ನಡೆಯುವುದಿಲ್ಲ ಎಂದು ಕೆಲವು ನಿರ್ವಾಹಕರು ಅನವಶ್ಯಕವಾಗಿ ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇಪದೇ ದೂರುಗಳು ಕೇಳಿ ಬರುತ್ತಿರುವುದಾಗಿ ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಅಡಚಣೆಯಾಗದಂತೆ ಮತ್ತು ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ 4ರ ಪತ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ
- Hassan3 weeks ago
ಮಲಗಿದಲ್ಲಿಯೇ ವ್ಯಕ್ತಿ ಸಾವು
- Mysore3 weeks ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
- Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
- Mysore4 weeks ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
- Crime3 weeks ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
- State4 weeks ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ
- Crime2 months ago
ಚಾಮಲಾಪುರದ ಹುಂಡಿಯಲ್ಲಿಕುಡಿದ ಮತ್ತಿನಲ್ಲಿ ತುಂಬು ಗರ್ಭಿಣಿ ಹೆಂಡತಿಯನ್ನೇ ಕೊಲೆಗೈದ ಪಾಪಿ ಪತಿ!
- Hassan5 days ago
ಹಾಸನ ಹಾಸನಾಂಬೆ ದರ್ಶನದ ವೇಳೆ ಭಕ್ತರಿಗೆ ಕರೆಂಟ್ ಶಾಕ್ ಆಗಿ ನೂಕು ನುಗ್ಗಲು ಪ್ರಕರಣ