Connect with us

Mandya

ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿಸಿದ ಕೆ.ಪಿ.ದೊಡ್ಡಿ ಗ್ರಾಮಸ್ಥರು

Published

on

ಭಾರತೀನಗರ: ಮಳೆ ಇಲ್ಲದೇ ರಾಜ್ಯದಲ್ಲಿ ಭೀಕರ ಬರಗಾಲ ತೆಲೆದೋರಿದೆ, ಇದರ ನಿವಾರಣೆಗೆ ಇಲ್ಲೊಂದು ಗ್ರಾಮದವರು ಕಪ್ಪೆಗಳಿಗೆ ಮದುವೆ ಮಾಡುವ ಮೂಲಕ ಮಳೆರಾಯನಿಗಾಗಿ ವಿಶೇಷವಾಗಿ ಪ್ರಾರ್ಥನೆ ಮಾಡುವ ಮೂಲಕ ಗಮನೆ ಸೆಳೆದರು.

ಹೌದು, ಪ್ರಸ್ತುತದಲ್ಲಿ ಎದುರಾಗಿರುವ ಭೀಕರ ಬರಗಾಲ ತಪ್ಪಿಸಲು ಹಾಗೂ ಶೀಘ್ರದಲ್ಲಿ ಉತ್ತಮ ಮಳೆಗಾಗಿ ಗ್ರಾಮೀಣ ಪ್ರದೇಶದ ಆಚರಣೆಯಾದ ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನ ಮೊರೆ ಹೋದವರು, ಸಮೀಪದ ಕೆ.ಪಿ.ದೊಡ್ಡಿಯ ಗ್ರಾಮಸ್ಥರು ಹಾಗೂ ಯುವಕರು.

ಇವರು, ಮಳೆರಾಯನ ಆಗಮನಕ್ಕೆ ಹಾಗೂ ಶೀಘ್ರವಾಗಿ ಉತ್ತಮ ಮಳೆಯಾಗಿ ನಾಡು ಎದುರಿಸುತ್ತಿರುವ ಭೀಕರ ಬರ ತೋಲಗಲಿ ಎಂದು ವಿಶೇಷವಾಗಿ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ಕೈಗೊಂಡು ವಿಶಿಷ್ಟವಾಗಿ ಕಪ್ಪೆಗಳಿಗೆ ಮದುವೆ ಮಾಡಿ ಗ್ರಾಮಸ್ಥರ ಜೊತೆಗೂಡಿ ಅನ್ನ ಸಂತರ್ಪಣೆ ನಡೆಸಲಾಯಿತು.

ಕೆ.ಪಿ.ದೊಡ್ಡಿ ಹಾಗೂ ಮಣಿಗೆರೆ ಹಾಗೂ ಸುತ್ತಮುತ್ತಲಿನ ಸುಮಾರು 500ಕ್ಕೂ ಹೆಚ್ಚಿನ ಜನರು ಅನ್ನಸಂತರ್ಪಣೆಯಲ್ಲಿ ಭಾಗವಹಿಸಿ, ಮಳೆಗಾಗಿ ಪ್ರಾರ್ಥನೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು.

Continue Reading
Click to comment

Leave a Reply

Your email address will not be published. Required fields are marked *

Mandya

ಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ

Published

on

ಮಂಡ್ಯ: ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಮತ್ತು ಜವಾಬ್ದಾರಿಯನ್ನು ತೆಗೆದುಕೊಂಡು ಕೆರೆ ಒತ್ತುವರಿಯನ್ನು ತೆರವುಗೊಳಿಸಬೇಕು. ತೆರವುಗೊಳಿಸಿದ ಕೆರೆಗಳು ಮತ್ತೆ ಒತ್ತುವರಿ ಮಾಡದಂತೆ ಸಂರಕ್ಷಣೆ ಮಾಡಬೇಕು. ಕೆರೆ ಒತ್ತುವರಿ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಳಾದ ಡಾ.ಕುಮಾರ ಅವರು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಕೆರೆಗಳ ಒತ್ತುವರಿ ತೆರವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ಇದುವರೆಗೆ ಸುಮಾರು 245 ಕೆರೆಗಳ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಇನ್ನು 203 ಕೆರೆಗಳ ತೆರವು ಬಾಕಿ ಉಳಿದಿದೆ. ಬಾಕಿ ಇರುವ ಕೆರೆ ಒತ್ತುವರಿಗಳನ್ನು ತಕ್ಷಣವೇ ತೆರವುಗೊಳಿಸಿ ವರದಿ ನೀಡುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು.

ಪ್ರತಿ ತಿಂಗಳು ಕೆರೆ ಒತ್ತುವರಿ ಸಂಬಂಧ ಸಭೆ ನಡೆಸಲಾಗುತ್ತಿದ್ದು ಮಾರ್ಚ್ 30 ರೊಳಗೆ ಬಾಕಿ ಇರುವ ಎಲ್ಲಾ ಕೆರೆಗಳ ಒತ್ತುವರಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೖಗೊಳ್ಳಲಾಗುವುದು. ತೆರವುಗೊಳಿಸಿದ ಕೆರೆಗಳ ಸುತ್ತ ಟ್ರಂಚ್‌ಗಳನ್ನು (ಕಂದಕ) ನಿರ್ಮಿಸಿ, ನಾಮಫಲಕಗಳನ್ನು ಅಳವಡಿಸುವ ಮೂಲಕ ಮರು-ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದರು.

ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಎಚ್.ಎಲ್.ಬಿ.ಸಿ, ಕಾವೇರಿ ನೀರಾವರಿ ನಿಗಮ ನಿಯಮಿತ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಕೆರೆಯನ್ನು ಸಂರಕ್ಷಿಸಬೇಕು. ನಿಯಮಿತವಾಗಿ ಕೆರೆಗಳ ಪರಿಶೀಲನೆ ನಡೆಸಿ ಒತ್ತುವರಿಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಧಿಕಾರಿ ಶಿವಮೂರ್ತಿ, ಪಾಂಡವಪುರ ಉಪ ವಿಭಾಗಧಿಕಾರಿ ಶ್ರೀನಿವಾಸ್ ಡಿಡಿಎಲ್ ಆರ್ ವಿರುಪಾಕ್ಷ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ

Published

on

ಮಂಡ್ಯ: ತಾಲೂಕಿನ ಬೂದನೂರು ಗ್ರಾಮ ಪಂಚಾಯತಿಗೆ ಆಡಳಿತಾಧಿಕಾರಿಯಾಗಿ ನೇಮಕವಾಗಿರುವ
ಶಿಶು ಅಭಿವೃದ್ಧಿ ಅಧಿಕಾರಿ ಎಂ. ಕೆ. ಕುಮಾರಸ್ವಾಮಿ ಅವರನ್ನು ಗ್ರಾಮಸ್ಥರು ‌ಭವ್ಯವಾಗಿ ಸ್ವಾಗತಿಸಿ ಅಭಿನಂದಿಸಿದರು.

ಹಿಂದಿನ ಗ್ರಾಪಂ ಆಡಳಿತದಿಂದ ಬೇಸತ್ತಿರುವ ಗ್ರಾಮಸ್ಥರು ಹಾಗೂ ಹೋರಾಟಗಾರರು, ಜನಪ್ರತಿನಿಧಿಗಳ ಅಧಿಕಾರಕ್ಕಿಂತ ಅಧಿಕಾರಿಗಳ ಆಡಳಿತವೇ ಮೇಲು ಎಂದು ವಿಷಾದಿಸಿದರು. ಬೂದನೂರು ಗ್ರಾಮ ಪಂಚಾಯತಿ ಕಚೇರಿ ಮುಂದೆ ತೋರಣ ಕಟ್ಟಿ, ರಂಗೋಲಿ ಬಿಡಿಸಿ ಆಡಳಿತಾಧಿಕಾರಿಗೆ ಸ್ವಾಗತ ಕೋರಿದರು.

ಆಡಳಿತಾಧಿಕಾರಿಯಾಗಿ ಶಿಶು ಅಭಿವೃದ್ಧಿ ಅಧಿಕಾರಿ ಎಂ. ಕೆ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಬಳಿಕ ಶಾಲು ಹೊದಿಸಿ, ಮೈಸೂರು ಪೇಟಾ ಹಾಕಿ ಅಭಿನಂದಿಸಿ ನೆರೆದವರಿಗೆ ಸಿಹಿ ವಿತರಿಸಲಾಯಿತು.

ಇನ್ನೂ ಒಂದು ವರ್ಷ ಗ್ರಾಮ ಪಂಚಾಯತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರವನ್ನು ಗ್ರಾಮಸ್ಥರು ಒತ್ತಾಯಿಸಿದ್ದು, ಕಳೆದ ಐದು ವರ್ಷಗಳ ಆಡಳಿತದಲ್ಲಿ ಜನಪ್ರತಿನಿಧಿಗಳ ಅಕ್ರಮ, ಜನವಿರೋಧಿ ನೀತಿಯಿಂದಾಗಿ ಬೇಸತ್ತಿರುವುದಾಗಿ ಸ್ವಂತಮನೆ ನಮ್ಮ ಹಕ್ಕು ಹೋರಾಟಗಾರ್ತಿ ಸವಿತಾ ಅಳಲು ತೋಡಿಕೊಂಡರು.

ಬಡ ಜನರ ವಿರುದ್ಧ ಇರುವ ಆಡಳಿತಗಾರ ಜನಪ್ರತಿನಿಧಿಗಳ ಬದಲು ಅಧಿಕಾರಿಗಳ ಆಡಳಿತ ಉತ್ತಮವಾಗಿದೆ. ಚುನಾವಣೆಗಳು ಬೇಸರ ಮೂಡಿಸಿದೆ ಎಂದರು.

ರೈತ ಸಂಘದ ತಾಲೂಕು ಅಧ್ಯಕ್ಷ ಬಿ. ಸಿ.ಪುಟ್ಟಸ್ವಾಮಿ ಮಾತನಾಡಿ, ಜನರ ಪರವಾದ ಕೆಲಸ ಮಾಡಲು ಕಳೆದ ಆಡಳಿತ ಮಂಡಳಿ ವಿಫಲವಾಗಿದೆ. ಪ್ರಶ್ನಿಸಿದವರ ವಿರುದ್ಧ ಕಾನೂನು ಕ್ರಮ ವಹಿಸಲು ಮುಂದಾದ ಆಡಳಿತಗಾರರು ನಿಜವಾದ ಪ್ರಜಾಪ್ರಭುತ್ವ ವಿರೋಧಿಗಳು ಎಂದು ಬಣ್ಣಿಸಿದರು.

ಈ ವೇಳೆ ತಾಪಂ ಯೋಜನಾಧಿಕಾರಿ ವೆಂಕಟರಾವ್, ಪಿಡಿಒ ಸ್ವಾಮಿ, ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್, ಮುಖಂಡರಾದ ರಾಜೇಂದ್ರ, ಕುಳ್ಳ, ಜಯಮ್ಮ, ಶಿವರಾಜ್, ಸುನೀಲ್ ಸೇರಿದಂತೆ ಹಲವರಿದ್ದರು.

Continue Reading

Mandya

ಕರ್ಣಾಟಕ ಬ್ಯಾಂಕ್ ವತಿಯಿಂದ ಶ್ರೀರಂಗನಾಥ ದೇಗುಲಕ್ಕೆ 10 ಫ್ಯಾನ್ ಗಳ ಕೊಡುಗೆ

Published

on

ಶ್ರೀರಂಗಪಟ್ಟಣ : ಕರ್ಣಾಟಕ ಬ್ಯಾಂಕ್ ಶಾಖೆ ವತಿಯಿಂದ ಶ್ರೀರಂಗನಾಥ ದೇಗುಲಕ್ಕೆ ಸುಮಾರು 55 ಸಾವಿರ ರೂ.ಬೆಲೆಯುಳ್ಳ 10 ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಎಜಿಎಂ ಶೇಷಾದ್ರಿ ಕೆ‌.ಎಲ್ ರವರು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಉಮಾ ಅವರಿಗೆ ಹಸ್ತಾಂತರಿಸಿ, ಭಕ್ತರ ಅನುಕೂಲಕ್ಕೆ ಬಳಸಿಕೊಳ್ಳುವಂತೆ ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಅವರು, ಕರ್ಣಾಟಕ ಬ್ಯಾಂಕ್ ವತಿಯಿಂದ ಹತ್ತು ಹಲವು ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರುತ್ತಿದ್ದು, ದೇವಾಲಯದ ಆವರಣದಲ್ಲಿ ಸರದಿ ಸಾಲಿನಲ್ಲಿ ನಿಲ್ಲುವ ಭಕ್ತರಿಗೆ ಅನುಕೂಲವಾಗಲೆಂದು ಹತ್ತು ಫ್ಯಾನ್ ಗಳನ್ನು ನೀಡಿದ್ದಾಗಿ ತಿಳಿಸಿದರು.

ಈ ವೇಳೆ ಮದ್ದೂರು ಕ್ಲಷ್ಟರ್ ನ ಸಿ.ಎಂ.ಮುನಿರಾಜು ರೆಡ್ಡಿ, ಶ್ರೀರಂಗಪಟ್ಟಣ ಶಾಖಾ ವ್ಯವಸ್ಥಾಪಕ ವಿ.ನಾರಾಯಣ್ ಸೇರಿದಂತೆ ಬ್ಯಾಂಕ್ ನ ಸಿಬ್ಬಂಧಿ ವರ್ಗ ಉಪಸ್ಥಿತರಿದ್ದರು.

Continue Reading

Trending

error: Content is protected !!