Hassan
ಮನೆ ಮೇಲೆ ಮರ ಬಿದ್ದು ಮನೆ ಸಂಪೂರ್ಣ ಜಖಂ
Hassan
ಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
ಹಾಸನ: ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಶ್ರೀನಗರ ನಿವಾಸಿ ಆದಿಲ್ ಪಾಷಾ (29), ಅಂಬೇಡ್ಕರ್ ನಗರ ನಿವಾಸಿ ಮಹಮದ್ ಸಬ್ರಿಜ್ ಕಾಲು ಹಾಗೂ ಹಳೇಬೀಡು ತರಗಿನ ಪೇಟೆ ಗೋವಿಂದ (40) ಬಂಧಿತ ಆರೋಪಿಗಳು.

ಏನಿದು ಪ್ರಕರಣ-1?
ಫೆ. 3 ರಂದು ಹಾಸನದ ದೇವೇಗೌಡ ನಗರದ ಬಸ್ಸು ನಿಲ್ದಾಣದ ಹತ್ತಿರ ಇಬ್ಬರು ವ್ಯಕ್ತಿಗಳು ಗಾಂಜಾವನ್ನು ತರುತ್ತಿದ್ದಾರೆಂದು ಹಾಸನ ನಗರ ಠಾಣೆಗೆ ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆದಿಲ್ ಆದಿಲ್ ಪಾಷಾ ಹಾಗೂ ಮಹಮದ್ ಸಬ್ರಿಜ್ ಕಾಲುನನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ 1301 ಗ್ರಾಂ ತೂಕವುಳ್ಳ ಅಂದಾಜು ಬೆಲೆ 2,08,500 ರೂ. ಬೆಲೆಬಾಳುವ ಗಾಂಜಾಸೊಪ್ಪು ಹಾಗು ಒಂದು ಓಪೋ ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಾಸನದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ 2:
ಹಗರೆ-ಹಳೇಬೀಡು ರಸ್ತೆ ಪುಷ್ಪಗಿರಿ ಬೆಟ್ಟದ ಹತ್ತಿರ ಬಂಡಾರಿಕಟ್ಟೆ ಬಸ್ ನಿಲ್ದಾಣದಲ್ಲಿ ಒಂದು ಪ್ಲಾಸ್ಟಿಕ್ ಕವರ್‌ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹಳೇಬೀಡು ಠಾಣೆ ಪೊಲೀಸರು ದಾಳಿ ನಡೆಸಿ ಬಸ್ ನಿಲ್ದಾಣದೊಳಗೆ ಕುಳಿತುಕೊಂಡಿದ್ದ ಹಳೇಬೀಡಿನ ನಯನ ಕ್ಷತ್ರಿಯ ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ತರಗಿನಪೇಟೆ ನಿವಾಸಿ ಗೋವಿಂದನ ಬಳಿಯಿದ್ದ ೫೧೦ ಗ್ರಾಂ ತೂಕವುಳ್ಳ ಗಾಂಜಾ ಸೊಪ್ಪನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hassan
2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
ಬೆಂಗಳೂರು/ಹಾಸನ: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಏತ್ತಿನಹೊಳೆ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲು ಈ ಮೂರು ಜಿಲ್ಲೆಗಳ ನೀರಿನ ಸಮಸ್ಯೆಗೆ ಪರಿಹಾರ ನೀಡುವುದೇ ಮುಖ್ಯ ಉದ್ದೇಶ. ಈ ಉದ್ದೇಶ ಈಡೇರಬೇಕಾದರೆ ಬಾಕಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಲಾಯಿತು.
ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಎಂಸಿ ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಭಾಗಿಯಾಗಿದ್ದರು. ಈ ಸಭೆಯಲ್ಲಿ, “2027ರಲ್ಲಿ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರು ಹರಿಯುವುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಯಿತು.

ಸಚಿವರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೆಶಕರಾದ ರಾಜೇಶ್ ಅಮ್ಮಿನಭಾವಿ ಹಾಗೂ 3 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓಗಳು, ಎಸ್ಎಲ್ಓ ಗಳು ಉಪಸ್ಥಿತರಿದ್ದು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ.
ಪ್ರಮುಖವಾಗಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಯ ಗಡಿಯವರೆಗೆ ತರಲು ಕಾಮಗಾರಿ ಪ್ರಗತಿಯಲ್ಲಿದೆ. ಮುಂದೆ ದೊಡ್ಡಬಳ್ಳಾಪುರದಿಂದ ಕುಂದಾಣ ಮಾರ್ಗವಾಗಿ ಒಂದು ಪೈಪ್ ಲೈನ್ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ, ಮತ್ತೊಂದು ಪೈಪ್ ಲೈನ್ ಚಿಂತಾಮಣಿ ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಅಳವಡಿಸಲು ಕೂಡಲೇ ಕಾಮಗಾರಿ ಆರಂಭಿಸಲು ಸಭೆಯಲ್ಲಿ ಸೂಚಿಸಲಾಯಿತು.

ಈ ಪೈಪ್ ಲೈನ್‌ಗಳು ಒಟ್ಟು 261.90 ಕಿ.ಮೀ. ದೂರು ಅಳವಡಿಸಬೇಕಿದೆ. ಪೈಪ್ ಲೈನ್ ಅಳವಡಿಸಲು ಅಗತ್ಯವಿರುವ ಭೂ ಸ್ವಾಧೀನವನ್ನು ಕೂಡಲೇ ಮಾಡಲು ಭೂ ಸ್ವಾಧೀನ ಅಧಿಕಾರಿಗಳಿಗೆ ಸೂಚಿಸಲಾಯಿತು. ಭೂ ಸ್ವಾಧೀನ ಆದೇಶ ಹೊರಡಿಸಿದ ಭಾಗದಲ್ಲಿ ಪೈಪ್ ಲೈನ್ ಅಳವಡಿಕೆಯನ್ನು ಕೂಡಲೇ ಆರಂಭಿಸಲು ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮುಂದುವರೆದು, ಕುಡಿಯುವ ನೀರು ಒದಗಿಸಬೇಕಾದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀರು ಶುದ್ದೀಕರಣ ಘಟಕ ಹಾಗೂ ಗ್ರಾಮಗಳಿಗೆ ನೀರು ತಲುಪಿಸುವ ಪೈಪ್ ಲೈನ್ಗಳನ್ನು ಅಳವಡಿಸಲು ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ಕೂಡಲೇ ತಯಾರಿಸಿ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಒಟ್ಟಾರೆ 2027ರ ಅಂತ್ಯಕ್ಕೆ ನೀರನ್ನು ಈ ಮೂರೂ ಜಿಲ್ಲೆಗಳಿಗೆ ತಲುಪಿಸಲು ಮತ್ತು ನೀರನ್ನು ಶುದ್ದೀಕರಿಸಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಮತ್ತು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಲಾಯಿತು.
Hassan
ವಿಧಾನಸೌಧದಲ್ಲಿ ಕಾರ್ಯಕಲಾಪ ವೀಕ್ಷಿಸಿದ ಎನ್.ಕೆ. ಗಣಪಯ್ಯ ಕಿವುಡ, ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು
ಹಾಸನ: ಸಕಲೇಶಪುರದ ಕೌಡಹಳ್ಳಿಯಲ್ಲಿರುವ ಎನ್.ಕೆ. ಗಣಪಯ್ಯ ಕಿವುಡ ಮತ್ತು ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸದನದ ಕಾರ್ಯಕಲಾಪ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಸದನದ ವೀಕ್ಷಣೆಗೆ ಅನುವು ಮಾಡಿಕೊಟ್ಟರು.
-
Politics12 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Kodagu18 hours agoಕಾರೆಕೆರೆ ಕಾವಲು: 47 ದಲಿತ ಕುಟುಂಬಗಳಿಗೆ ಭೂಮಿ ಮಂಜೂರಿಗೆ ಆಗ್ರಹ
-
Kodagu18 hours agoಕೋಮು ಸಾಮರಸ್ಯ ಮೂಡಿಸುವಲ್ಲಿ ಉರೂಸ್ ಕೊಡುಗೆ ಅಪಾರ
-
Hassan10 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
Hassan15 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
National14 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Chamarajanagar14 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
-
Mysore14 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ


