Hassan
ಸಕಲೇಶಪುರ ಜನಸ್ಪಂದನ ವೇಳೆ ಸುಳ್ಳು ಆರೋಪಗಳ ಮಳೆ – ಡಿ.ಸಿ. ಸಣ್ಣಸ್ವಾಮಿ ವಿರುದ್ಧ ಗಂಭೀರ ಆರೋಪ
ಹಾಸನ: ಸಕಲೇಶಪುರದಲ್ಲಿ ದಿನಾಂಕ 16-01-2026 ರಂದು ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾದ ಮುರುಳಿ ಮೋಹನ್‌ರವರ ಮೇಲೆ ಹಲ್ಲೆ ನಡೆದಿದೆ ಎಂದು ಡಿ.ಸಿ. ಸಣ್ಣಸ್ವಾಮಿಯು ಸುಳ್ಳು ಆರೋಪ ಮಾಡುತ್ತಿರುವುದು ಪೂರ್ವನಿಯೋಜಿತ ಷಡ್ಯಂತ್ರವಾಗಿದ್ದು, ಇದರ ಮೂಲಕ ಪಕ್ಷವನ್ನು ದುರ್ಬಲಗೊಳಿಸುವ ಯತ್ನ ನಡೆಯುತ್ತಿದೆ ಎಂದು ವಕೀಲರಾದ ಎನ್.ಜಿ. ಅರುಣ್ ಸತ್ಪಾಲ್ ಆರೋಪಿಸಿದರು.
ಕೃಷ್ಣಬೈರೆಗೌಡರವರು ನಡೆಸಿದ ಜನಸ್ಪಂದನ ಕಾರ್ಯಕ್ರಮದ ವೇಳೆ, ಸಂಜೆ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಗೆ ಪ್ರೋಟೋಕಾಲ್ ಪ್ರಕಾರ ಸಂಸದರು, ಮಂಡಳಿ ಅಧ್ಯಕ್ಷರು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಪ್ರವೇಶವಿತ್ತು. ಈ ಸಂದರ್ಭ ಡಿ.ಸಿ. ಸಣ್ಣಸ್ವಾಮಿಯು ಒಳ ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ನಿರ್ಬಂಧ ಹೇರಿದ್ದು, ಗೊಂದಲ ಉಂಟಾಗಿದೆ. ಆದರೆ ಆ ಸಮಯದಲ್ಲಿ ಯಾವುದೇ ರೀತಿಯ ಹಲ್ಲೆ ನಡೆದಿಲ್ಲ. ಆದರೂ ಡಿ.ಸಿ. ಸಣ್ಣಸ್ವಾಮಿ ಮತ್ತು ಅವರ ಸಹಚರರು, ಮುರುಳಿ ಮೋಹನ್‌ರವರು ಶರ್ಟ್ ಹರಿದು ಹಲ್ಲೆ ಮಾಡಿದ್ದಾರೆ ಎಂಬ ಸುಳ್ಳು ಆರೋಪವನ್ನು ಮಾಧ್ಯಮ, ವಾಟ್ಸ್‌ಆಪ್, ಫೇಸ್‌ಬುಕ್ ಮೂಲಕ ಹರಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ನೂರಾರು ಜನರು, ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಇದ್ದ ಸಂದರ್ಭದಲ್ಲಿ ಹಲ್ಲೆ ನಡೆದಿದ್ದರೆ ತಕ್ಷಣವೇ ಪ್ರಕರಣ ದಾಖಲಾಗಬೇಕಾಗಿತ್ತು. ಆದರೆ ಇದುವರೆಗೂ ಯಾವುದೇ ಪೊಲೀಸ್ ಠಾಣೆಗೆ ದೂರು ನೀಡಿಲ್ಲ. ಇದರಿಂದ ಆರೋಪಗಳು ಸಂಪೂರ್ಣ ಆಧಾರರಹಿತವಾಗಿವೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಡಿ.ಸಿ. ಸಣ್ಣಸ್ವಾಮಿ ಈ ಹಿಂದೆ ಕೂಡ ಪಕ್ಷದ ಹಿರಿಯ ಮುಖಂಡರಾದ ಬಿ.ಬಿ. ನಿಂಗಯ್ಯ, ಮಾಜಿ ಸಚಿವ ಬಿ. ಶಿವರಾಮ್, ಮಾಜಿ ಸಚಿವ ಮೋಟಮ್ಮ ಹಾಗೂ ಗೃಹ ಸಚಿವರಾಗಿದ್ದ ಜಿ.ಪರಮೇಶ್ವರ್ ಅವರ ಮೇಲೂ ಅವಮಾನಕಾರಿ ವರ್ತನೆ ತೋರಿದ್ದಾರೆ. ಸಕಲೇಶಪುರ ಟೋಲ್‌ಗೇಟ್‌ನಲ್ಲಿ ದೌರ್ಜನ್ಯ, ಸಭೆಗಳಲ್ಲಿ ಗದ್ದಲ, ಅಧಿಕಾರಿಗಳಿಗೆ ಬೆದರಿಕೆ, ನಕಲಿ ದಾಖಲೆ ಮೂಲಕ ಬ್ಯಾಂಕ್ ಸಾಲ ಪಡೆದ ಪ್ರಕರಣ, ಶಿಕ್ಷಣ ಸಂಸ್ಥೆಯಲ್ಲಿ ಹಣ ವಸೂಲಾತಿ ಆರೋಪಗಳು ಸೇರಿದಂತೆ ಹಲವು ಗಂಭೀರ ಪ್ರಕರಣಗಳು ಅವರ ವಿರುದ್ಧ ದಾಖಲಾಗಿವೆ ಎಂದು ಆರೋಪಿಸಿದರು.

ಅಲ್ಲದೆ, ರಾಜಕೀಯ ಸ್ಪರ್ಧೆ ಹಾಗೂ ವೈಯಕ್ತಿಕ ದ್ವೇಷದಿಂದ ನನ್ನ ಸಹೋದರ ಎನ್.ಜಿ. ಅಜಯ್ ಸತ್ಪಾಲ್ ಅವರ ಹತ್ಯೆಗೆ ಡಿ.ಸಿ. ಸಣ್ಣಸ್ವಾಮಿ ಕಾರಣರಾಗಿದ್ದಾರೆ ಎಂಬ ಆರೋಪವೂ, ಈ ಪ್ರಕರಣದ ತೀರ್ಪು ಸಮೀಪದಲ್ಲಿದೆ ಎಂದು ಎನ್.ಜಿ. ಅರುಣ್ ಸತ್ಪಾಲ್ ತಿಳಿಸಿದರು.
ಕಾಂಗ್ರೆಸ್ ಪಕ್ಷವನ್ನು ಸಕಲೇಶಪುರ–ಆಲೂರು–ಕಟ್ಟಾಯ ಕ್ಷೇತ್ರದಲ್ಲಿ ಬಲಪಡಿಸಲು ಶ್ರಮಿಸುತ್ತಿರುವ ಮುರುಳಿ ಮೋಹನ್‌ರವರ ತೇಜೋವಧೆ ಮಾಡುವ ಉದ್ದೇಶದಿಂದ ಈ ರೀತಿಯ ಸುಳ್ಳು ಆರೋಪಗಳನ್ನು ಹಬ್ಬಿಸಲಾಗುತ್ತಿದೆ. ಆದ್ದರಿಂದ ಡಿ.ಸಿ. ಸಣ್ಣಸ್ವಾಮಿ ಮತ್ತು ಅವರ ಸಹಚರರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಮಾಜದ ಶಾಂತಿ ಹಾಗೂ ರಾಜಕೀಯ ಸ್ವಚ್ಛತೆ ಕಾಪಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎನ್.ಜಿ. ಅರುಣ್ ಸತ್ಪಾಲ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಚಂದ್ರಣ್ಣ, ದೇವರಾಜ್, ಲೋಕೇಶ್, ಪ್ರಶಾಂತ್ ಹಾಗೂ ಇತರರು ಉಪಸ್ಥಿತರಿದ್ದರು.
Hassan
ವಿಕಸಿತ ಭಾರತ ಸಂಕಲ್ಪಕ್ಕೆ ಕೇಂದ್ರದ ಬಜೆಟ್ ಪೂರಕ: ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ವಿಕಸಿತ ಭಾರತ ಮೋದಿಜಿಯವರ ಕನಸು. 2047ಕ್ಕೆ ವಿಕಸಿತ ಭಾರತ ಆಗಬೇಕು ಅನ್ನೊ ಸಂಕಲ್ಪಕ್ಕೆ ಪೂರಕವಾಗಿ ಕೇಂದ್ರದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಈ ಭಾರಿಯ ಬಜೆಟ್ ಮಂಡಿಸಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈ ಬಜೆಟ್ ಮೂರು ಪ್ರಮುಖ ಕರ್ತವ್ಯಗಳ ಆಧಾರದ ಮೇಲೆ ಅಭಿವೃದ್ಧಿ ಪೂರಕ ಆಡಳಿತದತ್ತ ಸ್ಪಷ್ಟ ದಿಕ್ಸೂಚಿಯನ್ನು ನೀಡಿದೆ. ಮೊದಲನೆಯದಾಗಿ, ಜಾಗತಿಕ ಆರ್ಥಿಕ ಏರಿಳಿತಗಳ ನಡುವೆಯೂ ಭಾರತದ ಆರ್ಥಿಕ ಪ್ರಗತಿಗೆ ವೇಗ ನೀಡುವುದು ಮತ್ತು ಆರ್ಥಿಕತೆ ಚೇತರಿಸಿಕೊಳ್ಳುವ ಶಕ್ತಿಯನ್ನು ವೃದ್ಧಿಸುವುದು, ಎರಡನೆಯದಾಗಿ, ಯುವಜನತೆಯ ಆಕಾಂಕ್ಷೆಗಳನ್ನು ಈಡೇರಿಸುತ್ತಾ ಅವರಲ್ಲಿ ಹೊಸ ಸಾಮರ್ಥ್ಯ ಬೆಳೆಸುವುದು ಹಾಗೂ ಮೂರನೆಯದಾಗಿ, ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದೊಂದಿಗೆ ಪ್ರತಿಯೊಂದು ಕುಟುಂಬ, ಸಮುದಾಯ ಮತ್ತು ಪ್ರದೇಶಗಳಿಗೆ ಅಗತ್ಯ ಸಂಪನ್ಮೂಲ ಹಾಗೂ ಸಮಾನ ಅವಕಾಶಗಳನ್ನು ಒದಗಿಸಿ, ಎಲ್ಲರೂ ದೇಶದ ಪ್ರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು ಈ ಬಜೆಟ್‌ನ ಆಶಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

◦ ಈ ಬಜೆಟ್ ’ವಿಕ್ಷಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್ನಂತಹ ವೇದಿಕೆಗಳ ಮೂಲಕ ಯುವಜನರ ಆಲೋಚನೆಗಳನ್ನು ನೀತಿ ನಿರೂಪಣೆಯಲ್ಲಿ ಅಳವಡಿಸಿಕೊಂಡಿರುವುದು ಶ್ಲಾಘನೀಯ. ಇದು ಯುವಜನರನ್ನು ಕೇವಲ ಫಲಾನುಭವಿಗಳನ್ನಾಗಿ ನೋಡದೆ, ರಾಷ್ಟ್ರದ ನಿರ್ಧಾರಗಳಲ್ಲಿ ಸಕ್ರಿಯ ಪಾಲುದಾರರನ್ನಾಗಿ ಮಾಡಿದೆ. ಆ ಮೂಲಕ ಭಾರತದ ಮುಂದಿನ ಪ್ರಗತಿಯನ್ನು ಯುವಜನರು ಮುನ್ನಡೆಸುತ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇ ಪದೇ ಒತ್ತಿ ಹೇಳಿದ್ದು, ಅದರತ್ತ ಈ ಬಜೆಟ್ ಕೂಡ ಗಮನಹರಿಸಿರುವುದು ಸಮಯೋಚಿತವೆನಿಸಿದೆ ಎಂದು ಹೇಳಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 9ನೇ ಬಜೆಟ್ ಮಂಡಿಸಿದ್ದಾರೆ. ಕರ್ತವ್ಯ ಭವನದಲ್ಲಿ ಈ ಬಜೆಟ್ ತಯಾರಾಗಿದ್ದು.ನಿರ್ಮಲಾ ಸೀತಾರಾಮನ್ ನಮ್ಮವರು. ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದಾರೆ. ಅವರು 9ನೇ ಬಾರಿ ದಾಖಲೆಯ ಬಜೆಟ್ ಮಂಡಿಸಿದ್ದಾರೆ.ಕ್ರೀಡಾ ಕ್ಷೇತ್ರ, ನಾರಿ ಶಕ್ತಿಗೆ ಹೆಚ್ಚು ಆದ್ಯತೆ ನೀಡಿದ್ದಾರೆ. ಯಾವುದೇ ಹೊಸ ತೆರಿಗೆಯನ್ನ ಹೇರಿಲ್ಲ. ಸರ್ವಸ್ಪರ್ಷಿ, ಸರ್ವವ್ಯಾಪಿ ಬಜೆಟ್ ಇದು.ದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ. ಆರ್ಥಿಕ ಸದೃಢತೆ, ವಿಶ್ವಗುರುವಾಗಲು ಪೂರಕ ಬಜೆಟ್ ಮಂಡಿಸಿದ್ದಾರೆ ಎಂದು ತಿಳಿಸಿದರು.
Hassan
ಅರಸೀಹಳ್ಳಿ ಹರೀಶ್‌ಗೆ ಪಿಹೆಚ್‌ಡಿ ಪದವಿ
ಹಾಸನ: ನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎ.ಹರೀಶ್ ಅವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.
ಹರೀಶ್ ಅವರು ಡಾ. ಎಂ. ಆರ್. ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಹಾಪ್ರಬಂಧ The Impact of E- governance and rural development ( A case study of Hassan district ) ಕ್ಕೆ ಪಿ.ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಹರೀಶ್ ಅವರು ಅರಸೀಹಳ್ಳಿಯ ನಿವೃತ್ತ ಮುಖ್ಯೋಪಾಧ್ಯಾಯ ಎ ಅಣ್ಣೇಗೌಡ ಮತ್ತು ಜಯಲಕ್ಷ್ಮಮ್ಮ ಅವರ ಪುತ್ರರಾಗಿದ್ದಾರೆ
Hassan
ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
ನವದೆಹಲಿ: ಹಾಸನ ಜಿಲ್ಲೆಯಲ್ಲಿ ದಶಕಗಳಿಂದಲೂ ರೈತರನ್ನು ಕಾಡುತ್ತಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಶೀಘ್ರದಲ್ಲೇ ಹಾಸನಕ್ಕೆ ಕೇಂದ್ರ ತಂಡ ಭೇಟಿ ಸಚಿವರೊಂದಿಗಿನ ಭೇಟಿಯ ನಂತರ, ಅರಣ್ಯ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕರಾದ ರಮೇಶ್ ಕೆ. ಪಾಂಡೇ (IFS) ಅವರನ್ನು ಸಂಸದರು ಭೇಟಿ ಮಾಡಿದರು. ಸಚಿವರ ನಿರ್ದೇಶನದಂತೆ, ಹಾಸನ ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (WII) ತಂಡವು ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಸಂಸದರು ತಿಳಿಸಿದರು.

ಈ ತಂಡವು ಜಿಲ್ಲೆಯ ಆನೆ ಕಾರಿಡಾರ್‌ಗಳ ಸ್ಥಿತಿಗತಿ ಮತ್ತು ಸಂಘರ್ಷ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದೆ. 7 ಗ್ರಾಮಗಳ ರೈತರಿಂದ ಸ್ವಯಂಪ್ರೇರಿತ ಜಮೀನು ಹಸ್ತಾಂತರ ಹಿಂದೆ ನಡೆದ ಟಾಸ್ಕ್‌ಫೋರ್ಸ್ ಕಮಿಟಿ ಸಭೆಯ ನಿರ್ಧಾರಗಳನ್ನು ಸಚಿವರ ಗಮನಕ್ಕೆ ತಂದ ಶ್ರೇಯಸ್ ಪಟೇಲ್ ಅವರು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಮತ್ತು ಆನೆಗಳ ಸಂಚಾರ ಅಧಿಕವಾಗಿರುವ ಕೆಳಕಂಡ 7 ಗ್ರಾಮಗಳನ್ನು ಯೋಜನೆಗೆ ಒಳಪಡಿಸುವಂತೆ ಒತ್ತಾಯಿಸಿದರು.
ಅರಣಿ, ಬೋರನಮನೆ, ಬಾಳೆಹಳ್ಳ, ಬೆಟ್ಟಕುಮರಿ, ಮಂಕನಹಳ್ಳಿ, ಯತ್ತಹಳ್ಳ, ಬಾಜಿ ಮನೆ ಎಸ್ಟೇಟ್ ಈ ಗ್ರಾಮಗಳಲ್ಲಿನ 416 ರೈತರು ತಮ್ಮ ಒಟ್ಟು 2261.21 ಎಕರೆ ಹಿಡುವಳಿ ಪ್ರದೇಶವನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಸಿದ್ಧರಿದ್ದಾರೆ.
ಪರಿಹಾರಕ್ಕೆ ಆಗ್ರಹ
“ಈ 7 ಗ್ರಾಮಗಳ ರೈತರು ಆನೆಗಳ ಕಾಟದಿಂದ ಬೇಸತ್ತಿದ್ದು, ಸರ್ಕಾರವು ಪ್ರತಿ ಎಕರೆಗೆ ಕನಿಷ್ಠ 15 ಲಕ್ಷ ರೂ. ಪರಿಹಾರ ನೀಡಿದಲ್ಲಿ ತಕ್ಷಣವೇ ಜಮೀನು ಹಸ್ತಾಂತರಿಸಲು ಒಪ್ಪಿಗೆ ಸೂಚಿಸಿದ್ದಾರೆ. ಈ ಪ್ರಸ್ತಾವನೆ ಜಾರಿಯಾದಲ್ಲಿ ಆನೆಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಸಿಗಲಿದ್ದು, ರೈತರ ಪ್ರಾಣ-ಹಾನಿ ತಪ್ಪಿಸಬಹುದು,” ಎಂದು ಶ್ರೇಯಸ್ ಪಟೇಲ್ ತಿಳಿಸಿದರು.

ಹಾಸನ ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ಪರಿಗಣಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.
-
Manglore4 hours agoಜಿ.ಎಲ್. ಟ್ರೋಫಿ-2026: ಜಿ.ಎಲ್. ಹಾಸನ ತಂಡ ಚಾಂಪಿಯನ್
-
Hassan5 hours agoಮಾಧ್ಯಮ ಸ್ವಾತಂತ್ರ್ಯ ಸದ್ಬಳಕೆಯಾಗಲಿ: ಎಎಸ್ಪಿ ತಮ್ಮಯ್ಯ
-
Hassan4 hours agoಅರಸೀಹಳ್ಳಿ ಹರೀಶ್‌ಗೆ ಪಿಹೆಚ್‌ಡಿ ಪದವಿ
-
Hassan5 hours agoಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ : ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಶ್ರೇಯಸ್ ಪಟೇಲ್
-
National7 hours ago17ನೇ ಬೆಂಗಳೂರು ಚಿತ್ರೋತ್ಸವದಲ್ಲಿ ತಾಯಿ-ಮಗನ ಸಂಬಂಧದ ʼಅಮ್ಮಂಗೆ ಹೇಳ್ಬೇಡʼ ಚಿತ್ರ ಪ್ರದರ್ಶನ
-
State7 hours agoಸಿಎಂ ಹೌದು ಹುಲಿಯಾ ಆಗಿಲ್ಲ, ಹೌದು ಇಲಿಯಾ ಆಗಿದ್ದಾರೆ: ಆರ್.ಅಶೋಕ್
-
Mandya9 hours agoಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ : ಡಾ.ಮಾನಸ
-
Mysore5 hours agoಡ್ರಗ್ಸ್ ಲ್ಯಾಬ್ ಪತ್ತೆ: ಕೈಗಾರಿಕೆಗಳ ತಪಾಸಣೆಗೆ 14 ತಂಡ ರಚನೆ
