Chamarajanagar
ಮುಖ್ಯಮಂತ್ರಿ ರೈತ ವಿದ್ಯಾನಿಧಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 29 ಕೊನೆದಿನ

ಯಳಂದೂರು : 2023-24 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮತ್ತು ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು ಮುಖ್ಯಮಂತ್ರಿ ರೈತವಿದ್ಯಾನಿಧಿ ಹಾಗೂ ಭೂ ರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಾಗುವುದಿಲ್ಲ.
ಸದರಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP) ವಿದ್ಯಾರ್ಥಿಗಳ ಲಾಗಿನ್ ನಲ್ಲಿ ಅವಕಾಶ ಕಲ್ಪಿಸಲಾಗಿದ್ದು ದಿನಾಂಕ 29-2-24 ರೊಳಗೆ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಎನ್. ಜಿ. ಅಮೃತೇಶ್ವರ, ಸಹಾಯಕ ಕೃಷಿ ನಿರ್ದೇಶಕರು, ಯಳಂದೂರು ಪ್ರಕಟಣೆಯಲ್ಲಿ ಕೋರಿದ್ದಾರೆ.
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
Chamarajanagar
ಸಾಮಾಜಿಕ ಭದ್ರತಾ ಯೋಜನೆಗಳ ಮೆಗಾ ಲಾಗಿನ್ ಕಾರ್ಯಕ್ರಮ

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಲೀಡ್ ಬ್ಯಾಂಕ್ ಚಾಮರಾಜನಗರ ಮತ್ತು ಧಾನ್ ಫೌಂಡೇಶನ್ ಸಂಸ್ಥೆಯು ಹಾಗೂ ಭೀಮನಬೀಡು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಭೀಮನಬೀಡು ಗ್ರಾಮದ
ವಿವಿಧ ಬ್ಯಾಂಕ್ ಖಾತೆದಾರೆರೆಲ್ಲರಿಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಮತ್ತು ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮ್ ಯೋಜನೆ ಎಂಬ ಎರಡು ಸಾಮಾಜಿಕ ಭದ್ರತಾ ಯೋಜನೆಗಳಿಗೆ ಗ್ರಾಮದ ಒಟ್ಟು ಪಿ ಎಮ್ ಎಸ್ ಬಿ ವೈ ಯೋಜನೆಗೆ 271 ಖಾತೆದಾರರು ಹಾಗೂ ಪಿ ಎಂ ಜೆ ಜೆ ಬಿ ವೈ ಯೋಜನೆಗೆ 200 ಬ್ಯಾಂಕ್ ಖಾತೆದಾರರನ್ನು ಸೇರ್ಪಡೆ ಗೊಳಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಭೋಜೇಶ್ ರವರು ತಮ್ಮ ಗ್ರಾಮದ ಜನರಿಗೆ ಅರ್ಜಿಗಳನ್ನು ಬರೆವುದರ ಮೂಲಕ ನೋಂದಣಿ ಮಾಡಿಸಿದರು.
ಈ ಸಂದರ್ಭದಲ್ಲಿ
ಮಹದೇವೇಗೌಡ
ಧಾನ್ ಫೌಂಡೇಶನ್ ಸಿ ಎಫ್ ಎಲ್ ಗೋವಿಂದರಾಜು
ಆರ್ಥಿಕ ಸಹಾಯಕರು ವಸಂತ ಜ್ಯೋತಿ ಮತ್ತು ಮಮತಾ
ಪಂಚಾಯಿತಿ ಸದಸ್ಯರು ಸ್ವಾಮಿ. ಮತ್ತು ಸಿಬ್ಬಂದಿಗಳು ಗ್ರಾಮಸ್ಥರು ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು
Chamarajanagar
ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12 ರಲ್ಲಿ ಕಾಂಗ್ರೆಸ್ 11 ರಲ್ಲಿ ಕ್ಷೇತ್ರದಲ್ಲಿ ಬಿಜೆಪಿ 1 ರಲ್ಲಿ ಗೆಲುವು ಸಾಧಿಸಿದೆ
ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯೋರ್ವ ಗೆಲುವು ಸಾಧಿಸಿದ್ದಾರೆ. ಸಹಕಾರ ಸಂಘದ ಅಧಿಕಾರ ನಡೆಸಿದ್ದ ಬಿಜೆಪಿಗೆ ಅಧಿಕಾರ ಕಳೆದುಕೊಂಡು ಮುಖಭಂಗ ಅನುಭವಿಸಿದೆ.
ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ
ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಶೇಖರ ಪುಟ್ಟಸ್ವಾಮಿ ಬಸಪ್ಪ ದೇವರು ಸದಾಶಿವಪ್ಪ ಹಿಂದುಳಿದ ವರ್ಗ (ಎ) ಕ್ಷೇತ್ರದಿಂದ ರಾಮೇಗೌಡ, ಹಿಂದುಳಿದ ವರ್ಗ (ಬಿ) ಕ್ಷೇತ್ರದಿಂದ ಜಿ. ಮಹೇಶ್ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಮಕೃಷ್ಣಯ್ಯ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಹೊಣಕಾರನಾಯಕ, ಮಹಿಳಾ ಮೀಸಲು ಕ್ಷೇತ್ರದಿಂದ ಎಸ್. ರತ್ನಮ್ಮ, ಶಿವಮ್ಮ ಗೆಲುವು ಸಾಧಿಸಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎಂ. ಮಹದೇವಸ್ವಾಮಿ 90 ಮತ ಪಡೆದು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಗುರುಮೂರ್ತಿಯನ್ನು 63 ಮತಗಳ ಅಂತರದಿಂದ ಸೋಲಿಸಿ ಭರ್ಜರಿ ಕೆಎ ಮಹಾದೇವಸ್ವಾಮಿ ಗೆಲುವು ಸಾಧಿಸಿದ್ದಾರೆ.
*ಬಿಜೆಪಿಯ ಅಭ್ಯರ್ಥಿ ಗೆಲುವು*
ಕೋಟೆಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭೋಗಯ್ಯನ ಹುಂಡಿಯ ಬಿಎನ್ ಗಣೇಶ್ ರವರು ಜಯಶೀಲರಾಗಿದ್ದಾರೆ
*.*ತಮ್ಮ ಮತ ಹಾಕದೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ***
ಚುನಾವಣೆಯಲ್ಲಿ ಒಂದು ಮತಕ್ಕೆ ಅದರದೇ ಆದ ಮಹತ್ವವಿದೆ. ವಿಧಾನಸಭೆ ಚುನಾವಣೆಯಲ್ಲಿ 1 ಮತದಿಂದ ಸೋತ ಸಾಕಷ್ಟು ಉದಾಹರಣೆಗಳಿವೆ ಆದರೆ, ಶುಕ್ರವಾರ ನಡೆದ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸದಾಶಿವಪ್ಪ ಶಬರಿ ಮಲೆಗೆ ಯಾತ್ರೆಗೆ ಹೋಗಿದ್ದರು. ಶುಕ್ರವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆ ತನಕ ಮತದಾನ ನಡೆದಿದೆ. ತನ್ನ ಮತ ಹಾಕಿಕೊಳ್ಳದ ಸದಾಶಿವಪ್ಪ 165 ಮತ ಪಡೆದು ಗೆಲುವು ಸಾಧಿಸಿದ್ದರೆ
ಈ ಸಂದರ್ಭದಲ್ಲಿ
ಬೆಟ್ಟದಮಾದಹಳ್ಳಿ ಮಹದೇವಸ್ವಾಮಿ, ಎಪಿಎಂಸಿ ಆರ್.ಎಸ್.ನಾಗರಾಜು, ಸಾಹುಕಾರ್ ಬಿ.ಪಿ. ನಂದೀಶ್, ಮಲ್ಲೇಶ್, ಗೌಡಿಕೆ ಬಸವರಾಜಪ್ಪ, ಗೌಡಿಕೆ ಕೆಪಿ ಕುಮಾರ್ ಕುರುಬರಹುಂಡಿ ಕೋಟೆ ಕೆರೆಯ ರಂಗನಾಥ, ಶಂಕರನಾಯಕ ಸಿದ್ದು ಶಿವಲಿಂಗನಾಯಕ, ಬೆಟ್ಟದಮಾದಹಳ್ಳಿ ಮಲ್ಲು ಕುರುಬರಹುಂಡಿ ಚೇರ್ಮನ್ ಮಹೇಶ್, ಶಿವಲಿಂಗಪ್ಪ ಕೆಂಚಪ್ಪ,
ಚಿಕ್ಕಮಾದಪ್ಪ ಮಾದಪ್ಪ ಬೇಗೂರು ಜಗದೀಶ್ ನೂತನ ನಿರ್ದೇಶಕರು ಹಾಗೂ ಕೋಟೆಕೆರೆ, ಭೋಗಯ್ಯನಹುಂಡಿ, ಕುರುಬರಹುಂಡಿ, ಬೆಟ್ಟದಮಾದಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು…
ಗೆದ್ದ ಅಭ್ಯರ್ಥಿಗಳಿಗೆ ಶಾಸಕರಿಂದ ಶುಭ ಹಾರೈಕೆ**
ಕೋಟೆಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಗುಂಡ್ಲುಪೇಟೆ ತಾಲೂಕಿನ ಶಾಸಕರಾದ ಎಚ್ ಎಂ ಗಣೇಶ್ ಪ್ರಸಾದ್ ಅವರು ಹಾಗೂ ಜಿಲ್ಲಾ ಸಹಕಾರ ಸಂಘದ ಒಕ್ಕೂಟದ ಅಧ್ಯಕ್ಷರಾದ ಎಚ್ ಎಸ್ ನಂಜುಂಡ ಪ್ರಸಾದ್ ರವರು ಶುಭಾಶಯ ಕೋರಿದರು..
*ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ **
ಕೋಟೆಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಹಾಗೂ ಪಟಾಕಿ ಸಿಡಿಸುವುದರ ಮೂಲಕ ಸಂಭ್ರಮವನ್ನು ಆಚರಣೆ ಮಾಡಿದರು…
*ಕುರುಬರಹುಂಡಿ ಬಿಜೆಪಿಗರಿಗೆ ತೀವ್ರ ಮುಖಭಂಗ ***
ಕುರಬರಹುಂಡಿ ಗ್ರಾಮದ ಕೆಪಿ ಶಿವರಾಜ್ ಹಾಗೂ ಸಂಗಡಿಗರಿಗೆ ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯ ಸೋಲು ತೀವ್ರ ಮುಜುಗರ ಕೀಡಾಗಿದೆಮಾಡಿದೆ
-
State20 hours ago
ಬೆಂಗಳೂರು ನಮ್ಮ ಮೆಟ್ರೋ ನೇಮಕಾತಿ : ಟ್ರೈನ್ ಆಪರೇಟರ್ ಹುದ್ದೆಗಳ ಭರ್ತಿ
-
Kodagu19 hours ago
ಬಲ್ಲಮಾವಟಿ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಮಗುವಿಗೆ ಜನ್ಮ ನೀಡಿ ಮಹಿಳೆ ನಾಪತ್ತೆ – 112ಪೊಲೀಸರಿಂದ ಮಗುವಿನ ರಕ್ಷಣೆ
-
Chamarajanagar24 hours ago
ಸತತ ನಾಲ್ಕನೇ ಬಾರಿ ಅಧ್ಯಕ್ಷರಾಗಿ ಎಂ.ಪಿ.ಸುನೀಲ್ ಆಯ್ಕೆ
-
National - International20 hours ago
ಕೆನಡಾ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ಸ್ವೀಕಾರ
-
Kodagu21 hours ago
ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಡಾ.ಮಂತರ್ ಗೌಡ
-
State21 hours ago
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ: ಬಸವರಾಜ ಬೊಮ್ಮಾಯಿ
-
Hassan23 hours ago
ಗಮನಸೆಳೆದ ತಿಂಗಳ ಮಾಮನ ತೇರು: ಚಂದ್ರನಿಗೆ ಮದುವೆ ಮಾಡಿದ ನಿವಾಸಿಗಳು
-
Mysore23 hours ago
ನನಗೆ ಸಿಎಂ ಹುದ್ದೆ ಕೊಟ್ಟರೆ ನಿರ್ವಹಿಸುವೆ: ಶಾಸಕ ತನ್ವೀರ್ ಸೇಠ್