Connect with us

Mandya

ರಾಜ್ಯಕ್ಕೇ ಮೂರನೇ ಟಾಪರ್ ಆದ ಮಂಡ್ಯ ರೈತನ ಮಗ ಹಾಸ್ಟೆಲ್ ವಿದ್ಯಾರ್ಥಿ ನವನೀತ್

Published

on

ಮಂಡ್ಯ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯು 19ನೇ ಸ್ಥಾನಕ್ಕೆ ಕುಸಿದಿದ್ದರೂ, ಜಿಲ್ಲೆಯ ರೈತನ ಮಗ ಹಾಸ್ಟಲ್ ವಿದ್ಯಾರ್ಥಿ ರಾಜ್ಯಕ್ಕೆ ಮೂರನೇ ಟಾಪರ್ ಆಗಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.

ಮಂಡ್ಯ ತಾಲೂಕಿನ ಕನ್ನಲಿ ಗ್ರಾಮದ ಕೆ.ಸಿ.ನವನೀತ್ 625ಕ್ಕೆ 623 ಅಂಕಗಳನ್ನು ಪಡೆದು ರಾಜ್ಯದಲ್ಲಿ ಮೂರನೇ ಟಾಪರ್ ಆಗಿ ಹೊರಹೊಮ್ಮಿದ್ದಾನೆ.

ನವನೀತ್ ತಂದೆ ಚನ್ನೇಗೌಡ ರೈತರಾಗಿದ್ದು, ತಾಯಿ ವೆಂಕಟಲಕ್ಷ್ಮಮ್ಮ ಟೈಲರಿಂಗ್ ವೃತ್ತಿ ಮಾಡುತ್ತಿದ್ದಾರೆ. ತಮ್ಮ ಬದುಕಿನ ಕಷ್ಟದ ನಡುವೆಯೂ ಮಗನಿಗೆ ಬೆಂಬಲವಾಗಿ ನಿಂತಿರುವ ಇವರು, ಆರನೇ ತರಗತಿಯಿಂದ ಎಸ್ಸೆಸ್ಸೆಲ್ಸಿವರೆಗೆ ತಾಲೂಕಿನ ತೂಬನಕೆರೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.

ಕನ್ನಡದಲ್ಲಿ 125, ಇಂಗ್ಲೀಷ್ ಮತ್ತು ಹಿಂದಿ, ಗಣಿತದಲ್ಲಿ 100 ಅಂಕ, ಸಮಾಜ ವಿಜ್ಞಾನ ಹಾಗೂ ವಿಜ್ಞಾನದಲ್ಲಿ ತಲಾ 99 ಅಂಕ ಗಳಿಸಿ ಇತರ ವಿದ್ಯಾರ್ಥಿಗಳಿಗೆ ಮಾದರಿಯೆನಿಸಿದ್ದಾನೆ.

ಪ್ರಸ್ತುತ ವೈದ್ಯನಾಗಬೇಕೆಂಬ ಗುರಿಯನ್ನು ಹೊಂದಿರುವುದಾಗಿ ತಿಳಿಸಿರುವ ನವನೀತ್‌ನ ಭವಿಷ್ಯ ಉಜ್ವಲವಾಗಿರಲಿ ಎಂದು ಜಿಲ್ಲೆಯ ಜನತೆ ಶೀರ್ವಧಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Mandya

ಹುಟ್ಟಿನಿಂದಲೇ ಬರುವ ಖಾಯಿಲೆಗಳನ್ನು ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಿ: ಕೆ.ಆರ್.‌ನಂದಿನಿ 

Published

on

ಮಂಡ್ಯ: ಅನುವಂಶಿಕ ಅಥವಾ ಹುಟ್ಟಿನಿಂದಲೇ ಬರುವ ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡಲು ಅಗತ್ಯ ಕ್ರಮವಹಿಸುವಂತೆ ಆರ್‌ಬಿಎಸ್‌ಕೆ ಕಾರ್ಯಕ್ರಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಂಡ್ಯ ಜಿ.ಪಂ. ಸಿಇಓ ಕೆ.ಆರ್.‌ನಂದಿನಿ ಸೂಚಿಸಿದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಅವರು, 0-5 ಮತ್ತು 6-18 ವಯೋಮಾನದ ಮಕ್ಕಳನ್ನು ಕಾಲ ಕಾಲಕ್ಕೆ ತಪಾಸಣೆಗೊಳಪಡಿಸಿ ಯಾವುದಾದರೂ ಖಾಯಿಲೆಗಳು ಇವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಂಡು ಕಾಯಿಲೆಗೆ ಅನುಗುಣವಾಗಿ ಚಿಕಿತ್ಸೆ ನೀಡಬೇಕೆಂದು ಸೂಚಿಸಿದರು.
ಜಿಲ್ಲಾ ಇಐಸಿ ಕೇಂದ್ರಕ್ಕೆ ಭೇಟಿ ನೀಡಿರುವ ಮಕ್ಕಳ ಪೋಷಕರೊಂದಿಗೆ ಸಂವಾದ ನಡೆಸಿ, ಸೂಕ್ತ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಹಾಗೂ ಕೇಂದ್ರದಲ್ಲಿ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.  ತೀವ್ರತರವಾದ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳನ್ನು ಒಳರೋಗಿಯಾಗಿ ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಡಿಸ್ಚಾರ್ಜ್‌ ನಂತರವು ನಿರಂತರ ಅನುಸರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ನೇತ್ರ ಸಹಾಯಕರು ರಾಜೀನಾಮೆ ನೀಡಿದ್ದು, ನೋಟೀಸ್‌ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ನೋಟೀಸ್‌ ಅವಧಿ ಪೂರ್ಣಗೊಳ್ಳುವ ಮುನ್ನವೇ ಹೊಸ ನೇತ್ರ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಲು ಸೂಚಿಸಿದರು.
ಪಿಸಿಯೋ ಥೆರಪಿ ವಿಭಾಗದಲ್ಲಿ ಅಧಿಕ ಕಾರ್ಯಭಾರ ಇರುವುದರಿಂದ ಕುಷ್ಠರೋಗ ನಿರ್ಮೂಲನಾ ವಿಭಾಗದಲ್ಲಿನ ಪಿಸಿಯೋ ಥೆರಪಿ ಸಹಾಯಕರನ್ನು ಹೆಚ್ಚುವರಿಯಾಗಿ ಡಿ ಇ ಐ ಸಿ ವಿಭಾಗಕ್ಕೆ ನಿಯೋಜಿಸುವಂತೆ ಸೂಚಿಸಿದರು.
ಶ್ರವಣ ದೋಷ ಪತ್ತೆ ಹಚ್ಚಲು ಬೆರಾ ತಂತ್ರಜ್ಞಾನ ಹೊಂದಿರುವ ಯಂತ್ರೋಪಕರಣವನ್ನು ಖರೀದಿಸುವ ಸಂಬಂಧ ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆಯ ಅಧಿಕಾರಿಯವರೊಂದಿಗೆ ಚರ್ಚಿಸಿ ಸರಬರಾಜು ಮಾಡಿಸಿಕೊಳ್ಳಲು ತಿಳಿಸಿದರು. ಕಳೆದ ಸಾಲಿನಲ್ಲಿ ಸದರಿ ಯಂತ್ರೋಪಕರಣ ಖರೀದಿಗೆ ನಿಗಧಿಗೊಳಿಸಲಾಗಿದ್ದ ಅನುದಾನ ವ್ಯಪಗತವಾಗಿತ್ತು. ಪ್ರಸಕ್ತ ಸಾಲಿನಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮವಹಿಸಲು ತಿಳಿಸಿದರು.
ಡಿ ಇ ಐ ಸಿ ಯಲ್ಲಿ ಇರುವ ಸೌಲಭ್ಯಗಳು ಮತ್ತು ಕೇಂದ್ರದ ಕಾರ್ಯನಿರ್ವಹಣೆಯ ಬಗ್ಗೆ ಹಾಗೂ ಫಲಾನುಭವಿಗಳಿಂದ ಅಭಿಪ್ರಾಯ ಸಂಗ್ರಹದ ವಿಡಿಯೋ ಚಿತ್ರೀಕರಣ ಮಾಡಿ, ಪ್ರಚಾರ ಮಾಡಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಡಾ. ಮಂಜುಳಾ, ಆರ್. ಸಿ. ಹೆಚ್ ಡಾ. ಅಶ್ವತ್, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಸೋಮಶೇಖರ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Continue Reading

Mandya

ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ

Published

on

ಮಂಡ್ಯ : ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಅಪೌಷ್ಠಿಕ ಮಕ್ಕಳನ್ನು ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ ಮಾಡುವ ಮೂಲಕ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಂತೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು.

ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿನ ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಕರೆತರಲು ಮಕ್ಕಳ ತಾಯಂದಿರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಈವರೆಗೆ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಎಷ್ಟು ಮಕ್ಕಳು ದಾಖಲಾಗಿದ್ದಾರೆ, ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಹೊರಬಂದಿದ್ದಾರೆ ಎಂಬುದರ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದರು. ಮುಂದಿನ ಸಭೆಯಲ್ಲಿ ಅಂಕಿ- ಅಂಶಗಳೊಂದಿಗೆ ವರದಿ ನೀಡಬೇಕು. ಮಕ್ಕಳು ಹಾಗೂ ತಾಯಿಂದಿರಿಗೆ 14 ದಿನ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದು ತಿಳಿಸಿದರು.

ಪೌಷ್ಠಿಕಾಂಶ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳಿಗೆ ಹಾಗೂ ತಾಯಂದಿರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರಿಂದ ವ್ಯಾಪಕ ಅರಿವು ಮೂಡಿಸಲು ಅಗತ್ಯ ಕ್ರಮವಹಿಸುವಂತೆ ಸಿಇಓ ಅವರು ಸೂಚಿಸಿದರು.

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾಮ್ (ವಿಪರೀತ ಕಡಿಮೆ ತೂಕ ಮಕ್ಕಳು) ಮತ್ತು ಮ್ಯಾಮ್ (ಸಾಧಾರಣ ತೂಕದ ಮಕ್ಕಳು) ಮಕ್ಕಳನ್ನು ಗುರುತಿಸಿ ಮಕ್ಕಳನ್ನು ಎನ್ ಆರ್ ಸಿ ಕೇಂದ್ರಕ್ಕೆ ಕರೆತರುವಂತಹ ಜವಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಆಯಾ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಚಿಸಬೇಕು ಎಂದು ತಿಳಿಸಿದರು.

ಅಪೌಷ್ಠಿಕ ಮಕ್ಕಳನ್ನು ಸ್ಕ್ರೀನಿಂಗ್ ಮಾಡಿ ಸ್ಯಾಮ್ ಹಾಗೂ ಮ್ಯಾಮ್ ಗುರುತಿಸಲಾಗುತ್ತಿದೆ ಆದರೆ ತಾಯಿ ಹಾಗೂ ಮಕ್ಕಳನ್ನು ಒಪ್ಪಿಸಿ ಎನ್ ಆರ್ ಸಿ ಗೆ ಕರೆತರಲು ಕಷ್ಟವಾಗುತ್ತಿದೆ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲರು ಒಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.

ಪ್ರತಿ ಸೋಮವಾರ ಕ್ಷೇತ್ರ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ತಮ್ಮ ವ್ಯಾಪ್ತಿಯಲ್ಲಿ ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಹಾಗೂ ಎಷ್ಟು ಮಕ್ಕಳನ್ನು ಎನ್‌ ಆರ್‌ ಸಿ ಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಪ್ರಸ್ತುತಪಡಿಸಲು ಕೋರಿದರು.

ಎನ್‌ ಆರ್‌ ಸಿ ಯಲ್ಲಿ ದಾಖಲಾಗಿರುವ ಸ್ಯಾಮ್ ಮತ್ತು ಮ್ಯಾಮ್ ಮಕ್ಕಳ ತಾಯಿಂದರ ಜೊತೆ ಮಾತನಾಡಿದ ಅವರು ಮಕ್ಕಳಿಗೆ ಮನೆಯಲ್ಲಿ ನೀಡುತ್ತಿರುವ ಪೌಷ್ಠಿಕ ಆಹಾರದ ಬಗ್ಗೆ ತಾಯಿಂದಿರಿಂದ ಮಾಹಿತಿ ಪಡೆದರು. ಅಂಗನವಾಡಿ ಕಾರ್ಯಕರ್ತೆಯರು ನೀಡಿದ ಸಲಹೆಯ ಮೇರೆಗೆ ಎನ್ ಆರ್ ಸಿ ಕೇಂದ್ರಕ್ಕೆ ಬಂದಿರುವುದಾಗಿ ತಾಯಿಂದಿರು ಮಾಹಿತಿ ನೀಡಿದರು.

ಇದೇ ವೇಳೆ ಮಿಮ್ಸ್ ಹೆಚ್.ಒ.ಡಿ ಡಾ. ಶ್ರೀಧರ್, ಎನ್‌ ಆರ್‌ ಸಿ ನೊಡೆಲ್ ಅಧಿಕಾರಿ ಡಾ. ಮಂಜುಳಾ, ಆರ್. ಸಿ. ಹೆಚ್ ಡಾ. ಅಶ್ವತ್, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಸೋಮಶೇಖರ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Continue Reading

Mandya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿ.ಪಂ. ಸಿಇಓ ಭೇಟಿ

Published

on

ಮಂಡ್ಯ: ಕೃಷ್ಣರಾಜಪೇಟೆ ತಾಲೂಕಿನ ರಂಗನಾಥ ಪುರ ಕ್ರಾಸ್ ಗ್ರಾಮ ಪಂಚಾಯಿತಿಯ ಆದಿಹಳ್ಳಿ ಗ್ರಾಮದಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಸತಿ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿ/ವಿದ್ಯಾರ್ಥಿನಿಯರ ಕೊಠಡಿಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ ಹಾಗೂ ಕುಡಿಯುವ ನೀರು, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.

ದ್ವಿತೀಯ ಪಿ.ಯು.ಸಿ ವಿಜ್ಞಾನ ಪ್ರಯೋಗಾಲಯಕ್ಕೆ ಭೇಟಿ ನೀಡಿ ಜೀವಕೋಶವನ್ನು ಸೂಕ್ಷ್ಮದರ್ಶಕ ಯಂತ್ರದ ಮೂಲಕ ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿರುವುದನ್ನು ವೀಕ್ಷಿಸಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಶಾಲೆಯಲ್ಲಿನ ಗಣಕಯಂತ್ರ ಕೊಠಡಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಭವಿಷ್ಯದಲ್ಲಿ ಯಾವ ರೀತಿಯ ಸೇವೆಗೆ ಸೇರಬೇಕು ಎಂಬ ಕನಸನ್ನು ಹೊಂದಿದ್ದೀರಿ ಎಂಬ ಬಗ್ಗೆ ಮಾಹಿತಿ ಪಡೆದು ಕನಸು ಸಾಕಾರಗೊಳಿಸಿಕೊಳ್ಳಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರಿಗೆ ಸಿ.ಬಿ.ಎಸ್.ಇ ಪಠ್ಯಕ್ರಮ ಇರುವ ಶಾಲೆ ಇದಾಗಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸುವಂತೆ ಪ್ರೋತ್ಸಾಹಿಸಿದರು.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗೀ ನಿಮ್ಮ ಜೀವನದ ಗುರಿ ತಲುಪಲು ಹಾಗೂ ನಿಮ್ಮ ಕನಸನ್ನು ಸಕಾರಗೊಳಿಸಿಕೊಳ್ಳಲು ವಿದ್ಯಾಬ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಂಡ್ಯ ಉಪವಿಭಾಗದ ತಾಲ್ಲೂಕು ವಿಸ್ತರಣಾಧಿಕಾರಿ ರುದ್ರೇಶ್, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.

Continue Reading

Trending

error: Content is protected !!