Connect with us

Mysore

ರಾಮೇಶ್ವರ ಕಫೆ ಸ್ಪೋಟ ಪ್ರಕರಣ, ಆರೋಪಿ ಪತ್ತೆಗೆ ತನಿಖೆ ಚುರುಕು: ಸಿಎಂ ಸಿದ್ದರಾಮಯ್ಯ

Published

on

ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ

ಮೈಸೂರು, ಮಾರ್ಚ್ 02: ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಸ್ಫೋಟವಾಗಿರುವುದು ನಿಜ. ಆರೋಪಿ ಮಾಸ್ಕ್ ಮತ್ತು ಟೋಪಿ ಧರಿಸಿ ಬಸ್ಸಿನಲ್ಲಿ ಬಂದು ತಿಂಡಿ ತಿಂದು ನಂತರ ಸ್ಫೋಟಕವುಳ್ಳ ಬ್ಯಾಗ್ ಇಟ್ಟು ತೆರಳಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪಮುಖ್ಯಮಂತ್ರಿ , ಗೃಹ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ನಾನೂ ಕೂಡ ಸ್ಥಳಕ್ಕೆ ತೆರಳಲಿದ್ದೇನೆ ಎಂದರು.

ಮಂಗಳೂರು ಕುಕ್ಕರ್ ಬಾಂಬ್ ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತನಿಖೆ ನಡೆಯುತ್ತಿದೆ ಎಂದರು.

ರಾಜಕೀಯ ಹೇಳಿಕೆ
ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ ಎಂದು ಪ್ರಶ್ನಿಸಿದರು.

ತನಿಖೆ ನಡೆಯುತ್ತಿದೆ
ಸ್ಪೋಟದ ಘಟನೆಯನ್ನು ನಾನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದರು. ಭಯೋತ್ಪಾದಕ ಕೃತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿ ತನಿಖೆ ಇನ್ನೂ ನಡೆಯುತ್ತಿದೆ ಎಂದರು.

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ
ವಿಧಾನ ಸೌಧದ ಪ್ರಕರಣ ಕುರಿತು ಎಫ್.ಎಸ್.ಎಲ್ ವರದಿಯನ್ನು ಸರ್ಕಾರ ಬಹಿರಂಗ ಮಾಡುತ್ತಿಲ್ಲ. ಸತ್ಯವನ್ನು ತಿರುಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Mysore

ನಂಜನಗೂಡಿನಲ್ಲಿ ಹನುಮ ಜಯಂತಿ ಅದ್ದೂರಿ ಆಚರಣೆ

Published

on

 

ನಂಜನಗೂಡಿನಲ್ಲಿ ಹನುಮ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ನಡೆಸಲಾಯಿತು.

ಮೊದಲಿಗೆ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್, ಹರ್ಷವರ್ಧನ್, ಡಾ. ಶ್ರೀಕಾಂತ್ ಇವರುಗಳು ಆಂಜನೇಯ ಸ್ವಾಮಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ಕೊಟ್ಟರು.

ಇಂದು ಶನಿವಾರ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗಯಿಂದ ಹನುಮಾನ್ ಜಯಂತಿಯನ್ನು ಏರ್ಪಡಿಸಲಾಯಿತು.

ಮೆರವಣಿಗೆ ಮೂರು ಗಂಟೆಗೆ ಶ್ರೀ ಕಂಠೇಶ್ವರ ಸ್ವಾಮಿ ದೇವಸ್ಥಾನದಿಂದ ಪ್ರಾರಂಭವಾಗಿ ನಗರದ ಆರ್.ಪಿ. ರಸ್ತೆದಿಂದ ಎಂ.ಜಿ. ರಸ್ತೆ ಮೂಲಕ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯವರಗೆ ಮೆರವಣಿಗೆ ಅಂತ್ಯಗೊಳ್ಳಲಿದೆ.

ಮೆರವಣಿಗೆಯಲ್ಲಿ ಕಲಾತಂಡಗಳ ಜೊತೆ ಶ್ರೀ ಆಂಜನೇಯ ಸ್ವಾಮಿ ವಿಗ್ರಹದ ಮೂಲಕ ಬೃಹತ್ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲಾಗಿದೆ.

ನಂಜನಗೂಡು ಮಹದೇವಸ್ವಾಮಿಪಟೇಲ್.

Continue Reading

Mysore

ಮೈಸೂರು ಶೂಟಿಂಗ್ ಕ್ಲಬ್‌ಗೆ 3 ಪದಕಗಳ ಗರಿ*

Published

on

ಎಂ.ಎಸ್.ಪುಣ್ಯಗೆ ಬೆಳ್ಳಿ, ವರ್ಷಿಣಿಗೆ ಕಂಚಿನ ಪದಕ

7 ಮಂದಿ ದಕ್ಷಿಣ ವಲಯಕ್ಕೆ ಆಯ್ಕೆ: ಪ್ಯಾರಶೂಟರ್ ದರ್ಶನ್‌ಕುಮಾರ್ ಸಾರಥ್ಯದಲ್ಲಿ ಸಾಧನೆ

ಮೈಸೂರು: ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ನಡೆಯುತ್ತಿರುವ 12ನೇ ಶೂಟಿಂಗ್ ಸ್ಪರ್ಧೆಯಲ್ಲಿ ಮೈಸೂರು ಶೂಟಿಂಗ್ ಕ್ಲಬ್ ಶೂಟರ್‌ಗಳು 3 ವೈಯುಕ್ತಿಕ ಪದಕಗಳನ್ನು ಮುಡಿಗೇರಿಸಿಕೊಂಡು ಕೀರ್ತಿ ತಂದಿದ್ದಾರೆ.

ಮೈಸೂರು ಕ್ಲಬ್‌ನ 6 ಶೂಟರ್‌ಗಳು ಪ್ರಥಮಬಾರಿಗೆ 177 ಮತ್ತು .22(50ಮೀ.ಫೈರ್ ಆಮ್ಸ್)ಪೀಪ್ ಸೈಟ್ ರೈಫಲ್ ಸ್ಪರ್ಧೆಯಲ್ಲಿ ಭಾಗವಹಿಸಿ ದಕ್ಷಿಣ ವಲಯಕ್ಕೆ ಆಯ್ಕೆಯಾಗಿದ್ದಾರೆ.

ಪುಣ್ಯಗೆ ಬೆಳ್ಳಿ ಪದಕ :
ಮೈಸೂರು ಶೂಟಿಂಗ್ ಕ್ಲಬ್‌ನಲ್ಲಿ ಕಳೆದ ಎರಡು ತಿಂಗಳಿಂದ ತರಬೇತಿ ಪಡೆಯುತ್ತಿದ್ದ ಜೆಎಸ್‌ಎಸ್ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮಂಡ್ಯದ ಎಂ.ಎಸ್.ಪುಣ್ಯ ಸ್ಪರ್ಧೆಯಲ್ಲಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗಳಿಸಿ ವಿಜೇತರಾಗಿದ್ದಾರೆ.

ವರ್ಷಿಣಿಗೆ ಕಂಚು:
ಮೈಸೂರಿನ ಪಿಯುಸಿ ವಿದ್ಯಾರ್ಥಿನಿ ಪಿ.ವರ್ಷಿಣಿ ಕಂಚಿನ ಪದಕ ಗಳಿಸಿ ಕೀರ್ತಿ ತಂದಿದ್ದಾರೆ. ಶೂಟರ್ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಹಾಸನದ ತನೈಚಂದ್ರ, ನಂದಿತಾ ರವಿಚಂದ್ರ, ಕಾವ್ಯ, ಬೆಂಗಳೂರಿನ ಚೇತನ ಓಬುಲಕ್ಷ್ಮಿ ಉತ್ತಮ ಪ್ರದರ್ಶನ ನೀಡಿ ದಕ್ಷಿಣ ವಲಯಕ್ಕೆ ಆಯ್ಕೆಯಾಗಿದ್ದಾರೆ.

ದಶನ್‌ಕುಮಾರ್ ಆಯ್ಕೆ: ಮೈಸೂರು ಶೂಟಿಂಗ್ ಕ್ಲಬ್ ಕೂಚ್ ಹಾಗೂ ರೈಫಲ್ ತರಬೇತುದಾರರಾದ ಬಿ.ಆರ್.ದರ್ಶನ್‌ಕುಮಾರ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ದಕ್ಷಿಣ ವಲಯಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರು ಶೂಟಿಂಗ್ ಕ್ಲಬ್ ಕೋಚ್ ಪ್ಯಾರ ಶೂಟರ್ ಬಿ.ಆರ್.ದರ್ಶನ್‌ಕುಮಾರ್ ಅವರಿಂದ ತರಬೇತಿ ಪಡೆದು ಮೈಸೂರು ವಿಭಾಗಕ್ಕೆ ಕೀರ್ತಿ ತಂದ ಕ್ಲಬ್‌ನ 7 ಶೂಟರ್‌ಗಳನ್ನು ರಾಷ್ಟಮಟ್ಟದ ಶೂಟರ್ ಕೋಚ್ ಹುಬ್ಬಳ್ಳಿಯ ರವಿಚಂದ್ರ ಬಾಳೆ ಹೊಸೂರು ಅಭಿನಂದಿಸಿದ್ದಾರೆ.

ಇತಿಹಾಸಲ್ಲೇ ಪ್ರಥಮ ಸಾಧನೆ
ವಿಕಲಚೇತನರಾದರೂ ಯುವಕರಿಗೆ ಸ್ಪೂರ್ತಿಯ ಸೆಲೆಯಾಗಿರುವ ಪ್ಯಾರ ಶೂಟರ್ ಬಿ.ಆರ್.ದರ್ಶನ್‌ಕುಮಾರ್ ರೈಫಲ್ ಶೂಟಿಂಗ್‌ನಲ್ಲಿ ಆಸಕ್ತಿ ಹೊಂದಿರುವ ಸಾಹಸಿಗಳಿಗೆ ಉತ್ತಮ ತರಬೇತಿ ನೀಡಿ ಕರ್ನಾಟಕ ಸ್ಟೇಟ್ ರೈಫಲ್ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಎಲ್ಲಾ ಸ್ಪರ್ಧಿಗಳನ್ನು ದಕ್ಷಿಣವಲಯಕ್ಕೆ ಆಯ್ಕೆಯಾಗುವಂತೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಮೈಸೂರು ವಿಭಾಗದಿಂದ ಹೆಚ್ಚು ಮಂದಿ ರಾಜ್ಯ ಹಾಗೂ ರಾಷ್ಟಮಟ್ಟಕ್ಕೆ ಸ್ಪರ್ಧಿಗಳನ್ನು ಕಳಿಸಿಕೊಡುವ ಕನಸು ಹೊತ್ತ ದರ್ಶನ್‌ಕುಮಾರ್ ಮೈಸೂರಿನಲ್ಲಿ ಹೈಟೆಕ್ ಶೂಟಿಂಗ್ ಕ್ಲಬ್ ತೆರೆಯುವ ಯೋಜನೆ ರೂಪಿಸಿದ್ದಾರೆ

.

Continue Reading

Mysore

ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷ

Published

on

*ಹೆಚ್.ಡಿ.ಕೋಟೆ*: ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷ. ಕೃಷ್ಣಪುರ ಗ್ರಾಮದ ಬಳಿ ಇರುವ ಅವರ ತೋಟದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಹಸುವನ್ನು ಅರ್ದಭಾಗ ತಿಂದು ಕೊಂದು ಹಾಕಿರುವ ಘಟನೆ ನಡೆದಿದೆ.

Continue Reading

Trending

error: Content is protected !!