Hassan
ಅ*ತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ, 10 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್
ಬೆಂಗಳೂರು: ಕೆ.ಆರ್.ನಗರದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 10 ಲಕ್ಷ ರೂ. ದಂಡ ವಿಧಿಸಿ ಹಾಗೂ ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆ.ಆರ್. ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಬಗ್ಗೆ ಸರ್ಕಾರಿ ಪರ ವಕೀಲರಾಗಿ ಎನ್. ಜಗದೀಶ್, ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ನಳಿನಿ ಮಾಯಾಗೌಡ ಅವರು ವಾದ ಪ್ರತಿವಾದ ಮಂಡಿಸಿದರು. ವಾದ ಪ್ರತಿವಾದದ ನಂತರ ನ್ಯಾ. ಸಂತೋಷ್ ಗಜಾನನ ಭಟ್ ಅವರ ಪೀಠ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ.
ದೋಷಿ ಎಂದು ತೀರ್ಪು ಹೊರಬೀಳುತ್ತಿದ್ದಂತೆ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್, ಹಾಸನ ಜಿಲ್ಲೆಗೆ ಸಾಕಷ್ಟು ಮಾಡಿದ್ದೇನೆ. ಚುನಾವಣೆಗೆ 6 ದಿನ ಮುಂಚಿತವಾಗಿ ಈ ವಿಡಿಯೋ ರಿಲೀಸ್ ಮಾಡಿದ್ದಾರೆ. ನಾನು ಮಹಿಳೆಯ ಅತ್ಯಾಚಾರ ಮಾಡಿದ್ದರೆ ಆಕೆಯ ಸಹೋದರಿ ನಮ್ಮ ಮನೇಲಿ ಕೆಲಸ ಮಾಡುತ್ತಾ ಇದ್ದಾರಾ? ಎಂದು ಕಣ್ಣೀರಿಟ್ಟರು. ಇದೆಲ್ಲಾ ಸಾಕಷ್ಟು ವರ್ಷಗಳ ಹಿಂದೆ ನಡೆದಿದೆ ಎಂದು ಹೇಳಿದ್ದಾರೆ. ವಿಡಿಯೋ ಬಂದ ಮೇಲೆ ಮಹಿಳೆ ಹೊರಗೆ ಬಂದು ದೂರು ನೀಡಿದ್ದಾಳೆ.

ನನ್ನ ಕುಟುಂಬವನ್ನೇ ನಾನು ಬಿಟ್ಟಂತೆ ಆಗಿಹೋಗಿದೆ. ಅಪ್ಪ – ಅಮ್ಮನನ್ನ 6 ತಿಂಗಳಿಂದ ನೋಡಿಲ್ಲ. ದೋಷಿ ಅಂತ ಹೇಳಿದ್ದೀರಿ, ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ. ಶಿಕ್ಷೆ ನೀಡುವಾಗ ನನ್ನ ಕುಟುಂಬವನ್ನ ಪರಿಗಣಿಸಿ ಅಂತ ನ್ಯಾಯಾಧೀಶರ ಎದುರು ಪ್ರಜ್ವಲ್ ಕಣ್ಣೀರಿಟ್ಟು ಬೇಡಿಕೊಂಡಿದ್ದರು.
ನಂಗೆ ಕುಟುಂಬ ಇದೆ, 6 ತಿಂಗಳಿಂದ ಅಪ್ಪ-ಅಮ್ಮನನ್ನ ಸರಿಯಾಗಿ ನೋಡಿಲ್ಲ. ಪ್ರತಿಬಾರಿಯೂ ಕೋರ್ಟ್‌ಗೆ ಬರ್ತಾ ಇದ್ದೀನಿ. ನನ್ನ ಕುಟುಂಬ ನನ್ನಿಂದ ಸಂಪೂರ್ಣ ದೂರವಾಗಿದೆ. ನಾನು ರಾಜಕೀಯವಾಗಿ ಬೇಗ ಬೆಳೆದಿದ್ದೇ ತಪ್ಪಾಯ್ತು. ಎಸ್‌ಐಟಿ ನಂಬರ್ ನೀಡಿದ್ದರೂ ಯಾರು ದೂರು ನೀಡಲಿಲ್ಲ. ನಾನು ಕಾಲೇಜಿನಲ್ಲಿ ಮೆರಿಟ್ ವಿದ್ಯಾರ್ಥಿ ಆಗಿದ್ದೆ. ನನ್ನನ್ನ ದುರುದ್ದೇಶದಿಂದ ಸಿಲುಕಿಸಿದ್ರು ಅಂತ ಗಳಗಳನೆ ಅತ್ತಿದ್ದರು.
ಪ್ರಜ್ವಲ್ ರೇವಣ್ಣ ಶಿಕ್ಷೆಯ ವಿವರ: ಯಾವ ಸೆಕ್ಷನ್ ಅಡಿ ಎಷ್ಟು ಶಿಕ್ಷೆ, ದಂಡ?
- ಐಪಿಸಿ ಸೆಕ್ಷನ್ 376 (2)(k) ಅಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ
- 376(2)(n) ಅಡಿ ಪದೇಪದೆ ಅತ್ಯಾಚಾರಕ್ಕೆ ಜೀವನಪರ್ಯಂತ ಜೈಲು, 5 ಲಕ್ಷ ರೂ. ದಂಡ
- ಐಪಿಸಿ ಸೆಕ್ಷನ್ 354(A) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
- ಐಪಿಸಿ ಸೆಕ್ಷನ್ 354 (B) ಅಡಿ 7 ವರ್ಷ ಸೆರೆವಾಸ, 50,000 ರೂಪಾಯಿ ದಂಡ
- ಐಪಿಸಿ ಸೆಕ್ಷನ್ 354 (c) ಅಡಿ 3 ವರ್ಷ ಸೆರೆವಾಸ, 25,000 ರೂಪಾಯಿ ದಂಡ
- ಸೆಕ್ಷನ್ 506 ಅಡಿ 2 ವರ್ಷ ಸೆರೆವಾಸ 10,000 ರೂ. ದಂಡ
- ಸೆಕ್ಷನ್ 201 ಅಡಿ 3 ವರ್ಷ ಸೆರೆವಾಸ 25,000 ರೂ. ದಂಡ
- ಐಟಿ ಕಾಯ್ದೆ ಸೆ.66(E) ಅಡಿ 3 ವರ್ಷ 25,000 ರೂ. ದಂಡ.
- ಪ್ರಜ್ವಲ್ ರೇವಣ್ಣಗೆ ಇಂದಿನಿಂದಲೇ ಶಿಕ್ಷೆ ಆರಂಭ, ಇಲ್ಲಿಯವರೆಗಿನ ಜೈಲುವಾಸ ಮೈನಸ್ ಆಗುವುದಿಲ್ಲ.
- ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗಿರಲಿಲ್ಲ, ಕೇವಲ ಬಾಡಿ ವಾರಂಟ್ ಮೇಲೆ ಪ್ರಜ್ವಲ್‌ನನ್ನು ವಶಕ್ಕೆ ಪಡೆಯಲಾಗಿತ್ತು.
ಏನಿದು ಪ್ರಕರಣ?
ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಆನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವಿಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.
ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿದ್ದ ಪೆನ್ ಡ್ರೈವ್‌ಗಳನ್ನ ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ. 31ರಂದು ಪ್ರಜ್ವಲ್ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದರು.
Hassan
ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭ
ಹಾಸನ: ಸರ್ವಗುಣ ಯೋಗಿ ಎನಿಸಿಕೊಂಡಿರುವ ರಾಷ್ಟ್ರಕವಿ ಕುವೆಂಪು ಅವರ ಬರಹವನ್ನು ಯುವಕರು ಓದುವ ಮೂಲಕ ಭಾರತೀಯ ಆಧ್ಯಾತಿಕ, ಸಾಂಸ್ಕೃತಿಕ ಪರಂಪರೆಯನ್ನು ಅರಿಯಬೇಕೆಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಸಲಹೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್, ಅಮೋಘ ಸುದ್ದಿ ವಾಹಿನಿ ಸಹಯೋಗದಲ್ಲಿ ಬೆಂಗಳೂರಿನ ಮನೋಜ್ಞ ನೃತ್ಯಕಲಾ ಅಕಾಡೆಮಿ ವತಿಯಿಂದ ನಗರದ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಹಮಿಕೊಂಡಿದ್ದ ಕಾಡಿನ ಕೊಳಲು ಕುವೆಂಪು ಗೀತೆಗಳ ನೃತ್ಯ ರೂಪಕ ಸಮಾರಂಭದಲ್ಲಿ ಮಾತನಾಡಿದರು.

ಕುವೆಂಪು ಅವರನ್ನು ಎಲ್ಲರಿಗೂ ಪರಿಚಯಿಸಬೇಕಿದೆ. ಸಾಂಸ್ಕೃತಿಕ, ಆಧ್ಯಾತಿಕವಾಗಿ ಭಾರತ ಸಾಕಷ್ಟು ಖ್ಯಾತಿ ಹೊಂದಿದೆ. ಪುರಾತನ ಪರಂಪರೆ ಬಗ್ಗೆ ವಿಶ್ವವೇ ಅಚ್ಚರಿ ವ್ಯಕ್ತಪಡಿಸುತ್ತದೆ. ಅಂತಹ ಶಕ್ತಿಯನ್ನು ಸಾಹಿತ್ಯದ ಮೂಲಕ ಪರಿಚಯಿಸಿಕೊಟ್ಟವರು ರಾಷ್ಟ್ರಕವಿ ಕುವೆಂಪು ಎಂದರು.
ಮನುಷ್ಯ ಚಿಂತನೆಗಲ್ಲಿ ಭಾವ ಹಾಗು ಅಭಾವ ಮುಖ್ಯವಾಗುತ್ತದೆ. ಯಾವುದನ್ನೇ ಆಗಲಿ ಭಾವದಿಂದ ನೋಡಬೇಕೆ ಹೊರತು ಅಭಾವದಿಂದ ಅಲ್ಲ. ಋಷಿಗಳಿಗೆ ನೋಡಿದ್ದೆಲ್ಲ ಭಾವವಾಗಿ ಕಾಣುತ್ತದೆ. ಆದ್ದರಿಂದಲೇ ಅವರು ಅಸಾಧ್ಯವಾದುದನ್ನು ಸಾಧಿಸಿದ್ದಾರೆಂದರು.
ಭಾವನೆಗಳು ಬದಲಾದರೆ ಮನುಷ್ಯರಾಗಲು ಸಾಧ್ಯವಿಲ್ಲ. ಮನುಷ್ಯ ಭಾವನೆಗಳನ್ನು ಹೊಂದಬೇಕು. ವ್ಯಕ್ತಿಯ ಚಿಂತನಾ ಲಹರಿ ಆಳಕ್ಕಿಳಿಯಬೇಕೆಂದರೆ ಕುವೆಂಪು ಸಾಹಿತ್ಯ ಓದಬೇಕು. ಮರಣ ಇಲ್ಲದ ವಸ್ತು ಎಂದರೆ ಪುಸ್ತಕ ಮಾತ್ರ. ಭಗವಂತ ಕೊಟ್ಟ ಸುಂದರ ಬದುಕನ್ನು ಸಾರ್ಥಕ ಮಾಡಿಕೊಳ್ಳಬೇಕು. ಸತ್ಕಾರ್ಯಗಳಲ್ಲಿ ನಮನ್ನು ನಾವು ತೊಡಗಿಸಿಕೊಳ್ಳಬೇಕೆಂದರು.

ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ, ಸಾಹಿತಿ ಪ್ರೊ. ಡಾ. ಜಯಪ್ರಕಾಶ್ ಗೌಡ ಅವರು ಮಾತನಾಡಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ನಾಡಿನ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ್ದಾರೆ. ಸಾಹಿತ್ಯ, ಆಧ್ಯಾತ ಹಾಗು ವೈಜ್ಞಾನಿಕತೆಗೆ ಪ್ರೋತ್ಸಾಹ ನೀಡಿದ್ದರೆಂದರು.
ಕುವೆಂಪು ಅವರನ್ನು ನೃತ್ಯದ ಮೂಲಕ ಅರಿಯಬೇಕೆಂದು ಹಾಸನದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ಪ್ರೌಢ ಶಾಲಾ ಹಂತದಿಂದಲೇ ನೃತ್ಯದ ಮೂಲಕ ಗಮನ ಸೆಳೆದ ಡಾ. ಮಾನಸಾ ಅವರು ಬಿಇ ಪದವಿ ಪಡೆದು ಪಿಹೆಚ್.ಡಿ. ಕೂಡ ಮಾಡಿದ್ದಾರೆ. ರಾಜ್ಯ ಮಾತ್ರವಲ್ಲದೆ ಅನೇಕ ಕಡೆ ನೃತ್ಯ ಕಾರ್ಯಕ್ರಮಗಳ ಮೂಲಕ ಕುವೆಂಪು ಅವರನ್ನು ರಾಷ್ಟ್ರಕ್ಕೆ ಪರಿಚಯಿಸುತ್ತಿದ್ದಾರೆಂದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜೆ.ಆರ್.ಕೆಂಚೇಗೌಡ, ಜಿಲ್ಲಾ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟ ಶಿವರಾಮೇಗೌಡ ಮಾತನಾಡಿದರು.

ವಿಜಯ ಸ್ಕೂಲ್‌ನ ತಾರಾ ಎಸ್. ಸ್ವಾಮಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಾಗೂರು ಕೃಷ್ಣೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ನಗರಸಭೆ ಮಾಜಿ ಅಧ್ಯಕ್ಷ ಡಾ. ಹೆಚ್.ಎಸ್.ಅನಿಲ್ ಕುಮಾರ್, ರೋಟರಿ ಕ್ಲಬ್ ಆಫ್ ಹಾಸನ್ ಟೈಗರ್ ಅಧ್ಯಕ್ಷ ನಿಶ್ಚಯ್ ಧನಪಾಲ್ ಜೈನ್, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ರಘು, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಕಲಗೂಡು ಮತ್ತಿತರರಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್.ಬಿ.ಮದನಗೌಡ ಸ್ವಾಗತಿಸಿದರು.
Hassan
ಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
ಬೇಲೂರು : ಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಲೂರು ತಾಲೂಕಿನಲ್ಲಿ ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಮೇಶ್ ಆತ್ಮಹತ್ಯೆ ಮಾಡಿಕೊಂಡ ರೈತ ಬೇಲೂರು ತಾಲೂಕಿನ ಹಳೇಬೀಡುಸೋ ಸಮೀಪದ ಗೋಣಿ ಸೋಮೇನಹಳ್ಳಿ ಗ್ರಾಮದ ರೈತ. ಕಳೆದ ಹತ್ತು ವರ್ಷಗಳ ಹಿಂದೆ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕುಗಳಲ್ಲಿ ಕೃಷಿಗಾಗಿ ಮಾಡಿ ಕೊಂಡಿದ್ದ ಸಾಲವನ್ನ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕಿನಲ್ಲಿ ಸಾಲ ಮಾಡಿ ಹಣದಿಂದ ಕೃಷಿ ಚಟುವಟಿಕೆ ಮಾಡಿದ್ದು ಅತಿವೃಷ್ಟಿ ಮತ್ತು ಅನಾವೃಷ್ಟಿಗಳ ನಡುವೆ, ಸರಿಯಾದ ಬೆಂಬಲ ಬೆಲೆ ಸಿಗದೇ ಹಿನ್ನೆಲೆ, ನಷ್ಟವನ್ನ ಅನುಭವಿಸಿತು ಬ್ಯಾಂಕ್ ಮತ್ತು ಕೈ ಸಾಲ ಸೇರಿಸುಮಾರು 20 ಲಕ್ಷದ ತನಕ ಸಾಲ ಮಾಡಿದ್ದ ಎನ್ನಲಾಗಿದೆ.

ಮನೆ ಕೆನರಾ ಬ್ಯಾಂಕ್ ಸಿಬ್ಬಂದಿಗಳು ಮನೆ ಜಪ್ತಿ ಮಾಡಲು ಬಂದಾಗ ತನಗಿದ್ದ ಜಮೀನನ್ನ ಮಾರಾಟ ಮಾಡಿ ಬಡ್ಡಿ ರಹಿತ ಸಾಲ ಪಾವತಿಸಿದ. ಅಲ್ಲದೆ ಕೈ ಸಾಲ ಮತ್ತು ಮತ್ತೊಂದು ಬ್ಯಾಂಕಿನಲ್ಲಿ ಸಾಲ ಪಡೆದಿದ್ದು, ಜಮೀನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಮುಂದೆ ಸಾಲ ತೀರಿಸಲು ಸಾಧ್ಯವಾಗುವುದಿಲ್ಲ ಎಂದು ಯೋಚಿಸಿ ಎಂದು ಬೆಳಗ್ಗೆ, ತನ್ನ ಜಮೀನಿನ ಪಕ್ಕದ ದಿನೇಶ್ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ತೇಗದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಹಳೇಬೀಡು ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಈ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
Hassan
ಅಸಹಾಯಕ ಮಹಿಳೆಗೆ ಧಮ್ಕಿ ಹಾಕಿದ ಎಎಸ್ಐ ದೇವರಾಜ್
ಅರಕಲಗೂಡು: ಪಟ್ಟಣದ ಬ್ರಾಹ್ಮಣ ಬೀದಿಯಲ್ಲಿ ವಾಸವಾಗಿರುವ ಅರ್ಪಿತ ಎಂಬುವವರು ಸಹಾಯಕ್ಕಾಗಿ 112 ಕರೆ ಮಾಡಿದರೆ ಸಮಯಕ್ಕೆ ಸರಿಯಾಗಿ ವಾಹನ ಬಾರದೇ ಇದ್ದರಿಂದ ಪೊಲೀಸ್ ಠಾಣೆಗೆ ಕರೆ ಮಾಡಿದ್ದರು. ಆಗ ಎಎಸ್ಐ ದೇವರಾಜ್ ಸ್ಥಳಕ್ಕೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಏನಿದು ಘಟನೆ?
ಅಸಹಾಯಕ ಅರ್ಪಿತಾ ಅವರ ಅತ್ತೆ ಭಾಗ್ಯಮ್ಮ, ಅತ್ತಿಗೆ ಗೀತಾ, ನಾದಿನಿ ಜ್ಯೋತಿ, ಬಾವ ಲೋಕೇಶ್ ಎಲ್ಲಾ ಸೇರಿ ಗಂಡ ಇಲ್ಲದ ವೇಳೆ ಅವರ ಮೇಲೆ ದಾಳಿ ಮಾಡಿದ್ದರು. ಅಲ್ಲದೇ ಮನೆಯ ಮಹಡಿಯ ಮೇಲೆ ವಾಸವಿದ್ದ ಅವರ ಮನೆಗೆ ಬೀಗ ಹಾಕಿ ಅವರನ್ನು ಮನೆ ಇಂದ ಹೊರ ಹಾಕುವ ಪ್ರಯತ್ನ ಮಾಡಿದ್ದರು.
ಅರ್ಪಿತಾ ಅವರಿಗೆ ಪ್ರೀತಿಸಿ 5 ವರ್ಷದ ಹಿಂದೆ ಮದುವೆ ಆಗಿತ್ತು. ಆದರೆ ಒಂದು ವರ್ಷದಿಂದ ಚೆನ್ನಾಗಿ ನೋಡಿಕೊಳ್ಳದೆ ಹೆಂಡತಿ ಇದ್ದರಿಂದ ಗಂಡನಿಂದ ದೂರ ಉಳಿದ್ದರು. ಇದೀಗ ಅರ್ಪಿತಾ ಅವರನ್ನು ಮನೆ ಖಾಲಿ ಮಾಡಿಸೋದಕ್ಕೆ ಅವರ ಅತ್ತೆ ಬಂದಿದ್ದಾರೆ.

ಈ ವೇಳೆ ಪೊಲೀಸರು ಆಕೆಯ ಸಹಾಯಕ್ಕೆ ಬಾರದೇ ಹಲ್ಲೆ ಮಾಡಿದವರ ಜೊತೆ ಸೇರಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಈ ಹಲ್ಲೆಗೊಳಗಾದ ಅಸಹಾಯಕ ಮಹಿಳೆ ದೂರು ತೆಗೆದುಕೊಳ್ಳಲು ಎಎಸ್ಐ ದೇವರಾಜ್ ನಿರಾಕರಿಸಿದ್ದಾರೆ. ಆ ಅಸಹಾಯಕ ಮಹಿಳೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ, ನ್ಯಾಯ ಸಿಗದೇ ಕಣ್ಣೀರು ಹಾಕಿಕೊಂಡು ತನ್ನ ಅಳಲನ್ನು ತೋಡಿಕೊಂಡು ಬೀದಿಗೆ ಬಿದ್ದಿದ್ದಾರೆ.

ಈ ಸಂತ್ರಸ್ಥೆಯೂ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Chamarajanagar13 hours agoನಾನಂಥವನಲ್ಲಾ ಎಂದ ನಂದಕುಮಮಾರ್: ಚಾಮರಾಜನಗರ ಹಿರಿಕಾಟಿ ಕ್ರಷರ್ ವಿವಾದಕ್ಕೆ ಸ್ಪಷ್ಟನೆ
-
Hassan11 hours agoಕೃಷಿ ಸಾಲವನ್ನು ತೀರಿಸಲಾಗದೆ ರೈತನೋರ್ವ ಆತ್ಮ*ತ್ಯೆ
-
Kodagu11 hours agoಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ : ಡಿವೈಎಸ್ಪಿ ಮಹೇಶ್ ಕುಮಾರ್
-
Uncategorized4 hours agoದಿ. ರಾಕೇಶ್ ಸಿದ್ದರಾಮಯ್ಯ ಸ್ಮರಣಾರ್ಥ ಕಾರ್ ರೇಸ್ : ಕುಚುಕು ಗೆಳೆಯ ನನ್ನ ನೆನೆದ ಸಂಸದ ಸುನಿಲ್ ಬೋಸ್
-
Kodagu4 hours agoಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ
-
Kodagu5 hours agoಮಂಗಳವಾರ ಬ್ಯಾಡಗೊಟ್ಟ ಪಂಚಾಯತ್ ನ ನೂತನ ಕಟ್ಟಡ ಉದ್ಬಾಟನೆ
-
Uncategorized5 hours agoಫೆ.11ರಂದು ನಾಪೋಕ್ಲುವಿನಲ್ಲಿ ಮಸ್ಜಿದು ತೌಹೀದ್ ನೂತನ ಮಸೀದಿ ಉದ್ಘಾಟನೆ ಹಾಗೂ ದಅವಾ ಸಮ್ಮೇಳನ
-
State5 hours agoಬೆಸ್ಕಾಂನಲ್ಲಿ 520 ಹುದ್ದೆಗಳಿಗೆ ನೇರ ನೇಮಕಾತಿ!
