Education
ಅಂಚೆ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ : ಆಕರ್ಷಕ ಸಂಬಳ
 
																								
												
												
											IPPB Recruitment 2025 : ಕೇಂದ್ರ ಸರ್ಕಾರಿ ಉದ್ಯೋಗಗಳಿಗಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಗೆ ಸಂಬಂದಿಸಿದ ಹುದ್ದೆಗಳ ವಿವರ, ಅರ್ಹತೆಗಳ ವಿವರ, ಸಂಬಳದ ವಿವರ, ವಯೋಮಿತಿ ವಿವರ, ಅರ್ಜಿ ಶುಲ್ಕ ಸೇರಿದಂತೆ ಇತ್ಯಾದಿ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ :
• ಡೆಪ್ಯೂಟಿ ಜನರಲ್ ಮ್ಯಾನೇಜರ್ – 01 ಹುದ್ದೆ
• ಚೀಪ್ ಆಪರೇಟಿಂಗ್ ಆಫೀಸರ್ – 01 ಹುದ್ದೆ
• ಚೀಪ್ HR ಆಫೀಸರ್ – 01 ಹುದ್ದೆ
• ಜನರಲ್ ಮ್ಯಾನೇಜರ್ – 01 ಹುದ್ದೆ
• ಚೀಫ್ ಕಾಂಪ್ಲೆಯನ್ಸ್ ಆಫೀಸರ್ – 01 ಹುದ್ದೆ

ಶೈಕ್ಷಣಿಕ ವಿದ್ಯಾರ್ಹತೆಗಳ ವಿವರ :
• ಡೆಪ್ಯೂಟಿ ಜೆನೆರಲ್ ಮ್ಯಾನೇಜರ್ ಹುದ್ದೆಗೆ ಸಿಎ ಮುಗಿಸಿರಬೇಕು.
• ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದಾದರೂ ಒಂದು ಪದವಿ ಮುಗಿಸಿರಬೇಕು.
• ಚೀಫ್ ಕಾಂಪ್ಲೆಯನ್ಸ್ ಆಫೀಸರ್ ಹುದ್ದೆಗೆ ಸಿಎ/ MBA, ಅಥವಾ ಸ್ನಾತಕೋತ್ತರ ಪದವಿ ಮುಗಿಸಿರಬೇಕು.
• ಚೀಪ್ HR ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು HR ವಿಭಾಗದಲ್ಲಿ MBA ಮುಗಿಸಿರಬೇಕು.
• ಚೀಪ್ ಆಪರೇಟಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದಾದರೂ ಒಂದು ಪದವಿ ಮುಗಿಸಿರಬೇಕು.
ಸಂಬಳ ಎಷ್ಟು ಸಿಗಲಿದೆ?
ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಾರ್ಷಿಕ ವೇತನ ಪ್ಯಾಕೇಜ್ ರೂ. 3,16,627 ರಿಂದ ರೂ. 4,36,271 ರವರೆಗೆ ಸಿಗಲಿದೆ.

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ – 150ರೂ.
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 750ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22 ಆಗಸ್ಟ್ 2025
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ – https://ibpsonline.ibps.in/ippbljul25/
Education
10 ಸಾವಿರಕ್ಕೂ ಹೆಚ್ಚು ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ : ಕನ್ನಡಿಗರಿಗೆ ಭರ್ಜರಿ ಮೀಸಲಾತಿ
 
														IBPS Banking Recruitment 2025 : ದೇಶಾದ್ಯಂತ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ 10,000ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಬ್ಯಾಂಕಿಂಗ್ ನೇಮಕಾತಿ ಸಂಸ್ಥೆಯು ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.
ಈ ನೇಮಕಾತಿಯಲ್ಲಿ ಕರ್ನಾಟಕ ರಾಜ್ಯದ ಬ್ಯಾಂಕುಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹುದ್ದೆಗಳ ಉದ್ಯೋಗಾವಕಾಶವಿದೆ. ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತ್ಯಾದಿ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ :
ಒಟ್ಟು 10,277 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯದ ಒಟ್ಟು 11 ಪ್ರಮುಖ ಬ್ಯಾಂಕುಗಳಲ್ಲಿ 1,170 ಹುದ್ದೆಗಳು ಖಾಲಿ ಇವೆ. ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಪಂಜಾಬ್ ಅಂಡ್ ಸಿಂದ್ ಬ್ಯಾಂಕ್.
ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?
ಯಾವುದಾದರೂ ಒಂದು ಪದವಿ ಮುಗಿಸಿದ್ದು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಇದಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರವನ್ನು ಕೂಡ ಹೊಂದಿರಬೇಕು. ವಯೋಮಿತಿ ಅರ್ಹತೆ ನೋಡುವುದಾದರೆ ಕನಿಷ್ಠ 20 ವರ್ಷದಿಂದ ಗರಿಷ್ಠ 28 ವರ್ಷದ ಒಳಗಿರಬೇಕು.
ವೇತನ – 24,050ರೂ. ಯಿಂದ 54,480ರೂ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
• ಪೂರ್ವಭಾವಿ ಪರೀಕ್ಷೆ
• ಮುಖ್ಯ ಪರೀಕ್ಷೆ

ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣ ibps.in ವೆಬ್‌ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಅರ್ಜಿ ಶುಲ್ಕ
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 175ರೂ.
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – 850ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 21, 2025
Education
ಏರ್‌ಟೆಲ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಸ್ಕಾಲರ್‌ಶಿಪ್ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ
 
														Bharti Airtel Scholarship Program 2025 – ಏರ್‌ಟೆಲ್ ಕಂಪನಿ ವತಿಯಿಂದ ಅರ್ಹ ವಿದ್ಯಾರ್ಥಿಗಳಿಗೆ ಭಾರತಿ ಏರ್‌ಟೆಲ್ ಫೌಂಡೇಶನ್ ನ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಉನ್ನತ ಗುಣಮಟ್ಟದ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗುವಂತೆ ಹಾಗೂ ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಬಿಡಬಾರದು ಎಂಬ ಉದ್ದೇಶದಿಂದ ವಿದ್ಯಾರ್ಥಿವೇತನ ನೀಡುತ್ತಿದ್ದಾರೆ.
ಈ ವಿದ್ಯಾರ್ಥಿ ವೇತನದ ಅಡಿಯಲ್ಲಿ ಏನೆಲ್ಲಾ ಪ್ರಯೋಜನ ಸಿಗಲಿದೆ?
ವಿದ್ಯಾರ್ಥಿಗಳು ಕಾಲೇಜಿಗೆ ಭರಿಸುವ ಸಂಪೂರ್ಣ ಶುಲ್ಕವನ್ನು ಮರುಪಾವತಿ ಸಿಗಲಿದೆ. ಈ ಒಂದು ಪ್ರಯೋಜನವು ಸಂಪೂರ್ಣ ಕೋರ್ಸ್ ಗೆ ಅನ್ವಯಿಸಲಿದೆ. ಅದೇ ರೀತಿ ಅವರ ಹಾಸ್ಟಲ್ ಮತ್ತು ಮೆಸ್ಸಿನ ಫೀಸ್ ಅನ್ನು ಕೂಡ ಮರುಪಾವತಿ ಸಿಗಲಿದೆ. ಮೊದಲನೆಯ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಕೂಡ ಸಿಗಲಿದೆ.

ಇದರ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು?
ಮೊದಲನೆಯ ವರ್ಷದ ಪದವಿಗೆ ಕಡ್ಡಾಯವಾಗಿ ದಾಖಲಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 8.5 ಲಕ್ಷದ ರೂ. ಒಳಗಿರಬೇಕು. ಈ ವಿದ್ಯಾರ್ಥಿ ವೇತನವನ್ನು ಪ್ರಮುಖವಾಗಿ ಹೆಣ್ಣುಮಕ್ಕಳಿಗೆ, ಅಂಗವಿಕಲರಿಗೆ ಹಾಗೂ ತಂದೆ ಅಥವಾ ತಾಯಿ ಕಳೆದುಕೊಂಡ ಮಕ್ಕಳಿಗೆ ಅಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು :
• ಆಧಾರ್ ಕಾರ್ಡ್
• ಪದವಿ ಕೋರ್ಸಿಗೆ ದಾಖಲಾದ ಪ್ರಮಾಣ ಪತ್ರ
• 12ನೇ ತರಗತಿಯ ಅಂಕಪಟ್ಟಿ
• ಬ್ಯಾಂಕ್ ಪಾಸ್ ಬುಕ್
• ಪಾಸ್ಪೋರ್ಟ್ ಸೈಜ್ ಫೋಟೋ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಜುಲೈ 2025
ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ – https://www.buddy4study.com/page/bharti-airtel-scholarship
Education
ಆಳ್ವಾಸ್ ಪ್ರಗತಿ ಉದ್ಯೋಗ ಮೇಳ : 15 ಸಾವಿರಕ್ಕೂ ಹೆಚ್ಚು ಹುದ್ದೆಗಳ ಖಚಿತ ಭರವಸೆ | ನೋಂದಣಿ ಮಾಡುವ ಲಿಂಕ್ ಇಲ್ಲಿದೆ
 
														Alvas Pragati Job Fair 2025 – ಶಿಕ್ಷಣವನ್ನು ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿರುವಂತಹ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯು “ಆಳ್ವಾಸ್ ಪ್ರಗತಿ ಉದ್ಯೋಗ ಮೇಳ” ವನ್ನು ಆಯೋಜಿಸಿದ್ದು ಇದರ ಮಾಹಿತಿ ಇಲ್ಲಿದೆ.
ಉದ್ಯೋಗ ಮೇಳದ ವಿವರ :
ಒಟ್ಟು 15,900 ಹುದ್ದೆಗಳನ್ನು ವಿವಿಧ ಕಂಪನಿಗಳು ನೇಮಕ ಮಾಡಿಕೊಳ್ಳಲಿವೆ. ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನವು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಉದ್ಯೋಗ ಮೇಳವನ್ನು ಆಯೋಜಿಸಿದ್ದು, 150ಕ್ಕೂ ಹೆಚ್ಚು MNC ಕಂಪನಿಗಳು ಇದರಲ್ಲಿ ಭಾಗವಹಿಸಲಿವೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಹೊರ ಜಿಲ್ಲೆಗಳಿಂದ ಹಾಗೂ ದೂರದ ಊರುಗಳಿಂದ ಬರುವಂತಹ ಅಭ್ಯರ್ಥಿಗಳಿಗೆ ವಸತಿ ಹಾಗೂ ಊಟದ ಸೌಲಭ್ಯಗಳನ್ನು ಕೂಡ ವ್ಯವಸ್ಥೆ ಮಾಡಲಾಗಿದೆ.
ಯಾರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು?
ಹತ್ತನೇ ತರಗತಿ ಓದಿದವರಿಂದ ಹಿಡಿದು ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿದವರು ಕೂಡ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅವಕಾಶವಿದೆ.
- 
																	   Manglore14 hours ago Manglore14 hours agoತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಣ್ಣನೂ ಹೃದಯಾಘಾತಕ್ಕೆ ಬಲಿ 
- 
																	   Hassan10 hours ago Hassan10 hours agoಹಾಸನ : ರಸ್ತೆ ವಿಭಜಕಕ್ಕೆ ಸ್ವಿಫ್ಟ್ ಕಾರು ಡಿಕ್ಕಿ :ಇಬ್ಬರು ಯುವಕರ ಧಾರುಣ ಸಾ*ವು 
- 
																	   Mandya2 hours ago Mandya2 hours agoಮಹಿಳೆಯರಿಗೆ ಬಾಗಿನ ನೀಡುವುದು ಹಿಂದೂ ಸಂಪ್ರದಾಯದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ : ಮಾಜಿ ಸಚಿವ ಶ್ರೀರಾಮುಲು 
- 
																	   Chamarajanagar12 hours ago Chamarajanagar12 hours ago*ಪ್ರೀತಿ ನಿರಾಕರಣೆ: ಚಾಕುವಿನಿಂದ ಇರಿದುಕೊಂಡ ಯುವಕ* 
- 
																	   Hassan5 hours ago Hassan5 hours agoಧರ್ಮಸ್ಥಳ ಪ್ರಕರಣ| ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಬಿ.ವೈ.ವಿಜಯೇಂದ್ರ 
- 
																	   Manglore13 hours ago Manglore13 hours agoಬೆಳ್ತಂಗಡಿ: ವಿಜಯೇಂದ್ರ ನೇತೃತ್ವದಲ್ಲಿ ‘ಬಿಜೆಪಿ’ ಧರ್ಮಸ್ಥಳಕ್ಕೆ ಭೇಟಿ 
- 
																	   Mysore6 hours ago Mysore6 hours agoಖಾಸಗಿ ಇವಿ ಚಾರ್ಜಿಂಗ್ ಸ್ಟೇಷನ್ ಉದ್ಘಾಟಿಸಿದ ಸೆಸ್ಕ್ ಎಂಡಿ 
- 
																	   Kodagu9 hours ago Kodagu9 hours agoಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮವಿತ್ತ ಮಹಿಳೆ : ತಾಯಿ ಮಗು ಸುರಕ್ಷಿತ 

 
											 
											 
											 
											 
											