Mandya
ರಾಜ್ಯದಲ್ಲಿ ದೇವಲಯಗಳ ವಾಸ್ತುಶಿಲ್ಪ ಕಲೆ ಕಾಲೇಜಿನ ಅವಶ್ಯಕತೆ ಇದೆ : ಶಿಲ್ಪಿ ಅರುಣ್ ಯೋಗಿರಾಜ್

ಮಂಡ್ಯ : ಶಿಲ್ಪಿಗಳು ಸರ್ಕಾರಿ ದೇವಸ್ಥಾನಗಳ ಅಥವಾ ಪುನರ್ ಸ್ಥಾಪನೆ ಕೆಲಸ ಮಾಡಬೇಕೆಂದರೆ ದೇವಾಲಯ ವಸ್ತು ಶಿಲ್ಪ ಕಲೆಯಲ್ಲಿ ಪದವಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ. ನಾವು ಕೆಲಸದಲ್ಲಿ ಏಷ್ಟೇ ಪರಿಣಿತರಾದರು ಪದವಿ ಪ್ರಮಾಣ ಪತ್ರವಿಲ್ಲದಿದ್ದರೆ ಕೆಲಸ ಮಾಡಲು ಅರ್ಹತೆ ಇರುವುದಿಲ್ಲ. ಈ ಹಿನ್ನಲೆಯಲ್ಲಿ
ಕರ್ನಾಟಕದಲ್ಲಿ ದೇವಾಲಯದ ಶಿಲ್ಪಕಲೆ ಪದವಿ ಕಾಲೇಜಿನ ಅಗತ್ಯವಿದೆ ಎಂದು ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ರವರು ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆಗೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಲ್ಪಕಲೆಯ ನಾಡು ಕಲೆಗಳ ಬೀಡು ಎಂದು ನಮ್ಮ ರಾಜ್ಯವನ್ನು ಕರೆಯುತ್ತೇವೆ, ನಮ್ಮಲ್ಲಿ ದೇವಾಲಯ ವಾಸ್ತುಶಿಲ್ಪಕಲೆ ಕಾಲೇಜು ತೆರೆದು ಪದವಿ ನೀಡಿದರೆ ಅನೇಕ ಕೆಲಸಗಳು ನಮ್ಮ ಕರ್ನಾಟಕ ಜನಕ್ಕೆ ದೊರೆಯುತ್ತದೆ ಎಂದರು.
ಶಿಲ್ಪಿಗಳು ಶತಮಾನಗಳಿಂದ ದೇಶಕ್ಕೆ ಸಮಾಜಕ್ಕೆ ಕೊಡುಗೆ ನೀಡುತ್ತಾ ಬಂದಿದ್ದೇವೆ ಅದರಲ್ಲಿ ಅಗ್ರಗಣ್ಯರು ಅಮರಶಿಲ್ಪಿ ಜಕಣಾಚಾರ್ಯರು ಅವರು ನಿರ್ಮಿಸಿರುವ ದೇವಾಲಯಗಳು ಇವತ್ತಿಗೂ ತನ್ನ ಕಲೆ ಮಾಸಿ ಹೋಗದಂತೆ ತನ್ನ ಅಸ್ತಿತ್ವ ಕಾಪಾಡಿಕೊಂಡಿವೆ, ಶಿಲ್ಪಿಗಳು ನಿರ್ಮಿಸುವ ವಿಗ್ರಹ ಅವರು ಸತ್ತ ನಂತರವೂ ಪೂಜೆಗೊಳಪಡುತ್ತದೆ, ನನಗೆ ಬೆಲೆ ಕೊಡುತ್ತಿರುವುದು ನಾನೊಬ್ಬ ಶಿಲ್ಪಿ ಎಂದೆಲ್ಲಾ ನಾನು ಮಾಡಿದ ಕೆಲಸಕ್ಕೆ ಅದರ ಹಿಂದೆ ಇರುವ ಕಲೆ ಶ್ರಮಕ್ಕೆ ಮತ್ತು ಅದರ ಇತಿಹಾಸಕ್ಕೆ ಎಂದರು.
ಶ್ರಮದ ಜೀವನಕ್ಕೆ ಸಾರ್ಥಕತೆ ಇದೆ ಅದಕ್ಕೆ ನಾನೇ ಉದಾಹರಣೆ, ಇವತ್ತಿನ ಆಧುನಿಕತೆ ವೈಜ್ಞಾನಿಕವಾಗಿ ಏಷ್ಟೇ ಮುಂದುವರಿದಿದ್ದರು ಮಾಡಲು ಅಸಾಧ್ಯವಾದ ಕೆಲಸಗಳನ್ನು ಸಾವಿರಾರು ವರ್ಷಗಳ ಹಿಂದೆಯೇ ನಮ್ಮ ಪೂರ್ವಜರು ಮಾಡಿದ್ದಾರೆ ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರು ಮಾತನಾಡಿ,
ಅರುಣ್ ಯೋಗಿರಾಜ ತುಂಬಾ ಪರಿಶ್ರಮ ಪಟ್ಟು ಅಯೋಧ್ಯೆಯಲ್ಲಿ ಸುಂದರವಾದ ರಾಮ ಮೂರ್ತಿಯನ್ನು ಕೆತ್ತಿ ಇಡೀ ವಿಶ್ವದಲ್ಲೇ ಹೆಸರು ಮಾಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು.
ರೈತರ ಕುಡುಗೋಲು ತಟ್ಟಿಸುವುದರಿಂದ ಹಿಡಿದು ಸಾಮಾನ್ಯ ವ್ಯಕ್ತಿಗಳು ಮನೆ ನಿರ್ಮಾಣ ಮಾಡುವುದಕ್ಕೂ ನಿಮ್ಮ ಕಸುಬುಗಳ ಅಗತ್ಯವಿದೆ ಇಂತಹ ಉತ್ತಮ ಸೇವೆಯನ್ನು ಸಾಮಾಜಕ್ಕೆ ಸಲ್ಲಿಸುತ್ತಿರುವ ವಿಶ್ವಕರ್ಮ ಜನಾಂಗದ ಬಗ್ಗೆ ಗೌರವ ಇದೆ ಎಂದರು.
ಕಾರ್ಯಕ್ರಮದಲ್ಲಿ ನಗರರಸಭೆ ಅಧ್ಯಕ್ಷ ಎಂ .ಪಿ.ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಿ ವಿ ನಂದೀಶ್, ಸಾಹಿತಿ ಕೆ.ಪಿ ಸ್ವಾಮಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
Mandya
ಪತ್ರಕರ್ತರಿಗೆ ಪರಿಹಾರದ ಚೆಕ್ ವಿತರಣೆ

ಮಂಡ್ಯ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮಂಡ್ಯ ನಗರ ಸಭೆಯಲ್ಲಿ ಮೀಸಲಿರಿಸಿದ್ದ ಆರೋಗ್ಯ ಪರಿಹಾರ ನಿಧಿಯಿಂದ ಹಿರಿಯ ಪತ್ರಕರ್ತರಾದ ಬಸವರಾಜ್ ಹೆಗಡೆ ಹಾಗೂ ಶೇಷು ಅವರಿಗೆ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಕೆ..ಎನ್.ನವೀನ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರಾದ ಬಿ.ಪಿ ಪ್ರಕಾಶ್ ಅವರು, ಪರಿಹಾರದ ಚೆಕ್ ವಿತರಣೆ ಮಾಡಿ ಆರೋಗ್ಯ ವಿಚಾರಿಸಿದರು.
ಬಸವರಾಜ್ ಹೆಗಡೆ ಹಾಗೂ ಶೇಷು ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದರು. ಜಿಲ್ಲಾ ಸಂಘದ ಮನವಿ ಮೇರೆಗೆ ನಗರ ಸಭೆ ತಲಾ ಹತ್ತು ಸಾವಿರದ ಪರಿಹಾರದ ಚೆಕ್ ಅನ್ನು ನೀಡಿದೆ.
Mandya
ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ: 25 ಎಕರೆ ಅರಣ್ಯ ಭಸ್ಮ

ಶ್ರೀರಂಗಪಟ್ಟಣ : ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.
ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ಮರ, ಗಿಡಗಳು ಸೇರಿದಂತೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಬೆಂಕಿ ನಂದಿಸಿದ್ದಾರೆ.
Mandya
ಫೈನಾನ್ಸ್ ಕಿರುಕುಳದಿಂದ ಮೃತರಾದ ತಾಯಿ-ಮಗನ ಕುಟುಂಬ ಭೇಟಿಯಾದ ಆರ್.ಅಶೋಕ್

ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡದ್ದ ಗ್ರಾಮಕ್ಕೆ ಗುರುವಾರ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ ಸಾಲ ಪಡೆದು, ಸಾಲ ತೀರಿಸಲಾಗದೆ ಬ್ಯಾಂಕ್ ಸಿಬ್ಬಂದಿಗಳ ಕಾಟದಿಂದ ಮನನೊಂದು ಜ.28 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ತಾಯಿ ಸಾವಿನಿಂದ ಮನನೊಂದ ಮಗ ರಂಜಿತ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇಂದು (ಫೆ.6) ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಜೊತೆಗೆ ಜೆಡಿಎಸ್ ಶಾಸಕ ಡಾ.ಕೆ.ಅನ್ನದಾನಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಇಂಡವಾಳು ಸಚ್ಚಿದಾನಂದ ಮತ್ತಿತರರು ಸಾಥ್ ನೀಡಿದರು.
-
State12 hours ago
ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ: ಬಸವರಾಜ ಬೊಮ್ಮಾಯಿ ಬೇಸರ
-
Kodagu9 hours ago
ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ
-
Chamarajanagar9 hours ago
ಚಿಕ್ಕಮಗಳೂರು: ನಕ್ಸಲ್ ರವೀಂದ್ರಗೆ ಸೇರಿದ್ದು ಎನ್ನಲಾದ ಬಂದೂಕು ಪತ್ತೆ?
-
Kodagu13 hours ago
ಫೆ.7 ರ ಕೊಡವ ಪಾದಯಾತ್ರೆಗೆ ಸಿಎನ್ ಸಿ ಬೆಂಬಲ
-
Kodagu8 hours ago
ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ
-
Hassan8 hours ago
ಆಸ್ತಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ
-
Sports10 hours ago
ಏಕದಿನ ಮಾದರಿಗೆ ದಿಢೀರ್ ನಿವೃತ್ತಿ ಘೋಷಿಸಿದ ಆಸೀಸ್ ಆಲ್ರೌಂಡರ್ ಸ್ಟೋಯ್ನಿಸ್
-
Hassan7 hours ago
ಎಂಸಿಇ ಕಾಲೇಜು ಉಪಾಧ್ಯಕ್ಷರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಸನ್ಮಾನ