Connect with us

Politics

ವಿಬಿ ಜಿ ರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ: ಸಿಎಂ ಹೇಳಿಕೆಗೆ ಸದನದಲ್ಲಿ ಭಾರೀ ಗದ್ದಲ

Published

on

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ವಿಬಿ ಜಿ ರಾಮ್‌ಜಿ ಕಾಯ್ದೆವಿಚಾರದ ಬಗ್ಗೆ  ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ಕಿಚ್ಚು ಹಚ್ಚಿತ್ತು. ಸಿಎಂ ಸಿದ್ದರಾಮಯ್ಯ ಅವರು ವಿಬಿ-ಜಿರಾಮ್‌ಜಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡನೆ ವೇಳೆ ವಿಪಕ್ಷ ಸದಸ್ಯರು ತೀವ್ರವಾಗಿ ಖಂಡಿಸಿದ್ದರಿಂದ ಸದನದಲ್ಲಿ ತೀವ್ರ ಗದ್ದಲ, ವಾಕ್ಸಮರಕ್ಕೆ ದಾರಿ ಮಾಡಿಕೊಟ್ಟಿದೆ.

ವಿಧಾನಸೌಧದಲ್ಲಿ ಇಂದು  ಸರ್ಕಾರದ ನಿರ್ಣಯ ಓದಿದ ಸಿಎಂ, ಈ ಸದನ ವಿಬಿ-ಜಿರಾಮ್‌ಜಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತದೆ. ವಿಬಿ ಜಿ ರಾಮ್‌ ಜಿ ಕಾಯ್ದೆ ರದ್ದು ಮಾಡಬೇಕು. ಮನರೇಗಾ ಕಾಯ್ದೆ ಮೂಲ ಸ್ವರೂಪದಲ್ಲಿ ಮರು ಜಾರಿ ಮಾಡಬೇಕು. ವಿಬಿ ಜಿ ರಾಮ್‌ ಜಿ ಕಾಯ್ದೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ಮನರೇಗಾ ಸಂವಿಧಾನದ ಹಕ್ಕುಗಳನ್ನು ನೀಡುವ ಯೋಜನೆ. ಕೆಲಸದ ಹಕ್ಕು ಯೋಜನೆ ನೀಡುತ್ತಿದ್ದ ಯೋಜನೆ ಮನರೇಗಾ. ನರೇಗಾ ವಾಪಸ್ ಜಾರಿ, ವಿಬಿ ಜಿ ರಾಮ್‌ ಜಿ ರದ್ದಿಗೆ ಈ ನಿರ್ಣಯ ಮೂಲಕ ಈ ಸದನ ಕೇಂದ್ರಕ್ಕೆ ಆಗ್ರಹಿಸುತ್ತದೆ. ಈ ನಿರ್ಣಯವನ್ನು ಈ ಸದನ ನಿರ್ಣಯ ಅಂಗೀಕರಿಸುತ್ತದೆ ಎಂದು ಗದ್ದಲದ ಮಧ್ಯೆಯೇ ಸಿಎಂ ನಿರ್ಣಯ ಓದಿದರು.

ಇದೇ ವೇಳೆ  ಈ ಸದನ ಅಲ್ಲ, ನಿಮ್ಮ ಸರ್ಕಾರ ವಿರೋಧಿಸುತ್ತದೆ ಎಂದು ಹೇಳಿ ಎಂದು ಅಶೋಕ್‌ ಒತ್ತಾಯಿಸಿದರು. ಆಗ ಈ ಸದನ ಈ ಸದನವೆಂದು ಒತ್ತಿ ಹೇಳಿ ವಿಪಕ್ಷಗಳಿಗೆ ಸಿಎಂ ಗುದ್ದು ನೀಡಿದರು. ಇದಕ್ಕೆ ಸರ್ಕಾರ ಸರ್ಕಾರ ಈ ಸದನ ಅಲ್ಲವೆಂದು ವಿಪಕ್ಷ ಸದಸ್ಯರು ಟಾಂಗ್‌ ನೀಡಿದರು.

ವಿಪಕ್ಷಗಳಿಂದ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಮುಂದುವರೆಯಿತು. ಆರ್‌.ಬಿ. ತಿಮ್ಮಾಪೂರ ರಾಜೀನಾಮೆ ನೀಡಬೇಕೆಂದು ಪಟ್ಟು ಹಿಡಿದು ಸಿಎಂ ನಿರ್ಣಯ ಮಂಡನೆಗೆ ವಿಪಕ್ಷಗಳ ಸದಸ್ಯರು ಎದ್ದು ನಿಂತು ಅಡ್ಡಿ ಪಡಿಸಿದರು. ಈ ವೇಳೆ ವಿಪಕ್ಷಗಳ ಮೇಲೆ ಸಿಎಂ ಗರಂ ಆದರು. ಅಧ್ಯಕ್ಷರೇ ಅವರನ್ನು ಕೂರಿಸಿ, ಯಾರು ನಿಮ್ಮ ಮಾತು ಕೇಳೋದಿಲ್ಲವೋ ಅವರನ್ನು ಹೊರಗೆ ಹಾಕಿ ಎಂದು ಸಿಎಂ ವಾಗ್ದಾಳಿ ನಡೆಸಿದರು.

ಸದನದಲ್ಲಿ ಗದ್ದಲ, ಕೋಲಾಹಲ, ಪರಸ್ಪರ ಆರೋಪ, ವಾಕ್ಸಮರಗಳಿಂದ ಗೊಂದಲದ ಗೂಡಾಯ್ತು. ಇದು ಲೂಟಿ ಸರ್ಕಾರವೆಂದು ಘೋಷಣೆ ವಿಪಕ್ಷ ಸದಸ್ಯರು ಘೋಷಣೆ ಕೂಗುತ್ತಲೇ ಇದ್ದರು. ವಿಪಕ್ಷಗಳ ನಡೆಗೆ ಸಿಎಂ ತೀವ್ರ ಖಂಡಿಸಿ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು.

ಗದ್ದಲ ನಿಯಂತ್ರಣಕ್ಕೆ ಬರದ ಹಿನ್ನೆಲೆ ಸದನವನ್ನೇ ಸ್ಪೀಕರ್ ಮುಂದೂಡಬೇಕಾಯಿತು. ಭೋಜನದ ನಂತರ ಕಲಾಪ ಶುರುವಾದರೂ ಮತ್ತೆ ಸದನದಲ್ಲಿ ಗದ್ದಲ, ಜಟಾಪಟಿ ಮುಂದುವರೆಯಿತು.

Politics

ಹೆದ್ದಾರಿ ಅಪಘಾತ ಸಂತ್ರಸ್ತರಿಗೆ 7 ದಿನ ಉಚಿತ ಚಿಕಿತ್ಸೆ: ಸಚಿವ ಯು.ಟಿ. ಖಾದರ್ ಘೋಷಣೆ

Published

on

ಕಾರವಾರ: ರಾಜ್ಯದ ಹೆದ್ದಾರಿಗಳಲ್ಲಿ ಅಪಘಾತಕ್ಕೊಳಗಾಗುವ ಅಪರಿಚಿತ ವ್ಯಕ್ತಿಗಳಿಗೆ ಪ್ರಥಮ ಏಳು ದಿನಗಳವರೆಗೆ ₹2.5 ಲಕ್ಷದವರೆಗೆ ಉಚಿತ ಚಿಕಿತ್ಸೆ ನೀಡುವ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ಘೋಷಿಸಿದರು.

ಕುಮಟಾದ ನೂತನ ಟ್ರಾಮಾ ಕೇರ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಯೋಜನೆಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅನುಮೋದನೆ ಪಡೆಯಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಈ ಯೋಜನೆ ರಾಜ್ಯದ ನಾಗರಿಕರಿಗೆ ಮಾತ್ರವಲ್ಲದೆ, ರಾಜ್ಯದ ಹೊರಗಿನಿಂದ ಬಂದವರು ಹಾಗೂ ವಿದೇಶಿ ಪ್ರಜೆಗಳಿಗೂ ಅನ್ವಯವಾಗಲಿದೆ ಎಂದು ಸಚಿವರು ತಿಳಿಸಿದರು. ಅಪಘಾತದ ಬಳಿಕ ತುರ್ತು ಚಿಕಿತ್ಸೆಗೆ ಹಣದ ಕೊರತೆಯಿಂದ ಯಾವುದೇ ಜೀವ ಹಾನಿಯಾಗಬಾರದು ಎಂಬ ಉದ್ದೇಶದಿಂದ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಸರ್ಕಾರಿ ಹಾಗೂ ಖಾಸಗಿ ಟ್ರಾಮಾ ಕೇರ್ ಆಸ್ಪತ್ರೆಗಳನ್ನೂ ಯೋಜನೆಗೆ ಒಳಪಡಿಸಲಾಗುವುದು. ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಅದರಿಂದ ಆಸ್ಪತ್ರೆಗಳು ತಮ್ಮ ಸೇವೆ ಹಾಗೂ ನಿರ್ವಹಣೆಯನ್ನು ಸುಧಾರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಖಾದರ್ ಹೇಳಿದರು.

ಈ ಯೋಜನೆ ಜಾರಿಗೆ ಬಂದ ಬಳಿಕ ಹೆದ್ದಾರಿ ಅಪಘಾತ ಸಂತ್ರಸ್ತರಿಗೆ ತ್ವರಿತ ಹಾಗೂ ಉಚಿತ ಚಿಕಿತ್ಸೆಯ ಸೌಲಭ್ಯ ದೊರೆಯಲಿದೆ ಎಂದು ಅವರು ತಿಳಿಸಿದರು.

Continue Reading

Politics

ಪರಪ್ಪನ ಅಗ್ರಹಾರಕ್ಕೆ ವಿಜಯಲಕ್ಷ್ಮಿ, ರಕ್ಷಿತಾ ಭೇಟಿ: ದರ್ಶನ್ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ದರ್ಶನ್‌ ತೂಗದೀಪಾ ಅವರನ್ನು ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ಪ್ರೇಮ್‌   ಭೇಟಿ ಮಾಡಿದ್ದಾರೆ.

ಇಬ್ಬರೂ ಪ್ರತ್ಯೇಕವಾಗಿ ಜೈಲಿಗೆ ಆಗಮಿಸಿ ದರ್ಶನ್ ಅವರೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಭೇಟಿಯ ವೇಳೆ ಅವರ ಆರೋಗ್ಯ ಹಾಗೂ ಜೈಲಿನ ಪರಿಸ್ಥಿತಿ ಕುರಿತು ವಿಚಾರಿಸಿದ್ದಾರೆ ಎನ್ನಲಾಗಿದೆ.

ದರ್ಶನ್ ಅವರನ್ನು ಎರಡನೇ ಬಾರಿ ಭೇಟಿ ಮಾಡಿದ ರಕ್ಷಿತಾ, ಜೈಲಿನಲ್ಲಿರುವ ಅವರ ಪರಿಸ್ಥಿತಿ ಕಂಡು ಭಾವುಕರಾದರು ಎನ್ನಲಾಗಿದೆ. ಗೆಳೆಯನಿಗೆ ಎದುರಾಗಿರುವ ಸಂಕಷ್ಟದ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಭೇಟಿ ಬಳಿಕ ರಕ್ಷಿತಾ ಹಾಗೂ ವಿಜಯಲಕ್ಷ್ಮಿ ಅವರು ಮಾಧ್ಯಮಗಳೊಂದಿಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳದೆ ತೆರಳಿದರು. ದರ್ಶನ್ ಹೇಗಿದ್ದಾರೆ ಎಂಬ ಪ್ರಶ್ನೆಗೆ ಮಾತ್ರ “ಚೆನ್ನಾಗಿದ್ದಾರೆ” ಎಂದು ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾ ಪ್ರಕ್ರಿಯೆಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಮುಂದಿನ ವರ್ಷ ಮೇ 15ರವರೆಗೆ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ವರದಿಯಾಗಿದೆ.

Continue Reading

Politics

ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ: 18 ಮಂದಿಗೆ ಸಚಿವ ಸ್ಥಾನ ಸಾಧ್ಯತೆ

Published

on

ಬೆಂಗಳೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಮಂತ್ರಿಮಂಡಲವನ್ನು (ಜುಲೈ 22) ನಾಳೆ ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.

ಲೋಕಭವನದ ಗಾಜಿನಮನೆಯಲ್ಲಿ ಮಧ್ಯಾಹ್ನ 2.20ಕ್ಕೆ ನಡೆಯುವ ಸರಳ ಸಮಾರಂಭದಲ್ಲಿ ನೂತನ ಸದಸ್ಯರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಲಿದ್ದಾರೆ. ಶಿವಕುಮಾರ್ ಸಂಪುಟಕ್ಕೆ ಸೇರ್ಪಡೆಗೊಳ್ಳವವರ ಪಟ್ಟಿ ಇಂದು ತಡರಾತ್ರಿ ಬಿಡುಗಡೆ ಆಗಲಿದೆ.

ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ, ಕಳೆದ ವಾರವೇ ದೆಹಲಿಗೆ ತೆರಳಿ ವರಿಷ್ಠರ ಭೇಟಿ ಮಾಡಿ ತಮ್ಮ ಸಚಿವಾಕಾಂಕ್ಷಿಗಳ ಪಟ್ಟಿ ನೀಡಿದ್ದರು. ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನೂ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದರು.


ಶಿವಕುಮಾರ್ ನೀಡಿದ ಪಟ್ಟಿಯಲ್ಲಿರುವವರ ಪ್ರಾಮಾಣಿಕತೆ, ಪಕ್ಷ ನಿಷ್ಠೆ ಹಾಗೂ ಸಂಘಟನಾ ಚತುರತೆ ಕುರಿತು ಮಾಹಿತಿ ನೀಡಲು ಸಂಸದ ಸಸಿಕಾಂತ್ ಸೆಂಥಿಲ್ ಅವರಿಗೆ ಜವಾಬ್ದಾರಿ ವಹಿಸಲಾಗಿತ್ತು. ಸೆಂಥಿಲ್ ಕಳೆದ ಸೋಮವಾರ ಎಐಸಿಸಿಗೆ ವರದಿ ನೀಡಿದ್ದರು, ಇದನ್ನು ಪರಿಶೀಲಿಸಿದ ಖರ್ಗೆ, ಯುವಪಡೆ ಜೊತೆಗೆ ಹಿರಿಯರಿಗೂ ಅವಕಾಶ ಮಾಡಿಕೊಡಬೇಕೆಂದು ಕೆಲವು ಬದಲಾವಣೆ ಮಾಡಿದರು.

ಸೆಂಥಿಲ್ ವರದಿ ಬರುತ್ತಿದ್ದಂತೆ ಮುಖ್ಯಮಂತ್ರಿ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ವರಿಷ್ಠರು ಇಂದು ದೆಹಲಿಗೆ ಕರೆಸಿಕೊಂಡರು. ದೆಹಲಿಯಲ್ಲಿನ ಖರ್ಗೆ ನಿವಾಸದಲ್ಲಿ ಮಂಗಳವಾರ ಮಧ್ಯಾನ್ಹ ಸಭೆ ಸೇರಿ ಅಂತಿಮ ಪಟ್ಟಿ ಸಿದ್ಧಪಡಿಸಿದ್ದಲ್ಲದೆ, ನಿಗಮ-ಮಂಡಳಿಗಳಿಗೆ ನೇಮಕಾತಿ, ವಿಧಾನಮಂಡಲದ ಉಭಯ ಸದನಗಳ ಪೀಠಾಸೀನಾಧಿಕಾರಿಗಳ ಆಯ್ಕೆ, ಕೆಪಿಸಿಸಿ ಪುನರ್ ರಚನೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು.


ಈ ಸಭೆಯಲ್ಲಿ ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ಹಿರಿಯ ನಾಯಕ ಜೈರಾಂ ರಮೇಶ್, ಸಿದ್ದರಾಮಯ್ಯ ಹಾಗೂ ಹರಿಪ್ರಸಾದ್ ಭಾಗವಹಿಸಿದ್ದರು. ಶಿವಕುಮಾರ್ ಜೂನ್ 3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ವೇಳೆ ತಮ್ಮನ್ನೂ ಸೇರಿದಂತೆ 14 ಮಂದಿಯ ಮಂತ್ರಿಮಂಡಲ ರಚಿಸಿದ್ದರು.

ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿ ಇದ್ದ ಕಾರಣ ಮಂತ್ರಿಮಂಡಲ ವಿಸ್ತರಿಸಿ ಖಾಲಿ ಇರುವ 20 ಸ್ಥಾನಗಳ ಭರ್ತಿ ಸಾಧ್ಯವಾಗಿರಲಿಲ್ಲ.
ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗುವ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲೆಗಳ ಉಸ್ತುವಾರಿಗೆ ಅಡಚಣೆ ಆಗದಂತೆ ನೋಡಿಕೊಳ್ಳಲು ವರಿಷ್ಠರ ಮನವೊಲಿಸಿ ಸಂಪುಟ ವಿಸ್ತರಿಸುತ್ತಿದ್ದಾರೆ.

Continue Reading

Trending

error: Content is protected !!