Hassan
ಮುಂದಿನ ದಿನಗಳಲ್ಲಿ ಚೊಂಬು-ಜಾಗಟೆ ಗ್ಯಾರಂಟಿ

ಕಾಂಗ್ರೆಸ್ ವಿರುದ್ಧ ಹೆಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಚೊಂಬು ಮತ್ತು ಜಾಗಟೆ ಕೊಡುವುದು ಗ್ಯಾರಂಟಿ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಭವಿಷ್ಯ ನುಡಿದರು.
ನಗರದಲ್ಲಿ ಆಪ್ತರ ನಿವಾಸದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯ ಲೂಟಿ ಕೋರರ ಕೈಯಲ್ಲಿ ಸಿಲುಕಿಕೊಂಡಿದೆ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಜನರಿಗೆ ಬಿಕ್ಷೆ ಹಾಕುತ್ತಿದೆ ಮುಂದಿನ ದಿನಗಳಲ್ಲಿ ಕೈಯಲ್ಲಿ ಚೊಂಬು ಹಾಗೂ ಜಾಗಟೆ ಕೊಡುವುದು ಗ್ಯಾರಂಟಿ ಎಂದರು.
ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರರ ಬದಲಾವಣೆ ಆಗಿದೆ. ಶಾಲಾ ಕಾಲೇಜು ಕಟ್ಟಡಗಳು, ಗುಣಮಟ್ಟದ ಶಿಕ್ಷಣದ ಮೂಲಕ ಹಾಸನ ಜಿಲ್ಲೆ ಎಸ್.ಎಸ್.ಎಲ್.ಸಿ. ಯಲ್ಲಿ ಕೂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಗೆ ಕೊಡುಗೆ ಶೂನ್ಯ ಎಂದು ದೂರಿದರು. ನಂಬಿದವರಿಗೆ ಟೋಪಿ ಹಾಕಿ ನಿಷ್ಕಲ್ಮಶ ರಾಜಕಾರಿಣಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಕಿಡಿಕಾರಿದರು.
ಹಿಂದಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅನೇಕರು ಒಂದಲ್ಲ, ಒಂದು ರೀತಿಯ ಅಪಪ್ರಚಾರ ಮಾಡುತ್ತಿದ್ದಾರೆ. ದೇವೇಗೌಡರ ಕಾಲದಿಂದಲೂ ಇದು ನಡೆಯುತ್ತಿದೆ. ಇದಕ್ಕೆಲ್ಲಾ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವುದು ಮಾಮೂಲಿ. ಇದನ್ನೆಲ್ಲ ಜಿಲ್ಲೆಯ ಜನರು ಗಮನಿಸುತ್ತಿದ್ದಾರೆ. ಈ ಚುನಾವಣೆಯಲ್ಲಿ ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಎಲ್ಲಾ ೨೮ಕ್ಕೆ ೨೮ ಸ್ಥಾನವನ್ನೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸವ್ಯಕ್ತಪಡಿಸಿದರು.
ರಾಜ್ಯದಲ್ಲಿ ಗ್ಯಾರಂಟಿ ಆಯ್ತು ಈಗ ಪೊಳ್ಳು ಗ್ಯಾರಂಟಿ ಶುರುವಾಗಿದೆ. ಬಾಂಡ್ ಪೇಪರ್‌ನಲ್ಲಿ ಸಿಎಂ ಹಾಗೂ ಡಿಸಿಎಂ ಒಂದು ಲಕ್ಷ ಕೊಡುವುದಾಗಿ ಕರಪತ್ರ ಹಂಚುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಗಮನಿಸಬೇಕು ಎಂದು ಆಗ್ರಹಿಸಿದರು. ಒಂದು ಕಡೆ ಪ್ರಜ್ವಲ್, ದೇವೇಗೌಡರು ಏನು ಮಾಡಿದ್ದಾರೆ ಅಂತಾರೆ. ಆದರೆ ಅವರು ಈ ಜಿಲ್ಲೆಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದು ಜನರಿಗೆ ಗೊತ್ತು. ೧೧ ತಿಂಗಳಲ್ಲಿ ರಾಜ್ಯದ ಖಜಾನೆ ಖಾಲಿ ಮಾಡಿ ಖಾಲಿ ಚೊಂಬು ಕೊಟ್ಟಿದ್ದಾರೆ. ಒಂದೇ ಒಂದು ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಗಂಬೀರವಾಗಿ ಆರೋಪಿಸಿದರು.
ಹಾಸನ ಫ್ಲೈ ಓವರ್ ಮಾಡಲು ನಾನು ಬರಬೇಕಾಯ್ತಾ, ಹಾಸನದ ಬಸ್ ನಿಲ್ದಾಣಕ್ಕೆ ನಿತ್ಯ ನಾಲ್ಕು ಸಾವಿರ ಬಸ್ ಬರ್ತವೆ. ಆದರೆ ಇವರು ಕೇವಲ ಎರಡು ಪಥದ ರಸ್ತೆಯ ಫ್ಲೈ ಓವರ್ ಮಾಡಿದ್ದಾರೆ. ಹಾಸನದ ಮೆಡಿಕಲ್ ಕಾಲೇಜು ಉಳಿಸಲು ಇವರ ಕೊಡುಗೆ ಏನು? ನಮ್ಮ ಕೊಡುಗೆ ಏನು ಅಂತಾರೆ, ಇವರ ಕೊಡುಗೆ ಏನು ಹೇಳಲಿ? ಎಂದು ಸವಾಲು ಹಾಕಿದರು. ಅರವತ್ತು ವರ್ಷ ಆದರೂ ಈ ಕಾಂಗ್ರೆಸ್ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ. ಶೇಕಡಾ ೪೦ ರಷ್ಡು ಶಿಕ್ಷಕರ ಹುದ್ದೆ ಖಾಲಿ ಇದೆ. ಬಡ ಜನರಿಗೆ ಮೋದಿಯವರು ಐದು ಕೆಜಿ ಅಕ್ಕಿ ಕೊಡ್ತಾರೆ ಇವರು ಅದನ್ನ ಹೇಳ್ತಾರಾ! ಇವರು ಗ್ಯಾರಂಟಿ ಗಾಗಿ ಲಕ್ಷಾಂತರ ಕೋಟಿ ಸಾಲ ಮಾಡಿದ್ದಾರೆ.
ಇವರು ಬಿಜೆಪಿಯನ್ನ ಪರ್ಸೆಂಟೇಜ್ ಎನ್ನೋರು ಇವರು ರೈತರಿಂದಲು ಪರ್ಸೆಂಡೇಜ್ ತಗೊತಾರಲ್ಲ ಸ್ವಾಮಿ ಎಂದು ಆರೋಪ ಮಾಡಿದರು.
Hassan
ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ಎಟಿಆರ್ ರಾಜಿನಾಮೆ: ಪತ್ರ ವೈರಲ್

ಹಾಸನ: ರಾಜಕೀಯ ದಿಂದ ದೂರ ಸರಿದ್ರಾ ಹಿರಿಯ ರಾಜಕಾರಣಿ ಎಟಿ ರಾಮಸ್ವಾಮಿ ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿದೆ.
ಏಪ್ರಿಲ್ 15 ರಂದೇ ಬಿಜೆಪಿ ರಾಜ್ಯಾದ್ಯಕ್ಷ ವಿಜಯೇಂದ್ರಗೆ ಬರೆದಿರೊ ಪತ್ರ ಎಂದು ಹೇಳಲಾಗುತ್ತಿರುವ ಈ ಪತ್ರದಲ್ಲಿಪರಿಸರ ಉಳಿವಿಗಾಗಿ ತೊಡಗಿಸಿಕೊಳ್ಳೋದಾಗಿ ಉಲ್ಲೇಖಿಸಿ ರಾಜಿನಾಮೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಹವಾಮಾನ ವೈಪರಿತ್ಯದಿಂದ ನೆರೆ ಬರ, ಭೂ ಕಂಪ ಸೃಷ್ಟಿ ಆಗುತ್ತಿದೆ. ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಅಹಾರ ವಿಷಪೂರಿತವಾಗಿದೆ. ಬೆಟ್ಟಗುಡ್ಡ ಅರಣ್ಯ ನಾಶದಿಂದ ನದಿ ತೊರೆ ಗಳು ಬತ್ತಿ ಹೋಗಿವೆ. ಈ ಹೊತ್ತಿನಲ್ಲಿ ರಾಜಕಾರಣ ಕ್ಕಿಂತ ಪರಿಸರ ದ ಉಳಿವು ಮುಖ್ಯವಾಗಿದೆ. ನಾನು ಪರಿಸರದ ಸಂರಕ್ಷಣೆಯಲ್ಲಿ ನನ್ನ ಸಂಪೂರ್ಣ ಸಮಯ ತೊಡಗಿಸಿಕೊಳ್ಳಬೇಕೆಂದಿದ್ದೇನೆ ಎಂದು ಉಲ್ಲೇಖಿಸಲಾಗಿದೆ.
ಈಗಾಗಲೆ ಪರಿಸರಕ್ಕಾಗಿ ನಾವು ಸಂಘಟನೆಯಲ್ಲಿ ರಾಜ್ಯಾದ್ಯಕ್ಷ ಹುದ್ದೆ ಅಲಂಕರಿಸಿರೊ ಎಟಿ ರಾಮಸ್ವಾಮಿ. ರಾಜ್ಯಮಟ್ಟದ ಹಲವು ಸಾಹಿತಿ ಚಿಂತಕರುಣ ಸ್ವಾಮಿಜಿಗಳು ಹೋರಾಟಗಾರ ರ ನೇತೃತ್ವದಲ್ಲಿ ಉದಯಿಸಿರೊ ಸಂಘಟನೆ ರಾಜಕೀಯದಲ್ಲಿ ಸಕ್ರಿಯರಾಗಿರೋರಿಗೆ ಸಂಘಟನೆಯಲ್ಲಿ ಅವಕಾಶ ಇಲ್ಲದ ಹಿನ್ನೆಲೆ ಸಕ್ರಿಯ ರಾಜಕಾರಣದಿಂದ ದೂರ ಸರಿದು ಪರಿಸರ ಸಂರಕ್ಷಣೆ ಯಲ್ಲಿ ತೊಡಗಿಕೊಳ್ಳಲು ತೀರ್ಮಾನ ಮಾಡಿರೊ ಬಗ್ಗೆ ಮಾಹಿತಿ ಇದ್ದು, ಹಾಗಾಗಿಯೇ ಬಿಜೆಪಿ ಪಕ್ಷ ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಲ್ಕು ಬಾರಿ ಶಾಸಕರಾಗಿ ವಿಧಾನಸಬೆಗೆ ಆಯ್ಕೆಯಾಗಿದ್ದ ಎಟಿಆರ್, ಕಳೆದ ವಿಧಾನಸಭೆ ಚುನಾವಣೆ ಹಾಲಿ ಶಾಸಕರಾಗಿದ್ದರೂ ಟಿಕೇಟ್ ನೀಡದ ಜೆಡಿಎಸ್. ಇದರಿಂದ ಮನನೊಂದು ಬಿಜೆಪಿ ಸೇರಿದ್ದ ಎಟಿ ಆರ್, ಕಾಂಗ್ರೆಸ್ ನಿಂದ ಎರಡುಬಾರಿ ಜೆಡಿಎಸ್ ನಿಂದ ಎರಡುಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಎಟಿ ರಾಮಸ್ವಾಮಿ. ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದದಿಂದ ಆಯ್ಕೆಯಾಗಿದ್ದ ಎಟಿಆರ್, 2023 ರಿಂದಲೂ ರಾಜಕೀಯ ದಿಂದ ಅಂತರ ಕಾಯ್ದುಕೊಂಡಿದ್ದರು.
Hassan
ಮೇಲ್ಸೇತುವೆ ಮುಂದಿನ ಮಾರ್ಚ್‌ಗೆ ಪೂರ್ಣ: ಸಂಸದ ಶ್ರೇಯಸ್ ಪಟೇಲ್

ಹಾಸನ: ನಗರದ ಹೊಸ ಬಸ್ ನಿಲ್ದಾಣದ ಎದುರಿನ ರೈಲ್ವೆ ಮೇಲ್ಸೇತುವೆ 2ನೇ ಹಂತದ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, 2026ರ ಫೆಬ್ರವರಿ ಇಲ್ಲವೇ ಮಾರ್ಚ್ ವೇಳೆಗೆ ಮುಗಿಸಲಾಗುವುದು ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಶನಿವಾರದಂದು ನಗರದ ಎನ್.ಆರ್. ವೃತ್ತದಿಂದ ಹೊಸ ಬಸ್ ನಿಲ್ದಾಣದವರೆಗೂ ನಿಮಾಣ ಹಂತದಲ್ಲಿರುವ ಮೇಲ್ಸೇತುವೆ ಮೇಲೆ ತೆರಳಿ ಎಲ್ಲೆಲ್ಲಿ ಕಾಮಗಾರಿ ಆಗಬೇಕು ಎಂಬುವರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಹಲವು ಕಾರಣಗಳಿಂದಾಗಿ ಕೆಲ ವರ್ಷಗಳಿಂದ ಕಾಮಗಾರಿ ನಿಂತಿತ್ತು. ಇದೀಗ ತಮ್ಮ ತಮ್ಮ ಪಾಲಿನ ಅನುದಾನ ನೀಡಲು ಸಮ್ಮತಿಸಿವೆ. ಹೀಗಾಗಿ ಈಗಾಗಲೇ ಶುರುವಾಗಿರುವ ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಗಿಸುವಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಚರ್ಚಿಸಿ, ಯಾವುದೇ ಕಾರಣಕ್ಕೂ ಕಾಮಗಾರಿ ವಿಳಂಬ ಆಗಬಾರದು ಎಂದು ಸೂಚನೆ ನೀಡಲಾಗಿದೆ ಎಂದರು. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದರು.
ಈ ಯೋಜನೆಯ ಒಟ್ಟು ಅಂದಾಜು ವೆಚ್ಚ ೮೩.೭೨ ಕೋಟಿ. ಇದರಲ್ಲಿ ರಾಜ್ಯದ ಪಾಲು ೪೯.೫೪ ಕೋಟಿ ನೀಡಬೇಕಿದೆ. ಈಗ ೨೧.೮೧ ಕೋಟಿ ರೂ. ನೀಡುವುದಾಗಿ ಸರ್ಕಾರ ಹೇಳಿದ್ದು, ಹೆಚ್‌ಎಂಆರ್‌ಡಿಸಿ ಅಡಿ ೧೫ ಕೋಟಿ ನೀಡಲಾಗಿದೆ. ಅನುದಾನಕ್ಕೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಮೇಲ್ಸೇತುವೆ ಮೇಲಿನ ಕಬ್ಬಿಣದ ಬೃಹತ್ ಕಮಾನು ನಿರ್ಮಾಣ ಹೈದ್ರಾಬಾದ್‌ನಲ್ಲಿ ಆಗಲಿದೆ, ಅದಕ್ಕಾಗಿ ೮ ತಿಂಗಳು ಸಮಯಾವಕಾಶ ಬೇಕಿದೆ. ಅಲ್ಲೀವರೆಗೂ ಸಿವಿಲ್ ವರ್ಕ್ ಸೇರಿ ಉಳಿದ ಕಾಮಗಾರಿ ನಡೆಯಲಿವೆ ಎಂದರು. ಉಸುಮಾರು ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಕೇಂದ್ರ ಸಹ ತನ್ನ ಪಾಲಿನ ಅನುದಾನ ನೀಡಲು ಒಪ್ಪಿದೆ. ಹೀಗಾಗಿ ಮೇಲ್ಸೇತುವೆ ಕಾಮಗಾರಿ ಇನ್ನು ಮಂದೆ ಯಾವುದೇ ಅಡೆ-ತಡೆ ಇಲ್ಲದೆ ಮುನ್ನಡೆಯಲಿದೆ ಎಂದರು. ಎರಡೂ ಬದಿಯ ನಾಲ್ಕು ಪಥದ ಮೇಲ್ಸೇತುವೆ ನಿರ್ಮಾಣ ಆದರೆ ವಾಹನ ಸಮಸ್ಯೆ ನಿವಾರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Hassan
ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಲ್ಲ: ಸಂಸದ ಶ್ರೇಯಸ್ ಪಟೇಲ್

ಹಾಸನ : ನಮ್ಮದು ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡುವ ಪಕ್ಷ ಹಾಗಾಗಿ ಇದರ ಬಗ್ಗೆ ಜವಾಬ್ದಾರಿಯುತ ತೀರ್ಮಾನವನ್ನು ಸರ್ಕಾರದ ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತಾರೆ ಎಂದು ಭಾವಿಸಿದ್ದೇವೆ. ಎಲ್ಲಾ ಸಮಾಜವನ್ನು ಸಮವಾಗಿ ನೋಡಿ ಜಾತಿಗಣತಿಯಲ್ಲಿ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಜಾತಿಗಣತಿ ವರದಿ ಗೊಂದಲ ವಿಚಾರ ಹಾಸನದಲ್ಲಿ ಸಂಸದ ಶ್ರೇಯಸ್‌ಪಟೇಲ್ ಹೇಳಿಕೆ ನೀಡಿದರು.
ಮೊನ್ನೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ಪರಾಮರ್ಶಿಸಿ ತೀರ್ಮಾನ ತೆಗೆದುಕೊಳ್ಳುಬೇಕೆಂದು ಒತ್ತಾಯಿಸಿದ್ದಾರೆ. ಸಚಿವರ ಅಭಿಪ್ರಾಯವನ್ನು ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಯಾವುದೇ ಸಮಾಜಕ್ಕೆ ಅನ್ಯಾಯವಾಗುವ ಕೆಲಸವನ್ನು ನಮ್ಮ ಪಕ್ಷ ಮಾಡಲ್ಲ. ಯಾವ ಸಮಾಜವನ್ನು ಒಡೆದಾಡಿಸುವ ಕೆಲಸವನ್ನು ನಮ್ಮ ಸಮಾಜ ಮಾಡಿಲ್ಲ, ಮಾಡುವುದಿಲ್ಲ. ಜನಸ್ನೇಹಿಯಾಗಿ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ. 2015 ರಲ್ಲಿ ಜಾತಿಗಣತಿ ನಡೆದಿತ್ತು, ಎಲ್ಲರ ಬೇಡಿಕೆ ಇತ್ತು ಜಾತಿಗಣತಿಗಾಗಿ ಕೋಟ್ಯಾಂತರ ರೂ ವೆಚ್ಚ ಮಾಡಿದ್ದಾರೆ. ಈಗೀನ ವರದಿಯ ನೈಜತೆಯನ್ನು, ಸತ್ಯಾಸತ್ಯತೆಯನ್ನು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ವರದಿಯನ್ನು ಇನ್ನೂ ಮಂಡಿಸಿಲ್ಲ, ವರದಿ ಹೊರಗೆ ಬಂದ ಮೇಲೆ ಗೊತ್ತಾಗುತ್ತೆ. ಇನ್ನೂ ಯಾರಿಗೂ ವರದಿಯಲ್ಲಿದೆ ಎಂದು ಗೊತ್ತಿಲ್ಲ.
ಬಿಜೆಪಿ ಸರ್ಕಾರ ಕೆಡವಲು ಯತ್ನಿಸುತ್ತಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಯಾವಾಗಲೂ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವುದೇ ವಿರೋಧ ಪಕ್ಷಗಳ ಗುರಿ ಎಲ್ಲರಿಗೂ ಅಧಿಕಾರದ ಆಸೆ ಇರುತ್ತೆ ನಮಗೂ ಆಸೆ ಇದೆ, ಆದರೆ ಸಿದ್ಧಾಂತ ಇದೆ, ಜನಸೇವೆ ಮಾಡಲು ನಾವು ಬಂದಿದ್ದೇವೆ. ಅಧಿಕಾರದ ದುರಾಸೆಗೋಸ್ಕರ ಈ ಕೆಲಸ ಮಾಡಬಹುದು.ನಾವು ಎಚ್ಚರಿಕೆಯಿಂದ ಇರಬೇಕು. ನಮ್ಮಲ್ಲಿ ಒಗ್ಗಟ್ಟಿದೆ, ಒಗ್ಗಟ್ಟು ಎಂದರೆ ಕಾಂಗ್ರೆಸ್ ಪಕ್ಷ ಎಂದು ಹೇಳಿದರು.
ಸಿಇಟಿ ಪರೀಕ್ಷೆಗೆ ಹೋಗುವ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಮಾತನಾಡಿ, ಅದನ್ನು ನಾನು ಖಂಡಿತವಾಗಿ ವಿರೋಧಿಸುತ್ತೇನೆ, ಆ ತರ ಮಾಡಬಾರದು. ನಾನು ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಒಬ್ಬ ಸಾರ್ವಜನಿಕನಾಗಿ ಹೇಳುತ್ತಿದ್ದೇನೆ. ಅವರವರ ಆಚರಣೆಗಳು, ಅವರವರ ವೈಯುಕ್ತಿಕ. ಜನಿವಾರ ತೆಗೆದು ಹೋಗಿ ಎನ್ನುವುದು ಅಪರಾಧ. ನಾನಂತು ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು.
-
Chamarajanagar22 hours ago
ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
Mysore20 hours ago
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ
-
Hassan23 hours ago
ಬಗರ್ ಹುಕುಂ ಸಾಗುವಳಿ ಮಂಜೂರಾತಿಯ ಸಭೆ
-
Kodagu20 hours ago
ಹುಲಿ ದಾಳಿಗೆ ಕರು ಬಲಿ
-
Kodagu22 hours ago
ಬಿರುನಾಣಿ ವ್ಯಾಪ್ತಿಯಲ್ಲಿ ಹುಲಿ ಸೆರೆಗೆ ಕಾರ್ಯಚರಣೆ
-
Chikmagalur24 hours ago
ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಪೋಷಕರಿಗೆ 25 ಸಾವಿರ ರೂ ದಂಡ.
-
Hassan24 hours ago
ಜನಿವಾರ, ಕಾಶೀ ದಾರ ತೆಗೆಸಿರುವುದು ಖಂಡನೀಯ
-
Mysore21 hours ago
ಆರ್. ರಘು ಅವರ ಎರಡು ಕೃತಿಗಳ ಲೋಕಾರ್ಪಣೆ