Chamarajanagar
ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ರಾಗಿ ವಶ
ಚಾಮರಾಜನಗರ: ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ, ರಾಗಿಯನ್ನು ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೋಲಿಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.

ಹನೂರು ಮುಖ್ಯ ರಸ್ತೆಯ ಚಿಕ್ಕಿಂದುವಾಡಿ ಗ್ರಾಮದ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಅಕ್ಕಿಯನ್ನು ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು ಹನೂರು ಕಡೆಯಿಂದ ಕೊಳ್ಳೇಗಾಲ ಕಡೆಗೆ ಬರುತ್ತಿದ್ದ ಒಂದು ಗೂಡ್ಸ್ ವಾಹನದ ಮೇಲೆ ದಾಳಿ ಮಾಡಿ 451 ಕೆಜಿ ಪಡಿತರ ಅಕ್ಕಿ 69 ಕೆ.ಜಿ ರಾಗಿ ಮತ್ತು ಸಾಗಾಣಕೆಗೆ ಬಳಿಸಿದ್ದ ವಾಹನ, ಆರೋಪಿ ಎಲ್ಲೇಮಾಳ ಗ್ರಾಮದ ಸಮೀವುಲ್ಲಾ ಮಳವಳ್ಳಿ ಪಟ್ಡಣದ ಮಹೇಶ್ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
Chamarajanagar
ಬೈಕ್ ಗಳ ನಡುವೆ ಡಿಕ್ಕಿ: ವ್ಯಕ್ತಿಯ ತಲೆಗೆ ಪಟ್ಟು
ಚಾಮರಾಜನಗರ : ಬೈಕ್ ಗಳ ನಡುವೆ ಡಿಕ್ಕಿ: ವ್ಯಕ್ತಿಯ ತಲೆಗೆ ಪಟ್ಟು
ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬರ ತಲೆಗೆ ಪೆಟ್ಟು ಬಿದ್ದು ಗಾಯವಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಂಡಿಗಳ್ಳಿ ಗೇಟ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.
ಹಸುಗುಲಿ ಗ್ರಾಮದ ಸಿದ್ದ ಮಲ್ಲಿಕಾರ್ಜುನಸ್ವಾಮಿ ಎಂಬುವವರ ತಲೆಗೆ ಪೆಟ್ಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಗಾಯಗೊಂಡಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿದೆ.
Chamarajanagar
ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ ಆ. 29 ರಿಂದ 31 ರವರೆಗೆ 3 ದಿನಗಳ ಬೈಕ್ ಜಾಥಾ
ಚಾಮರಾಜನಗರ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, ಆ.29 ರಿಂದ 31 ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.
ಈ ಬೃಹತ್ ಅಭಿಯಾನವನ್ನು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್,ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್,
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್,ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್,
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ.
ದೇಶಾದ್ಯಂತ 1 ಲಕ್ಷ ಕಿಲೋಮೀಟರುಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್‌ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್ ನಂದಿನಿ ಮಿಥುನ್ ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ.
ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ.
ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ.
Chamarajanagar
ಶ್ರೀ ವಿದ್ಯಾಗಣಪತಿ ಮಂಡಳಿ ವತಿಯಿಂದ ಗಣಪತಿ ಮೂರ್ತಿ ಪ್ರತಿಷ್ಠಾಪನೆ
ಚಾಮರಾಜನಗರ: ಗಣೇಶ ಚತುರ್ಥಿ ಅಂಗವಾಗಿ ನಗರದ ರಥದ ಬೀದಿಯಲ್ಲಿ ಶ್ರೀವಿದ್ಯಾಗಣಪತಿ ಮಂಡಳಿ ವತಿಯಿಂದ ಗಣೇಶಮೂರ್ತಿ ಪ್ರತಿಷ್ಠಾಪಿಸಲಾಯಿತು.
ಇದೇ ವೇಳೆ ನಗರಸಭಾ ಅಧ್ಯಕ್ಷ ಸುರೇಶ್ ಮಾತನಾಡಿ, ಶ್ರೀ ವಿದ್ಯಾ ಗಣಪತಿ ಮಂಡಳಿ ವತಿಯಿಂದ 63ನೇ ನೇ ವರ್ಷದ ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಬ್ರಹ್ಮಾಸ್ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಿ ವಿಸರ್ಜನೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್ ಪಿ ಲಕ್ಷ್ಮಯ್ಯ ಇತರರು ಪ್ರತಿಷ್ಠಾಪನೆಯ ಪೂಜೆಯ ವೇಳೆ ಹಾಜರಿದ್ದರು.
ಇದೇ ಸಂದರ್ಭದಲ್ಲಿ ಶ್ರೀ ವಿದ್ಯಾಗಣಪತಿ ಮಂಡಳಿ ಅಧ್ಯಕ್ಷ ಶಿವಣ್ಣ ಉಪಾಧ್ಯಕ್ಷ ಶಿವು ವಿರಾಟ್, ಕಾರ್ಯಾಧ್ಯಕ್ಷ ಬುಲೆಟ್ ಚಂದ್ರು ನಾಯಕ ಹಾಗೂ ಇತರರು ಉಪಸ್ಥಿತರಿದ್ದರು.
-
Mandya6 hours agoಮೂವರಿಗೆ ‘ದಲಿತ ಸಾಹಿತ್ಯ ರತ್ನ ‘ಪ್ರಶಸ್ತಿ ಪ್ರದಾನ
-
Mysore22 hours agoದಸರಾ, ಚಾಮುಂಡೇಶ್ವರಿ ಸುತ್ತಲೂ ರಾಜಕೀಯ: ಪ್ರಮೋದಾದೇವಿ ಒಡೆಯರ್ ಬೇಸರ
-
Hassan5 hours agoಯಾಚೇನಹಳ್ಳಿ ಚೇತು ಅಲಿಯಾಸ್ ಚೇತನ್ ಕೊಲೆ ಆರೋಪಿ ಸರಂಡರ್
-
Kodagu22 hours agoಮಳೆ ಸಂತ್ರಸ್ತರೊಂದಿಗೆ ಗಣೇಶ ಚತುರ್ಥಿ ಆಚರಿಸಿದ ಶಾಸಕ ಡಾ.ಮಂತರ್ ಗೌಡ
-
Hassan8 minutes agoಉಚಿತ ನರ ಮತ್ತು ಮಾನಸಿಕ ರೋಗ ತಪಾಸಣಾ ಶಿಬಿರ
-
State24 hours agoವಾಲ್ಮೀಕಿ ಅಭಿವೃದ್ಧಿ ನಿಗಮದ 5 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡ ಇಡಿ
-
State4 hours agoಬೆಂಗಳೂರು ಮೂಲಸೌಕರ್ಯ: ರಾಜಕೀಯ ಇಚ್ಛಾಶಕ್ತಿಯ ಕೊರತೆ ಇದೆ, ಕಾಂಗ್ರೆಸ್ ಸರ್ಕಾರ ಈಗ ‘ಸರಿಪಡಿಸುತ್ತಿದೆ’- ಡಿಕೆ ಶಿವಕುಮಾರ್
-
Chikmagalur4 hours agoಚಿಕ್ಕಮಗಳೂರು :ಪೊಲೀಸರ ಜೀಪಿಗೇ ದಂಡ ವಿಧಿಸಿದ ಪೊಲೀಸರು
