Connect with us

Mandya

43 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಎನ್‌.ಚಲುವರಾಯಸ್ವಾಮಿ

Published

on

ಮಂಡ್ಯ: ನಗರದಲ್ಲಿ 43 ಕೋಟಿ ವೆಚ್ಚದಲ್ಲಿ ಇಲ್ಲಿನ ಫ್ಯಾಕ್ಟರಿ ಸರ್ಕಲ್ ಹಾಗೂ ಜೆ.ಸಿ.ವೃತ್ತದಲ್ಲಿ ಹೈಟೆಕ್ ಮಾದರಿ ವೃತ್ತ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ಎನ್.ಎಚ್-275 ಶ್ರೀನಿವಾಸಪುರ ಗೇಟ್ ನಿಂದ ಇಂಡುವಾಳು ಅಂಡರ್ ಪಾಸ್ ವರೆಗೆ ಮಂಡ್ಯ ನಗರದ ಮಧ್ಯ ಭಾಗದಲ್ಲಿ ವಿಶ್ವ ದರ್ಜೆಯ ರಸ್ತೆ ಹಾಗೂ ಪಾದಾಚಾರಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ನಂತರ ಮಾತನಾಡಿದ ಅವರು, ₹33 ಕೋಟಿ ವೆಚ್ಚದಲ್ಲಿ ಜಿಲ್ಲೆಯ ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಅಮರಾವತಿ ಹೋಟೆಲ್ ನಿಂದ ಜ್ಯೋತಿ ಇಂಟರ್‌ನ್ಯಾಷನಲ್‌ ಹೋಟೆಲ್‌ವರೆಗೆ ಹೈಟೆಕ್ ಪುಟ್ ಬಾತ್ ಮತ್ತು ರಸ್ತೆಯನ್ನು ಅಭಿವೃದ್ಧಿಗೊಳಿಸಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲು ಅಣ್ಣೂರಿನ ಮಾಜಿ ವಾಯ್ಸ್ ಚಾನ್ಸಲರ್ ರಾಜೇಂದ್ರ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಧಿಕಾರಕ್ಕೆ ಬಂದ 8 ತಿಂಗಳಲ್ಲಿಯೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಜಿಲ್ಲೆಯ ಜನಸಾಮಾನ್ಯರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಶಾಸಕರಾದ ರವಿಕುಮಾರ್, ಉದಯ್ ಹಾಗೂ ರಮೇಶ್ ಬಂಡಿ ಸಿದ್ದೇಗೌಡ ಮೂವರು ನಗರದ ಅಭಿವೃದ್ಧಿಗಾಗಿ ಸಾಕಷ್ಟು ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಪಿ.ರವಿಕುಮಾರ್‌ಗೌಡ ಗಣಿಗ, ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಭಾಗವಹಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಎಚ್ಡಿಕೆ ಗೆಲುವಿಗೆ ಹರಕೆ ಹೊತ್ತು ಉರುಳು ಸೇವೆ ಮಾಡಿದ ಅಭಿಮಾನಿಗಳು

Published

on

ಶ್ರೀರಂಗಪಟ್ಟಣ: ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆಲುವಿಗಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಉರುಳು ಸೇವೆ ನಡೆಸಿ ಪ್ರಾರ್ಥನೆ ಸಲ್ಲಿಸಿದರು.

ಎಚ್.ಡಿ.ಕುಮಾರ ಸ್ವಾಮಿ ರವರ ಗೆಲುವು ಜಿಲ್ಲೆಯ ಗೆಲುವಾಗಿದ್ದು,‌ ಮತದಾರರು ಯಾವುದೇ ಆಮಿಷಕ್ಕೆ ಬಲಿಯಾಗದೆ ಕುಮಾರಸ್ವಾಮಿ ರವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Mandya

ಎಚ್ಡಿಕೆ ಮಂಡ್ಯದಲ್ಲಿ ಅಬ್ಬರದ ಪ್ರಚಾರ

Published

on

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಪ್ರಚಾರದ ಕೊನೆಯ ದಿನ ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿಗೆ ಅಪಾರ ಜನಸ್ತೋಮ ಬೆಂಬಲ ಸೂಚಿಸಿತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿ ಹರ್ಷೋದ್ಗಾರದ ನಡುವೆ ಪುಷ್ಪಾರ್ಚನೆ ಮೂಲಕ ಹೆಜ್ಜೆ ಹಾಕಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.


ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಹಿರಂಗ ಪ್ರಚಾರದ ಕೊನೆಯ ದಿನ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಶಕ್ತಿಪ್ರದರ್ಶಿಸುವ ಮೂಲಕ ಮೈತ್ರಿ ಅಭ್ಯರ್ಥಿ ಗೆಲುವಿಗೆ ಅಣಿಯಾಗಿದ್ದಾರೆ.

Continue Reading

Mandya

ಕಾಂಗ್ರೆಸ್ ಪಕ್ಷದಿಂದ ಬೈಕ್ ರ್‍ಯಾಲಿ

Published

on

ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಎರು ಮಂಡ್ಯದಲ್ಲಿ ಬೈಕ್ ರ್‍ಯಾಲಿ ಮೂಲಕ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕ ರವಿಕುಮಾರ್ ಗಣಿಗ ಜೊತೆಗೂಡಿ ಕೊನೆಯ ದಿನದ ಪ್ರಚಾರ ಮಾಡಿದರು.

ನಗರದ ಕಾರಿಮನೆ ಗೇಟ್ ನಿಂದ ಬೈಕ್ ರ್‍ಯಾಲಿ ಮೂಲಕ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು, ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಜಯ ಚಾಮರಾಜೇಂದ್ರ ಒಡೆಯರ್ ವೃತ್ತ, ಆರ್ ಪಿ ರಸ್ತೆ, ಅಂಬೇಡ್ಕರ್ ರಸ್ತೆ ಯಲ್ಲಿ ಮತಯಾಚಿಸಿ ಹೊಸಹಳ್ಳಿಯಲ್ಲಿ ಪ್ರಚಾರ ಮಾಡಿದರು.

ಕಾಂಗ್ರೆಸ್ ಪಕ್ಷ ಜನರ ಪರವಾದ ಪಕ್ಷವಾಗಿದ್ದು, ಗ್ಯಾರಂಟಿ ಯೋಜನೆಗಳ ಮೂಲಕ ಜನತೆಗೆ ಸವಲತ್ತು ದೊರಕಿಸಿಕೊಟ್ಟಿದೆ, ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

Continue Reading

Trending

error: Content is protected !!