Chamarajanagar
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
ಚಾಮರಾಜನಗರ: ಗುಂಡ್ಲುಪೇಟೆ – ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ರಾಮಸಮುದ್ರದ ನಿವಾಸಿ ಸಂತೋಷ್ (25) ಮೃತ ದುರ್ದೈವಿ. ಈತ ತೆರಕಣಾಂಬಿಯ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮೃತ ಸಂತೋಷ್ ಬೈಕ್ ನಲ್ಲಿ ಗುಂಡ್ಲುಪೇಟೆ- ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಬರುವಾಗ ಕೆ.ಕೆ ಹುಂಡಿ ಗ್ರಾಮದ ಬಳಿ ವಾಹನವೊಂದು ಹೊಡೆದುಕೊಂಡು ಹೋಗಿರುವ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ದೇಹವನ್ನು ನಗರದ ಸಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿ ಬಂಧನ
ಚಾಮರಾಜನಗರ: ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇಲಿಯಾಸ್ ಪಾಷಾ(40) ಬಂಧಿತ ಆರೋಪಿ. ಈತ ಆಟೋದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.
ಈ ಸಂಬಂಧ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಚಾಮರಾಜನಗರ: ಕೇರಳ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ 96 ಲಾಟರಿ ಟಿಕೆಟ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಾಲೂಕಿನ ಅಮಚವಾಡಿ ಗ್ರಾಮದ ಸಿದ್ದಶೆಟ್ಟಿ(60) ಬಂಧಿತ ಆರೋಪಿ. ಈತ ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಬಂಧಿತನ ಬಳಿ ಇದ್ದ 4,800 ರೂ. ಮೌಲ್ಯದ 96 ಲಾಟರಿ ಟಿಕೇಟ್ ಹಾಗೂ 300 ರೂ ನಗದು ವಶಕ್ಕೆ ಪಡೆಯಲಾಗಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Chamarajanagar
ಜೂಜಾಟ: ಎರಡು ಪ್ರತ್ಯೇಕ ದೂರು ದಾಖಲು
ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದವರ ವಿರುದ್ಧ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, 7 ಮಂದಿ ವಿರುದ್ಧ ದೂರು ದಾಖಲಾಗಿದೆ. ಗುಂಡ್ಲುಪೇಟೆ ತಾಲೂಕಿನ ನೇನೆಕಟ್ಟೆ ಗ್ರಾಮದ ಹೊರವಲಯಲ್ಲಿ ಜೂಜಾಟವಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ, ಪಣಕ್ಕಿಟ್ಟಿದ್ದ 31,020 ರೂ. ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮತ್ತೊಂದು ಪ್ರಕರಣದಲ್ಲಿ ಚಾಮರಾಜನಗರ ತಾಲೂಕಿನ ಕಮರವಾಡಿ ಗ್ರಾಮದ ಹೊರವಲಯದಲ್ಲಿ ಜೂಜಾಟವಾಡುತ್ತಿದ್ದ ಖಚಿತ ಮಾಹಿತಿಯನ್ನು ಆಧರಿಸಿ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿ, ಪಣಕ್ಕಿಟ್ಟಿದ್ದ , 2700 ರೂ. ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
-
Special9 hours agoಗೃಹಲಕ್ಷ್ಮಿ ಯೋಜನೆಯಲ್ಲಿ 1.04 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಸರ್ಕಾರದಿಂದ ಪರಿಶೀಲನೆ!
-
Politics4 hours agoಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ಸಲ್ಲಿಕೆ: ಸಿದ್ದರಾಮಯ್ಯ
-
Chamarajanagar23 hours agoಬೊಮ್ಮಲಾಪುರ: ಉಚಿತ ಕಣ್ಣಿನ ತಪಾಸಣಾ ಶಿಬಿರ
-
Politics24 hours agoಸಿಎಂ ಬದಲಾವಣೆ ಕುರಿತು ಸುರ್ಜೇವಾಲ ಸ್ಪಷ್ಟನೆ
-
Chikmagalur10 hours agoತೋಟದ ಗೋಡೋನ್ನಿಂದ ₹2.5 ಲಕ್ಷ ಮೌಲ್ಯದ 7 ಅಡಿಕೆ ಮೂಟೆ ಕಳ್ಳತನ
-
Chamarajanagar23 hours agoಪಟ್ಟಣದ ರಾಜಕಾಲುವೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪುರಸಭೆ ಮುಖ್ಯಾಧಿಕಾರಿ ಶರವಣ
-
Manglore22 hours agoಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು, ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ
-
Kodagu24 hours agoಬೀದರ್ ಪಶು ವಿಶ್ವವಿದ್ಯಾಲಯದ 45 ಕೋಟಿ ರೂ. ಹಗರಣ: ಮಾಜಿ ಉಪಕುಲಪತಿ ಸೇರಿ 6 ಮಂದಿ ಬಂಧನ
