Chamarajanagar
ಎಸ್.ಚರಣ್ ಗೆ ರಾಜ್ಯಮಟ್ಟದ ಬಹುಮಾನ
 
																								
												
												
											ಚಾಮರಾಜನಗರ: ನಗರದ ಛಾಯಾಗ್ರಾಹಕ ಎಸ್.ಚರಣ್ ಬಿಳಿಗಿರಿ ಅವರಿಗೆ ರಾಜ್ಯಮಟ್ಟದ ಛಾಯಾಗ್ರಾಹಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಲಭಿಸಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರು ಪತ್ರಿಕಾ ಛಾಯಾಗ್ರಾಹಕರ ಸಂಘದ ವತಿಯಿಂದ ರಾಜ್ಯ ಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪತ್ರಿಕಾ ಛಾಯಾಗ್ರಾಹಕರು ತಮ್ಮ ಸುದ್ದಿ ಛಾಯಾಚಿತ್ರಗಳನ್ನು ಕಳುಹಿಸಿದ್ದರು.

ಹಿರಿಯ ಛಾಯಾಗ್ರಾಹಕ ದಿವಂಗತ ನೇತ್ರರಾಜು ಸ್ಮರಣಾರ್ಥ ಅತ್ಯುತ್ತಮ ಛಾಯಾಚಿತ್ರಕ್ಕೆ ಬಹುಮಾನವನ್ನು ಸಹ ಘೋಷಿಸಲಾಗಿತ್ತು. ಈ ರಾಜ್ಯ ಮಟ್ಟದ ಛಾಯಾಗ್ರಾಹಕ ಸ್ಪರ್ಧೆಯಲ್ಲಿ ಎಸ್. ಚರಣ್ ಬಿಳಿಗಿರಿ ಚಾಮರಾಜನಗರ ಇವರು ಸಮಾಧಾನಕರ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇವರಿಗೆ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಚಾಮರಾಜನಗರ ಛಾಯಾಗ್ರಹಕ ಸಂಘ, ಎಲ್ಲಾ ಸಂಘ-ಸಂಸ್ಥೆಗಳು ಅಭಿನಂದಿಸಿದ್ದಾರೆ.
Chamarajanagar
ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
 
														ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ ನಾಗಪುರರದಲ್ಲಿನ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಸಂಬಂಧ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ರಾಜ್ಯದಿಂದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಇಲಾಖಾ ವತಿಯಿಂದ ನಾಗಪುರದಲ್ಲಿರುವ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳಲು ಸಾರಿಗೆ, ರೈಲಿನ ವ್ಯವಸ್ಥೆ ಕಲ್ಪಿಸುವ ಸಂಬಂಧ ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆಗಾಗಿ ಅರ್ಜಿ ಸಲ್ಲಿಸಲು ಸೆಪ್ಟಂಬರ್ 9 ಕಡೆಯ ದಿನವೆಂದು ನಿಗದಿಪಡಿಸಲಾಗಿತ್ತು.

ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳ ಹಿತದೃಷ್ಠಿಯಿಂದ ದೀಕ್ಷಾಭೂಮಿ ಯಾತ್ರೆ ಕೈಗೊಳ್ಳುವ ಸಂಬಂಧ ಅರ್ಜಿ ಸ್ವೀಕರಿಸುವ ಅವಧಿಯನ್ನು ಅಕ್ಟೋಬರ್ 15ರ ಸಂಜೆ 5.30 ಗಂಟೆಯವರೆಗೂ ವಿಸ್ತರಿಸಲಾಗಿದೆ.
ಆಸಕ್ತರು ಆನ್‌ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.swd.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೆಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Chamarajanagar
ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ 15,810 ರೂ. ನಗದು ವಶ
 
														ಕೊಳ್ಳೇಗಾಲ: ತಾಲೂಕಿನ ಕುಣಗಳ್ಳಿ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದವರ ಮೇಲೆ ಪೊಲೀಸರು ದಾಳಿ ನಡೆಸಿ, ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ಕುಣಗಳ್ಳಿ ಗ್ರಾಮದ ಕಬಿನಿ ಚಾನಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕುಣಗಳ್ಳಿ ಗ್ರಾಮ ನಿವಾಸಿಗಳಾದ ನವೀನ್, ಸಿದ್ದಪ್ಪ, ಮಹೇಶ, ಸುಂದ್ರ, ಸಿದ್ದಪ್ಪ ಇವರುಗಳು ಇಸ್ಪೀಟ್ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಕಾರ್ಯಾಚರಣೆ ಮಾಡಿ ಸ್ಥಳದಲ್ಲಿದ್ದ 15,810 ರೂ.ಗಳನ್ನು ವಶ ಪಡಿಸಿಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Chamarajanagar
ಗುಂಡ್ಲುಪೇಟೆ: ವಿದ್ಯುತ್ ಸ್ಪರ್ಶ ಕಾಡಾನೆ ಸಾ*ವು
 
														ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಬಂಡೀಪುರಕ್ಕೆ ಹೊಂದಿಕೊಂಡಿರುವ ಮಂಗಲ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ರಾತ್ರಿ ವಿದ್ಯುತ್ ಸ್ಪರ್ಶದಿಂದ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ಆನೆ ಮೃತಪಟ್ಟಿರುವ ವಿಷಯ ಬುಧವಾರ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ವ್ಯಾಪ್ತಿಯ ಮಂಗಲ ಗ್ರಾಮದ ಪುಟ್ಟಬಸಪ್ಪ ರುದ್ರಪ್ಪ ಎಂಬುವವರ ಜಮೀನಿನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ.
- 
																	   Mysore21 hours ago Mysore21 hours agoಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ : ಆರು ಮಂದಿಗೆ ಗಂಭೀರ ಗಾಯ 
- 
																	   Mysore14 hours ago Mysore14 hours agoಜಾತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ 
- 
																	   Hassan16 hours ago Hassan16 hours agoಹಾಸನ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು 
- 
																	   State15 hours ago State15 hours agoಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧ ನ್ಯಾಯಾಲಯ ಗರಂ| ಪತ್ರಿಕಾ ವರದಿಗಳು ಊಹಾಪೂಹದಿಂದ ಕೂಡಿವೆ: ನಾಡೋಜ ಡಾ.ಮಹೇಶ ಜೋಶಿ ಸ್ಪಷ್ಟನೆ 
- 
																	   Mandya19 hours ago Mandya19 hours agoಮಂಗಳೂರು ಮಾದರಿಯ `ಕೋಮು ಹಿಂಸೆ ನಿಗ್ರಹ ಪಡೆ’ ಆರಂಭಿಸಿ : ಎಂ.ಕೃಷ್ಣಮೂರ್ತಿ 
- 
																	   Manglore15 hours ago Manglore15 hours agoವಿದ್ಯಾಭಾರತಿ ಪ್ರಾಂತ, ಕ್ಷೇತ್ರಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ ಪ.ಪೂ. ಕಾಲೇಜಿನ ಬಾಲಕರ ತಂಡ ದ್ವಿತೀಯ 
- 
																	   Chamarajanagar14 hours ago Chamarajanagar14 hours agoಜೂಜಾಟ ಆಡುತ್ತಿದ್ದವರ ಮೇಲೆ ದಾಳಿ 15,810 ರೂ. ನಗದು ವಶ 
- 
																	   Hassan16 hours ago Hassan16 hours agoಮಲ್ನಾಡ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾಕ್ಥಾನ್ 

 
											 
											 
											 
											 
											